ETV Bharat / state

ಸತ್ಯಕ್ಕೆ ಸಮಾಧಿ ಕಟ್ಟುವುದು ಕಾಂಗ್ರೆಸ್ ಚಾಳಿ: ಟ್ವೀಟ್ ಮೂಲಕ ಜೆಡಿಎಸ್‌ ವಾಗ್ದಾಳಿ - ಮಾಜಿ ಸಿಎಂ ಹೆಚ್​​ಡಿ ಕುಮಾರಸ್ವಾಮಿ

ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್‌ ಪಕ್ಷವು ಸರಣಿ ಟ್ವೀಟ್​ ಮಾಡಿ ಟೀಕಾಪ್ರಹಾರ ನಡೆಸಿದೆ.

jds
ಜೆಡಿಎಸ್‌
author img

By

Published : Jul 5, 2023, 12:16 PM IST

ಬೆಂಗಳೂರು : ಸತ್ಯಕ್ಕೆ ಸಮಾಧಿ ಕಟ್ಟುವುದು ಕಾಂಗ್ರೆಸ್ ಚಾಳಿ. ಅದು ಮೂಲತಃ ಸುಳ್ಳುಗಳ ವಾಚಾಳಿ ಎಂದು ಜೆಡಿಎಸ್‌ ಟೀಕಿಸಿದೆ. ಕಾಂಗ್ರೆಸ್ ವಿರುದ್ಧ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿರುವ ಜೆಡಿಎಸ್‌, ಮುಖದ ಮೇಲೆ ಕೊಚ್ಚೆ ಹಾಕಿಕೊಂಡವನು ಆ ಗಲೀಜು ಅನ್ಯರ ಕಣ್ಣಿಗೆ ಬೀಳದಿರಲೆಂದು ಇನ್ನೊಬ್ಬರ ಮೇಲೆ ಅದನ್ನೇ ಎರಚಿ ಕುಣಿದನಂತೆ. ಹಂಗಿದೆ ನೋಡಿ 'ಕಮಿಷನ್ ಕಾಂಗ್ರೆಸ್' ನ ಹೊಸ ವರಸೆ ಮತ್ತು ಹೊಸ ಕಸವರಿಕೆ ಎಂದಿದೆ.

  • https://t.co/PJjV7nfe6y

    ಸತ್ಯಕ್ಕೆ ಸಮಾಧಿ ಕಟ್ಟುವುದು ಕಾಂಗ್ರೆಸ್ ಚಾಳಿ, ಅದು ಮೂಲತಃ ಸುಳ್ಳುಗಳ ವಾಚಾಳಿ. ಮುಖದ ಮೇಲೆ ಕೊಚ್ಚೆ ಹಾಕಿಕೊಂಡವನು ಆ ಗಲೀಜು ಅನ್ಯರ ಕಣ್ಣಿಗೆ ಬೀಳದಿರಲೆಂದು ಇನ್ನೊಬ್ಬರ ಮೇಲೆ ಅದನ್ನೇ ಎರಚಿ ಕುಣಿದನಂತೆ! ಹಂಗಿದೆ ನೋಡಿ ʼಕಮೀಷನ್ ಕಾಂಗ್ರೆಸ್ʼನ ' ಹೊಸ ವರಸೆ ಮತ್ತು ಹೊಸ ಕಸವರಿಕೆ!!' 1/4#ಕಮೀಷನ್_ಕಾಂಗ್ರೆಸ್

    — Janata Dal Secular (@JanataDal_S) July 5, 2023 " class="align-text-top noRightClick twitterSection" data=" ">

ವೆಸ್ಟ್‌ ಎಂಡ್‌ ಬಾಡಿಗೆ ಮಾತಿರಲಿ, ಲುಲು ಮಾಲು ವಿಷಯಕ್ಕೆ ಬರೋಣ. ಹೊಲ ಉತ್ತಿ, ಬೀಜ ಬಿತ್ತಿ ಬೆವರಿನ ಹೊಳೆ ಹರಿಸಿ ತೆಗೆದ ಫಸಲಿಗೆ ಲುಲು ಮಾಡಬಹುದಾ?. ಒಂದು ವೇಳೆ ಮಾಡಬಹುದಾದರೆ, ನಿಮ್ಮ 'ಲುಲು ಕುಮಾರ್ʼಗಿಂತ ಬೆಸ್ಟ್‌ ಎಕನಾಮಿಸ್ಟ್‌ ಇನ್ನೊಬ್ಬರಿಲ್ಲ. ಹಾಗಿದ್ದರೆ, ಅವರನ್ನೇ ವಿತ್ತಮಂತ್ರಿ ಮಾಡಬಹುದಿತ್ತಲ್ಲ?.

ಇದನ್ನೂ ಓದಿ : ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ ʼಕಾಸಿಗಾಗಿ ಪೋಸ್ಟಿಂಗ್' ಎಂದು ಹೆಚ್​ಡಿಕೆ ಟೀಕೆ.. ರಾಮಲಿಂಗಾರೆಡ್ಡಿ ತಿರುಗೇಟು!

ವೆಸ್ಟ್‌ ಎಂಡ್‌ ಲೆಕ್ಕ ಇರಲಿ, 'ಸಿಎಂ ಟಿಪ್ಪಣಿ ಬಿಕರಿ'ಗೆ ಲೆಕ್ಕ ಇಡಿ. ಒಂದು ಎಸಿ ಹುದ್ದೆ, 3 ಟಿಪ್ಪಣಿ. ಇದ್ಯಾವ ಸೀಮೆ ಅರ್ಥಶಾಸ್ತ್ರ?. ಕೌಟಿಲ್ಯನೂ ಬೆಚ್ಚಿಬೀಳುವ ಆಡಳಿತ ಹಾಗೂ ರಾಜನೀತಿ. ಈ ಟಿಪ್ಪಣಿಗಳ ಹಣ ಪಕ್ಷದ ಮಂಡಿಗೋ ಅಥವಾ #YstTax ಹುಂಡಿಗೋ?, ಇಲ್ಲೇ ಸಾಕ್ಷ್ಯ ಇದೆ. ಪಾಪ, ಬೂಟಾಟಿಕೆ ದಾಸಯ್ಯನಿಗೆ ಮೈಯ್ಯೆಲ್ಲ ಪಂಗನಾಮ.

ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ವೈಎಸ್​ಟಿ ಟ್ಯಾಕ್ಸ್​ ಬಗ್ಗೆ ಹೇಳಿ, ಕಾಸಿಗಾಗಿ ಹುದ್ದೆʼ ದಂಧೆಯನ್ನು ದಾಖಲೆ ಸಮೇತ ಬಿಚ್ಚಿಟ್ಟರೂ ಆ ಅಸಹ್ಯ ತನ್ನದಲ್ಲ ಎನ್ನುವ 'ಅವಿವೇಕ ' ರಾಜ್ಯದ ಕಾಂಗ್ರೆಸ್ ಪಕ್ಷದ್ದು. ಆ ಅವಿವೇಕವನ್ನು ಮುಚ್ಚಿಕೊಳ್ಳಲು ಈಗ ವೆಸ್ಟ್ಎಂಡ್ ಎನ್ನುವ ಸವಕಲು ವಿಷಯ ನೆನಪು ಮಾಡಿಕೊಂಡಿದೆ ಎಂದು ಟೀಕಿಸಿದೆ.

ಇದನ್ನೂ ಓದಿ : ಬರಗೆಟ್ಟ ಹೊತ್ತಲ್ಲಿ ಅಂಬರದ ಮೇಲೆ ಕೂತು ಸ್ವಯಂವರ ಮಾಡುತ್ತಿರುವ ಮತಿಗೆಟ್ಟ ವರನಂತೆ ಸರ್ಕಾರದ ವರ್ತನೆ: ಹೆಚ್​ಡಿಕೆ

ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.​​ಡಿ. ಕುಮಾರಸ್ವಾಮಿ ಅವರು ಭ್ರಷ್ಟಾಚಾರದ ಗಂಭೀರ ಆರೋಪ ಮಾಡಿದ್ದಾರೆ. ರಾಜ್ಯದಲ್ಲಿ ವೈಎಸ್​ಟಿ (YST) ತೆರಿಗೆ​ ಬಂದಿದೆ ಎಂದು ನೇರವಾಗಿ ಸಿದ್ದರಾಮಯ್ಯ ಮತ್ತು ಅವರ ಪುತ್ರ ಹಾಗೂ ಮಾಜಿ ಶಾಸಕ ಯತೀಂದ್ರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದರು. ಮಂಗಳವಾರ ಸಂಜೆ ಟ್ವೀಟ್ ಮಾಡಿದ್ದ ಕಾಂಗ್ರೆಸ್, ಕೆಎಸ್​ಟಿ ಎಂದು ಕುಮಾರಸ್ವಾಮಿ ಅವರ ಕಾಲೆಳೆದಿತ್ತು. ಇದೀಗ, ಕೈ ಆರೋಪಕ್ಕೆ ಜೆಡಿಎಸ್ ತಿರುಗೇಟು ನೀಡಿದೆ.

  • ಮಾಜಿ ಮುಖ್ಯಮಂತ್ರಿಗಳಾದ ಶ್ರೀ @hd_kumaraswamy ಅವರು #YstTax ಬಗ್ಗೆ ಹೇಳಿ, ʼಕಾಸಿಗಾಗಿ ಹುದ್ದೆʼ #CashForPosting ದಂಧೆಯನ್ನು ದಾಖಲೆ ಸಮೇತ ಬಿಚ್ಚಿಟ್ಟರೂ ಆ ಅಸಹ್ಯ ತನ್ನದಲ್ಲ ಎನ್ನುವ ' ಅವಿವೇಕ ' @INCKarnataka ಪಕ್ಷದ್ದು. ಆ ಅವಿವೇಕವನ್ನು ಮುಚ್ಚಿಕೊಳ್ಳಲು ಈಗ ವೆಸ್ಟ್ʼಎಂಡ್ ಎನ್ನುವ ಸವಕಲು ವಿಷಯ ನೆನಪು ಮಾಡಿಕೊಂಡಿದೆ. 3/4

ಕಳೆದ ಜೂನ್​ 26ರಂದು ಟ್ವೀಟ್​ ಮಾಡಿದ್ದ ಕುಮಾರಸ್ವಾಮಿ, ಐದು ಗ್ಯಾರಂಟಿಗಳಿಂದ ಜನೋದ್ಧಾರ ಗ್ಯಾರಂಟಿ ಎಂದು ಹಸಿ ಸುಳ್ಳು ಹೇಳಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಬರಗೆಟ್ಟ ಈ ಹೊತ್ತಿನಲ್ಲಿ ಅಂಬರದ ಮೇಲೆ ಕೂತು ಸ್ವಯಂವರ ಮಾಡಿಕೊಳ್ಳುತ್ತಿರುವ ಮತಗೆಟ್ಟ ವರನಂತೆ ವರ್ತಿಸುತ್ತಿದೆ. ಬೆಲೆ ಏರಿಕೆ ಹೊಡೆತಕ್ಕೆ ಜನ ತತ್ತರಿಸುತ್ತಿರುವುದು ಅದರ ಕಣ್ಣಿಗೆ ಕಾಣುತ್ತಿಲ್ಲ, 'ಜನರಿಗೆ ಬೆಲೆ ಏರಿಕೆ ಗ್ಯಾರಂಟಿ ' ಎಂದು ವಾಗ್ದಾಳಿ ನಡೆಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.