ETV Bharat / state

ಆರು ಜಿಲ್ಲೆಗಳ ಮುಖಂಡರ ಜೊತೆ ವಿಡಿಯೋ ಸಂವಾದ ನಡೆಸಿದ ಹೆಚ್​​​ಡಿಡಿ-ಹೆಚ್​​ಡಿಕೆ

ರಾಜ್ಯದ ಕೆಲ ಭಾಗಗಳಲ್ಲಿ ಉಂಟಾದ ಪ್ರವಾಹದಿಂದ ಆಸ್ತಿ-ಪಾಸ್ತಿ ನಷ್ಟವಾಗಿದ್ದು, ಈ ಬಗ್ಗೆ ಜೆಡಿಸ್​​ ವರಿಷ್ಠ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್​​.ಡಿ.ಕುಮಾರಸ್ವಾಮಿ ವಿಡಿಯೋ ಕಾನ್ಫರೆನ್ಸ್​​ ಮೂಲಕ ಮಾಹಿತಿ ಪಡೆದುಕೊಂಡರು.

JDS
ಹೆಚ್​​​ಡಿಡಿ
author img

By

Published : Sep 3, 2020, 1:56 PM IST

ಬೆಂಗಳೂರು: ರಾಜ್ಯದಲ್ಲಿ ಉಂಟಾದ ಅತಿವೃಷ್ಟಿ-ಅನಾವೃಷ್ಟಿ, ಪ್ರವಾಹದ ಬಗೆಗಿನ ಮಾಹಿತಿ ಪಡೆದುಕೊಳ್ಳಲು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ, ಮಾಜಿ‌ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರು ಜಿಲ್ಲೆಗಳ ಮುಖಂಡರ ಜೊತೆ ವಿಡಿಯೋ ಕಾನ್ಫರೆನ್ಸ್​​ ಮೂಲಕ ಚರ್ಚೆ ನಡೆಸಿದರು.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ‌ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ವಿಡಿಯೋ ಕಾನ್ಫರೆನ್ಸ್​ ಮುಖಾಂತರ ರಾಯಚೂರು, ಕೊಪ್ಪಳ, ಕಲಬುರಗಿ, ಯಾದಗಿರಿ, ಬಳ್ಳಾರಿ, ಬೀದರ್ ಜಿಲ್ಲೆಗಳ ಜಿಲ್ಲಾಧ್ಯಕ್ಷರು, ಶಾಸಕರು, ತಾಲೂಕು ಅಧ್ಯಕ್ಷರು ಮತ್ತು ಕಳೆದ ಬಾರಿಯ ಪರಾಜಿತ ಅಭ್ಯರ್ಥಿಗಳೊಂದಿಗೆ ಪ್ರವಾಹದಿಂದ ಉಂಟಾಗಿರುವ ಬೆಳೆ, ಆಸ್ತಿ-ಪಾಸ್ತಿ ಹಾನಿಗೆ ಸಂಬಂಧಿಸಿದಂತೆ ಇಂದು ಚರ್ಚೆ ನಡೆಸಿದರು.

ಈ ಸಂವಾದದ ವೇಳೆ ರಾಜ್ಯದಲ್ಲಿನ ಗ್ರಾಮ ಪಂಚಾಯತಿಗಳ ಚುನಾವಣೆ ಬಗ್ಗೆ ಚರ್ಚೆ ನಡೆಸಿದ್ದು, ಗ್ರಾಪಂ ಅಧಿಕಾರದ ಅವಧಿಯು ಮುಗಿದಿರುವುದರಿಂದ ಮುಂಬರುವ ಪಂಚಾಯತಿ ಚುನಾವಣೆಯಲ್ಲಿ ಪಕ್ಷವನ್ನು ವ್ಯವಸ್ಥಿತವಾಗಿ ಸಂಘಟನೆ ಮಾಡುವ ಕುರಿತು ಹಾಗೂ ಚುನಾವಣೆಗೆ ನಿಗದಿಪಡಿಸಿರುವ ಸ್ಥಾನ ಮೀಸಲಾತಿ ರಾಜಕೀಯ ವೈರತ್ವ ಹಾಗೂ ದುರುದ್ದೇಶದಿಂದ ಕೂಡಿದೆ ಎಂದು ಈ ಕುರಿತು ಹೋರಾಟ ನಡೆಸುವ ಬಗ್ಗೆಯೂ ಚರ್ಚಿಸಲಾಯಿತು.

ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ‌ ನೀಡಿ ವಸ್ತುಸ್ಥಿತಿಯನ್ನು ಅರಿಯಲು ಸಾಧ್ಯವಾಗದ ಹಿನ್ನೆಲೆ ಈ ವಿಡಿಯೋ ಸಂವಾದವನ್ನು ಏರ್ಪಡಿಸಲಾಗಿದೆ.

For All Latest Updates

TAGGED:

JDS Leaders
ETV Bharat Logo

Copyright © 2024 Ushodaya Enterprises Pvt. Ltd., All Rights Reserved.