ETV Bharat / state

ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಜೆಡಿಎಸ್ ನಾಯಕರು: ಪಕ್ಷಕ್ಕೆ ಸ್ವಾಗತಿಸಿದ ಡಿಕೆಶಿ - ETv Bharat Kannada news

ಇಬ್ಬರು ಜೆಡಿಎಸ್ ನಾಯಕರನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷಗೆ ಬರಮಾಡಿಕೊಂಡರು - ಕನಕಪುರ ಭಾಗದ ಜೆಡಿಎಸ್ ನಾಯಕರಾದ ಡಿ ಎಂ ವಿಶ್ವನಾಥ್ ಹಾಗೂ ಮಂಡ್ಯದ ಕಿಲಾರ ಕ್ಷೇತ್ರದ ರಾಧಾಕೃಷ್ಣ ಕಾಂಗ್ರೆಸ್ ಗೆ ಸೇರ್ಪಡೆ

JDS leaders join Congress party
ಜೆಡಿಎಸ್ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
author img

By

Published : Jan 9, 2023, 6:02 PM IST

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಇಬ್ಬರು ಜೆಡಿಎಸ್ ನಾಯಕರು ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಬೆಂಗಳೂರು: ಕನಕಪುರ ಭಾಗದ ಜೆಡಿಎಸ್ ನಾಯಕರಾದ ಡಿ ಎಂ ವಿಶ್ವನಾಥ್ ಹಾಗೂ ರಾಧಾಕೃಷ್ಣ ಕಾಂಗ್ರೆಸ್ ಗೆ ಸೇರ್ಪಡೆಯಾದರು. ಈ ಇಬ್ಬರು ನಾಯಕರು ಹಾಗೂ ಅವರ ಬೆಂಬಲಿಗನ್ನು ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪಕ್ಷಕ್ಕೆ ಬರಮಾಡಿಕೊಂಡರು. ಪಕ್ಷದ ಶಾಲು ಹೊದಿಸಿ ಧ್ವಜ ನೀಡಿ ಪಕ್ಷ ಸೇರ್ಪಡೆ ಮಾಡಿಕೊಂಡರು.

ಇದಾದ ಬಳಿಕ ಮಾತನಾಡಿದ ಡಿಕೆ ಶಿವಕುಮಾರ್,​ ಇಂದು ಜೆಡಿಎಸ್ ಪಕ್ಷದ ಇಬ್ಬರು ಪ್ರಮುಖ ನಾಯಕರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದೇವೆ. ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ನನ್ನ ವಿರುದ್ಧ ಚುನಾವಣೆಗಳಲ್ಲಿ ಸ್ಪರ್ಧೆ ಮಾಡಿ ಬಹಳ ಕಡಿಮೆ ಅಂತರದಲ್ಲಿ ಸೋತಿದ್ದ, ಜೆಡಿಎಸ್ ಪಕ್ಷದ ಸಂಘಟನೆ ಮಾಡಿಕೊಂಡು ಬಂದಿದ್ದ ಡಿ.ಎಂ. ವಿಶ್ವನಾಥ್ ಅವರು ಕಾಂಗ್ರೆಸ್ ಪಕ್ಷವನ್ನು ಸೇರುತ್ತಿದ್ದಾರೆ.

ಅವರ ಕುಟುಂಬ ಕಾಂಗ್ರೆಸ್ ಪಕ್ಷದ ಆಧಾರ ಸ್ತಂಭವಾಗಿತ್ತು. ಅವರು ನನ್ನ ಪರವಾಗಿ ಒಂದೆರಡು ಚುನಾವಣೆಗಳಲ್ಲಿ ಪ್ರಚಾರ ಮಾಡಿ ಬೆಂಬಲ ನೀಡಿದ್ದ ನೆನಪು ಈಗಲೂ ಹಸಿಯಾಗಿದೆ. ನಂತರ ಜೆಡಿಎಸ್ ನಲ್ಲಿ ನಾಯಕರಾಗಿ ಬೆಳೆಯುವ ಕನಸು ಕಂಡ ಕುಟುಂಬ ಆ ಕೆಲಸ ಮಾಡಿಕೊಂಡು ಬಂದಿತ್ತು. ಇಡೀ ನಮ್ಮ ಜಿಲ್ಲೆಯಲ್ಲಿ ಡಿ.ಎಂ ವಿಶ್ವನಾಥ್ ಅವರು ಪಕ್ಷ ಸಂಘಟನೆ ಕೆಲಸ ಮಾಡಿದ್ದಾರೆ. ಇಂದು ಅವರಿಗೆ ಬಿಜೆಪಿಯಿಂದ ಆಹ್ವಾನ ಇದ್ದರೂ ರಾಜ್ಯ, ಜಿಲ್ಲೆ ಹಾಗೂ ಕನಕಪುರ ಕ್ಷೇತ್ರದ ಪರಿಸ್ಥಿತಿ ಅವಲೋಕಿಸಿ, ಡಿ.ಕೆ. ಶಿವಕುಮಾರ್ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೋಗಬೇಕು ಎಂದು ತಮ್ಮ ನಾಯಕರುಗಳ ಜತೆ ಚರ್ಚೆ ಮಾಡಿ ಈ ತೀರ್ಮಾನ ಮಾಡಿದ್ದಾರೆ ಎಂದು ಶಿವಕುಮಾರ್​ ಹೇಳಿದರು.

ಷರತ್ತುಗಳಿಲ್ಲದೇ ಪಕ್ಷ ಸೇರುತ್ತಿದ್ದಾರೆ: ಕನಕಪುರ ಕ್ಷೇತ್ರದ ಶಾಸಕನಾಗಿ, ರಾಜ್ಯ ಕಾಂಗ್ರೆಸ್ ಅಧ್ಯಕ್ಷನಾಗಿ ವಿಶ್ವನಾಥ್ ಮತ್ತು ಕನಕಪುರ, ರಾಮನಗರ ಜಿಲ್ಲೆಯ ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಂಡು ತುಂಬು ಹೃದಯದ ಸ್ವಾಗತ ಮಾಡುತ್ತಿದ್ದೇನೆ. ಮಂಡ್ಯದ ಕಿಲಾರ ಕ್ಷೇತ್ರದಲ್ಲಿ ಎಸ್.ಎಂ. ಕೃಷ್ಣ ಅವರ ಜತೆ ಉತ್ತಮ ಒಡನಾಟ ಇಟ್ಟುಕೊಂಡಿದ್ದ, ಜೆಡಿಎಸ್ ಪಕ್ಷದ ಜತೆ ಗುರುತಿಸಿಕೊಂಡಿದ್ದ ರಾಧಾಕೃಷ್ಣ ಅವರು ಬಹಳ ಹಿಂದೆಯೇ ಯಾವುದೇ ಷರತ್ತು ಇಲ್ಲದೆ ಪಕ್ಷಕ್ಕೆ ಸೇರುತ್ತೇವೆ ಎಂದು ಹೇಳಿದ್ದರು.

ನೀವು ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರಲು ಹೊರಟಿದ್ದು, ನಾನು ಕಾಂಗ್ರೆಸ್ ಪಕ್ಷಕ್ಕೆ ಅಳಿಲು ಸೇವೆ ಮಾಡುತ್ತೇನೆ, ನನ್ನ ಭವಿಷ್ಯ ನಿಮ್ಮ ಕೈಯಲ್ಲಿದೆ ಎಂದು ಮಂಡ್ಯ ಜಿಲ್ಲೆಯ ನಾಯಕರ ಸಮ್ಮುಖದಲ್ಲಿ ಪಕ್ಷ ಸೇರುತ್ತಿದ್ದಾರೆ. ಅವರನ್ನು ತುಂಬು ಹೃದಯದಿಂದ ಪಕ್ಷಕ್ಕೆ ಸ್ವಾಗತಿಸುತ್ತೇನೆ ಎಂದು ಡಿಕೆಶಿ ಹೇಳಿದರು.

ಈ ಇಬ್ಬರು ನಾಯಕರು ಹಾಗೂ ಅವರ ಜೊತೆ ಬರುತ್ತಿರುವ ಇತರ ನಾಯಕರನ್ನು ನಾನು ಪಕ್ಷಕ್ಕೆ ಸ್ವಾಗತಿಸುತ್ತೇನೆ. ನಮ್ಮ ಪಕ್ಷದಲ್ಲಿ ಹೊಸಬರು, ಹಳಬರು ಎಂಬ ವ್ಯತ್ಯಾಸವಿಲ್ಲದೇ, ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗಲಾಗುವುದು. ಇದೇ ಕಾರಣಕ್ಕೆ ಮಂಡ್ಯದ ಕಾಂಗ್ರೆಸ್ ನಾಯಕರು ಕೂಡ ನಿಮ್ಮನ್ನು ಸ್ವಾಗತಿಸಲು ಇಂದು ಈ ಕಾರ್ಯಕ್ರಮಕ್ಕೆ ಬಂದಿದ್ದಾರೆ ಎಂಬ ಮಾಹಿತಿ ನೀಡಿದರು.

ಪಕ್ಷಕ್ಕಾಗಿ ದುಡಿವ ವಾಗ್ದಾನ, ವಿಶ್ವಾಸ: ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವ ವಿಶ್ವನಾಥ್ ಹಾಗೂ ರಾಧಾಕೃಷ್ಣ ಅವರು ತಾವು ಕಾಂಗ್ರೆಸ್ ಪಕ್ಷದ ಏಳಿಗೆಗಾಗಿ ಶ್ರಮಿಸುತ್ತೇವೆ. ಕೇವಲ ಕನಕಪುರದಲ್ಲಿ ಮಾತ್ರವಲ್ಲ ಇಡೀ ರಾಮನಗರ ಜಿಲ್ಲೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಎಲ್ಲಿಸಿ ಕೊಡುವಲ್ಲಿ ಪ್ರಯತ್ನ ಮಾಡುತ್ತೇವೆ. ಕಾಂಗ್ರೆಸ್ ಪಕ್ಷ ನಮಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿ ಕಾರ್ಯನಿರ್ವಹಿಸಲು ಅವಕಾಶ ನೀಡಲಿದೆ ಎಂಬ ವಿಶ್ವಾಸವಿದೆ ಎಂದರು.

ಇದನ್ನೂ ಓದಿ :ಬಿಜೆಪಿಯದ್ದು ಭಾವನಾತ್ಮಕ ಅಜೆಂಡಾ.. ನಮ್ಮದು ಜನಸಾಮಾನ್ಯರ ಬದುಕಿಗೆ ಆದ್ಯತೆ: ಡಿಕೆಶಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.