ETV Bharat / state

ಪಂಚಮಸಾಲಿ ಸಮಾಜದ ಐವರಿಗೆ ಸಚಿವ ಸ್ಥಾನ ನೀಡಿ: ಜಯಮೃತ್ಯುಂಜಯ ಸ್ವಾಮೀಜಿ

ಪಂಚಮಸಾಲಿ ಲಿಂಗಾಯತ ಸಮುದಾಯದ ಐವರು ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಎಂದು ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದ್ದಾರೆ.

Bengaluru
ನೂತನ ಶಾಸಕರುಗಳ ಅಭಿನಂದನಾ ಸಮಾರಂಭ
author img

By

Published : May 24, 2023, 7:21 AM IST

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಸೇರಿದ ಐವರು ಶಾಸಕರಿಗೆ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಮಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ನಿನ್ನೆ (ಮಂಗಳವಾರ) ಲಿಂಗಾಯತ ಪಂಚಮಸಾಲಿ ನೂತನ ಶಾಸಕರುಗಳ ಅಭಿನಂದನಾ ಸಮಾರಂಭ ಕುರಿತು ಚರ್ಚಿಸುವ ಪೂರ್ವಭಾವಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮೂರು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಯಿತು. ನಿರ್ಣಯಗಳು ಹೀಗಿವೆ..

  1. ಲಿಂಗಾಯತ ಪಂಚಮಸಾಲಿ ಸಮಾಜದ ಬಂಧುಗಳ ಒತ್ತಾಯದಂತೆ ಮೀಸಲಾತಿಗಾಗಿ ಮುಂಚೂಣಿಯಲ್ಲಿ ಹೋರಾಡಿದಂತಹ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್, ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ, ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಒಳಗೊಂಡಂತೆ ಒಟ್ಟು ಐದು ಮಂದಿ ಶಾಸಕರಿಗೆ ಸಚಿವ ಸ್ಥಾನ ಕಲ್ಪಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ವರಿಷ್ಠ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಒತ್ತಾಯಿಸಲಾಯಿತು.
  2. ಬಿಜೆಪಿ ರಾಜ್ಯ ಅಧ್ಯಕ್ಷ ಅಥವಾ ವಿರೋಧ ಪಕ್ಷದ ಸ್ಥಾನಕ್ಕೆ ಸಮರ್ಥ ಲಿಂಗಾಯತ ಪಂಚಮಸಾಲಿ ಶಾಸಕರಿಗೆ ಅವಕಾಶ ಮಾಡಿಕೊಡಬೇಕು ಎಂದು ರಾಷ್ಟ್ರೀಯ ಬಿಜೆಪಿ ವರಿಷ್ಠರಿಗೆ ಒತ್ತಾಯ.
  3. ನೂತನ ಶಾಸಕರ ಅಭಿನಂದನಾ ಸಮಾರಂಭ ಹಾಗೂ ಮೀಸಲಾತಿ ಹಕ್ಕೊತ್ತಾಯ ಸಮಾರಂಭವನ್ನು ಕೂಡಲಸಂಗಮದಲ್ಲಿ ಜೂನ್ ತಿಂಗಳಲ್ಲಿ ನೆರವೇರಿಸಲು ತೀರ್ಮಾನ.

ಇದನ್ನೂ ಓದಿ: ಡಿಸಿಎಂ ಡಿಕೆಶಿಗೆ ವಿಧಾನಸೌಧದಲ್ಲಿ 4 ಕೊಠಡಿ: ಐವರು ಸಚಿವರಿಗೆ ಸರ್ಕಾರಿ ನಿವಾಸ ಹಂಚಿಕೆ

ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶ್ರೀಗಳು ಸರ್ಕಾರಕ್ಕೆ ಈ ಒತ್ತಾಯಗಳನ್ನು ಮಾಡಿದರು. ರಾಷ್ಟ್ರೀಯ ಅಧ್ಯಕ್ಷ ಹಾಗೂ ಶಾಸಕ ಡಾ.ವಿಜಯಾನಂದ ಕಾಶಪ್ಪನವರ್ ಅಧ್ಯಕ್ಷತೆ ವಹಿಸಿದ್ದರು. ನೂತನ ಶಾಸಕರಾದ ಧಾರವಾಡದ ವಿನಯ ಕುಲಕರ್ಣಿ, ಬೆಳಗಾವಿಯ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಕಾಗವಾಡದ ರಾಜುಗೌಡ ಕಾಗೆ, ದೇವರ ಹಿಪ್ಪರಗಿಯ ರಾಜುಗೌಡ ಪಾಟೀಲ್, ಸಿಂದಗಿಯ ಅಶೋಕ ಮನಗೂಳಿ, ಕಿತ್ತೂರಿನ ಬಾಬಾ ಸಾಹೇಬ್ ಪಾಟೀಲ, ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ, ನಿಗಮದ ಮಾಜಿ ಅಧ್ಯಕ್ಷ ಎಂ.ಎಸ್.ರುದ್ರಗೌಡ, ವಿವಿಧ ಜನಪ್ರತಿನಿಧಿಗಳು, ಪಂಚಮಸಾಲಿ ಗೌಡ, ಮಲೆಗೌಡ ದೀಕ್ಷಾ, ಲಿಂಗಾಯತ ರಾಷ್ಟ್ರೀಯ, ರಾಜ್ಯ ಹಾಗೂ ಜಿಲ್ಲೆಯ ವಿವಿಧ ಘಟಕಗಳ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಹೆಚ್ಚಿದ ಸಚಿವ ಸ್ಥಾನದ ಆಕಾಂಕ್ಷಿಗಳ ಪಟ್ಟಿ: ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಬಾಕಿ ಉಳಿದಿರುವ 24 ಸಚಿವ ಸ್ಥಾನಗಳಿಗೆ 80 ಕ್ಕೂ ಹೆಚ್ಚು ಶಾಸಕರಿಂದ ಲಾಬಿ ಆರಂಭವಾಗಿದೆ. ದಿನಕ್ಕೊಬ್ಬರು ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಹೈಕಮಾಂಡ್ ನಾಯಕರ ಮನೆ ಮುಂದೆ ತಮ್ಮದೇ ಆದ ಮಟ್ಟದಲ್ಲಿ ಲಾಬಿ ನಡೆಸಿದ್ದಾರೆ. ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿಕೊಂಡಿರುವ ಶಾಸಕರಲ್ಲಿ ಪ್ರಮುಖರಲ್ಲಿ ಸದ್ಯ ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಜಮೀರ್ ಅಹ್ಮದ್ ಖಾನ್ ಹಾಗೂ ಸತೀಶ್ ಜಾರಕಿಹೊಳಿ ಸಚಿವರಾಗಿದ್ದಾರೆ.

ಇದನ್ನೂ ಓದಿ: ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರಕ್ಕೆ ವಿಧಾನಸೌಧದಲ್ಲಿ ಸಿದ್ಧತೆ: ಮೇ 24ಕ್ಕೆ ನೂತನ ಸ್ಪೀಕರ್ ಆಯ್ಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.