ಬೆಂಗಳೂರು: ಜೆಡಿಎಸ್ ಪಕ್ಷದ ಬಲವರ್ಧನೆ ಮತ್ತು ಪಕ್ಷದ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರನ್ನು ಅಭಿನಂದಿಸಲು ಫೆಬ್ರವರಿ 14ರಂದು ನಗರದ ಅರಮನೆ ಮೈದಾನದಲ್ಲಿ ಸಮಾವೇಶ ಆಯೋಜಿಸಲಾಗಿದೆ.
ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ಅಂದು ಬೆಳಗ್ಗೆ 11 ಗಂಟೆಗೆ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಸಮಾವೇಶ ನಡೆಯಲಿದೆ.
ಇದನ್ನೂ ಓದಿ: ಕೋವಿಡ್ ಸುರಕ್ಷತಾ ಕ್ರಮಗಳ ಷರತ್ತಿನೊಂದಿಗೆ ಜಾತ್ರೆ, ಉತ್ಸವಗಳಿಗೆ ಅನುಮತಿ
ತಳಮಟ್ಟದಿಂದ ಪಕ್ಷ ಸದೃಢಗೊಳಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಸದಸ್ಯರನ್ನು ಉದ್ದೇಶಿಸಿ ಹೆಚ್.ಡಿ. ದೇವೇಗೌಡರು ಮಾತನಾಡಲಿದ್ದು, ಮುಂಬರುವ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಕುರಿತು ಸಹ ಸಮಾವೇಶದಲ್ಲಿ ಮಾರ್ಗದರ್ಶನ ನೀಡಲಿದ್ದಾರೆ. ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಸೇರಿದಂತೆ ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ.
ಪಕ್ಷದ ಮಾಜಿ ಹಾಗೂ ಹಾಲಿ ಜನಪ್ರತಿನಿಧಿಗಳು ಮತ್ತು ವಿವಿಧ ಘಟಕಗಳ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.