ETV Bharat / state

ಕಾಂಗ್ರೆಸ್​ನತ್ತ ಮುಖ ಮಾಡುತ್ತಿರುವ ಜೆಡಿಎಸ್ ಶಾಸಕರು, ಮುಖಂಡರು?

ಜಿಡಿಎಸ್​ ಸತತವಾಗಿ ಚುನಾವಣೆಯಲ್ಲಿ ಸೋಲು ಅನುಭವಿಸುತ್ತಿದೆ. ಇತ್ತ ಪಕ್ಷ ಸಂಘಟನೆಗೆ ಜೆಡಿಎಸ್​ ವರಿಷ್ಠರು ಮುಂದಾಗಿದ್ದಾರೆ. ಅದ್ರೆ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವ ವಾತಾವರಣ ಸೃಷ್ಟಿಯಾಗುತ್ತಿದೆ. ಇದಕ್ಕೆ ನಿದರ್ಶನ ಎನ್ನುವಂತೆ ಶಾಸಕ ಜಿ.ಟಿ. ದೇವೇಗೌಡ ಮತ್ತು ಕೋಲಾರದ ಶ್ರೀನಿವಾಸಗೌಡ, ವಿಧಾನಪರಿಷತ್​ ಸದಸ್ಯ ಬೆಮೆಲ್ ಕಾಂತರಾಜ್​ ಸೇರಿದಂತೆ ಇತರೆ ನಾಯಕರು, ಶಾಸಕರು​ ಕಾಂಗ್ರೆಸ್​ ಕದತಟ್ಟಿದ್ದಾರೆ.

jds-mals-and-leaders-joing-congress
ಕಾಂಗ್ರೆಸ್​ ಜೆಡಿಎಸ್​
author img

By

Published : Sep 9, 2021, 4:38 PM IST

ಬೆಂಗಳೂರು: ಒಂದೆಡೆ ತಳಮಟ್ಟದಿಂದ ಪಕ್ಷ ಸಂಘಟನೆಗೆ ಜೆಡಿಎಸ್ ವರಿಷ್ಠರು ಸಿದ್ಧತೆ ಮಾಡಿಕೊಳ್ಳುತ್ತಿದ್ದರೆ, ಮತ್ತೊಂದೆಡೆ ಶಾಸಕರು, ಕೆಲವು ಮುಖಂಡರು ಪಕ್ಷ ಬಿಡಲು ತಯಾರಿ ನಡೆಸುತ್ತಿದ್ದಾರೆ. ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾದ ಜಿ.ಟಿ. ದೇವೇಗೌಡ, ಕೋಲಾರದ ಶ್ರೀನಿವಾಸಗೌಡ, ವಿಧಾನಪರಿಷತ್ ಸದಸ್ಯ ಬೆಮೆಲ್ ಕಾಂತರಾಜ್ ಸೇರಿದಂತೆ ಹಲವು ಜೆಡಿಎಸ್ ಮುಖಂಡರು ಈಗಾಗಲೇ ಕಾಂಗ್ರೆಸ್ ಕದ ತಟ್ಟಿದ್ದಾರೆ. ಜೆಡಿಎಸ್​ನಲ್ಲಿ ಎಲ್ಲವೂ ಸರಿಯಿಲ್ಲ ಎಂಬುದಕ್ಕೆ ಇದೊಂದು ನಿದರ್ಶನ.

ಜೆಡಿಎಸ್ ನ ಮಾಜಿ ವಿಧಾನಪರಿಷತ್ ಸದಸ್ಯ ಇ. ಕೃಷ್ಣಪ್ಪ, ಕಳೆದ ಚುನಾವಣೆಯಲ್ಲಿ ಕನಕಪುರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಡಿ. ಕೆ. ಶಿವಕುಮಾರ್ ವಿರುದ್ಧ ಸ್ಪರ್ಧಿಸಿದ್ದ ವಿಶ್ವನಾಥ್ ಅವರು ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ಸಮಾಲೋಚನೆ ನಡೆಸಿರುವುದು ಕುತೂಹಲ ಮೂಡಿಸಿದೆ. "ನಾನು ಜೆಡಿಎಸ್‌ನಲ್ಲಿ ಇದ್ದಾಗಲೇ ಬೆಮಲ್‌ ಕಾಂತರಾಜ್‌ ಯಾರೆಂದು' ಹೆಚ್. ಡಿ. ಕುಮಾರಸ್ವಾಮಿ ಅವರು ಪ್ರಶ್ನೆ ಮಾಡಿದ ಮೇಲೆ ನಾನು ಅವರಿಗೆ ಗೊತ್ತಿಲ್ಲವೆಂದೇ ಅರ್ಥ ತಾನೇ. ಹಾಗಾಗಿ ನಾನು ಕಾಂಗ್ರೆಸ್‌ ಸೇರುತ್ತಿದ್ದೇನೆ " ಎಂದು ವಿಧಾನ ಪರಿಷತ್‌ ಸದಸ್ಯ ಬೆಮೆಲ್‌ ಕಾಂತರಾಜ್‌ ಬಹಿರಂಗವಾಗಿಯೇ ಹೇಳಿದ್ದಾರೆ. ಹತ್ತಾರು ವರ್ಷಗಳ ಕಾಲ ನಾನು ಜೆಡಿಎಸ್‌ ನಲ್ಲಿ ಇದ್ದು, ಪಕ್ಷ ಸಂಘಟನೆ ಮಾಡಿದೆ. ನಾನು ವಿಧಾನ ಪರಿಷತ್‌ ಸದಸ್ಯನಾಗಿ ಆಯ್ಕೆಯಾಗಿರುವುದು ಸಹ ಕುಮಾರಸ್ವಾಮಿಯವರಿಗೆ ಗೊತ್ತಿಲ್ಲವೆಂದ ಮೇಲೆ ನಾನ್ಯಾಕೆ ಜೆಡಿಎಸ್‌ನಲ್ಲಿರಬೇಕು ಎಂದು ಪ್ರಶ್ನಿಸಿದ್ದಾರೆ.

ಮಾಜಿ ಸಚಿವ ಜಿ.ಟಿ.ದೇವೇಗೌಡ ಅವರು ಕುಮಾರಸ್ವಾಮಿ ಅವರ ನಡೆಗೆ ಮುನಿಸಿಕೊಂಡು ತಟಸ್ಥರಾಗಿರುವುದು ಗೊತ್ತಿರುವ ಸಂಗತಿ. ಇದೀಗ ಕಾಂಗ್ರೆಸ್​ಗೆ ಸೇರುವುದಾಗಿ ಘೋಷಣೆ ಮಾಡಿದ್ದಾರೆ. ಇದಕ್ಕೂ ಮುನ್ನ ಜೆಡಿಎಸ್​ನ ರಾಜ್ಯ ಯುವ ಘಟಕದ ಅಧ್ಯಕ್ಷರಾಗಿದ್ದ ಮಧು ಬಂಗಾರಪ್ಪ ಸಹ ಜೆಡಿಎಸ್ ತೊರೆದು ಕಾಂಗ್ರೆಸ್ ಗೆ ಸೇರಿದ್ದಾರೆ. ಜಿ.ಟಿ. ದೇವೇಗೌಡ ಘೋಷಣೆ ಮಾಡಿದ ಬೆನ್ನಲ್ಲೇ ಮೈಸೂರು ಜಿಲ್ಲೆಯ ಮತ್ತಿಬ್ಬರು ಶಾಸಕರು ಕಾಂಗ್ರೆಸ್ ಸೇರಲು ತುದಿಗಾಲಮೇಲೆ ನಿಂತಿದ್ದಾರೆ.

ಕಾಂಗ್ರೆಸ್ ಬಾಗಿಲು ತಟ್ಟಿರುವ ಟಿ.ನರಸೀಪುರ ಶಾಸಕ ಅಶ್ವಿನ್ ಹಾಗೂ ಪಿರಿಯಾಪಟ್ಟಣ ಶಾಸಕ ಮಹಾದೇವ್ ಅವರು, ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜೊತೆ ಈಗಾಗಲೇ ಎರಡು ಸುತ್ತಿನ ಚರ್ಚೆಯನ್ನೂ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಈ ಇಬ್ಬರಿಗೆ ಮುಂದಿನ ಚುನಾವಣೆಯಲ್ಲಿ ಟಿಕೆಟ್ ನೀಡುವ ಬಗ್ಗೆ ಇನ್ನೂ ಭರವಸೆ ಸಿಕ್ಕಿಲ್ಲ ಎಂದು ಹೇಳಲಾಗುತ್ತಿದೆ. ಗುಬ್ಬಿ ಶಾಸಕ ಶ್ರೀನಿವಾಸ್ ಸಹ ಕಾಂಗ್ರೆಸ್ ಸೇರಲು ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ ಎನ್ನಲಾಗ್ತಿದೆ.

ಕೋಲಾರದ ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವ ಬಗ್ಗೆ ಚಿಂತನೆ ನಡೆಸಿದ್ದಾರೆ. ಈಗಾಗಲೇ ಕಾಂಗ್ರೆಸ್ ಹಿರಿಯ ನಾಯಕ ರಮೇಶ್ ಕುಮಾರ್ ಜೊತೆ ಮಾತುಕತೆ ಮುಗಿಸಿದ್ದು, ಸಮಯ ನೋಡಿಕೊಂಡು ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ‌. ಜೆಡಿಎಸ್ ನಲ್ಲಿ ಸಾಕಷ್ಟು ಅಸಮಾಧಾನ ಇದೆ ಎಂಬುದು ಖಚಿತ ಸುಳಿವು ಅರಿತ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಅಸಮಾಧಾನ ಶಮನಕ್ಕೆ ಮುಂದಾಗಿದ್ದು, ಅದು ಎಷ್ಟರಮಟ್ಟಿಗೆ ಯಶಸ್ವಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಬಹುತೇಕ ಶಾಸಕರು ಕುಮಾರಸ್ವಾಮಿ ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಾವ ಕಾರಣಕ್ಕೆ ಶಾಸಕರು ಅಸಮಾಧಾನಗೊಂಡಿದ್ದಾರೆ ಎಂಬುದು ನಿಗೂಢವಾಗಿದೆ. ಆದರೆ, ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.