ಬೆಂಗಳೂರು : ಜಗದ್ಗುರು ಶ್ರೀ ರೇಣುಕಾಚಾರ್ಯ ವಿದ್ಯಾಸಂಸ್ಥೆಯಿಂದ ಮುಖ್ಯಮಂತ್ರಿಗಳ ಕೋವಿಡ್-19 ಪರಿಹಾರ ನಿಧಿಗೆ 21 ಲಕ್ಷ ರೂ. ಗಳ ದೇಣಿಗೆ ಸಲ್ಲಿಸಲಾಯಿತು.
ಶ್ರೀ ಜಗದ್ಗುರು ರೇಣುಕಾಚಾರ್ಯ ವಿದ್ಯಾಸಂಸ್ಥೆಗೆ ಭೇಟಿ ನೀಡಿದ ಸಿಎಂ ಬಿ ಎಸ್ ಯಡಿಯೂರಪ್ಪ ಅವರಿಗೆ ಶ್ರೀ ರಂಭಾಪುರಿ ಪೀಠದ ಜಗದ್ಗುರು ಪ್ರಸನ್ನ ರೇಣುಕ ವೀರ ಸೋಮೇಶ್ವರ ಸ್ವಾಮೀಜಿ ಅವರು ಸಿಎಂ ಕೋವಿಡ್-19 ನಿಧಿಗೆ 21 ಲಕ್ಷ ದೇಣಿಗೆ ಚೆಕ್ ಹಸ್ತಾಂತರಿಸಿದರು.
ನಂತರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಆಶೀರ್ವದಿಸಿದ ರಂಭಾಪುರಿ ಶ್ರೀಗಳು, ಕೋವಿಡ್-19 ನಿಯಂತ್ರಣಕ್ಕೆ ಸರ್ಕಾರ ಮಾಡುತ್ತಿರುವ ಕೆಲಸವನ್ನು ಶ್ಲಾಘಿಸಿದರು.