ETV Bharat / state

ಜನಸೇವಕ ವ್ಯಾಪ್ತಿಗೆ ಆಧಾರ್​, ಎಪಿಎಲ್​, ವೋಟರ್​ ಐಡಿ ನೋಂದಣಿ.. ಸಚಿವ ಸುರೇಶ್‌ಕುಮಾರ್​ - Adhar registration

ಆಧಾರ್ ಸಂಖ್ಯೆಯು ಇತ್ತೀಚಿಗೆ ಎಲ್ಲ ವ್ಯವಹಾರಕ್ಕೂ ತೀರಾ ಅಗತ್ಯವಾಗಿರುವುದರಿಂದ ಇಂತಹ ಸ್ಥಿತಿಯಲ್ಲಿ ಹಿರಿಯ ನಾಗರಿಕರು, ಅಸಹಾಯಕರು ಈ ಸೇವೆಗಳನ್ನು ಪಡೆದುಕೊಳ್ಳಲು ಪರದಾಡುವಂತಾಗಿದೆ. ಹಿರಿಯರು ಈ ರೀತಿ ಕಷ್ಟಪಡುತ್ತಿರುವುದನ್ನು ಗಣನೆಗೆ ತೆಗೆದುಕೊಂಡು ಆಧಾರ್ ನೋಂದಣಿ ಮತ್ತು ಆಧಾರ್ ಅಪ್ಡೇಟ್ ಮಾಡುವ ಸೇವೆಗಳನ್ನು ಸಹ ಜನಸೇವಕ ವ್ಯಾಪ್ತಿಗೆ ತರಲಾಗುತ್ತಿದೆ.

Suresh Kumar
Suresh Kumar
author img

By

Published : Jun 8, 2020, 5:01 PM IST

ಬೆಂಗಳೂರು : ಆಧಾರ್ ನೋಂದಣಿ, ಎಪಿಎಲ್ ಪಡಿತರ ಚೀಟಿ ಮತ್ತು ಮತದಾರರ ಹೆಸರು ನೋಂದಣಿ ಸೇವೆಗಳನ್ನು ಸಕಾಲ ಸ್ಕೀಂನ ಜನಸೇವಕ ಯೋಜನೆಯಡಿ ಒದಗಿಸಲು ಸಂಬಂಧಿಸಿದ ಇಲಾಖೆಗಳು ಸಹಮತ ವ್ಯಕ್ತಪಡಿಸಿವೆ. ಇಷ್ಟರಲ್ಲಿಯೇ ಈ ಸೇವೆಗಳನ್ನು ಜನಸೇವಕ ವ್ಯಾಪ್ತಿಗೆ ತರಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಮಿಷನ್ ಸಚಿವ ಎಸ್ ಸುರೇಶ್‌ಕುಮಾರ್‌ ತಿಳಿಸಿದ್ದಾರೆ.

ಕೋವಿಡ್-19 ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತವಾಗಿದ್ದ ನಾಗರಿಕರ ಮನೆ ಬಾಗಿಲಿಗೆ ಸರ್ಕಾರಿ ಸೇವೆಗಳನ್ನು ಒದಗಿಸುವ ಜನಸೇವಕ ಯೋಜನೆಯನ್ನು ಪುನಾರಂಭಗೊಳಿಸುವ ನಿಟ್ಟಿನಲ್ಲಿ ವಿಧಾನಸೌಧದಲ್ಲಿ ಅಧಿಕಾರಿಗಳ ಹಾಗೂ ಬೆಂಗಳೂರಿಗೆ ಸಂಬಂಧಿಸಿದ ವಿಧಾನಸಭಾ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್-19 ಹಿನ್ನೆಲೆಯಲ್ಲಿ ಸ್ಥಗಿತವಾಗಿದ್ದ ಈ ಯೋಜನೆಯನ್ನು ಶೀಘ್ರದಲ್ಲೇ ಪುನಾರಂಭಿಸಲಾಗುವುದು ಎಂದರು.

ಪ್ರಸ್ತುತ ಜನಸೇವಕ ಯೋಜನೆ ಬೆಂಗಳೂರು ಮಹಾನಗರದ ರಾಜಾಜಿನಗರ, ಬೊಮ್ಮನಹಳ್ಳಿ, ಮಹದೇವಪುರ ಮತ್ತು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಜಾರಿಯಲ್ಲಿದೆ. ಆದಾಯ, ಜಾತಿ ಪ್ರಮಾಣ ಪತ್ರ, ಹಿರಿಯ ನಾಗರಿಕರ ಪಿಂಚಣಿ ಸೇವೆ, ಕಾರ್ಮಿಕ, ಆರೋಗ್ಯ, ಪೊಲೀಸ್ ಸೇರಿ 50 ಸೇವೆಗಳನ್ನು ಒದಗಿಸಲಾಗುತಿತ್ತು. ಇನ್ಮುಂದೆ ಈ ವ್ಯಾಪ್ತಿಗೆ ಸಾರ್ವಜನಿಕ ಹಿತದೃಷ್ಟಿಯಿಂದ ತೀರಾ ಅಗತ್ಯವಾಗಿರುವ ಆಧಾರ್ ನೋಂದಣಿ, ಎಪಿಎಲ್ ಪಡಿತರ ಚೀಟಿ ಮತ್ತು ಮತದಾರ ಯಾದಿಗೆ ಹೆಸರು ನೋಂದಣಿ ಸೇವೆಗಳನ್ನು ತರಲಾಗುವುದು ಎಂದು ಸುರೇಶ್‌ಕುಮಾರ್ ತಿಳಿಸಿದರು.

ಆಧಾರ್ ಸಂಖ್ಯೆಯು ಇತ್ತೀಚಿಗೆ ಎಲ್ಲ ವ್ಯವಹಾರಕ್ಕೂ ತೀರಾ ಅಗತ್ಯವಾಗಿರುವುದರಿಂದ ಇಂತಹ ಸ್ಥಿತಿಯಲ್ಲಿ ಹಿರಿಯ ನಾಗರಿಕರು, ಅಸಹಾಯಕರು ಈ ಸೇವೆಗಳನ್ನು ಪಡೆದುಕೊಳ್ಳಲು ಪರದಾಡುವಂತಾಗಿದೆ. ಹಿರಿಯರು ಈ ರೀತಿ ಕಷ್ಟಪಡುತ್ತಿರುವುದನ್ನು ಗಣನೆಗೆ ತೆಗೆದುಕೊಂಡು ಆಧಾರ್ ನೋಂದಣಿ ಮತ್ತು ಆಧಾರ್ ಅಪ್ಡೇಟ್ ಮಾಡುವ ಸೇವೆಗಳನ್ನು ಸಹ ಜನಸೇವಕ ವ್ಯಾಪ್ತಿಗೆ ತರಲಾಗುತ್ತಿದೆ ಎಂದರು.

ಕೋವಿಡ್ ಸೋಂಕು ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ವಯೋವೃದ್ಧರು, ಅಸ್ವಸ್ಥ ವ್ಯಕ್ತಿಗಳು ಮನೆಯಿಂದ ಹೊರ ಬರಲಾಗುತ್ತಿಲ್ಲ. ಎಲ್ಲ ಸುರಕ್ಷಿತ ಕ್ರಮಗಳನ್ನು ಅನುಸರಿಸಿ ಜನಸೇವಕ ಸಿಬ್ಬಂದಿ ನಾಗರಿಕರಲ್ಲಿ ಸುರಕ್ಷಿತ ಭಾವನೆ ಮೂಡಿಸುವ ಸಲುವಾಗಿ ಜನಸೇವಕ ಸೇವೆಗಳನ್ನು ಪುನಾರಂಭಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ತಕ್ಷಣದಿಂದಲೇ ಈ ಸೇವೆಗಳ ಕುರಿತಂತೆ ಜನರಲ್ಲಿ ಜಾಗೃತಿ ಮೂಡಿಸುವ ಯೋಜನೆ ರೂಪಿಸಿ ಈ ಕಾರ್ಯಕ್ರಮದ ಯಶಸ್ವಿ ಅನುಷ್ಠಾನಕ್ಕೆ ಮುಂದಾಗಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಈ ಭಾಗದ ಶಾಸಕರು ತಮ್ಮ ವ್ಯಾಪ್ತಿಯಲ್ಲಿ ಜನಸೇವಕ ಯೋಜನೆ ಪುನಾರಂಭ ಮತ್ತು ಆಧಾರ್ ನೋಂದಣಿಯಂತಹ ಸೇವೆಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಕೈಗೊಳ್ಳಬೇಕೆಂದು ಸುರೇಶ್‌ಕುಮಾರ್ ಮನವಿ ಮಾಡಿದರು. ಸಭೆಯಲ್ಲಿ ಶಾಸಕರಾದ ಸತೀಶ್ ರೆಡ್ಡಿ, ಮಂಜುನಾಥ್, ಡಿಪಿಎಆರ್ ಇ-ಆಡಳಿತ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಸಕಾಲ ನಿರ್ದೇಶಕ ರಾಜೀವ್ ಚಾವ್ಲಾ, ಸಕಾಲ ಮಿಷನ್ ನಿರ್ದೇಶಕ-2 ವರಪ್ರಸಾದರೆಡ್ಡಿ ಮತ್ತಿತರರು ಭಾಗವಹಿಸಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.