ETV Bharat / state

ಚರ್ಚೆಗೆ ಗ್ರಾಸವಾದ ಜೆಡಿಎಸ್‍ ನಾಯಕರ ಗೊಂದಲ ಹೇಳಿಕೆಗಳು!?

ಸದ್ಯ ಯಾವ ಪಕ್ಷಕ್ಕೆ ಯಾರ ಅಗತ್ಯವೂ ಇಲ್ಲ. ನಮಗಂತೂ ಬಿಜೆಪಿ ಸ್ನೇಹ ಬೇಕಿಲ್ಲ ಎಂದಿದ್ದ ಕುಮಾರಸ್ವಾಮಿ ಅವರು, ಇದೀಗ ವಿಧಾನಪರಿಷತ್​ನ ಸಭಾಪತಿ ಸ್ಥಾನ ಪಡೆಯಲು ಜೆಡಿಎಸ್ ಮತ್ತೆ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವುದು ಮತ್ತೊಂದು ಗೊಂದಲಕ್ಕೆ ಕಾರಣವಾಗಿದೆ.

jds-leaders-confused-statements
ಜೆಡಿಎಸ್‍ ನಾಯಕರ ಗೊಂದಲ ಹೇಳಿಕೆಗಳು
author img

By

Published : Jan 30, 2021, 12:02 AM IST

ಬೆಂಗಳೂರು : ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡ ಬಳಿಕ ರಾಜ್ಯ ರಾಜಕಾರಣದಲ್ಲಿ ಹಲವಾರು ಘಟನಾವಳಿಗಳು ನಡೆದವು. ಅಲ್ಲಿಂದೀಚೆಗೆ ಜೆಡಿಎಸ್​ನಲ್ಲಿ ಒಂದಲ್ಲಾ ಒಂದು ರೀತಿಯ ಗೊಂದಲಗಳು, ಅಪಸ್ವರಗಳು ಕೇಳಿಬರುತ್ತಲೇ ಇವೆ.

ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಸಂದರ್ಭದಲ್ಲಿ ಜೆಡಿಎಸ್‌ ನಾಯಕರು ಆಡಳಿತ ಪಕ್ಷದ ಪರವಾಗಿ ನಿಂತಿದ್ದು, ಇದೀಗ ಸಭಾಪತಿ ಸ್ಥಾನ ಪಡೆದುಕೊಳ್ಳುವ ಮೂಲಕ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮತ್ತಷ್ಟು ಗಟ್ಟಿಯಾಗಿದೆ. ಆದರೆ, ಮೈತ್ರಿ ವಿಚಾರ ಪಕ್ಷದಲ್ಲಿ ಗೊಂದಲ ಸೃಷ್ಟಿಸಿದ್ದು ಮುಖಂಡರ ನಿಲುವಿಗೆ ಅಪಸ್ವರ ಎದ್ದಿದೆ ಎಂದು ಹೇಳಲಾಗುತ್ತಿದೆ.

ಕೆಲ ತಿಂಗಳ ಹಿಂದೆ ಇದೇ ವಿಚಾರವಾಗಿ ಬಹಿರಂಗ ಹೇಳಿಕೆ ನೀಡಿದ್ದ ಗುಬ್ಬಿ ಶಾಸಕ ಎಸ್.ಆರ್‌ . ಶ್ರಿನಿವಾಸ್‌, ನಾಯಕರು ಒಳಗೊಂದು, ಹೊರಗೊಂದು ಮಾತನಾಡಬಾರದು ಎಂದು ಹೇಳಿದ್ದರು. ಕಳೆದ ಚುನಾವಣೆಯ ವೇಳೆ ಬಿಜೆಪಿ ಜೊತೆಗೆ ಜೆಡಿಎಸ್‌ ಒಳ ಒಪ್ಪಂದ ಸತ್ಯ. ಈ ಬಗ್ಗೆ ನಾನು ಆಡಿದ ಮಾತಿಗೆ ಬದ್ಧ ಎಂದಿದ್ದರು. ಅಲ್ಲದೆ, ಬಿಜೆಪಿ ಸರ್ಕಾರ ಬೀಳಲು ಬಿಡಲ್ಲ ಎಂದು ನಮ್ಮ ನಾಯಕರೇ ಹೇಳಿದ್ದರು. ಸರ್ಕಾರ ಬೀಳುವುದಿಲ್ಲ, ಮಧ್ಯಂತರ ಚುನಾವಣೆ ಬರುವುದಿಲ್ಲ. ಆದರೆ, ಬಿಜೆಪಿಗೆ ನನ್ನ ಬೆಂಬಲವಿಲ್ಲ ಎಂದಿದ್ದರು. ಅವರಲ್ಲದೇ ಆಂತರಿಕವಾಗಿ ಕೆಲವು ಮುಖಂಡರು ನಾಯಕರ ನಿಲುವಿಗೆ ಅಸಮಾಧಾನ ವ್ಯಕ್ತಪಡಿಸಿದ್ದರು ಎಂಬ ಮಾತುಗಳು ಕೇಳಿ ಬಂದಿದ್ದವು.

ರೈತರ ಪಕ್ಷ ಎಂದು ಕರೆಯಲ್ಪಡುವ ಜೆಡಿಎಸ್​ ಭೂ ಸುಧಾರಣಾ ಕಾಯ್ದೆಯ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ಪರವಾಗಿ ನಿಂತಿದೆ. ಗೋಹತ್ಯೆ ವಿಚಾರದಲ್ಲೂ ಗೊಂದಲದ ನಡೆಯನ್ನು ಅನುಸರಿಸಿದೆ. ಮತ್ತೊಂದು ಕಡೆಯಲ್ಲಿ ವಿಧಾನಪರಿಷತ್‌ ಸಭಾಪತಿ ಬದಲಾವಣೆಯ ಸಂದರ್ಭದಲ್ಲಿ ಬಹಿರಂಗವಾಗಿ ಬಿಜೆಪಿ ಪರವಾಗಿ ನಿಂತಿದೆ. ಒಂದು ಕಡೆಯಲ್ಲಿ ಸರ್ಕಾರದ ಕೆಲವು ನೀತಿಗಳನ್ನು ವಿರೋಧ ಮಾಡುತ್ತಿದ್ದರೆ, ಮತ್ತೊಂದು ಕಡೆಯಲ್ಲಿ ಸರ್ಕಾರಕ್ಕೆ ಬೆಂಬಲ ನೀಡುತ್ತಿದೆ. ಆದರೆ ಇದು ಪಕ್ಷದ ಕೆಲವು ಶಾಸಕರಲ್ಲಿ ಅಸಮಾಧಾನ ಮೂಡಿಸಿದೆ.ಇನ್ನು ಜೆಡಿಎಸ್‌ ಎನ್‌ಡಿಎ ಸೇರಲಿದೆ ಎಂಬ ಕಲ್ಪಿತ ಸುದ್ದಿಗಳನ್ನು ವ್ಯವಸ್ಥಿತವಾಗಿ ಹರಡುತ್ತಿದೆ. ಇದೆಲ್ಲವೂ ಸುಳ್ಳು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಈ ಹಿಂದೆ ಸರಣಿ ಟ್ವೀಟ್ ಮಾಡಿ, ಪ್ರಧಾನಿ ಅವರೊಂದಿಗೆ ರಾಜ್ಯ ಬಿಜೆಪಿ ನಾಯಕರಿಗಿಂತಲೂ ಉತ್ತಮ ಬಾಂಧವ್ಯವೂ ನನಗಿದೆ. ಯಡಿಯೂರಪ್ಪ ಹಿರಿಯರು ಎಂಬ ಗೌರವವೂ ಇದೆ. ವಿರೋಧಕ್ಕಾಗಿ ವಿರೋಧ ಪಕ್ಷವಾಗಿರಬಾರದು ಎಂಬ ಆಶಯವೂ ಇದೆ. ಬಿಜೆಪಿ ಅಪಪ್ರಚಾರಕ್ಕೆ ಕೈ ಹಾಕಿದರೆ, ಬಾಂಧವ್ಯ, ಗೌರವ, ಆಶಯಗಳಿಗೆ ಧಕ್ಕೆಯಾಗಲಿದೆ. ಜೆಡಿಎಸ್‌ ವಿಚಾರದಲ್ಲಿ ಬಿಜೆಪಿಯು ಎಚ್ಚರವಾಗಿರಲಿ ಎಂಬ ಎಚ್ಚರಿಕೆ ಸಂದೇಶ ರವಾನಿಸಿದ್ದರು.

ಸದ್ಯ ಯಾವ ಪಕ್ಷಕ್ಕೆ ಯಾರ ಅಗತ್ಯವೂ ಇಲ್ಲ. ನಮಗಂತೂ ಬಿಜೆಪಿ ಸ್ನೇಹ ಬೇಕಿಲ್ಲ ಎಂದಿದ್ದ ಕುಮಾರಸ್ವಾಮಿ ಅವರು, ಇದೀಗ ವಿಧಾನಪರಿಷತ್​ನ ಸಭಾಪತಿ ಸ್ಥಾನ ಪಡೆಯಲು ಜೆಡಿಎಸ್ ಮತ್ತೆ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವುದು ಮತ್ತೊಂದು ಗೊಂದಲಕ್ಕೆ ಕಾರಣವಾಗಿದೆ.

ಗೋಹತ್ಯೆ ನಿಷೇಧ ಕಾಯಿದೆ ವಿಧಾನಪರಿಷತ್​​ನಲ್ಲಿ ಅಂಗೀಕಾರವಾಗಬೇಕಿದೆ. ಹಿಂದಿನ ಅಧಿವೇಶನದಲ್ಲಿ ಜೆಡಿಎಸ್ ಇದಕ್ಕೆ ವಿರೋಧ ವ್ಯಕ್ತಪಡಿಸಿತ್ತು. ಗುರುವಾರವಷ್ಟೇ ಜೆಡಿಎಸ್‍ ಹಿರಿಯ ಮುಖಂಡ ಬಸವರಾಜ ಹೊರಟ್ಟಿ ಅವರು ಪ್ರಮುಖ ಬಿಲ್​ಗಳು ಪಾಸ್ ಆಗಬೇಕು. ಅದೇ ರೀತಿ ಈ ಕಾಯಿದೆಯೂ ಪಾಸ್ ಆಗಬೇಕು ಎಂದಿದ್ದರು. ಆದರೆ, ಶುಕ್ರವಾರ ಈ ವಿಷಯಕ್ಕೆ ಸ್ಪಷ್ಟೀಕರಣ ನೀಡಿರುವ ಹೊರಟ್ಟಿ, ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ನಮ್ಮ ನಾಯಕರ ವಿರೋಧ ಇದೆ. ತಮ್ಮ ವಿರೋಧವೂ ಇದೆ ಎಂದು ಗೊಂದಲದ ಹೇಳಿಕೆ ನೀಡಿದ್ದಾರೆ.

ಇನ್ನು ರಾಜ್ಯದಲ್ಲಿ ಭೂಸುಧಾರಣಾ ಕಾಯಿದೆಗೆ ಬೆಂಬಲ ನೀಡಿದ ಜೆಡಿಎಸ್ ನಾಯಕರು, ಕೇಂದ್ರದ ಕೃಷಿ ಕಾಯಿದೆಗಳಿಗೆ ವಿರೋಧ ವ್ಯಕ್ತಪಡಿಸಿರುವುದು ಇನ್ನೊಂದು ಗೊಂದಲಕ್ಕೆ ಕಾರಣವಾಗಿದೆ. ನಿನ್ನೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಟ್ವೀಟ್ ಮಾಡಿ, ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ರಾಷ್ಟ್ರಪತಿಗಳ ಜಂಟಿ ಭಾಷಣಕ್ಕೆ ಹಾಜರಾಗದಿರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.

ಈ ಹಿಂದೆ ಜೆಡಿಎಸ್‌ ಬಿಜೆಪಿಯ ‘ಬಿ ಟೀಂ’ ಎಂದು ಕಾಂಗ್ರೆಸ್‌ ಮುಖಂಡರು ಆರೋಪಿಸಿದ್ದರು. ಆ ಬಳಿಕ ನಮ್ಮ ಮನೆ ಬಾಗಿಲಿಗೆ ಬಂದು ಮೈತ್ರಿ ಸರ್ಕಾರ ಮಾಡಿದರು. ಕಾಂಗ್ರೆಸ್‌ ಆರೋಪಿಸುವಂತೆ ಒಳ ಒಪ್ಪಂದವೇನೂ ಇಲ್ಲ. ವಿಷಯಾಧಾರಿತ ಹೊಂದಾಣಿಕೆ ಮಾತ್ರ ಸಾಧ್ಯ ಎಂದು ಹೆಚ್​ಡಿಕೆ ಹೇಳಿದ್ದರು. ಇಂತಹ ಹೇಳಿಕೆಗಳಿಂದ ಪಕ್ಷದ ಕಾರ್ಯಕರ್ತರಲ್ಲಂತೂ ಗೊಂದಲ ಏರ್ಪಟ್ಟಿರುವುದಂತೂ ಸತ್ಯ.

ಒಟ್ಟಾರೆ, ಜೆಡಿಎಸ್‍ ನಾಯಕರ ಇಂತಹ ಗೊಂದಲ ಹೇಳಿಕೆಗಳು ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿವೆ. ಇದು ಯಾವ ಹಂತಕ್ಕೆ ತಲುಪುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.