ಬೆಂಗಳೂರು: ತಾವು ನೀಡಿದ ಹೇಳಿಕೆ ಪಕ್ಷಕ್ಕೆ ತೀವ್ರ ಮುಜುಗರ ತರಿಸಿದ ಹಿನ್ನೆಲೆ ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಕ್ಷಮೆಯಾಚನೆ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಹ ಜಮೀರ್ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿ, ಇಂತಹ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷ ಒಪ್ಪುವುದಿಲ್ಲ ಅವರು ಸಾರ್ವಜನಿಕರ ಕ್ಷಮೆಯಾಚಿಸಬೇಕು ಎಂದು ಸೂಚಿಸಿದ್ದರು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಹ ಕ್ಷಮೆಯಾಚಿಸುವಂತೆ ಜಮೀರ್ ಗೆ ಸಲಹೆ ನೀಡಿದ್ದರು.
ಈ ಎಲ್ಲಾ ಸನ್ನಿವೇಶಗಳ ಮಧ್ಯೆ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಸಹ ಟ್ವೀಟ್ ಮೂಲಕ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಟ್ವೀಟ್ ಮಾಡಿದ್ದು, ಕಾಂಗ್ರೆಸ್ ನಾಯಕರೊಬ್ಬರು ಮಹಿಳೆಯರ ಬಗ್ಗೆ ಕೀಳು ಮಟ್ಟದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆಧುನಿಕ ಭಾರತದಲ್ಲಿ ಇಂತಹ ವಿಚಾರಗಳಿಗೆ ಅವಕಾಶವಿಲ್ಲ. ಇಂತಹ ಕೀಳು ಮಟ್ಟದ ವಿಚಾರಧಾರೆಗಳು ಕೇವಲ ಬಿಜೆಪಿಗೆ ಮಾತ್ರ ಸೀಮಿತ.
ಈ ಹಿಂದೆ ಬಿಜೆಪಿ ನಾಯಕರಾದ ಆದಿತ್ಯನಾಥ, ಮನೋಹರ ಲಾಲ್ ಖಟ್ಟರ್ ಹೇಳಿಕೆ ನೀಡಿದ್ದಾರೆ. ಮಹಿಳೆಯರ ಬಗ್ಗೆ ಕೀಳು ಮಟ್ಟದಲ್ಲಿ ಅವರು ಮಾತನಾಡಿದ್ದರು. ಭಾರತೀಯ ಮಹಿಳೆ ಅನಾದಿಕಾಲದಿಂದಲೂ ಶಕ್ತಿ ಸ್ವರೂಪಿನಿಯಾಗಿದ್ದಾಳೆ.
ಇದಕ್ಕೆ ಯಾವುದೇ ಜಾತಿ, ಧರ್ಮ ಅಡ್ಡ ಬರುವುದಿಲ್ಲ ಎಂದಿದ್ದ ಅವರು, ಮಹಿಳೆಯರು ಭಾರತವನ್ನು ಹೆಮ್ಮೆ ಪಡುವಂತೆ ಸಾಧನೆ ಮಾಡಿದ್ದಾರೆ. ಈಗ ಸಮಯ ಬದಲಾಗಿದೆ ನಾಯಕರು ಸಂಕುಚಿತ ಮನೋಭಾವದಿಂದ ಹೊರ ಬರಬೇಕು ಎಂದು ಅಭಿಪ್ರಾಯಪಟ್ಟಿದ್ದರು.
ಪಕ್ಷದ ಹಿರಿಯ ನಾಯಕರ ನಿರಂತರ ಹೇಳಿಕೆಗಳು ಹಾಗೂ ಒತ್ತಡ ಮೂಡಿಬಂದ ಹಿನ್ನೆಲೆ ಟ್ವೀಟ್ ಮೂಲಕ ಜಮೀರ್ ಅಹಮದ್ ಕ್ಷಮೆಯಾಚನೆ ಮಾಡಿದ್ದಾರೆ.
-
I get anxious & scared to see increasing atrocities & rape on Women in our Country. Because of this state of our society, I said that at least with burqa-hijab we may be able to prevent rapes. It was not intended to hurt or disrespect anyone.
— B Z Zameer Ahmed Khan (@BZZameerAhmedK) February 14, 2022 " class="align-text-top noRightClick twitterSection" data="
I regret it if it has hurt anyone.
">I get anxious & scared to see increasing atrocities & rape on Women in our Country. Because of this state of our society, I said that at least with burqa-hijab we may be able to prevent rapes. It was not intended to hurt or disrespect anyone.
— B Z Zameer Ahmed Khan (@BZZameerAhmedK) February 14, 2022
I regret it if it has hurt anyone.I get anxious & scared to see increasing atrocities & rape on Women in our Country. Because of this state of our society, I said that at least with burqa-hijab we may be able to prevent rapes. It was not intended to hurt or disrespect anyone.
— B Z Zameer Ahmed Khan (@BZZameerAhmedK) February 14, 2022
I regret it if it has hurt anyone.
ಜಮೀರ್ ಟ್ವೀಟ್ ವಿವರ: ದೇಶದಲ್ಲಿ ಹೆಣ್ಣುಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ - ಅತ್ಯಾಚಾರಗಳನ್ನು ಕಂಡಾಗ ಭಯ - ಆತಂಕ ಉಂಟಾಗುತ್ತದೆ. ಈ ಹಿನ್ನೆಲೆಯಲ್ಲಿ ಕನಿಷ್ಠ ಹಿಜಾಬ್ - ಬುರ್ಖಾ ಧರಿಸುವುದರಿಂದಾದರೂ ಅತ್ಯಾಚಾರವನ್ನು ತಡೆಗಟ್ಟಬಹುದೇನೋ ಎಂಬ ಮಾತನ್ನು ನಾನು ಆಡಿದ್ದೆ. ಯಾರ ಮನಸ್ಸನ್ನಾದರೂ ನೋಯಿಸುವ ಇಲ್ಲವೇ ಅಗೌರವ ತೋರಿಸುವ ದುರುದ್ದೇಶ ನನಗಿಲ್ಲ. ಹೆಣ್ಣು ಮಕ್ಕಳ ಮೇಲಿನ ಕಾಳಜಿಯ ಸದುದ್ದೇಶದಿಂದ ಹೇಳಿರುವುದು. ನನ್ನ ಹೇಳಿಕೆಯನ್ನು ತಿರುಚಲಾಗಿದ್ದು, ಆ ಬಗ್ಗೆ ವಿಷಾಧವಿದೆ ಎಂದಿದ್ದಾರೆ.
ನನ್ನ ಹೇಳಿಕೆಯಲ್ಲಿ ದುರುದ್ದೇಶ ಇರಲಿಲ್ಲ; ಹಿಜಾಬ್ - ಬುರ್ಖಾ ಧರಿಸುವುದನ್ನು ಧಾರ್ಮಿಕ ಕಟ್ಟಳೆಯನ್ನಾಗಿ ಮಾಡಿದ ನಮ್ಮ ಹಿರಿಯರ ಉದ್ದೇಶವೂ ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದೇ ಆಗಿದೆ. ಈ ಹಿನ್ನೆಲೆಯಲ್ಲಿ ನನ್ನಿಂದ ಆ ಮಾತುಗಳು ಬಂತು. ಇದರ ಹೊರತಾಗಿ ಬೇರೆ ಯಾವ ದುರುದ್ದೇಶವೂ ನನಗಿರಲಿಲ್ಲ. ಇತ್ತೀಚೆಗೆ ಅರ್ಧ ಹೆಲ್ಮೆಟ್ ಬದಲು ಫುಲ್ ಹೆಲ್ಮೆಟ್ ಅನ್ನು ಕಡ್ಡಾಯಗೊಳಿಸಲಾಗಿದೆ. ಸರ್ಕಾರದ ಈ ನಿಲುವಿನ ಹಿಂದೆ ಜನರ ಜೀವ ರಕ್ಷಣೆಯ ಉದ್ದೇಶ ಹೇಗಿದೆಯೋ ಹಾಗೆಯೇ ನನ್ನ ಹೇಳಿಕೆ ಹಿಂದೆ ಹೆಣ್ಣು ಮಕ್ಕಳ ಬಗೆಗಿನ ಕಾಳಜಿ ಇದೆ ಎಂದು ತಮ್ಮನ್ನು ಸಮರ್ಥಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ.
ಹೆಣ್ಣು ಮಕ್ಕಳ ಅತ್ಯಾಚಾರಕ್ಕೆ ಅವರ ಮೈಮೇಲಿನ ಬಟ್ಟೆ ಖಂಡಿತ ಕಾರಣ ಅಲ್ಲ, ಮೈ ತುಂಬಾ ಬಟ್ಟೆ ಹಾಕಿದರೂ, ಹಾಕದೇ ಇದ್ದರೂ ಅತ್ಯಾಚಾರ ನಡೆಯುತ್ತಲೇ ಇರುತ್ತದೆ. ಇದಕ್ಕೆ ಮುಖ್ಯ ಕಾರಣ ಕೆಲವು ಪುರುಷರಲ್ಲಿರುವ ರೇಪಿಸ್ಟ್ ಮನಸ್ಥಿತಿ. ಹೆಣ್ಣುಮಕ್ಕಳ ಅತ್ಯಾಚಾರ ಕಡಿಮೆಯಾಗಬೇಕಾದರೆ ಮೊದಲು ಪುರುಷರು ಬದಲಾಗಬೇಕು. ಹೆಣ್ಣುಮಕ್ಕಳಿಗೆ ನಿಜವಾದ ರಕ್ಷಣೆ ನೀಡುವುದು ಶಿಕ್ಷಣ ಮಾತ್ರ ಎಂದು ನನ್ನ ಅಭಿಪ್ರಾಯ.
ಹಿಜಾಬ್ - ಬುರ್ಖಾ ಧರಿಸಿಯಾದರೂ ಒಮ್ಮೆ ಅವರು ಶಿಕ್ಷಣ ಪಡೆಯಲಿ. ಆ ಶಿಕ್ಷಣದ ಬಲದಿಂದ ಅವರು ತಮ್ಮನ್ನು ತಾವು ರಕ್ಷಿಸಿಕೊಳ್ಳುತ್ತಾರೆ ಎಂಬ ನಂಬಿಕೆ ನನ್ನದು. ಶಿಕ್ಷಣಕ್ಕಿಂತ ಶಕ್ತಿಯುತವಾದ ಅಸ್ತ್ರ ಬೇರೆ ಇಲ್ಲ. ಆದ್ದರಿಂದ ಹಿಜಾಬ್ -ಬುರ್ಖಾದ ಕಾರಣ ನೀಡಿ ದಯವಿಟ್ಟು ಮುಸ್ಲಿಂ ಹೆಣ್ಣು ಮಕ್ಕಳಿಗೆ ಶಿಕ್ಷಣವನ್ನು ನಿರಾಕರಿಸಬೇಡಿ ಎಂದು ನಾನು ಸರ್ಕಾರವನ್ನು ಮತ್ತು ಸಮಾಜವನ್ನು ಕೈಮುಗಿದು ಬೇಡಿಕೊಳ್ಳುತ್ತೇನೆ ಎಂದಿದ್ದಾರೆ.