ETV Bharat / state

ರಾಷ್ಟ್ರಪತಿ ಚುನಾವಣೆಯಲ್ಲಿ ಎನ್​ಡಿಎ ಅಭ್ಯರ್ಥಿಗೆ ನಮ್ಮ ಮತ': ಮುರ್ಮುಗೆ ಜೆಡಿಎಸ್‍ ಬೆಂಬಲ ಘೋಷಣೆ

ಬುಡಕಟ್ಟು ಜನಾಂಗದ ಮಹಿಳೆಯಾಗಿರುವ ದ್ರೌಪದಿ ಮುರ್ಮು, ನಮ್ಮ ವರಿಷ್ಠರಾದ ದೇವೇಗೌಡರ ನಿವಾಸಕ್ಕೆ ಆಗಮಿಸಿ ಮತ ಕೇಳಿದ್ದಾರೆ. ಹೀಗಾಗಿ ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್​ಡಿಎ ಅಭ್ಯರ್ಥಿಗೆ ಮತ ಹಾಕುತ್ತೇವೆ ಎಂದು ಬಂಡೆಪ್ಪ ಕಾಶೆಂಪೂರ್ ತಿಳಿಸಿದರು.

jds-announced-support-to-nda-candidate-draupadi-murmu
'ರಾಷ್ಟ್ರಪತಿ ಚುನಾವಣೆಯಲ್ಲಿ ಎನ್​ಡಿಎ ಅಭ್ಯರ್ಥಿಗೆ ನಮ್ಮ ಮತ': ಮುರ್ಮುಗೆ ಜೆಡಿಎಸ್‍ ಬೆಂಬಲ ಘೋಷಣೆ
author img

By

Published : Jul 15, 2022, 7:32 PM IST

ಬೆಂಗಳೂರು: ರಾಷ್ಟ್ರಪತಿ ಚುನಾವಣೆಯಲ್ಲಿ ಎನ್​ಡಿಎ ಅಭ್ಯರ್ಥಿ ಆಗಿರುವ ದ್ರೌಪದಿ ಮುರ್ಮು ಅವರಿಗೆ ಬೆಂಬಲ ನೀಡಲು ಜೆಡಿಎಸ್‍ ನಿರ್ಧರಿಸಿದೆ. ವಿಧಾನಸೌಧದಲ್ಲಿ ಇಂದು ಸಂಜೆ ನಡೆದ ಜೆಡಿಎಸ್‍ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಶಾಸಕಾಂಗ ಪಕ್ಷದ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಪನಾಯಕ ಬಂಡೆಪ್ಪ ಕಾಶೆಂಪೂರ್, ರಾಷ್ಟ್ರಪತಿ ಚುನಾವಣೆ ಸಂಬಂಧ ಈ ನಡೆದ ಸಭೆಯಲ್ಲಿ ದ್ರೌಪದಿ ಮುರ್ಮು ಅವರಿಗೆ ಬೆಂಬಲ ನೀಡಲು ನಿರ್ಧಾರ ಮಾಡಲಾಗಿದೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮಹಿಳಾ ಮೀಸಲಾತಿ ಬಗ್ಗೆ ಧ್ವನಿ ಎತ್ತಿದ್ದರು. ಹೀಗಾಗಿ ನಾವು ಅವರಿಗೆ ಬೆಂಬಲ ಕೊಡುತ್ತಿದ್ದೇವೆ‌ ಎಂದು ತಿಳಿಸಿದರು.

ಬುಡಕಟ್ಟು ಜನಾಂಗದ ಮಹಿಳೆಯಾಗಿರುವ ಮುರ್ಮು, ನಮ್ಮ ವರಿಷ್ಠರಾದ ದೇವೇಗೌಡರ ನಿವಾಸಕ್ಕೆ ಆಗಮಿಸಿ ಮತ ಕೇಳಿದ್ದಾರೆ. ಹೀಗಾಗಿ, ಪಕ್ಷ ಯಾವುದು ಅಂತನೂ ನೋಡದೆ ಮುರ್ಮು ಅವರಿಗೆ ಬೆಂಬಲ ನೀಡುತ್ತೇವೆ. ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್​ಡಿಎ ಅಭ್ಯರ್ಥಿಗೆ ಮತ ಹಾಕುತ್ತೇವೆ ಎಂದು ತಿಳಿಸಿದರು.

jds-announced-support-to-nda-candidate-draupadi-murmu
ವಿಧಾನಸೌಧದಲ್ಲಿ ನಡೆದ ಜೆಡಿಎಸ್‍ ಶಾಸಕಾಂಗ ಪಕ್ಷದ ಸಭೆ ನಂತರ ಬಂಡೆಪ್ಪ ಕಾಶೆಂಪೂರ್ ಮಾತನಾಡಿದರು.

ಇದೇ ವೇಳೆ, ಸರ್ಕಾರಿ ಕಚೇರಿಯಲ್ಲಿ ಫೋಟೋ, ವಿಡಿಯೋ ನಿಷೇಧ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಾವು ಸರಿಯಾಗಿದ್ದರೆ ಫೋಟೋ, ವಿಡಿಯೋಗೆ ಯಾಕೆ ಹೆದರಬೇಕು. ಹೀಗೆ ನಿಷೇಧ ಮಾಡಿದರೆ ಶೇ.40ರಷ್ಟು ಕಮಿಷನ್​ ಆರೋಪ ನಿಜ ಆಗುತ್ತದೆ. ಸರ್ಕಾರ ಪಾರದರ್ಶಕವಾಗಿ ಇದ್ದರೆ ಭಯ ಯಾಕೆ. ಇದನ್ನು ಕೂಡಲೇ ಸರ್ಕಾರ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.

ಕುಮಾರಸ್ವಾಮಿಗೆ ಕೋವಿಡ್ ಪಾಸಿಟಿವ್: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಜನತಾ ಮಿತ್ರ ಕಾರ್ಯಕ್ರಮವನ್ನು 10 ದಿನಗಳ ಕಾಲ ಮುಂದೂಡಲಾಗಿದೆ. ಜುಲೈ 17ರಂದು ನಡೆಯಬೇಕಾದ ಸಮಾವೇಶ ಕೂಡ ರದ್ದು ಮಾಡಿದ್ದೇವೆ. ಮುಂದೆ ಯಾವಾಗ ಪ್ರಾರಂಭ ಮಾಡುತ್ತೇವೆ ಎಂಬುದರ ಬಗ್ಗೆ ನಂತರ ಮಾಹಿತಿ ಕೊಡುತ್ತೇನೆ ಎಂದು ಕಾಶೆಂಪೂರ್ ತಿಳಿಸಿದರು.

ಸಿದ್ದರಾಮೋತ್ಸವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ನಾವು ಜನರ ಉತ್ಸವ ಮಾಡುತ್ತೇವೆ‌. ಪಕ್ಷ ಅಧಿಕಾರಕ್ಕೆ ಬಂದರೆ ಏನು ಮಾಡುತ್ತೇವೆ ಅಂತ ನಾವು ತೋರಿಸಿದ್ದೇವೆ. ನೀರಾವರಿ ವಿಚಾರದಲ್ಲಿ ನಮ್ಮ ಹೋರಾಟ ಇದೆ. ಆದರೆ, ಇವತ್ತು ನೀರು ಸಮುದ್ರ ಪಾಲಾಗುತ್ತಿದೆ. ಜನರಿಗೆ ನಾವು ಏನು ಮಾಡುತ್ತೇವೆ ಎಂಬುದನ್ನು ಹೇಳಿ ಜನರ ಮುಂದೆ ಹೋಗುತ್ತೇವೆ ಎಂದು ಹೇಳಿದರು.

ಬಿಜೆಪಿಯವರಿಗೆ ಗಾಬರಿ: ಡಿಸೆಂಬರ್​ನಲ್ಲಿ ಚುನಾವಣೆ ಆಗಬಹುದು ಎಂದು ಹೇಳುತ್ತಿದ್ದಾರೆ‌. ನಾವು ಚುನಾವಣಾ ತಯಾರಿಯಲ್ಲಿ ತೊಡಗಿದ್ದೇವೆ. ಬಿಜೆಪಿಯವರು ಗಾಬರಿಯಾಗಿ, ಎಲ್ಲೆಲ್ಲೂ ಹೋಗಿ ಸಭೆ ಮಾಡುತ್ತಿದ್ದಾರೆ. ನಮಗೆ ಗಾಬರಿ ಇಲ್ಲ. ಯಾಕೆಂದರೆ ಕುಮಾರಸ್ವಾಮಿ ಅವರು ರೈತರ ಸಾಲ ಮನ್ನ ಮಾಡಿದ್ದಾರೆ. ಹಾಗಾಗಿ ಡಿಸೆಂಬರ್​ನಲ್ಲೇ ಚುನಾವಣೆ ಆಗಲಿ, ಯಾವಾಗಲೇ ಆದರೂ ಚುನಾವಣೆ ನಾವು ಸಿದ್ದರಿದ್ದೇವೆ ಎಂದು ಹೇಳಿದರು.

ವಿಶ್ರಾಂತಿಯಲ್ಲಿರುವ ಹೆಚ್.ಡಿ.ಕುಮಾರಸ್ವಾಮಿ ಜೂಮ್ ಆ್ಯಪ್​ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು. ಶಾಸಕರಾದ ನಾಗನಗೌಡ ಕುಂದನೂರು, ವೆಂಕಟರಾವ್ ನಾಡಗೌಡ, ಡಾ.ಕೆ. ಅನ್ನದಾನಿ, ಅಶ್ವಿನ್ ಕುಮಾರ್, ನಿಸರ್ಗ ನಾರಾಯಣಸ್ವಾಮಿ, ದೇವಾನಂದ ಚೌಹಾಣ್, ವಿಧಾನ ಪರಿಷತ್ ಸದಸ್ಯ ತಿಪ್ಪೇಸ್ವಾಮಿ ಸೇರಿದಂತೆ ಹಲವು ಶಾಸಕರು ಉಪಸ್ಥಿತರಿದ್ದರು.

ಇದನ್ನೂ ಓದಿ: ಚುನಾವಣೆ ಯಾವಾಗ ಬಂದರೂ ಎದುರಿಸಲು ಕಾಂಗ್ರೆಸ್ ಸಿದ್ಧ: ಡಿಕೆಶಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.