ETV Bharat / state

ಕೆಆರ್​ಪಿಪಿ ಅಧ್ಯಕ್ಷರಾಗಿ ಜನಾರ್ದನ ರೆಡ್ಡಿ ಅಧಿಕಾರ ಸ್ವೀಕಾರ: ಯಾವ ಪಕ್ಷದೊಂದಿಗೂ ಮೈತ್ರಿ ಇಲ್ಲ ಎಂದ ರೆಡ್ಡಿ - etv bharat kannada

2028ರ ವಿಧಾನಸಭೆ ಚುನಾವಣೆಯಲ್ಲಿ 100 ರಿಂದ 113 ಸ್ಥಾನ ಗೆದ್ದು ನಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಕೆಆರ್​ಪಿಪಿ ಪಕ್ಷದ ಅಧ್ಯಕ್ಷ ಜನಾರ್ದನ ರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದರು.

Etv Bharatjanardhana-reddy-assumed-office-as-krpp-party-president
ಕೆಆರ್​ಪಿಪಿ ಪಕ್ಷದ ಅಧ್ಯಕ್ಷರಾಗಿ ಜನಾರ್ದನ ರೆಡ್ಡಿ ಅಧಿಕಾರ ಸ್ವೀಕಾರ: ಯಾವ ಪಕ್ಷದೊಂದಿಗೂ ಮೈತ್ರಿ ಇಲ್ಲ ಎಂದ ರೆಡ್ಡಿ
author img

By ETV Bharat Karnataka Team

Published : Nov 25, 2023, 4:37 PM IST

Updated : Nov 25, 2023, 6:13 PM IST

ಕೆಆರ್​ಪಿಪಿ ಪಕ್ಷದ ಅಧ್ಯಕ್ಷ ಜನಾರ್ದನ ರೆಡ್ಡಿ

ಬೆಂಗಳೂರು: ಪ್ರಾದೇಶಿಕ ಪಕ್ಷಗಳು ಆರಂಭವಾಗುವುದೇ ಒಂದು, ಎರಡು ಸ್ಥಾನಗಳಿಂದ. ಬಿಜೆಪಿ ಕೂಡಾ ಎರಡು ಸ್ಥಾನ ಗಳಿಸುವ ಮೂಲಕ ಆರಂಭವಾಗಿದ್ದು, ಇಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಒಂದು ಸೀಟ್ ನಿಂದ ಆರಂಭವಾಗಿದೆ. 2028ರ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ತರುವ ಪ್ರಯತ್ನ ಮಾಡುವುದಾಗಿ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ತಿಳಿಸಿದರು. ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಒಂದು ಸ್ಥಾನದಿಂದಲೇ ಪಕ್ಷ ಪ್ರಾರಂಭವಾಗಿದೆ. ಪ್ರತಿ ಬೂತ್ ಮಟ್ಟದಲ್ಲಿ ಹಾಗೂ ಮನೆ ಮನೆಗಳನ್ನು ನಾವು ತಲುಪುತ್ತೇವೆ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ಬರುವ ಡಿಸೆಂಬರ್​ಗೆ ಒಂದು ವರ್ಷ ಆಗಲಿದೆ. ರಾಮಣ್ಣ ಹೆಸರಿನಲ್ಲಿ ಪಕ್ಷ ಪ್ರಾರಂಭಿಸಿದ್ದೆ. ಇಂದು ನನ್ನ ಹೆಸರಿಗೆ ಅದು ವರ್ಗಾವಣೆ ಆಗಿದೆ. ತ್ರಯೋದಶಿಯಂದೇ ನನಗೆ ವರ್ಗಾವಣೆಯಾಗಿದೆ ಎಂದರು.

ಪಕ್ಷ ಸ್ಥಾಪನೆ ಮಾಡಿದ ನಂತರ ನನಗೆ ಕೇವಲ ನಾಲ್ಕು ತಿಂಗಳ ಅವಕಾಶ ಇತ್ತು. ಬಳ್ಳಾರಿಗೆ ನಾನು ಹೋಗದೆ ಇರುವಂತಹ ಸ್ಥಿತಿಯಲ್ಲೂ ಕೂಡ ರಾಷ್ಟ್ರೀಯ ಪಕ್ಷಗಳಿಗೆ ಒಳ್ಳೆಯ ಫೈಟ್ ಕೊಟ್ಟಿದ್ದೇವೆ. 2028ರ ವಿಧಾನಸಭಾ ಚುನಾವಣೆಗೆ ಇಡೀ ರಾಜ್ಯಕ್ಕೆ ನಾನು ತಲುಪುವ ಆತ್ಮ ವಿಶ್ವಾಸ ಇದೆ. ವಿಶ್ವಾಸದಿಂದಲೇ ನಾನು ಗಂಗಾವತಿ ಕ್ಷೇತ್ರಕ್ಕೆ ಹೋಗಿದ್ದೆ. ಬೇರೆಯವರ ರೀತಿ ನಾನು ಎರಡೆರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿಲ್ಲ ಎಂದು ಹೇಳಿದರು.

ಯಾವುದೇ ಪಕ್ಷದೊಂದಿಗೂ ಮೈತ್ರಿ ಇಲ್ಲ: ಬಿಜೆಪಿಯಾಗಲಿ ಅಥವಾ ಯಾವುದೇ ಪಕ್ಷದ ಜೊತೆ ನಾವು ಹೋಗುವುದಿಲ್ಲ. ಸ್ವತಂತ್ರವಾಗಿ ನಾವು ಸ್ಪರ್ಧೆ ಮಾಡುತ್ತೇವೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳಲ್ಲೂ ನಾವು ಸ್ಪರ್ಧೆ ಮಾಡಲ್ಲ. ಬಳ್ಳಾರಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು ಹಾಗೂ ಕೋಲಾರ ಜಿಲ್ಲೆಗಳಲ್ಲಿ ನಾನು ಕೆಲಸ ಮಾಡುತ್ತೇನೆ. ಫೆಬ್ರವರಿಯಲ್ಲಿ ನಾವು ಎಷ್ಟು ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇವೆಂದು ಹೇಳುತ್ತೇವೆ. ಬಳ್ಳಾರಿ ನಾನು‌ ಹುಟ್ಟಿ ಬೆಳೆದ ಜಿಲ್ಲೆ. ಕೋಲಾರದಲ್ಲೂ ನನ್ನ ಮೇಲೆ ಜನರಿಗೆ ಪ್ರೀತಿ ಇದೆ ಎಂದರು.

2028ಕ್ಕೆ ಪಕ್ಷ ಅಧಿಕಾರಕ್ಕೆ ಬರಲಿದೆ: 2028ರ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ. 100 ರಿಂದ 113 ಸ್ಥಾನ ಗೆದ್ದು ಅಧಿಕಾರಕ್ಕೆ ಬರುತ್ತೇವೆ. ಬೇರೆ ಬೇರೆ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳು ಸಾಧನೆ ಮಾಡಿವೆ. ಕರ್ನಾಟಕದಲ್ಲಿ ಈವರೆಗೆ ಪ್ರಾದೇಶಿಕ ಪಕ್ಷ ಸಾಧನೆ ಮಾಡಿಲ್ಲ ಎಂಬುದನ್ನು ನಾನು ಸುಳ್ಳು ಮಾಡುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದಕ್ಕೂ ಮುನ್ನ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಜೆ.ರಾಮಣ್ಣ ಅವರಿಂದ ಶಾಸಕ ಗಾಲಿ ಜನಾರ್ದನರೆಡ್ಡಿ ಅವರು ಅಧಿಕಾರ ಸ್ವೀಕಾರ ಮಾಡಿದರು. ಇದೇ ವೇಳೆ ಕೆಆರ್​ಪಿಪಿಯ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳನ್ನು ಘೋಷಿಸಲಾಯಿತು.

ಇದನ್ನೂ ಓದಿ: ಬಿ‌ ವೈ ವಿಜಯೇಂದ್ರ ಭೇಟಿಯಾದ ಮಾಜಿ ಶಾಸಕ ಚಿಕ್ಕನಗೌಡರ: ಗರಿಗೆದರಿದ ರಾಜಕೀಯ ಚಟುವಟಿಕೆ

Last Updated : Nov 25, 2023, 6:13 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.