ETV Bharat / state

ಜಮೀರ್ ವಿರುದ್ಧ ಅವಹೇಳನಕಾರಿ ವಿಡಿಯೋ: ಜೆಡಿಎಸ್ ಕಾರ್ಯಕರ್ತನ ವಿರುದ್ಧ ಎಫ್ಐಆರ್ - ಜೆಡಿಎಸ್​ ಕಾರ್ಯಕರ್ತ ನರಸಿಂಹ ಮೂರ್ತಿ

ಶಾಸಕ ಜಮೀರ್ ಅಹ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದಡಿ ಜೆಡಿಎಸ್​ ಕಾರ್ಯಕರ್ತನ ವಿರುದ್ಧ ದೂರು ದಾಖಲಾಗಿದೆ.

ಜಮೀರ್
ಜಮೀರ್
author img

By

Published : Aug 25, 2021, 7:02 PM IST

ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದಡಿ ಜೆಡಿಎಸ್​ ಕಾರ್ಯಕರ್ತ ನರಸಿಂಹ ಮೂರ್ತಿ ವಿರುದ್ಧ ದೂರು ದಾಖಲಾಗಿದೆ.

ಜಮೀರ್ ಅಹ್ಮದ್ ಬೆಂಬಲಿಗ ನವೀನ್​ ಗೌಡ ಎಂಬುವರು ನರಸಿಂಹಮೂರ್ತಿ ವಿರುದ್ಧ ಚಾಮರಾಜಪೇಟೆ ಠಾಣೆಗೆ ದೂರು ನೀಡಿದ್ದಾರೆ. ದೂರನ್ನಾಧಿರಿಸಿ ಕ್ರಮ ಕೈಗೊಂಡಿರುವ ಪೊಲೀಸರು ಆರೋಪಿ ನರಸಿಂಹ ಮೂರ್ತಿ ವಿರುದ್ಧ ಎಫ್​​ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಜೂನ್ 10 ರಂದು ಫೇಸ್​ಬುಕ್​ನ ಗಜಪಡೆ ಹೆಸರಿನ ಪೇಜ್​ನಲ್ಲಿ ಜಮೀರ್ ವಿರುದ್ಧ ನರಸಿಂಹ ಮೂರ್ತಿ ಅವಹೇಳನಕಾರಿಯಾಗಿ ಮಾತನಾಡಿರುವ ವಿಡಿಯೋ ವೈರಲ್ ಆಗಿತ್ತು.

ಇದನ್ನೂ ಓದಿ: DSS ಅಧ್ಯಕ್ಷ ರಘು ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ನಟ ಜಗ್ಗೇಶ್..

ಈ ಸಂಬಂಧ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಎನ್ ಸಿಆರ್ ದಾಖಲಾಗಿತ್ತು. ನ್ಯಾಯಾಲಯದ ನಿರ್ದೇಶನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.