ETV Bharat / state

ಮಂಗಳೂರಿನಲ್ಲಿ ನಡೆದ ಹಿಂಸಾಚಾರಕ್ಕೆ ಯು.ಟಿ.ಖಾದರ್ ನೇರ ಹೊಣೆ: ಶೆಟ್ಟರ್ ಆರೋಪ

ಮಂಗಳೂರಿನಲ್ಲಿ ಇಬ್ಬರು ಅಮಾಯಕರ ಸಾವಿಗೆ ಮಾಜಿ ಸಚಿವ ಯು.ಟಿ.ಖಾದರ್‌ ನೇರ ಹೊಣೆ ಎಂದು ಸಚಿವ ಜಗದೀಶ್ ಶೆಟ್ಟರ್​ ಆರೋಪಿಸಿದ್ದಾರೆ.

ಖಾದರ್ ವಿರುದ್ಧ ಜಗದೀಶ್ ಶೆಟ್ಟರ್​ ಆಕ್ರೋಶ, jagadish shettar talks about ut Khader
ಜಗದೀಶ್ ಶೇಟ್ಟರ್
author img

By

Published : Dec 21, 2019, 7:13 PM IST

ಬೆಂಗಳೂರು: ಪೌರತ್ವ ಕಾಯ್ದೆ ವಿಚಾರವಾಗಿ ಮಂಗಳೂರಿನಲ್ಲಿ ನಡೆದ ಹಿಂಸಾಚಾರಕ್ಕೆ ಮಾಜಿ ಸಚಿವ ಯು.ಟಿ. ಖಾದರ್ ನೇರ ಹೊಣೆ ಎಂದು ಬೃಹತ್ ಮತ್ತು ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್​ ಆರೋಪಿಸಿದ್ದಾರೆ.

ಖನಿಜ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೌರತ್ವ ಕಾಯ್ದೆ ಅನುಷ್ಠಾನವಾದರೆ ಮಂಗಳೂರಿನಲ್ಲಿ ಹಿಂಸಾಚಾರ ನಡೆಯಲಿದೆ ಎಂದು ಖಾದರ್‌ ವಿವಾದಾತ್ಮಕ ಹೇಳಿಕೆ ನೀಡಿದ್ದರಿಂದಲೇ ಅಲ್ಲಿನ ಜನರು ಹಿಂಸಾತ್ಮಕ ಕೃತ್ಯ ನಡೆಸಿ ಗಲಭೆ ನಡೆಸಲು ಪ್ರೇರೇಪಣೆಗೊಂಡರು. ಬೇರೆ ಜಿಲ್ಲೆಗಳಲ್ಲಿ ಇಷ್ಟು ಪ್ರಮಾಣದಲ್ಲಿ ಗಲಭೆ ನಡೆದಿಲ್ಲ. ಮಂಗಳೂರಿನಲ್ಲಿ ಇಬ್ಬರು ಅಮಾಯಕರ ಸಾವಿಗೆ ಖಾದರ್‌ ಅವರೇ ನೇರ ಹೊಣೆ ಎಂದರು.

ಜಗದೀಶ್ ಶೆಟ್ಟರ್, ಸಚಿವ

ಮಂಗಳೂರಿನಲ್ಲಿನ ವಾತಾವರಣ ಸಂಪೂರ್ಣ ಪ್ರಕ್ಷ್ಯುಬ್ಧವಾಗಿರುವ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಅಲ್ಲಿಗೆ ತೆರಳಿದರೆ ವಾತಾವರಣ ಇನ್ನಷ್ಟು ಹಾಳಾಗುತ್ತದೆ. ಈ ದೃಷ್ಟಿಯಿಂದ ಅವರು ಮಂಗಳೂರಿಗೆ ತೆರಳಲು ಪೊಲೀಸರು ಅವಕಾಶ ನೀಡಿಲ್ಲ. ಪ್ರತಿಪಕ್ಷ ಸ್ಥಾನದಲ್ಲಿರುವ ಸಿದ್ದರಾಮಯ್ಯ ಅವರು ಸಿಎಂ ಆಗಿಯೂ ಕೆಲಸ ಮಾಡಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಎಲ್ಲರ ಜವಾಬ್ದಾರಿ. ಇದನ್ನು ಅವರು ತಿಳಿದುಕೊಳ್ಳಲಿ ಎಂದು ಹೇಳಿದರು.

ಪೌರತ್ವ ಕಾಯ್ದೆ ದೇಶದಲ್ಲಿನ ಜನರನ್ನು ಹೊರಗೆ ಹಾಕುವುದಲ್ಲ. ಹೊರಗಿನಿಂದ ಬಂದವರಿಗೆ ಪೌರತ್ವ ಕೊಡುವ ಉದ್ದೇಶಕ್ಕೆ ಈ ಕಾನೂನು ತರಲಾಗಿದೆ. ಆದರೆ ಕಾಂಗ್ರೆಸ್‌ನವರು ಈ ಕಾಯ್ದೆ ಬಗ್ಗೆ ಅಪಪ್ರಚಾರ ಮಾಡಿ ಜನರನ್ನು ಆತಂಕಕ್ಕೆ ಒಳಗಾಗುವಂತೆ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮಹದಾಯಿ ವಿವಾದಕ್ಕೆ ಶೀಘ್ರ ತೆರೆ :
ಮಹದಾಯಿ ವಿವಾದ ಬಗೆಹರಿಸಲು, ಗೋವಾ ಮತ್ತು ಮಹಾರಾಷ್ಟ್ರ ಹಾಗೂ ಕರ್ನಾಟಕ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಆಸಕ್ತಿ ತೋರಿಸಿದ್ದಾರೆ. ಶೀಘ್ರದಲ್ಲೇ ಸಿಹಿ ಸುದ್ದಿ ಕೊಡುವುದಾಗಿ ಹೇಳಿದ್ದಾರೆ ಎಂದು ತಿಳಿಸಿದರು.

ಮಹದಾಯಿ ವಿಚಾರವಾಗಿ ಈಗಾಗಲೇ ನೀಡಿರುವ ತೀರ್ಪಿನನ್ವಯ ಅದನ್ನು ಅನುಷ್ಠಾನ ಮಾಡಲಾಗುವುದು. ಉಪಚುನಾವಣೆಗೋಸ್ಕರ ಪರಿಸರ ಇಲಾಖೆ ಅನುಮತಿ ನೀಡಿತ್ತು ಎಂಬ ಸುದ್ದಿಯನ್ನು ನಾನು ಒಪ್ಪುವುದಿಲ್ಲ. ಉಪಚುನಾವಣೆಗಾಗಿ ಕೇಂದ್ರ ಅನುಮತಿ ಕೊಟ್ಟಿರಲಿಲ್ಲ. ಕೇಂದ್ರ ಸರ್ಕಾರ, ಗೋವಾ, ಮಹಾರಾಷ್ಟ್ರ ರಾಜ್ಯಗಳೊಂದಿಗೆ ಸಮನ್ವಯತೆ ಸಾಧಿಸಿಕೊಂಡು ಸಮಸ್ಯೆ ಬಗೆಹರಿಸುವ ಬಗ್ಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದರು.

ಮರಳು ಯೋಜನೆ ವಿಫಲ:
ಮಲೇಷಿಯಾ ಮರಳು ಯೋಜನೆ ವಿಫಲವಾಗಿದೆ. ಈ ಹಿಂದೆ ಎಂಎಸ್ಐಎಲ್ ಮೂಲಕ ಮರಳು ತರುವ ಯೋಜನೆ ಸಕ್ಸಸ್ ಆಗಿಲ್ಲ. ಹಿಂದಿನ ಸರ್ಕಾರ ಮಲೇಷಿಯಾದಿಂದ ಮರಳು ತರಿಸಿತ್ತು. ಈ ಮರಳಿಗೆ ಬೇಡಿಕೆಯೂ ಬರುತ್ತಿಲ್ಲ. ವಿದೇಶದಿಂದ ಮರಳು ಎಷ್ಟು ಪ್ರಮಾಣದಲ್ಲಿ ಆಮದಾಗಿದೆ. ಎಷ್ಟು ಮಾರಾಟ ಆಗಿದೆ. ನಷ್ಟವೆಷ್ಟು? ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ. ಆ ಕುರಿತು ಮಾಹಿತಿ ಪಡೆದುಕೊಳ್ಳುತ್ತೇನೆ. ಮರಳು ಸುಲಭವಾಗಿ ಸಿಗುವಂತಾಗಲು ಹೊಸ ವ್ಯವಸ್ಥೆ ಮಡಲಾಗುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪನವರೂ ಸಹ ಚಿಂತನೆ ನಡೆಸಿದ್ದು, ಇದಕ್ಕಾಗಿ ಒಂದು ಸಮಿತಿ ರಚಿಸಲಾಗಿದೆ ಎಂದು ತಿಳಿಸಿದ್ದಾರೆ.

Intro:ಬೆಂಗಳೂರು : ಪೌರತ್ವ ಕಾಯ್ದೆ ವಿಚಾರವಾಗಿ ಮಂಗಳೂರಿನಲ್ಲಿ ನಡೆದ ಹಿಂಸಾಚಾರಕ್ಕೆ ನೇರ ಹೊಣೆ ಮಾಜಿ ಸಚಿವ ಯು.ಟಿ. ಖಾದರ್ ಎಂದು ಬೃಹತ್ ಮತ್ತು ಕೈಗಾರಿಕಾ ಸಚಿವ ಜಗದೀಶ್‌ ಆರೋಪಿಸಿದ್ದಾರೆ.Body:ಖನಿಜ ಭವನದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೌರತ್ವ ಕಾಯ್ದೆ ಅನುಷ್ಠಾನವಾದರೆ ಮಂಗಳೂರಿನಲ್ಲಿ ಹಿಂಸಾಚಾರ ನಡೆಯಲಿದೆ ಎಂದು ಖಾದರ್‌ ವಿವಾದಾತ್ಮಕ ಹೇಳಿಕೆ ನೀಡಿದ್ದರಿಂದಲೇ ಅಲ್ಲಿನ ಜನರು ಹಿಂಸಾತ್ಮಕ ಕೃತ್ಯ ನಡೆಸಿ ಗಲಭೆ ನಡೆಸಲು ಪ್ರೇರೇಪಣೆಗೊಂಡರು. ಬೇರೆ ಜಿಲ್ಲೆಗಳಲ್ಲಿ ಇಷ್ಟು ಪ್ರಮಾಣದಲ್ಲಿ ಗಲಭೆ ನಡೆದಿಲ್ಲ. ಮಂಗಳೂರಿನಲ್ಲಿ ಇಬ್ಬರು ಅಮಾಯಕರ ಸಾವಿಗೆ ಖಾದರ್‌ ಅವರೇ ನೇರ ಹೊಣೆ ಎಂದರು.
ಮಂಗಳೂರಿನಲ್ಲಿನ ವಾತಾವರಣ ಸಂಪೂರ್ಣ ಪ್ರಕ್ಷ್ಯುಬ್ಧವಾಗಿರುವ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಅಲ್ಲಿಗೆ ತೆರಳಿದರೆ ವಾತಾವರಣ ಇನ್ನಷ್ಟು ಹಾಳಾಗುತ್ತದೆ. ಈ ದೃಷ್ಟಿಯಿಂದ ಅವರು ಮಂಗಳೂರಿಗೆ ತೆರಳು ಪೊಲೀಸರು ಅವಕಾಶ ನೀಡಿಲ್ಲ. ಪ್ರತಿಪಕ್ಷ ಸ್ಥಾನದಲ್ಲಿರುವ ಸಿದ್ದರಾಮಯ್ಯ ಅವರು ಸಿಎಂ ಆಗಿಯೂ ಕೆಲಸ ಮಾಡಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಎಲ್ಲರ ಜವಾಬ್ದಾರಿ. ಇದನ್ನು ಅವರು ತಿಳಿದುಕೊಳ್ಳಲಿ ಎಂದು ಹೇಳಿದರು.
ಪೌರತ್ವ ಕಾನೂನು ದೇಶದಲ್ಲಿನ ಜನರನ್ನು ಹೊರಗೆ ಹಾಕುವುದಲ್ಲ. ಹೊರಗಿನಿಂದ ಬಂದವರಿಗೆ ಪೌರತ್ವ ಕೊಡುವ ಉದ್ದೇಶಕ್ಕೆ ಈ ಕಾನೂನು ತರಲಾಗಿದೆ. ಆದರೆ ಕಾಂಗ್ರೆಸ್‌ನವರು ಈ ಕಾಯಿದೆ ಬಗ್ಗೆ ಅಪಪ್ರಚಾರ ಮಾಡಿ ಜನರನ್ನು ಆತಂಕಕ್ಕೆ ಒಳಗಾಗುವಂತೆ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮಹದಾಯಿ ವಿವಾದಕ್ಕೆ ಶೀಘ್ರ ತೆರೆ : ಇನ್ನು, ಮಹದಾಯಿ ವಿವಾದ ಬಗೆಹರಿಸಲು, ಗೋವಾ ಮತ್ತು ಮಹಾರಾಷ್ಟ್ರ ಹಾಗೂ ಕರ್ನಾಟಕ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ಸಂಧಾನಸಭೆ ನಡೆಸಲು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಆಸಕ್ತಿ ತೋರಿಸಿದ್ದಾರೆ. ಅದಕ್ಕೆ ಶೀಘ್ರದಲ್ಲೇ ಸಿಹಿ ಸುದ್ದಿ ಕೊಡುವುದಾಗಿ ಹೇಳಿದ್ದಾರೆ ಎಂದು ಹೇಳಿದರು.
ಮಹದಾಯಿ ವಿಚಾರವಾಗಿ ಈಗಾಗಲೇ ನೀಡಿರುವ ತೀರ್ಪಿನನ್ವಯ ಅದನ್ನು ಅನುಷ್ಠಾನ ಮಾಡಲಾಗುವುದು ಎಂದರು.
ಉಪಚುನಾವಣೆಗೋಸ್ಕರ ಪರಿಸರ ಇಲಾಖೆ ಅನುಮತಿ ನೀಡಿತ್ತು ಎಂಬ ಸುದ್ದಿಯನ್ನು ನಾನು ಒಪ್ಪುವುದಿಲ್ಲ. ಉಪಚುನಾವಣೆಗಾಗಿ ಕೇಂದ್ರ ಅನುಮತಿ ಕೊಟ್ಟಿರಲಿಲ್ಲ. ಕೇಂದ್ರ ಸರ್ಕಾರ, ಗೋವಾ, ಮಹಾರಾಷ್ಟ್ರ ರಾಜ್ಯಗಳೊಂದಿಗೆ ಸಮನ್ವಯತೆ ಸಾಧಿಸಿಕೊಂಡು ಸಮಸ್ಯೆ ಬಗೆಹರಿಸುವ ಬಗ್ಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದರು.
ಮರಳು ಯೋಜನೆ ವಿಫಲ : ಮಲೇಷಿಯಾ ಮರಳು ಯೋಜನೆ ವಿಫಲವಾಗಿದೆ. ಈ ಹಿಂದೆ ಎಂಎಸ್ ಐಎಲ್ ಮೂಲಕ ಮರಳು ತರುವ ಯೋಜನೆ ಸಕ್ಸಸ್ ಆಗಿಲ್ಲ ಎಂದು ಹೇಳಿದರು.
ಹಿಂದಿನ ಸರ್ಕಾರ ಮಲೇಷಿಯಾದಿಂದ ಮರಳು ತರಿಸಿತ್ತು. ಈ ಮರಳಿಗೆ ಬೇಡಿಕೆಯೂ ಬರುತ್ತಿಲ್ಲ. ವಿದೇಶದಿಂದ ಮರಳು ಎಷ್ಟು ಪ್ರಮಾಣದಲ್ಲಿ ಆಮದಾಗಿದೆ. ಎಷ್ಟು ಮಾರಾಟ ಆಗಿದೆ. ನಷ್ಟವೆಷ್ಟು? ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ. ಆ ಕುರಿತು ಮಾಹಿತಿ ಪಡೆದುಕೊಳ್ಳುತ್ತೇನೆ ಎಂದರು.
ಮರಳು ಸುಲಭವಾಗಿ ಸಿಗುವಂತಾಗಲು ಹೊಸ ವ್ಯವಸ್ಥೆ ಅಮಡಲಾಗುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪನವರೂ ಸಹ ಚಿಂತನೆ ನಡೆಸಿದ್ದು, ಇದಕ್ಕಾಗಿ ಒಂದು ಸಮಿತಿ ರಚಿಸಲಾಗಿದೆ ಎಂದು ಹೇಳಿದರು.Conclusion:

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.