ಬೆಂಗಳೂರು: ಉಪಚುನಾವಣೆಯಲ್ಲಿ ಬಸವಕಲ್ಯಾಣದಿಂದ ಮಾತ್ರ ಜೆಡಿಎಸ್ ಸ್ಪರ್ಧಿಸುತ್ತೆ. ಮಸ್ಕಿ ಮತ್ತು ಬೆಳಗಾವಿ ಕ್ಷೇತ್ರದಲ್ಲಿ ಅಭ್ಯರ್ಥಿ ಹಾಕಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ನಗರದ ಜೆಪಿ ಭವನದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಬಸವಕಲ್ಯಾಣ ಕ್ಷೇತ್ರವನ್ನು ಸವಾಲಾಗಿ ತೆಗೆದುಕೊಂಡು ಗೆಲ್ಲುತ್ತೇವೆ.
ಬಿಜೆಪಿ ಸರ್ಕಾರ ಬಂದ ಮೇಲೆ ಜೆಡಿಎಸ್ಗೆ ಕೆಲ ಕ್ಷೇತ್ರಗಳಲ್ಲಿ ಹೊಡೆತ ಬಿದ್ದಿದೆ. ಹೀಗಾಗಿ ನನ್ನ ಸಮಯವನ್ನು ಬಸವಕಲ್ಯಾಣ ಕ್ಷೇತ್ರ ಗೆಲ್ಲುವ ಕಡೆ ಕೇಂದ್ರೀಕರಿಸುತ್ತೇನೆ ಎಂದರು.