ETV Bharat / state

ಸಚಿವ ಸಂಪುಟ ವಿಸ್ತರಣೆ ವಿಳಂಬ ಸರ್ಕಾರದ ವೈಫಲ್ಯದ ಸಂಕೇತ : ರಮೇಶ್ ಬಾಬು ಟೀಕೆ

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದು ಒಂದು ತಿಂಗಳಾದರೂ ಸಚಿವ ಸಂಪುಟ ವಿಸ್ತರಣೆ ಮಾಡಿಲ್ಲ ಇದು ಸರ್ಕಾರದ ವೈಫಲ್ಯದ ಸಂಕೇತ ಎಂದು ಜೆಡಿಎಸ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಷ್ಟ್ರೀಯ ವಕ್ತಾರ ರಮೇಶ್ ಬಾಬು ಟೀಕಿಸಿದ್ದಾರೆ.

ರಮೇಶ್ ಬಾಬು
author img

By

Published : Aug 26, 2019, 8:08 PM IST

ಬೆಂಗಳೂರು : ಬಿ.ಎಸ್. ಯಡಿಯೂರಪ್ಪ ಈ ರಾಜ್ಯದ ಮುಖ್ಯಮಂತ್ರಿ ಆಗಿ ಇಂದಿಗೆ ಒಂದು ತಿಂಗಳು. ಹಿಂದಿನ ಸಮ್ಮಿಶ್ರ ಸರ್ಕಾರದ ಮೇಲೆ ಕಾರಣ ಇಲ್ಲದೇ ಆರೋಪ ಮಾಡುತ್ತಿದ್ದ ಇವರು ಇನ್ನೂ ಪೂರ್ಣ ಪ್ರಮಾಣದ ಸರ್ಕಾರ ರಚನೆ ಮಾಡಲು ಸಾಧ್ಯ ಆಗಿಲ್ಲ. ಇದು ವೈಫಲ್ಯದ ಸಂಕೇತ ಎಂದು ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಷ್ಟ್ರೀಯ ವಕ್ತಾರ ರಮೇಶ್ ಬಾಬು ಟೀಕಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯ ಪ್ರಭುತ್ವದಲ್ಲಿ ಏಕ ಚಕ್ರಾಧಿಪತ್ಯದ ಆಡಳಿತವನ್ನು ನಾವು ಇತಿಹಾಸದಲ್ಲಿ ಓದಿದ್ದೆವು. ಬಿಜೆಪಿ ನಮ್ಮ ರಾಜ್ಯಕ್ಕೆ ಬಿ.ಎಸ್. ಯಡಿಯೂರಪ್ಪ ಅವರ ಏಕ ಚಕ್ರಾಧಿಪತ್ಯದ ಆಡಳಿತವನ್ನು ನೀಡುವ ಮೂಲಕ ಜನತಂತ್ರದಲ್ಲೂ ಇದು ಸಾಧ್ಯ ಎಂದು ರುಜುವಾತು ಮಾಡಿದೆ. ಇದಕ್ಕಾಗಿ ಬಿಜೆಪಿಗೆ ಮತ್ತು ಸಂಘ ಪರಿವಾರಕ್ಕೆ ಅಭಿನಂದನೆಗಳು ಎಂದು ವ್ಯಂಗ್ಯವಾಡಿದ್ದಾರೆ.

ಯಡಿಯೂರಪ್ಪನವರು ಒಂದು ತಿಂಗಳಿಂದ ಏಕ ವ್ಯಕ್ತಿ ಆಡಳಿತದ ಮೂಲಕ ಸಮೃದ್ಧಿಯಾಗಿ ಊಟ ಮಾಡುತ್ತಿದ್ದಾರೆ. ಬಿಜೆಪಿ ಅಥವಾ ಸಂಘ ಪರಿವಾರ ಪೂರ್ಣ ಪ್ರಮಾಣದ ಸಚಿವ ಸಂಪುಟದ ರಚನೆ ಅಥವಾ ಖಾತೆಗಳ ಹಂಚಿಕೆ ಮುಖಾಂತರ ಸಮೃದ್ಧಿಯ ಭೋಜನಕ್ಕೆ ಅಡೆ ತಡೆ ಮಾಡುವುದಿಲ್ಲ ಎಂದು ನಾನು ನಂಬಿರುತ್ತೇನೆ.

ಕರ್ನಾಟಕದ ಸಮಸ್ಯೆಗಳು ಬಿಜೆಪಿ ಪಕ್ಷದ ಆದ್ಯತೆಗಳು ಆಗದೇ ಇರುವುದರಿಂದ ನಮ್ಮ ರಾಜ್ಯದಲ್ಲಿ ಏಕ ಚಕ್ರಾಧಿಪತ್ಯದ ಆಡಳಿತ ಮತ್ತು ಭ್ರಷ್ಟಾಚಾರದ ಮೂಲಕ ಮುಖ್ಯಮಂತ್ರಿಗಳ ಸಮೃದ್ಧ ಭೋಜನ ಯಾರ ಹಂಗೂ ಇಲ್ಲದೇ ನಡೆಯುತ್ತಿದೆ. ಮುಖ್ಯಮಂತ್ರಿಯಾಗಿ ಯಡಿಯೂರಪ್ಪನವರ ಒಂದು ತಿಂಗಳ ಆಡಳಿತ ಇತಿಹಾಸದ ಪುಟಗಳಿಗೆ ಸೇರಿದೆ ಎಂದು ವ್ಯಂಗ್ಯವಾಡಿದ್ದಾರೆ.

Intro:ಬೆಂಗಳೂರು : ಬಿ.ಎಸ್. ಯಡಿಯೂರಪ್ಪ ಈ ರಾಜ್ಯದ ಮುಖ್ಯಮಂತ್ರಿ ಆಗಿ ಇಂದಿಗೆ ಒಂದು ತಿಂಗಳು. ಹಿಂದಿನ ಸಮ್ಮಿಶ್ರ ಸರ್ಕಾರದ ಮೇಲೆ ಕಾರಣ ಇಲ್ಲದೆ ಆರೋಪಗಳನ್ನು ಮಾಡುತ್ತಿದ್ದ ಇವರು ಇನ್ನೂ ಪೂರ್ಣ ಪ್ರಮಾಣದ ಸರ್ಕಾರ ರಚನೆ ಮಾಡಲು ಸಾಧ್ಯ ಆಗದೇ ಇರುವುದು ವೈಫಲ್ಯದ ಸಂಕೇತ ಎಂದು ಜೆಡಿಎಸ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಷ್ಟ್ರೀಯ ವಕ್ತಾರ ರಮೇಶ್ ಬಾಬು ಟೀಕಿಸಿದ್ದಾರೆ.Body:ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ ಪ್ರಭುತ್ವದಲ್ಲಿ ಏಕ ಚಕ್ರಾಧಿಪತ್ಯದ ಆಡಳಿತವನ್ನು ನಾವು ಇತಿಹಾಸದಲ್ಲಿ ಓದಿದ್ದೆವು. ಬಿಜೆಪಿ ನಮ್ಮ ರಾಜ್ಯಕ್ಕೆ ಬಿ.ಎಸ್. ಯಡಿಯೂರಪ್ಪ ಅವರ ಏಕ ಚಕ್ರಾಧಿಪತ್ಯದ ಆಡಳಿತವನ್ನು ನೀಡುವ ಮೂಲಕ ಜನತಂತ್ರದಲ್ಲೂ ಇದು ಸಾಧ್ಯ ಎಂದು ರುಜುವಾತು ಮಾಡಿದೆ. ಇದಕ್ಕಾಗಿ ಬಿಜೆಪಿಗೆ ಮತ್ತು ಸಂಘ ಪರಿವಾರಕ್ಕೆ ಅಭಿನಂದನೆಗಳು ಎಂದು ವ್ಯಂಗ್ಯವಾಡಿದ್ದಾರೆ.
ಯಡಿಯೂರಪ್ಪನವರು ಒಂದು ತಿಂಗಳಿಂದ ಏಕ ವ್ಯಕ್ತಿ ಆಡಳಿತದ ಮೂಲಕ ಸಮೃದ್ಧಿಯಾಗಿ ಊಟ ಮಾಡುತ್ತಿದ್ದಾರೆ. ಬಿಜೆಪಿ ಅಥವಾ ಸಂಘ ಪರಿವಾರ ಪೂರ್ಣ ಪ್ರಮಾಣದ ಸಚಿವ ಸಂಪುಟದ ರಚನೆ ಅಥವಾ ಖಾತೆಗಳ ಹಂಚಿಕೆ ಮುಖಾಂತರ ಅವರ ಸಮೃದ್ಧಿಯ ಭೋಜನಕ್ಕೆ ಅಡೆ ತಡೆ ಮಾಡುವುದಿಲ್ಲ ಎಂದು ನಾನು ನಂಬಿರುತ್ತೇನೆ. ಕರ್ನಾಟಕದ ಸಮಸ್ಯೆಗಳು ಬಿಜೆಪಿ ಪಕ್ಷದ ಆದ್ಯತೆಗಳು ಆಗದೇ ಇರುವುದರಿಂದ ನಮ್ಮ ರಾಜ್ಯದಲ್ಲಿ ಏಕ ಚಕ್ರಾಧಿಪತ್ಯದ ಆಡಳಿತ ಮತ್ತು ಭ್ರಷ್ಟಾಚಾರದ ಮೂಲಕ ಮುಖ್ಯಮಂತ್ರಿಗಳ ಸಮೃದ್ಧ ಭೋಜನ ಯಾರ ಹಂಗೂ ಇಲ್ಲದೆ ನಡೆಯುತ್ತಿದೆ. ಮುಖ್ಯಮಂತ್ರಿಯಾಗಿ ಯಡಿಯೂರಪ್ಪನವರ ಒಂದು ತಿಂಗಳ ಆಡಳಿತ ಇತಿಹಾಸದ ಪುಟಗಳಿಗೆ ಸೇರಿದೆ ಎಂದು ಹೇಳಿದ್ದಾರೆ.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.