ETV Bharat / state

ಮೇ 13ರಂದು ಬೃಹತ್ ಸಮಾವೇಶದೊಂದಿಗೆ ಜೆಡಿಎಸ್​ ಜನತಾ ಜಲಧಾರೆ ಕಾರ್ಯಕ್ರಮ ಸಮಾಪ್ತಿ

author img

By

Published : May 5, 2022, 9:44 PM IST

ವಾಯುವ್ಯ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯನ್ನಾಗಿ ಚಂದ್ರಶೇಖರ್ ಲೋಣಿ ಕಣಕ್ಕಿಳಿಸಲು ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದೂ ಬಂಡೆಪ್ಪ ಕಾಶೆಂಪೂರ್ ತಿಳಿಸಿದರು.

ಜೆಡಿಎಸ್​ ಕೋರ್ ಕಮಿಟಿ ಸಭೆ
ಜೆಡಿಎಸ್​ ಕೋರ್ ಕಮಿಟಿ ಸಭೆ

ಬೆಂಗಳೂರು: ಕಳೆದ ತಿಂಗಳು 16ರಂದು ಹನುಮ ಜಯಂತಿ ದಿನ ಆರಂಭವಾದ ಜೆಡಿಎಸ್​ ಜನತಾ ಜಲಧಾರೆ ಕಾರ್ಯಕ್ರಮ ರಾಜ್ಯಾದ್ಯಂತ ಯಸ್ವಿಯಾಗಿ ನಡೆದಿದ್ದು, ಇದೇ ಮೇ 13ರಂದು ಬೆಂಗಳೂರಿನ ನೆಲಮಂಗಲ ಟೋಲ್ ಪ್ಲಾಜಾ ಬಳಿ ಬೃಹತ್ ಜನತಾ ಜಲಧಾರೆ ಸಮಾವೇಶ ನಡೆಯಲಿದೆ.

ಜಲಧಾರೆ ಕಾರ್ಯಕ್ರಮವು ಈ ಸಮಾವೇಶದ ಮೂಲಕ ಸಮಾಪ್ತಿಯಾಗಲಿದ್ದು, ಆ ಬೃಹತ್ ಸಮಾವೇಶದ ಸಿದ್ಧತೆ ಮತ್ತು ರೂಪುರೇಷೆಗಳ ಬಗ್ಗೆ ಶುಕ್ರವಾರ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ವಿಸ್ತೃತವಾಗಿ ಚರ್ಚೆ ನಡೆಸಲಾಯಿತು.

ಸಭೆಯ ನಂತರ ಮಾಹಿತಿ ನೀಡಿದ ಕೋರ್ ಕಮಿಟಿ ಅಧ್ಯಕ್ಷ ಬಂಡೆಪ್ಪ ಕಾಶೆಂಪೂರ್, ರಾಜ್ಯದ 184 ವಿಧಾನಸಭೆ ಕ್ಷೇತ್ರಗಳಲ್ಲಿ ಜಲಧಾರೆಯ 15 ಗಂಗಾ ರಥಗಳು ಯಶಸ್ವಿಯಾಗಿ ಸಂಚರಿಸುತ್ತಿವೆ. ಇವುಗಳ ಮೂಲಕ ರಾಜ್ಯದ ಎಲ್ಲ ಜೀವ ನದಿಗಳಿಂದ ಸಂಗ್ರಹ ಮಾಡಲಾಗಿರುವ ಪುಣ್ಯಜಲವನ್ನು ಒಂದು ಬೃಹತ್ ಕಲಶಕ್ಕೆ ತುಂಬಿಸಿ ಸಮಾವೇಶದಲ್ಲಿ ಪೂಜೆ ನೆರವೇರಿಸಲಾಗುವುದು. ಈ ಸಮಾವೇಶದಲ್ಲಿ 5 ಲಕ್ಷಕ್ಕಿಂತ ಹೆಚ್ಚು ಜನ ಸೇರಲಿದ್ದಾರೆ ಎಂದು ಹೇಳಿದರು.

ಮೇ 13ರಂದು ಸಂಜೆ 4 ಗಂಟೆಗೆ ಆರಂಭ ಆಗಲಿರುವ ಸಮಾವೇಶದಲ್ಲಿ ಮಾಜಿ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಪಕ್ಷದ ರಾಜ್ಯ ಅಧ್ಯಕ್ಷ ಸಿಎಂ ಇಬ್ರಾಹಿಂ, ಸಂಸದೀಯ ಮಂಡಳಿ ಅಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಸೇರಿದಂತೆ ಪಕ್ಷದ ಎಲ್ಲ ಶಾಸಕರು, ಹಿರಿಯ ಮುಖಂಡರು, ಸಾಹಿತಿಗಳು, ಬುದ್ಧಿಜೀವಿಗಳು, ಕನ್ನಡಪರ, ರೈತಪರ ಹೋರಾಟಗಾರರು ಭಾಗಿಯಾಗುವರು ಎಂದರು.

ಗಂಗಾ ಆರತಿ: ಸಮಾವೇಶದ ಕೊನೆಯಲ್ಲಿ ಗಂಗಾ ಪೂಜೆ ನೆರವೇರಿಸಿದ ಮೇಲೆ ಅತ್ಯಂತ ಸಂಪ್ರದಾಯಬದ್ಧವಾಗಿ ಗಂಗಾ ಆರತಿಯನ್ನು ನೆರವೇರಿಸಲಾಗುವುದು. ಈ ಕಾರ್ಯಕ್ರಮ ನಡೆಸಿಕೊಡಲು ವಾರಾಣಸಿಯಿಂದ ಪಂಡಿತರನ್ನು ಕರೆಸಲಾಗುವುದು. ಸಂಜೆಯ ಹೊತ್ತಿನಲ್ಲಿ ಆರತಿ ಕಾರ್ಯಕ್ರಮ ವಿಶೇಷವಾಗಿ ಮೂಡಿಬರಲಿದೆ ಎಂದು ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಸನ್ಯಾಸತ್ವ ಸ್ವೀಕಾರ ಮಾಡಿದ ಬಿಜೆಪಿ ಹಿರಿಯ ನಾಯಕ: ಪಟ್ಟಾಭಿಷೇಕ ಕಾರ್ಯಕ್ರಮಕ್ಕೆ ಗಣ್ಯರಿಗೂ ಆಹ್ವಾನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.