ETV Bharat / state

ದೇವೇಗೌಡರ ಅಧ್ಯಕ್ಷತೆಯಲ್ಲಿ ಡಿ.9ರಂದು ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ - ರಾಷ್ಟ್ರೀಯ ಕಾರ್ಯಕಾರಿಣಿ

ಮುಂದಿನ ಲೋಕಸಭೆ ಚುನಾವಣೆ, ಬಿಬಿಎಂಪಿ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ, ಎನ್​​​ಡಿಎ ಮೈತ್ರಿಕೂಟ ಸೇರ್ಪಡೆ, ಪಕ್ಷ ಸಂಘಟನೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಜೆಡಿಎಸ್ ಮುಖಂಡರು ತಿಳಿಸಿದ್ದಾರೆ.

jds party
ಜೆಡಿಎಸ್​
author img

By ETV Bharat Karnataka Team

Published : Dec 6, 2023, 10:35 PM IST

ಬೆಂಗಳೂರು: ಜೆಡಿಎಸ್ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಡಿಸೆಂಬರ್ 9ರಂದು ನಗರದ ಜೆ.ಪಿ.ಭವನದಲ್ಲಿ ನಡೆಯಲಿದೆ. ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಪಕ್ಷದ ಶಾಸಕರು, ಸಂಸದರು ಹಾಗೂ ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರಿಗೂ ಆಹ್ವಾನ ನೀಡಲಾಗಿದೆ.

ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಸಿ.ಎಂ.ಇಬ್ರಾಹಿಂ ಅವರನ್ನು ಪಕ್ಷದಿಂದ ಅಮಾನತು ಮಾಡಿದ ನಂತರ ನಡೆಯುತ್ತಿರುವ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಇದಾಗಿದೆ. ಕೆಲವು ಮಹತ್ವದ ನಿರ್ಣಯಗಳನ್ನು ಪಕ್ಷ ಕೈಗೊಳ್ಳಲಿದೆ. ಮುಂದಿನ ಲೋಕಸಭೆ ಚುನಾವಣೆ, ಬಿಬಿಎಂಪಿ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಸಿದ್ಧತೆ, ಪಕ್ಷದ ವಿವಿಧ ಘಟಕಗಳ ಪುನಾರಚನೆ, ಎನ್.ಡಿ.ಎ ಮೈತ್ರಿಕೂಟ ಸೇರ್ಪಡೆ, ಪಕ್ಷ ಸಂಘಟನೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಿ ಸೂಕ್ತ ನಿರ್ಣಯ ಕೈಗೊಳ್ಳಲಾಗುತ್ತದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಎನ್‍ಡಿಎ ಮೈತ್ರಿಕೂಟ ಸೇರ್ಪಡೆಯಾಗುವುದಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಸಿ.ಎಂ. ಇಬ್ರಾಹಿಂ ವಿರೋಧ ವ್ಯಕ್ತಪಡಿಸಿ ಪ್ರತ್ಯೇಕ ಸಭೆ ನಡೆಸಿದ್ದರು. ಪಕ್ಷ ವಿರೋಧಿ ಚಟುವಟಿಕೆಗಳ ಮೇಲೆ ಇಬ್ರಾಹಿಂ ಅವರನ್ನು ಕಳೆದ ತಿಂಗಳು ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರು ಪಕ್ಷದಿಂದ ಅಮಾನತು ಮಾಡಿದ್ದಾರೆ.

ಎನ್​ಡಿಎ ಮೈತ್ರಿಯಿಂದ ಹೊರಬರಲು ಗಡುವು: ಈ ನಡುವೆ ಕೇರಳದಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಸಿ ಎನ್‍ಡಿಎ ಮೈತ್ರಿಯಿಂದ ಹೊರ ಬರಲು ದೇವೇಗೌಡರಿಗೆ ಗಡುವು ನೀಡಲಾಗಿತ್ತು. ಈ ಎಲ್ಲಾ ಬೆಳವಣಿಗೆಯ ಹಿನ್ನೆಲೆಯಲ್ಲಿ ಡಿ.9ರಂದು ನಡೆಯುವ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.

ಜೆಡಿಎಸ್ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಸಿ.ಕೆ.ನಾಣು ಅವರು, ದೇವೇಗೌಡರಿಗೆ ಪತ್ರ ಬರೆದು, ಬಿಜೆಪಿಯೊಂದಿಗಿನ ಮೈತ್ರಿಯಿಂದ ಹಿಂದೆ ಸರಿಯಲು ಕೋರಿದ್ದರು. ಈ ಸಂಬಂಧ ರಾಷ್ಟ್ರೀಯ ಕಾರ್ಯಕಾರಿಣಿ ತೀರ್ಮಾನ ಕೈಗೊಂಡಿದ್ದು, ಡಿಸೆಂಬರ್ 9ರೊಳಗೆ ನೀವು ಬಿಜೆಪಿ ಜೊತೆಗಿನ ಮೈತ್ರಿಯನ್ನು ಕಡಿದುಕೊಳ್ಳಬೇಕು. ಈ ಸಂಬಂಧ ಸ್ಪಷ್ಟನೆ ನೀಡದಿದ್ದರೆ, ನಾವು ಮುಂದಿನ ತೀರ್ಮಾನ ಮಾಡುತ್ತೇವೆ ಎಂದು ಹೇಳಿದ್ದರು.

ಇದನ್ನೂಓದಿ: ಏಳನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಪ್ರತಿಪಕ್ಷಗಳ ಪಟ್ಟು: ಭರವಸೆ ಹಿನ್ನೆಲೆ ಧರಣಿ ಹಿಂಪಡೆದ ಬಿಜೆಪಿ-ಜೆಡಿಎಸ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.