ಬೆಂಗಳೂರು: ಹೃದಯಾಘಾತದಿಂದ ನಿಧನರಾದ ಸ್ಯಾಂಡಲ್ವುಡ್ ನಟ ಪುನೀತ್ ರಾಜ್‌ಕುಮಾರ್ ನಿವಾಸಕ್ಕೆ ಕೂಡಲ ಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಜಯಮೃತ್ಯುಂಜಯ ಸ್ವಾಮೀಜಿ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಅಪ್ಪು ಕುಟುಂಬಸ್ಥರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಪ್ರತಿಮ ನಟನನ್ನು ಕಳೆದುಕೊಂಡು ದೇಶ ಬಡವಾಗಿದೆ. ಪುನೀತ್ ರಾಜ್‌ಕುಮಾರ್ ಭಗವಂತ ಸೃಷ್ಟಿಸಿದ ವರಪುತ್ರ. ಅವರು ಕಲಾ ಕ್ಷೇತ್ರದಲ್ಲಿ ಜನಿಸಿದ್ರೂ ಅನೇಕ ಜನಸೇವೆ ಮಾಡಿದ್ದಾರೆ. ಕಳಸಾ ಬಂಡೂರಿ ಹೋರಾಟಕ್ಕೂ ನೈತಿಕ ಬೆಂಬಲ ನೀಡಿದ್ದರು ಎಂದರು.
ರಾಜ್ಯ ಸರ್ಕಾರ ಉತ್ತರ ಕರ್ನಾಟಕದಲ್ಲಿ ಅಪ್ಪು ಹೆಸರಿನಲ್ಲಿ ಫಿಲ್ಮ್ ಸಿಟಿ ಹಾಗೂ ಐಎಎಸ್ ತರಬೇತಿ ಕೇಂದ್ರವನ್ನು ಆರಂಭಿಸಬೇಕೆಂದು ಇದೇ ವೇಳೆ ಸ್ವಾಮೀಜಿ ಒತ್ತಾಯಿಸಿದರು. ಪದ್ಮಶ್ರೀ ಹಾಗೂ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಬೇಕೆಂದು ಸರ್ಕಾರಕ್ಕೆ ಮನವಿ ಮಾಡುವುದಾಗಿ ಹೇಳಿದರು.
ಇದನ್ನೂ ಓದಿ: ರಾಯಚೂರಿನಲ್ಲಿ ಪ್ರತಿಭಟನೆ ವೇಳೆ ಮಾಜಿ ಶಾಸಕರಿಂದ ಪೊಲೀಸ್ ಸಿಬ್ಬಂದಿಗೆ ಕಪಾಳ ಮೋಕ್ಷ