ETV Bharat / state

ಮುಸ್ಲಿಮರ ಪರ ರೋಷನ್ ಬೇಗ್ ಕಣ್ಣೀರು ಹಾಕುತ್ತಿರುವುದು ತಮಾಷೆಯಾಗಿದೆ: ಜಮೀರ್ ಅಹ್ಮದ್​​ - ಜಮೀರ್ ಅಹ್ಮದ್​​

ಮೂರು ದಶಕಗಳಿಗಿಂತ ಹೆಚ್ಚು ಕಾಲ ಕಾಂಗ್ರೆಸ್ ಪಕ್ಷದಲ್ಲಿದ್ದು ಮುಸ್ಲಿಮರ ಬಡತನ, ಅನಕ್ಷರತೆ, ನಿರುದ್ಯೋಗದಂತಹ ಮೂಲಭೂತ ಸಮಸ್ಯೆಗಳ ಬಗ್ಗೆ ಎಂದೂ ತಲೆಕೆಡಿಸಿಕೊಳ್ಳದೆ, ಅಮಾಯಕ ಮುಸ್ಲಿಮರನ್ನು ರಾಜಕೀಯ ಸ್ವಾರ್ಥಕ್ಕಷ್ಟೇ ಬಳಸಿಕೊಂಡಿದ್ದ ರೋಷನ್ ಬೇಗ್ ಅವರು ಈಗ ಮುಸ್ಲಿಮರ ಪರ ಕಣ್ಣೀರು ಹಾಕುತ್ತಿರುವುದು ತಮಾಷೆಯಾಗಿದೆ ಎಂದು ಶಾಸಕ ಜಮೀರ್​ ಅಹಮದ್ ಖಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಮೀರ್ ಅಹಮದ್​  -ರೋಷನ್ ಬೇಗ್
ಜಮೀರ್ ಅಹಮದ್​ -ರೋಷನ್ ಬೇಗ್
author img

By

Published : Aug 17, 2020, 9:33 PM IST

ಬೆಂಗಳೂರು: ಮಾಜಿ ಸಚಿವ ರೋಷನ್ ಬೇಗ್ ವಿರುದ್ಧ ಚಾಮರಾಜಪೇಟೆ ಶಾಸಕ ಹಾಗೂ ಮಾಜಿ ಸಚಿವ ಜಮೀರ್ ಅಹ್ಮದ್​ ಖಾನ್ ಕಿಡಿಕಾರಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮೂರು ದಶಕಗಳಿಗಿಂತ ಹೆಚ್ಚು ಕಾಲ ಕಾಂಗ್ರೆಸ್ ಪಕ್ಷದಲ್ಲಿದ್ದು ಮುಸ್ಲಿಮರ ಬಡತನ, ಅನಕ್ಷರತೆ, ನಿರುದ್ಯೋಗದಂತಹ ಮೂಲಭೂತ ಸಮಸ್ಯೆಗಳ ಬಗ್ಗೆ ಎಂದೂ ತಲೆಕೆಡಿಸಿಕೊಳ್ಳದೆ, ಅಮಾಯಕ ಮುಸ್ಲಿಮರನ್ನು ರಾಜಕೀಯ ಸ್ವಾರ್ಥಕ್ಕಷ್ಟೇ ಬಳಸಿಕೊಂಡಿದ್ದ ರೋಷನ್ ಬೇಗ್ ಅವರು ಈಗ ಮುಸ್ಲಿಮರ ಪರ ಕಣ್ಣೀರು ಹಾಕುತ್ತಿರುವುದು ತಮಾಷೆಯಾಗಿದೆ ಎಂದಿದ್ದಾರೆ.

ರೋಷನ್ ಬೇಗ್ ವಿರುದ್ಧ ಜಮೀರ್​ ಆಕ್ರೋಶ
ರೋಷನ್ ಬೇಗ್ ವಿರುದ್ಧ ಜಮೀರ್​ ಆಕ್ರೋಶ

ಶಿವಾಜಿನಗರದಲ್ಲಿ ಬೇಗ್ ಅವರು ಸ್ಪರ್ಧಿಸುತ್ತಿದ್ದಾಗ ಎಂದೂ ಸ್ಪರ್ಧಿಸದಿದ್ದ ಎಸ್​ಡಿಪಿಐ ಇತ್ತೀಚಿನ ಶಿವಾಜಿ ನಗರ ವಿಧಾನಸಭಾ ಉಪಚುನಾವಣೆಯಲ್ಲಿ ಕಣಕ್ಕಿಳಿದದ್ದು ಯಾಕೆ?. ಕಾಂಗ್ರೆಸ್ ಬೆಂಬಲಿಸುವ ಮುಸ್ಲಿಂ ಮತಗಳನ್ನು ವಿಭಜಿಸುವ ದುರುದ್ದೇಶದಿಂದ ಎಸ್​ಡಿಪಿಐ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು ಯಾರು ಎನ್ನುವುದನ್ನು ಬೇಗ್ ಸಾಹೇಬರು ತಿಳಿಸಬೇಕು. ಡಿಜೆ ಹಳ್ಳಿ ಗಲಭೆ ಬಗ್ಗೆ ಇಲ್ಲಿಯವರೆಗೆ ಮೌನ ವಹಿಸಿದ್ದ ಅವರು ಇದ್ದಕ್ಕಿದ್ದ ಹಾಗೆ ಎಸ್​ಡಿಪಿಐಯಿಂದ ಅಂತರ ಕಾಯ್ದುಕೊಳ್ಳಲು ಪ್ರಯತ್ನ ಪಡುತ್ತಿರುವುದು ಮತ್ತು ಕಾಂಗ್ರೆಸ್ ವಿರುದ್ಧ ಸುಳ್ಳು ಆರೋಪ ಮಾಡುತ್ತಿರುವುದನ್ನು ಕಂಡಾಗ ಪೊಲೀಸರ ತನಿಖೆಯ ಸುಳಿವು ಅವರಿಗೆ ಸಿಕ್ಕ ಹಾಗೆ ಕಾಣುತ್ತಿದೆ ಎಂದಿದ್ದಾರೆ.

ಧರ್ಮ ಗುರುವನ್ನು ಅವಹೇಳನ ಮಾಡಿರುವ ನವೀನ್ ಎಂಬ ಆರೋಪಿಯ ಕುಕೃತ್ಯವನ್ನು ಕನಿಷ್ಠ ಖಂಡಿಸುವ ಧೈರ್ಯ ತೋರದ ಬೇಗ್ ಅವರು ಕಾಂಗ್ರೆಸ್ ಮತ್ತು ಎಸ್​ಡಿಪಿಐ ಸಂಬಂಧದ ಕತೆ ಹೆಣೆಯುತ್ತಿರುವುದು ಅವರ ಆತ್ಮವಂಚಕ ನಡವಳಿಕೆಗೆ ಸರಿಯಾಗಿ ಹೊಂದಿಕೊಳ್ಳುತ್ತಿದೆ. ರೋಷನ್ ಬೇಗ್ ಅವರೇ, ಕಾಂಗ್ರೆಸ್ ಬಗ್ಗೆ ಸುಳ್ಳು ಆರೋಪ ಮಾಡಿ ಸಂಘಿ ನಿಷ್ಠೆ ಸಾಬೀತು ಮಾಡುವ ಬದಲು ಈಶ್ವರಪ್ಪನವರು ಹೇಳಿದಂತೆ ಬಿಜೆಪಿ ಕಚೇರಿ ಕಸ ಗುಡಿಸಿ. ನಿಮ್ಮ ಹಿರಿತನಕ್ಕೆ ಗೌರವ ಕೊಟ್ಟು 10 ವರ್ಷದ ಷರತ್ತು ಸಡಿಲಿಸಿ 2023ರ ಚುನಾವಣೆಯಲ್ಲಾದರೂ ಬಿಜೆಪಿ ಟಿಕೆಟ್ ನೀಡಬಹುದು. ಈ ದಿಸೆಯಲ್ಲಿ ಇಂದಿನಿಂದಲೇ ಕಾರ್ಯಪ್ರವೃತ್ತರಾಗಿ ಎಂದು ಸಲಹೆ ನೀಡಿದ್ದಾರೆ. ಒಟ್ಟಾರೆ ರೋಷನ್ ಬೇಗ್ ವಿರುದ್ಧ ಸರಣಿ ಟ್ವೀಟ್ ಮೂಲಕ ಜಮೀರ್ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.