ಬೆಂಗಳೂರು: ಸಮ್ಮಿಶ್ರ ಸರ್ಕಾರದ ಶಾಸಕರು ರಾಜೀನಾಮೆ ಕೊಟ್ಟಿದ್ದಾರೆ. ರಾಜೀನಾಮೆ ಅಂಗೀಕಾರ ಪ್ರಕರಣ ಕೋರ್ಟ್ ಅಂಗಳದಲ್ಲಿದೆ. ಬರದ ನಡುವೆ ಜನ ರಾಜ್ಯದಲ್ಲಿ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇಂತಹ ಗೊಂದಲಗಳ ನಡುವೆ ಸಿಎಂ ರಾಜೀನಾಮೆ ಕೊಡೋದು ಸೂಕ್ತ ಎಂದು ಸಂಸದ ಬಿ.ವೈ.ರಾಘವೇಂದ್ರ ಸಿಎಂ ಕುಮಾರಸ್ವಾಮಿ ಅವರಿಗೆ ಸಲಹೆ ನೀಡಿದ್ರು.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಮೈತ್ರಿ ಸರ್ಕಾರದ ಶಾಸಕರು ರಾಜೀನಾಮೆ ನೀಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿಯೂ ಮೈತ್ರಿ ಸೋತಿದೆ. ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಸಿಎಂ ಕುಮಾರಸ್ವಾಮಿ ರಾಜೀನಾಮೆ ಕೊಡೋದು ಒಳ್ಳೆಯದು ಎಂದು ಸಿಎಂಗೆ ಸಲಹೆ ನೀಡಿದರು. ಬಳಿಕ ಬಿಜೆಪಿ ರಾಜ್ಯ ಹಾಗೂ ರಾಷ್ಟ್ರಮಟ್ಟದ ನಾಯಕರೊಂದಿಗೆ ಚರ್ಚಿಸಿ ಸರ್ಕಾರ ರಚನೆ ಮಾಡುತ್ತದೆ ಎಂದರು.
ಗೋದಾವರಿ ನದಿಗೆ ಇತರೆ ನದಿಗಳ ಜೋಡಣೆಯಿಂದ ಎಲ್ಲಾ ನೀರಿನ ಸಮಸ್ಯೆ ಬಗೆಹರಿಯುತ್ತದೆ. ಸಂಸತ್ನಲ್ಲಿ ಇದರ ಬಗ್ಗೆ ಮಾತನಾಡಿದ್ದೇನೆ. ವಾಜಪೇಯಿ ಅವರ ಕನಸು ಕೂಡ ಇದಾಗಿತ್ತು. ಇದೀಗ ಮೋದಿ ನೇತೃತ್ವದ ಸರ್ಕಾರ ಇದರ ಕಡೆ ಗಮನ ಹರಿಸುತ್ತಿದೆ ಎಂದು ಮಾಹಿತಿ ನೀಡಿದರು.