ETV Bharat / state

ಪ್ರತಿಪಕ್ಷದ ಸದಸ್ಯರು ಸದನದ ಕಲಾಪ ಬಹಿಷ್ಕರಿಸುವುದು ಸರಿಯಲ್ಲ: ಸ್ಪೀಕರ್ ಕಾಗೇರಿ - Congress Members Legislative Assembly

ಇಂದು ವಿಧಾನಸಭೆ ಕಲಾಪ ಆರಂಭವಾದರೂ ಕಾಂಗ್ರೆಸ್‌ ಸದಸ್ಯರು ಸದನಕ್ಕೆ ಬರಲಿಲ್ಲ. ಇದನ್ನು ಗಮನಿಸಿದ ಸ್ಪೀಕರ್, ಚರ್ಚೆ ನಡೆಸಲು ಎಲ್ಲರಿಗೂ ಅವಕಾಶ ಇದ್ದೇ ಇದೆ. ಆದರೆ, ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರತಿಪಕ್ಷಗಳಿಲ್ಲದೆ ಸದನ ನಡೆಸುವುದು ಸರಿಯಲ್ಲ. ವಿರೋಧ ಪಕ್ಷದವರು ಕಲಾಪದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

Its not right to boycott the House by opposition party members: Speaker
ಪ್ರತಿಪಕ್ಷದ ಸದಸ್ಯರು ಸದನದ ಕಲಾಪ ಬಹಿಷ್ಕರಿಸುವುದು ಸರಿಯಲ್ಲ : ಸ್ಪೀಕರ್
author img

By

Published : Dec 10, 2020, 12:45 PM IST

ಬೆಂಗಳೂರು: ಸದನದ ಕಲಾಪ ಬಹಿಷ್ಕರಿಸುವುದು ಸರಿಯಲ್ಲ. ಸೈದ್ಧಾಂತಿಕ‌ ವಿರೋಧ ಇದ್ದದ್ದೇ. ಅದನ್ನು ಜನರ ಮುಂದೆ ಕೊಂಡೊಯ್ಯುವ ಪ್ರಯತ್ನ ಮಾಡಲಿ ಎಂದಿರುವ ವಿಧಾನಸಭೆ ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪ್ರತಿಪಕ್ಷದ ಸದಸ್ಯರು ಕಲಾಪದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.

ಇಂದು ವಿಧಾನಸಭೆ ಕಲಾಪ ಆರಂಭವಾದರೂ ಕಾಂಗ್ರೆಸ್‌ ಸದಸ್ಯರು ಸದನಕ್ಕೆ ಬರಲಿಲ್ಲ. ಇದನ್ನು ಗಮನಿಸಿದ ಸ್ಪೀಕರ್, ಚರ್ಚೆ ನಡೆಸಲು ಎಲ್ಲರಿಗೂ ಅವಕಾಶ ಇದ್ದೇ ಇದೆ. ಆದರೆ, ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರತಿಪಕ್ಷಗಳಿಲ್ಲದೆ ಸದನ ನಡೆಸುವುದು ಸರಿಯಲ್ಲ. ವಿರೋಧ ಪಕ್ಷದವರು ಕಲಾಪದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಪ್ರತಿಪಕ್ಷದವರ ಮನವೊಲಿಸುವ ಪ್ರಯತ್ನ ನಾನು ಮಾಡುತ್ತೇನೆ ಎಂದು ಹೇಳಿದ ಸ್ಪೀಕರ್, ಹತ್ತು ನಿಮಿಷ ಸದನ ಮುಂದೂಡಿದರು. ಬಳಿಕ ಕಾಂಗ್ರೆಸ್‌ ಸದಸ್ಯರನ್ನು ಸ್ಪೀಕರ್ ತಮ್ಮ ಕಚೇರಿಗೆ ಆಹ್ವಾನಿಸಿದರು. ಆದರೆ, ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿರುವ ಹಿನ್ನೆಲೆ ಸದಸ್ಯರು ಬರದ ಕಾರಣ ಮತ್ತೆ ಸದನ ಸಮಾವೇಶಗೊಂಡಿತು. ಸದ್ಯ ಶಾಸಕಾಂಗ ಪಕ್ಷದ ಸಭೆ ಇರುವುದರಿಂದ ಕಾಂಗ್ರೆಸ್‌ ಸದಸ್ಯರು ಬರದ ಕಾರಣ ಸದನವನ್ನು ಮುಂದುವರೆಸೋಣ. ಅವರು ಸದನಕ್ಕೆ ಬರುವ ಸಂಪೂರ್ಣ ವಿಶ್ವಾಸವಿದೆ ಎಂದು ಸ್ಪೀಕರ್ ಹೇಳಿದರು.

ಇದಕ್ಕೂ ಮುನ್ನ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ. ಸಿ.‌ ಮಾಧುಸ್ವಾಮಿ ಮಾತನಾಡಿ, ವಿಧಾನಸಭೆಯಲ್ಲಿ ಅಂಗೀಕಾರಗೊಂಡ ಎಷ್ಟೋ ವಿಧೇಯಕಗಳು ಮೇಲ್ಮನೆಯಲ್ಲಿ ಅಂಗೀಕಾರವಾಗದೆ ಬಾಕಿ ಉಳಿಯುತ್ತಿವೆ. ರಾಜ್ಯಪಾಲರು ಇದನ್ನು ಗಮನಿಸಿ ಪ್ರಶ್ನಿಸಿದ್ದಾರೆ. ಎರಡೂ ಸದನಗಳಲ್ಲಿ ಬಿಲ್ ಪಾಸಾಗದ ಸ್ಥಿತಿ ಏಕೆ ಎಂದು ಪ್ರಶ್ನಿಸಿದರು. ಬಿಎಸಿ(ಕಲಾಪ ಸಲಹಾ ಸಮಿತಿ) ಸಭೆಯಲ್ಲೂ ಮಹತ್ವದ ಬಿಲ್ ಮಂಡಿಸುವುದಾಗಿ ಹೇಳಿದ್ದರೂ ಕಾಂಗ್ರೆಸ್ ಸದಸ್ಯರು ಸದನಕ್ಕೆ ಬಾರದಿರುವುದು ಸರಿಯಲ್ಲ ಎಂದರು.

ಕಾಂಗ್ರೆಸ್‌ನವರು ಪ್ರಜಾಪ್ರಭುತ್ವದ ಬಗ್ಗೆ ದೊಡ್ಡ ದೊಡ್ಡದಾಗಿ ಮಾತನಾಡುತ್ತಾರೆ. ಗೋಹತ್ಯೆ ನಿಷೇಧ ಕಾಯ್ದೆಯನ್ನು ಹಿಂದೆ ಗವರ್ನರ್ ಬಳಿ ಹೋಗಿ ತಡೆ ಹಿಡಿದಿದ್ದು ಯಾಕೆ ಎಂದು ಪ್ರಶ್ನಿಸಿದ ಅವರು, ಕಲಾಪ ನಡೆಸಲು ಅನುವು ಮಾಡಿಕೊಡುವಂತೆ ಸ್ಪೀಕರ್ ಗೆ ಮನವಿ ಮಾಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.