ETV Bharat / state

Karnataka Budget: ಮೈಸೂರಿನಲ್ಲಿ ಫಿಲ್ಮ್​ ಸಿಟಿ; ಕಲಬುರಗಿಯಲ್ಲಿ ಜಾನಪದ ಲೋಕ ಸ್ಥಾಪನೆ - ಫಿಲ್ಮ್​ ಸಿಟಿಯನ್ನು ಮೈಸೂರಿನಲ್ಲೇ ಸ್ಥಾಪಿಸುವುದಾಗಿ

ಸಿದ್ದರಾಮಯ್ಯ ಅವರ ಬಜೆಟ್​ನಲ್ಲಿ ಸಿನಿಮಾ ಮತ್ತು ಕನ್ನಡ ಹಾಗೂ ಸಂಸ್ಕೃತಿ ಇಲಾಖೆಗೆ ಯಾವ ಯೋಜನೆ ಪರಿಚಯಿಸಲಾಗುವುದು ಎಂಬ ಮಾಹಿತಿ ಇಲ್ಲಿದೆ.

Janapada Loka will be Establishment in Kalbrugi

author img

By

Published : Jul 7, 2023, 2:32 PM IST

ಬೆಂಗಳೂರು: ಚಿತ್ರರಂಗದ ಬೇಡಿಕೆಯಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫಿಲ್ಮ್​ ಸಿಟಿಯನ್ನು ಮೈಸೂರಿನಲ್ಲೇ ಸ್ಥಾಪಿಸುವುದಾಗಿ ಬಜೆಟ್​ನಲ್ಲಿ ಘೋಷಣೆ ಮಾಡಿದ್ದಾರೆ. ಈ ಹಿಂದಿನ ಸರ್ಕಾರದಲ್ಲಿ ಈ ಫಿಲ್ಮ್​ ಸಿಟಿಯನ್ನು ಬೆಂಗಳೂರಿಗೆ ವರ್ಗಾಯಿಸುವ ಉದ್ದೇಶ ಹೊಂದಿತು. ಇದೀಗ ಮತ್ತೆ ಮೈಸೂರು ಜಿಲ್ಲೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿ ಸ್ಥಾಪನೆ ಮಾಡುವ ಘೋಷಣೆ ಮಾಡಿದ್ದಾರೆ.

ಇದರ ಜೊತೆಗೆ ಕನ್ನಡ ಚಿತ್ರರಂಗದ ಇತಿಹಾಸ, ಅದು ಬೆಳೆದು ಬಂದ ಇತಿಹಾಸ ತಿಳಿಸುವ ಸಂಗ್ರಹಾಯಲವನ್ನು ಬೆಂಗಳೂರಿನ ಕಂಠೀರವದಲ್ಲಿರುವ ಡಾ ರಾಜ್​ ಕುಮಾರ್​ ಸ್ಮಾರಕದ ಬಳಿ ನಿರ್ಮಾಣ ಮಾಡುಲಾಗುವುದು. ಕಳೆದ ಮೂರು ವರ್ಷಗಳಿಂದ ಕನ್ನಡದ ಗುಣಾತ್ಮಕ ಚಿತ್ರಗಳಿಗೆ ಸಹಾಯಧನ ನೀಡುವ ಯೋಜನೆ ಸ್ಥಗಿತಗೊಂಡಿದೆ. ಈ ಹಿನ್ನೆಲೆ ಈ ಯೋಜನೆಗೆ ಆಯ್ಕೆ ಸಮಿತಿ ರಚಿಸಿ ಮತ್ತು ಸಹಾಯ ಧನ ನೀಡಲು ಕ್ರಮ ಕೈಗೊಳ್ಳಲಾಗುವುದು.

ಪತ್ರಕರ್ತರ ಮಾಸಾಶನ ಹೆಚ್ಚಳ ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ನೀಡಲಾಗುವ ಮಾಸಾಶನ ಮೊತ್ತವನ್ನು 10 ಸಾವಿರದಿಂದ 12 ಸಾವಿರ ರೂಗೆ ಹೆಚ್ಚಳ ಮಾಡುವ ಘೋಷಣೆಯನ್ನು ಈ ಬಜೆಟ್​ನಲ್ಲಿ ಮಾಡಲಾಗಿದೆ. ಜೊತೆಗೆ ಮಾಸಾಶನ ಪಡೆಯುವ ಪತ್ರಕರ್ತರು ಮೃತಪಟ್ಟಾಗ ಕುಟುಂಬಕ್ಕೆ ನೀಡಲಾಗುವ ಮಾಸಾಶನ ಮೊತ್ತವನ್ನು ಮೂರು ಸಾವಿರದಿಂದ ಆರು ಸಾವಿರಕ್ಕೆ ಹೆಚ್ಚಳ ಮಾಡಲಾಗಿದೆ.

ವರ್ಷವೀಡಿ ಕನ್ನಡದ ಆಚರಣೆ: ಮೈಸೂರು ರಾಜ್ಯವೂ ಕರ್ನಾಟಕ ಎಂದು ಮರುನಾಮಕರಣವಾಗಿ 2023ರ ನವೆಂಬರ್​​ಗೆ 50 ವರ್ಷ ಪೂರ್ಣಗೊಳಲ್ಲಿರುವ ಹಿನ್ನೆಲೆ ಇಡೀ ವರ್ಷ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಎಂಬ ಹೆಸರಿನಲ್ಲಿ ನಾಡು ನುಡಿಗೆ ಸಂಬಂಧಿಸಿದ, ಯುವಜನತೆಯಲ್ಲಿ ಕನ್ನಡ - ಕನ್ನಡಿಗ - ಕರ್ನಾಟಕದ ಅರಿವು ಮೂಡಿಸುವ ಯೋಜನೆ ಹಮ್ಮಿಕೊಳ್ಳಲಾಗುವುದು

ಎಂಎಂ ಕಲಬುರಗಿ ಹೆಸರಲ್ಲಿ ಟ್ರಸ್ಟ್​​: ಕನ್ನಡ ಸಾಹಿತ್ಯ ಲೋಕಕ್ಕೆ ಸೇವೆ ಸ್ಮರಿಸಲು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಾ. ಎಂ.ಎಂ ಕಲಬುರಗಿ ಅವರ ಹೆಸರಿನಲ್ಲಿ ಟ್ರಸ್ಟ್​​ ಸ್ಥಾಪನೆ. ಕೆಪಿ ಪೂರ್ಣಚಂದ್ರ ತೇಜಸ್ವಿ ಹೆಸರಿನಲ್ಲಿ ಪ್ರತಿಷ್ಠಾಪನೆ ಸ್ಥಾಪನೆ ಮಾಡುವ ಮೂಲಕ ಯುವಜನತೆಗೆ ಸಾಹಿತ್ಯ ಮತ್ತು ಪರಿಸರ ಸಂರಕ್ಷಣೆ ಕುರಿತು ಚಿಂತನೆಗಳನ್ನು ಯುವ ಜನಾಂಗಕ್ಕೆ ಪರಿಚಯಿಸಲು ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಎರಡು ಕೋಟಿ ರೂ ಒದಗಿಸಲಾಗುವುದು ಎಂದು ಸಿದ್ದರಾಮಯ್ಯ ತಮ್ಮ ಬಜೆಟ್​ನಲ್ಲಿ ಘೋಷಣೆ ಮಾಡಿದ್ದಾರೆ.

ಕೊಪ್ಪಳದಲ್ಲಿ ಜಾನಪದ ಲೋಕ ಸ್ಥಾಪನೆ: ಜಾನಪದ ಕಲೆ ಉಳಿಸಿ, ಬೆಳೆಸಲು ರಾಮನಗರ ಜಿಲ್ಲೆಯ ಜಾನಪದ ಲೋಕಕ್ಕೆ ಎರಡು ಕೋಟಿ ರೂ ಅನುದಾನ. ಕಲ್ಯಾಣ ಕರ್ನಾಟಕ ಭಾಗದ ಕೊಪ್ಪಳ ಜಿಲ್ಲೆಯಲ್ಲಿ ಜಾನಪದ ಲೋಕ ಸ್ಥಾಪನೆ. ಬಂಜಾರ ಸಮುದಾಯದ ಸಾಂಸ್ಕೃತಿಕ ಮತ್ತು ಜಾನಪದ ನೃತ್ಯ ಕಲೆಗೆ ಪ್ರೋತ್ಸಾಹಿಸಲು ವಿನೂತನ ಕಾರ್ಯಕ್ರಮ ಆಯೋಜನೆ ಮಾಡಲಾಗುವುದು ಎಂದು ಬಜೆಟ್​ನಲ್ಲಿ ಪ್ರಕಟಿಸಿದ್ದಾರೆ.

ರಾಜ್ಯದ ಬುಡಕಟ್ಟು ಸಮುದಾಯದ ಜನರ ಕಲಾ ಪ್ರತಿಭೆ ಪರಿಚಯಿಸಲು ಮತ್ತು ಅವರ ಸಂಸ್ಕೃತಿ, ಜಾನಪತ, ಕಲೆ, ಕರಕುಶಲ ಉತ್ಪನ್ನಕ್ಕೆ ಮಾರುಕಟ್ಟೆ ಒದಗಿಸಲು ಬುಡಕಟ್ಟು ಜನಾಂಗದ ಕಲಾವಿದರ ಸಮಾವೇಶ ಆಯೋಜನೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: Karnataka Budget: ಬ್ರ್ಯಾಂಡ್​ ಬೆಂಗಳೂರಿಗೆ ಹಲವು ಕ್ರಮಗಳು; ತ್ಯಾಜ್ಯ, ಸಾರಿಗೆ ಸಮಸ್ಯೆ ನಿವಾರಣೆಗೆ ಒತ್ತು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.