ETV Bharat / state

ಜೆಡಿಎಸ್​ನಿಂದ ಮತ್ತೆ 5 ಕ್ಷೇತ್ರಗಳಿಗೆ ಹೆಸರು ಪ್ರಕಟ: ತೆನೆ ಹೊತ್ತ ಬಿಎಸ್​ವೈ ಸಂಬಂಧಿ ಎನ್ ಆರ್ ಸಂತೋಷ್ - ಜೆಡಿಎಸ್​ನಿಂದ 5 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಜೆಡಿಎಸ್​ನಿಂದ ಮತ್ತೆ ಐವರು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಇಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರ ಸಂಬಂಧಿ ಆಗಿರುವ ಎನ್​ ಆರ್​ ಸಂತೋಷ್​ ಅವರು ಜೆಡಿಎಸ್​ ಸೇರಿದ್ದಾರೆ.

jds
ಜೆಡಿಎಸ್​
author img

By

Published : Apr 15, 2023, 3:02 PM IST

Updated : Apr 15, 2023, 5:15 PM IST

ಬೆಂಗಳೂರು: ಈಗಾಗಲೇ ಪ್ರಸಕ್ತ ವಿಧಾನಸಭೆ ಚುನಾವಣೆಯ ಜೆಡಿಎಸ್ ಅಭ್ಯರ್ಥಿಗಳ ಎರಡು ಪಟ್ಟಿಗಳನ್ನು ಬಿಡುಗಡೆ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು, ಇಂದು ಮತ್ತೆ ಐವರು ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದರು. ಚಿತ್ರದುರ್ಗಕ್ಕೆ ವಿಧಾನ ಪರಿಷತ್​ನ ಮಾಜಿ ಸದಸ್ಯ ರಘು ಆಚಾರ್ಯ, ಮಡಿಕೇರಿಗೆ ಎನ್.ಎಂ. ಮುತ್ತಪ್ಪ, ಮೂಡಬಿದಿರೆಗೆ ಅಮರಶ್ರೀ, ವರುಣಾ ಕ್ಷೇತ್ರಕ್ಕೆ ಮಾಜಿ ಶಾಸಕ ಡಾ. ಭಾರತಿ ಶಂಕರ್, ಬಾಗಲಕೋಟೆ ಕ್ಷೇತ್ರಕ್ಕೆ ದೇವರಾಜ್ ಪಾಟೀಲ್ ಹಾಗೂ ಯಾದಗಿರಿ ಕ್ಷೇತ್ರಕ್ಕೆ ಮಾಜಿ ಸಚಿವ ಎ.ಬಿ. ಮಾಲಕರೆಡ್ಡಿ ಅವರು ಜೆಡಿಎಸ್ ಅಭ್ಯರ್ಥಿಗಳು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರಕಟಿಸಿದರು.

ಎನ್ ಆರ್ ಸಂತೋಷ್, ದೇವರಾಜ್ ಪಾಟೀಲ್ ಸೇರ್ಪಡೆ: ಇದೇ ಸಂದರ್ಭದಲ್ಲಿ ಅರಸೀಕೆರೆ ವಿಧಾನಸಭೆ ಕ್ಷೇತ್ರದ ಎನ್ ಆರ್ ಸಂತೋಷ್ ಅವರು ಬಿಜೆಪಿ ತೊರೆದು ಜೆಡಿಎಸ್ ಪಕ್ಷವನ್ನು ಸೇರಿದರು. ಹಾಗೆಯೇ, ಬಾಗಲಕೋಟೆಯ ದೇವರಾಜ್ ಪಾಟೀಲ್ ಅವರು ಕಾಂಗ್ರೆಸ್ ತೊರೆದು ಪಕ್ಷಕ್ಕೆ ಸೇರಿದರು. ಕುಮಾರಸ್ವಾಮಿ ಅವರು, ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಇಬ್ಬರೂ ನಾಯಕರಿಗೆ ಪಕ್ಷದ ಶಾಲು ಹೊದಿಸಿ ಬರಮಾಡಿಕೊಂಡರು.

ಭರವಸೆ ಪತ್ರ ಬಿಡುಗಡೆ ಮಾಡಿದ ಜೆಡಿಎಸ್​: ಇಂದು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರು ಜೆಡಿಎಸ್​ ಪಕ್ಷದ ಭರವಸೆ ಪತ್ರವನ್ನು ಬಿಡುಗಡೆ ಮಾಡಿದರು. ಒಟ್ಟು ಈ ಪತ್ರ ಕರುನಾಡ ಜನತೆಗಾಗಿ 12 ಪ್ರಮುಖ ಅಂಶಗಳನ್ನು ಒಳಗೊಂಡಿದೆ. ಜೆಡಿಎಸ್​ ಪಕ್ಷ ಅಧಿಕಾರಕ್ಕೆ ಬಂದರೆ ಈ ಎಲ್ಲಾ ಭರವಸೆಗಳನ್ನು ಈಡೇರಿಸುವುದಾಗಿ ದೇವೇಗೌಡರು ಆಶ್ವಾಸನೆ ಕೂಡ ನೀಡಿದ್ದಾರೆ. ಮಾತೃಶ್ರೀ ಮತ್ತು ಮಹಿಳಾ ಸಬಲೀಕರಣ, ಕನ್ನಡವೇ ಮೊದಲು, ಶಿಕ್ಷಣವೇ ಆಧುನಿಕ ಶಕ್ತಿ, ಆರೋಗ್ಯ ಸಂಪತ್ತು, ರೈತ ಚೈತನ್ಯ, ಹಿರಿಯ ನಾಗರಿಕರಿಗೆ ಸನ್ಮಾನ, ಧಾರ್ಮಿಕ ಅಲ್ಪಸಂಖ್ಯಾತರ ಏಳಿಗೆ ಹಾಗೂ ಪ್ರಗತಿ, ಯುವಜನ ಸಬಲೀಕರಣ, ವಿಕಲ ಚೇತನರಿಗೆ ಆಸರೆ, ಆರಕ್ಷಕರಿಗೆ ಅಭಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಏಳಿಗೆ, ವೃತ್ತಿ ನಿರತ ವಕೀಲರ ಅಭ್ಯುದಯ ಇವು ಒಟ್ಟು ಪ್ರಮುಖ ಭರವಸೆಯ ಅಂಶಗಳಾಗಿವೆ.

ಉ.ಕರ್ನಾಟಕದಲ್ಲಿ 40 ಸ್ಥಾನ ಗೆಲ್ಲುವ ಆಶ್ವಾಸನೆ ನೀಡಿದ ಹೆಚ್​.ಡಿ: ರಾಜ್ಯ ವಿಧಾನಸಭೆಯ ಚುನಾವಣೆಯಲ್ಲಿ ಉತ್ತರ ಕರ್ನಾಟಕದಲ್ಲಿ ನಲವತ್ತು ಸ್ಥಾನ ಗೆಲ್ಲುತ್ತೇವೆ. ಜನತಾ ಪರಿವಾರದಲ್ಲಿ ಬೆಳೆದು ಕಾಂಗ್ರೆಸ್, ಬಿಜೆಪಿಗೆ ಹೋಗಿದ್ದವರು ಈಗ ಮರಳಿ ಗೂಡಿಗೆ ಬಂದಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನಿನ್ನೆ ತಿಳಿಸಿದರು. ಇನ್ನೂ ಹಲವರು ಪಕ್ಷಕ್ಕೆ ಸೇರ್ಪಡೆ ಆಗಲಿದ್ದಾರೆ. ದೊಡ್ಡ ಶಕ್ತಿ ಇರುವವರು ಸಹ ಪಕ್ಷ ಸೇರಲಿದ್ದಾರೆ. ನಮ್ಮ ಪಕ್ಷಕ್ಕೆ ಜನ ಸೇರುತ್ತಾರೆ, ಆದರೆ ವೋಟ್ ಸಿಗುವುದಿಲ್ಲ ಎಂಬ ಅಪವಾದವಿದೆ. ಈ ಬಾರಿ ಅದಕ್ಕೆಲ್ಲ ಉತ್ತರ ಸಿಗಲಿದೆ ಎಂದು ನುಡಿದರು.

ಇದನ್ನೂ ಓದಿ: ಜೆಡಿಎಸ್​ ಭರವಸೆ ಪತ್ರ ಬಿಡುಗಡೆ: ಮಾತೃಶ್ರೀ, ಮಹಿಳಾ ಸಬಲೀಕರಣ, ರೈತ ಚೈತನ್ಯ ಸೇರಿ 12 ಭರವಸೆ ನೀಡಿದ ಜೆಡಿಎಸ್​​

Last Updated : Apr 15, 2023, 5:15 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.