ETV Bharat / state

ಬಿಬಿಎಂಪಿ ಚುನಾವಣೆಗೆ ಜೆಡಿಎಸ್​ ಸಿದ್ಧತೆ: ಇಂದು ಪೂರ್ವಭಾವಿ ಸಭೆ - ಬಿಬಿಎಂಪಿ ಚುನಾವಣೆ

ಬಿಬಿಎಂಪಿ ಚುನಾವಣೆ ಘೋಷಣೆಯಾಗುವ ಮೊದಲೇ ಜೆಡಿಎಸ್ ಸಿದ್ಧತೆ ಮಾಡಿಕೊಳ್ಳಲು ಮುಂದಾಗಿದ್ದು, ಇಂದು ಪಕ್ಷದ ಪ್ರಮುಖ ನಾಯಕರ ಸಭೆ ಕರೆದಿದೆ.

JDS leaders meeting
ಜೆಡಿಎಸ್​ ನಾಯಕರ ಸಭೆ
author img

By

Published : Jun 3, 2021, 7:12 AM IST

ಬೆಂಗಳೂರು: ಪಕ್ಷ ಸಂಘಟನೆ ಮತ್ತು ಮುಂಬರುವ ಬಿಬಿಎಂಪಿ ಚುನಾವಣಾ ಸಿದ್ಧತೆ ಕುರಿತು ಚರ್ಚಿಸುವ ಸಲುವಾಗಿ ಇಂದು ಜೆಡಿಎಸ್ ಪೂರ್ವಭಾವಿ ಸಭೆ ಕರೆದಿದೆ.

ಜೆಡಿಎಸ್​ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಸಭೆ ನಡೆಯಲಿದೆ. ಕೋವಿಡ್ ಸಂಕಷ್ಟದ ಸಮಯಲ್ಲಿ ಪಕ್ಷ ಸಂಘಟನೆ ಹೇಗೆ ಮಾಡಬೇಕು ಹಾಗೂ ಬಿಬಿಎಂಪಿ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಬಗ್ಗೆ ಸಮಾಲೋಚನೆ ನಡೆಸಲಾಗುತ್ತದೆ ಎಂದು ತಿಳಿದು ಬಂದಿದೆ.

ಬಿಬಿಎಂಪಿ ಚುನಾವಣೆ ಘೋಷಣೆಯಾಗುವವರೆಗೂ ಕಾಯದೇ ಈಗಿನಿಂದಲೇ ಚುನಾವಣಾ ಪೂರ್ವ ಸಿದ್ಧತೆಯಲ್ಲಿ ತೊಡಗಿಕೊಳ್ಳುವಂತೆ ಜೆಡಿಎಸ್ ವರಿಷ್ಠರು, ಮುಖಂಡರು ಹಾಗೂ ಕಾರ್ಯಕರ್ತರಿಗೆ ಸಲಹೆ ನೀಡಿದ್ದಾರೆ. ಎರಡು ರಾಷ್ಟ್ರೀಯ ಪಕ್ಷಗಳನ್ನು ಎದುರಿಸಿ ಪಕ್ಷವನ್ನು ಬಲಗೊಳಿಸಬೇಕಾಗಿದೆ ಎಂದು ನಿನ್ನೆಯಷ್ಟೇ ಹೆಚ್.ಡಿ.ದೇವೇಗೌಡರು ಹೇಳಿದ್ದರು. ಅದರ ಬೆನ್ನಲ್ಲೇ ಈ ಸಭೆ ಕರೆಯಲಾಗಿದ್ದು, ಜೆಡಿಎಸ್ ಅಧಿಕಾರದಲ್ಲಿದ್ದ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಗೆ ನೀಡಿರುವ ಕೊಡುಗೆಗಳನ್ನು ಜನರಿಗೆ ಮನವರಿಕೆ ಮಾಡುಕೊಟ್ಟು ಪಕ್ಷ ಸಂಘಟನೆ ಚುರುಕುಗೊಳಿಸುವ ಬಗ್ಗೆ ಪಕ್ಷದ ವರಿಷ್ಠರು ಸಭೆಯಲ್ಲಿ ನಿರ್ದೇಶನ ನೀಡುವ ಸಾಧ್ಯತೆಯಿದೆ.

ರಾಜ್ಯಸಭಾ ಮಾಜಿ ಸದಸ್ಯ ಕುಪೇಂದ್ರ ರೆಡ್ಡಿ, ಬೆಂಗಳೂರು ನಗರ ಜೆಡಿಎಸ್ ಅಧ್ಯಕ್ಷ ಆರ್.ಪ್ರಕಾಶ್, ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಆರ್.ಮಂಜುನಾಥ್, ವಿಧಾನ ಪರಿಷತ್ ಸದಸ್ಯರಾದ ತಿಪ್ಪೇಸ್ವಾಮಿ, ರಮೇಶಗೌಡ, ಪರಿಷತ್​ ಮಾಜಿ ಸದಸ್ಯ ಟಿ.ಎ.ಶರವಣ ಸೇರಿದಂತೆ ಬೆಂಗಳೂರು ನಗರದ ಜೆಡಿಎಸ್ ಮುಖಂಡರು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಓದಿ : ಜನರು ಪ್ರಾಣಕ್ಕಾಗಿ ಭಿಕ್ಷೆ ಬೇಡಿದರೆ, ಸರ್ಕಾರ ಅಧಿಕಾರಕ್ಕಾಗಿ ಭಿಕ್ಷೆ ಬೇಡುತ್ತಿದೆ: ಡಿಕೆಶಿ ವಾಗ್ದಾಳಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.