ETV Bharat / state

ಕಮಲ ಮುಡಿದರು ಜೆಡಿಎಸ್​ನಿಂದ ಉಚ್ಛಾಟನೆಯಾಗಿದ್ದ ಎಂಎಲ್​ಸಿ ಪುಟ್ಟಣ್ಣ! - ಜೆಡಿಎಸ್ ಉಚ್ಚಾಟಿತ ಎಂಎಲ್​ಸಿ ಪುಟ್ಟಣ್ಣ

ಒಂದು ಕಾಲನ್ನು ಜೆಡಿಎಸ್ ಪಕ್ಷದಿಂದ ಹೊರಗಿಟ್ಟಿದ್ದ ಕಾರಣಕ್ಕೆ ಜೆಡಿಎಸ್​ನಿಂದ ಪುಟ್ಟಣ್ಣರನ್ನು ಉಚ್ಛಾಟನೆ ಮಾಡಲಾಗಿತ್ತು. ಈಗ ಅವರು ಸಿಎಂ ಬಿ.ಎಸ್.ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ‌ಗೆ ಸೇರ್ಪಡೆಯಾಗಿದ್ದಾರೆ.

MLC Puttanna
ಎಂಎಲ್​ಸಿ ಪುಟ್ಟಣ್ಣ
author img

By

Published : Mar 17, 2020, 11:20 PM IST

ಬೆಂಗಳೂರು: ಜೆಡಿಎಸ್​ನಿಂದ ಉಚ್ಛಾಟನೆಗೊಂಡಿರುವ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಇಂದು ಸಿಎಂ ಬಿ.ಎಸ್.ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ‌ಗೆ ಸೇರ್ಪಡೆಯಾದರು.

ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸ ಧವಳಗಿರಿಗೆ ಭೇಟಿ ನೀಡಿದ‌ ಎಂಎಲ್​ಸಿ ಪುಟ್ಟಣ್ಣ, ಸಿಎಂ ಬಿಎಸ್​ವೈ ಜೊತೆ ಮಾತುಕತೆ ನಡೆಸಿದರು. ನಂತರ ಬಿಜೆಪಿಗೆ ಸೇರ್ಪಡೆಯಾದರು. ಪಕ್ಷದ ಧ್ವಜವನ್ನು ನೀಡುವ ಮೂಲಕ ಪುಟ್ಟಪ್ಪರನ್ನು ಸಿಎಂ ಪಕ್ಷಕ್ಕೆ ಬರಮಾಡಿಕೊಂಡರು.

ಜೂನ್​ನಲ್ಲಿ ನಡೆಯಲಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಬಿಜೆಪಿ ಟಿಕೆಟ್ ಖಚಿತಪಡಿಸಿಕೊಂಡೇ ಪುಟ್ಟಣ್ಣ ಬಿಜೆಪಿ‌ ಸೇರಿದ್ದು, ಬರುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ.

ಇತ್ತೀಚೆಗೆ ಬಿಜೆಪಿ ಜೊತೆ ಗುರುತಿಸಿಕೊಂಡು ಒಂದು ಕಾಲನ್ನು ಪಕ್ಷದಿಂದ ಹೊರಗಿಟ್ಟಿದ್ದ ಕಾರಣಕ್ಕೆ ಜೆಡಿಎಸ್​ನಿಂದ ಪುಟ್ಟಣ್ಣರನ್ನು ಉಚ್ಛಾಟನೆ ಮಾಡಲಾಗಿತ್ತು. ಮೊನ್ನೆ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಪುಟ್ಟಣ್ಣಗೆ ಟಿಕೆಟ್ ನೀಡಲು ನಿರ್ಧಾರ ಕೈಗೊಂಡ ಹಿನ್ನೆಲೆಯಲ್ಲಿ ಸಿಎಂ ಸಮ್ಮುಖದಲ್ಲಿ ಇಂದು ಬಿಜೆಪಿ ಸೇರಿದ್ದಾರೆ. ಈ ವೇಳೆ ಬಿಜೆಪಿ ನಾಯಕರಾದ ಅರವಿಂದ ಲಿಂಬಾವಳಿ, ಎಸ್.ಆರ್.ವಿಶ್ವನಾಥ್ ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.