ETV Bharat / state

2023ಕ್ಕೆ ಸ್ವತಂತ್ರ ಸರ್ಕಾರ ಅಧಿಕಾರಕ್ಕೆ ತರಲು ಎಲ್ಲರೂ ಶ್ರಮಿಸಿ: ಜೆಡಿಎಸ್​ ಮುಖಂಡರಿಗೆ ಹೆಚ್​ಡಿಕೆ ಸೂಚನೆ - undefined

ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಸೇರಿ 2023ಕ್ಕೆ ಎದುರಾಗುವ ವಿಧಾನಸಭೆ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ನಾವೆಲ್ಲ ಸಜ್ಜಾಗಬೇಕಿದೆ. ಜೆಡಿಎಸ್​ ಪಕ್ಷವನ್ನು(JDS Party) ಮತಗಟ್ಟೆ ಮಟ್ಟದಿಂದಲೇ ಸಶಕ್ತವಾಗಿ ಕಟ್ಟಲು ಎಲ್ಲರೂ ಕೆಲಸ ಮಾಡಬೇಕಿದೆ ಎಂದು ಮಾಜಿ ಸಿಎಂ ಹೆಚ್​ಡಿಕೆ ಹೇಳಿದ್ದಾರೆ.

jds-leaders-meeting-in-bengaluru-party-office
ಸಮಾಲೋಚನಾ ಸಭೆ
author img

By

Published : Nov 13, 2021, 8:25 PM IST

ಬೆಂಗಳೂರು: ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಜೆಡಿಎಸ್​ ಪಕ್ಷವನ್ನು (JDS party) ಬಲಪಡಿಸಲು ಎಲ್ಲ ಹಂತದ ನಾಯಕರೂ ತಮ್ಮ ಕಾರ್ಯಶೈಲಿ ಬದಲಿಸಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (H D Kumarswamy) ಅವರು ಪಕ್ಷದ ಮುಖಂಡರಿಗೆ ಖಡಕ್​ ಸೂಚನೆ ನೀಡಿದ್ದಾರೆ.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಜನತಾ ಪರ್ವ 1.O ಎರಡನೇ ಹಂತದ ಕಾರ್ಯಾಗಾರ 'ಜನತಾ ಸಂಗಮ'ದ 6ನೇ ದಿನ ನಡೆದ ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು. ಪಕ್ಷ ಕಟ್ಟಲು ನೆಪಗಳು ಬೇಡ. ಬದ್ಧತೆಯಿಂದ ಪಕ್ಷವನ್ನು ಕಟ್ಟಿ ಬೆಳೆಸಿದರೆ ಅಂತಹವರನ್ನು ಪಕ್ಷ ಗುರುತಿಸುತ್ತದೆ ಎಂದು ಅವರು ನೇರವಾಗಿಯೇ ಹೇಳಿದರು.

2023ರ ಚುನಾವಣೆಗೆ ಸಜ್ಜು:

ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಸೇರಿ 2023ಕ್ಕೆ ಎದುರಾಗುವ ವಿಧಾನಸಭೆ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ನಾವೆಲ್ಲ ಸಜ್ಜಾಗಬೇಕಿದೆ. ಪಕ್ಷವನ್ನು ಮತಗಟ್ಟೆ ಮಟ್ಟದಿಂದಲೇ ಸಶಕ್ತವಾಗಿ ಕಟ್ಟಲು ಎಲ್ಲರೂ ಕೆಲಸ ಮಾಡಬೇಕಿದೆ. ಅದಕ್ಕೆ ಅಗತ್ಯವಾದ ಮಾರ್ಗದರ್ಶನವನ್ನು ಪಕ್ಷ ಮಾಡುತ್ತದೆ ಎಂದು ಕುಮಾರಸ್ವಾಮಿ ಅವರು ಮುಖಂಡರಿಗೆ ತಿಳಿಸಿದರು.

JDS leaders meeting in bengaluru party office
ಸಮಾಲೋಚನಾ ಸಭೆ

ಇದೇ ವೇಳೆ ನಾಲ್ಕು ಜಿಲ್ಲೆಗಳ ಶಾಸಕರು, ಮಾಜಿ ಶಾಸಕರು, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳ ಜತೆ ಚರ್ಚೆ ನಡೆಸಿದ ಹೆಚ್​​ಡಿಕೆ, ಅವರ ಸಮಸ್ಯೆಗಳನ್ನು ಅಲಿಸಿದರಲ್ಲದೆ, ಪಕ್ಷ ಸಂಘಟನೆಗೆ ಇರುವ ತೊಡಕುಗಳನ್ನು ನಿವಾರಿಸುವ ನಿಟ್ಟಿನಲ್ಲಿ ಅಗತ್ಯ ಸಲಹೆ ಸೂಚನೆ ನೀಡಿದರು. ನಾಲ್ಕೂ ಜಿಲ್ಲೆಗಳ ಪ್ರತಿ ವಿಧಾನಸಭಾ ಕ್ಷೇತ್ರ ಮತ್ತು ತಾಲೂಕುವಾರು ನಾಯಕರು ಎತ್ತಿದ ಸಮಸ್ಯೆಗಳಿಗೆ ಪರಿಹಾರವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ, ಕೆಲ ಭಾಗದ ಮುಖಂಡರಿಗೆ ಖಡಕ್ಕಾಗಿ ನಿರ್ದೇಶನಗಳನ್ನು ಕೊಟ್ಟರೆ, ಕೆಲ ಮುಖಂಡರ ಕಾರ್ಯಶೈಲಿ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು.

ಬಿಕ್ಕಟ್ಟು ದೊಡ್ಡದಾಗಲು ಬಿಡದಿರಿ:

ಅಲ್ಲದೆ, ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿರುವ ಅಭ್ಯರ್ಥಿಗಳ ಗೆಲುವಿಗಾಗಿ ಪ್ರತಿಯೊಬ್ಬ ಕಾರ್ಯಕರ್ತ, ಮುಖಂಡನೂ ಶ್ರದ್ಧೆ, ಬದ್ಧತೆಯಿಂದ ಕೆಲಸ ಮಾಡಬೇಕಾಗುತ್ತದೆ. ಈ ಮೂಲಕ 2023ಕ್ಕೆ ಸ್ವತಂತ್ರ ಸರ್ಕಾರವನ್ನು ತರಲು ಎಲ್ಲರೂ ಶ್ರಮಿಸಬೇಕು. ತಳಮಟ್ಟದಿಂದ ಪಕ್ಷದ ಮೇಲ್ಮಟ್ಟದವರೆಗೂ ಒಗ್ಗಟ್ಟು ಎನ್ನುವುದು ಬಹಳ ಮುಖ್ಯ. ಪ್ರತಿ ಸಮಸ್ಯೆಯನ್ನು ಆಯಾ ಮಟ್ಟದಲ್ಲೇ ಬಗೆಹರಿಸಿಕೊಳ್ಳಬೇಕು. ಬಿಕ್ಕಟ್ಟು ದೊಡ್ಡದಾಗಲು ಬಿಡಬಾರದು ಎಂದು ಮುಖಂಡರಿಗೆ ಕುಮಾರಸ್ವಾಮಿ ಅವರು ತಾಕೀತು ಮಾಡಿದರು.

ನೇಮಕಾತಿ ಆದೇಶ:

ಇದೇ ವೇಳೆ ಶಿವಮೊಗ್ಗ ಜಿಲ್ಲಾ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಅವರು ನೇಮಕವಾಗಿದ್ದು, ಅವರಿಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ನೇಮಕಾತಿ ಆದೇಶ ನೀಡಿದರು.

ಚಿಕ್ಕಮಗಳೂರು, ಶಿವಮೊಗ್ಗ ಸಭೆಯಲ್ಲಿ ಮಾಜಿ ಸಚಿವ ಬಿ.ಬಿ. ನಿಂಗಯ್ಯ, ಚಿಕ್ಕಮಗಳೂರು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಅಜಿತ್ ರಂಜನ್, ಜಿಲ್ಲಾ ಮಾಜಿ ಅಧ್ಯಕ್ಷ ಶ್ರೀಕಾಂತ್, ವಿಧಾನ ಪರಿಷತ್ ಸದಸ್ಯರಾದ ತಿಪ್ಪೇಸ್ವಾಮಿ, ಮುಖಂಡರಾದ ಜ್ವಾಲನಯ್ಯ, ವೆಂಕಟೇಶ್, ಕೆ.ಎಲ್. ರಾಮಕೃಷ್ಣ ಮುಂತಾದವರು ಪಾಲ್ಗೊಂಡಿದ್ದರು.

ಇದನ್ನೂ ಓದಿ: ECG ಹೆಸರಲ್ಲಿ ಯವತಿ ನಗ್ನ ವಿಡಿಯೋ: ತನಿಖೆಗಿಳಿದ ಪೊಲೀಸರಿಗೆ ಬಿಗ್​​​​​ ಶಾಕ್​!

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.