ETV Bharat / state

ನನಗೆ ಜನರು 123 ಕ್ಷೇತ್ರ ಕೊಡಲಿಲ್ಲ, ಪಕ್ಷ ವಿಸರ್ಜನೆ ಮಾಡುವುದಿಲ್ಲ: ಟೀಕಾಕಾರರಿಗೆ ಹೆಚ್‌ಡಿಕೆ ತಿರುಗೇಟು - ವಿಧಾನಸಭೆ ಚುನಾವಣೆ

ಜೆಡಿಎಸ್ ಪಕ್ಷದ ವಿರುದ್ಧದ ಟೀಕೆಗಳಿಗೆ ಮಾಜಿ ಸಿಎಂ ಕುಮಾರಸ್ವಾಮಿ ಗರಂ ಆಗಿ ಪ್ರತಿಕ್ರಿಯಿಸಿದ್ದಾರೆ.

Former CM Kumaraswamy
ಮಾಜಿ ಸಿಎಂ ಕುಮಾರಸ್ವಾಮಿ
author img

By

Published : May 31, 2023, 10:09 AM IST

Updated : May 31, 2023, 10:22 AM IST

ಬೆಂಗಳೂರು: ಕೆಲವರ ವಿವೇಕರಹಿತ ಹೇಳಿಕೆಗಳಿಗೆ ಉತ್ತರಿಸುವುದು ಬೇಡವೆಂದು ಭಾವಿಸಿದ್ದೆ. ನಾನು ಚುನಾವಣೆಯಲ್ಲಿ ಸೋತ ನೋವಿನಲ್ಲಿದ್ದೇನೆ. ಕಾಂಗ್ರೆಸ್​ನವರು ಗೆದ್ದ ಅಹಂನಲ್ಲಿ ಇದ್ದಾರೆ. ಅಹಂ ಅಳಿಯುತ್ತದೆ ಅನ್ನುವ ಕನಿಷ್ಠ ಅರಿವು ಕೂಡಾ ಅವರಿಗೆ ಇದ್ದಂತಿಲ್ಲ. ಆ ಅರಿವು ಬರುವ ಕಾಲವೂ ದೂರವಿಲ್ಲ. ಕಾಯುವ ತಾಳ್ಮೆ ನನಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

  • ಕೆಲವರ ವಿವೇಕರಹಿತ ಹೇಳಿಕೆಗಳಿಗೆ ಉತ್ತರಿಸುವುದು ಬೇಡ ಭಾವಿಸಿದ್ದೆ. ನಾನು ಸೋತ ನೋವಿನಲ್ಲಿದ್ದೇನೆ. ಕಾಂಗ್ರೆಸ್ ನವರು ಗೆದ್ದ ಅಹಂನಲ್ಲಿ ಇದ್ದಾರೆ. ಅಹಂ ಅಳಿಯುತ್ತದೆ ಅನ್ನುವ ಕನಿಷ್ಠ ಅರಿವು ಅವರಿಗೆ ಇದ್ದಂತೆ ಇಲ್ಲ. ಆ ಅರಿವು ಬರುವ ಕಾಲವೂ ದೂರವಿಲ್ಲ. ಕಾಯುವ ತಾಳ್ಮೆ ನನಗಿದೆ. 1/6

    — ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 31, 2023 " class="align-text-top noRightClick twitterSection" data=" ">

ಟ್ವೀಟ್ ಮಾಡಿರುವ ಅವರು, ವಿಧಾನಸಭೆ ಚುನಾವಣೆಯಲ್ಲಿ ಸೋತರೆ ಜೆಡಿಎಸ್‌ ಪಕ್ಷವನ್ನು ವಿಸರ್ಜನೆ ಮಾಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದರು. ಅವರು ಯಾವಾಗ ವಿಸರ್ಜನೆ ಮಾಡುತ್ತಾರೆ? ಪಕ್ಷಕ್ಕೆ ಯಾವಾಗ ಅಂತಿಮ ಸಂಸ್ಕಾರ ಮಾಡುತ್ತಾರೆ? ಎಂದು ಕೆಲವು ಅರೆಬೆಂದ ಸಚಿವರು, ಶಾಸಕರು ಸಲ್ಲದ ಹೇಳಿಕೆಗಳನ್ನು ನೀಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಅವರೆಲ್ಲರ ಅಜ್ಞಾನಕ್ಕೆ ನನ್ನ ಪ್ರಗಾಢ ಸಾಂತ್ವನವಿದೆ. ಅವರ ಕನ್ನಡ ಭಾಷಾಜ್ಞಾನದ ಬಗ್ಗೆ ಕಾಳಜಿ ಇದೆ. ಆ ಮಹಾಶಯರು ನನ್ನ ಹೇಳಿಕೆಗಳನ್ನೊಮ್ಮೆ ತಿಳಿಯಲಿ. ಪತ್ರಿಕೆಗಳಲ್ಲಿ ಪ್ರಕಟವಾಗಿವೆ, ಸುದ್ದಿವಾಹಿನಿಗಳಲ್ಲಿ ಪ್ರಸಾರವಾಗಿವೆ. ಕನ್ನಡ ಓದಲು ಬಾರದಿದ್ದರೆ ನನ್ನ ಬಳಿ ಬರಲಿ, ಮನದಟ್ಟು ಆಗುವ ರೀತಿ ಹೇಳುತ್ತೇನೆ. ಕನ್ನಡವನ್ನೂ ಕಲಿಸುತ್ತೇನೆ ಎಂದಿದ್ದಾರೆ.

  • ಪಕ್ಷ ವಿಸರ್ಜನೆ, ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರಹೀನರಿಗೆ ಹೇಳುವುದು ಇಷ್ಟೇ. ನನಗೆ 123 ಸೀಟು ಬಂದಿಲ್ಲ, ಪಂಚರತ್ನ ಜಾರಿಗೆ ಜನರು ಅವಕಾಶವನ್ನೂ ಕೊಟ್ಟಿಲ್ಲ, ಹಾಗಾಗಿ ಪಕ್ಷವನ್ನು ವಿಸರ್ಜನೆ ಮಾಡುವುದೂ ಇಲ್ಲ. ಇನ್ನೇನಾದರೂ ಅನುಮಾನ ಇದ್ದವರು ಬರಲಿ, ಅಂಥವರ ಅಜ್ಞಾನ ಹೋಗಲಾಡಿಸುತ್ತೇನೆ.6/6

ನನಗೆ 123 ಕ್ಷೇತ್ರಗಳನ್ನು ಕೊಟ್ಟರೆ ನಾನು ಭರವಸೆ ಕೊಟ್ಟಂತೆ ಪಂಚರತ್ನ ಯೋಜನೆಗಳನ್ನು ಜಾರಿ ಮಾಡದಿದ್ದರೆ ಜೆಡಿಎಸ್ ಪಕ್ಷವನ್ನು ವಿಸರ್ಜನೆ ಮಾಡುತ್ತೇನೆ. ಆಮೇಲೆ ಎಂದೂ ವೋಟು ಕೇಳಲು ನಿಮ್ಮ ಮನೆ ಬಾಗಿಲಿಗೆ ಬರುವುದಿಲ್ಲ ಎಂದು ಜನರಿಗೆ ಹೇಳಿದ್ದು ಹೌದು. ಚುನಾವಣೆ ಫಲಿತಾಂಶ ಬಂದಿದೆ, ನನಗೆ ಜನರು 123 ಕ್ಷೇತ್ರ ಕೊಡಲಿಲ್ಲ. ಈಗ ಪಂಚರತ್ನ ಜಾರಿ ಹಾಗೂ ಪಕ್ಷ ವಿಸರ್ಜನೆ ಪ್ರಶ್ನೆ ಎಲ್ಲಿ? ಸಾಮಾನ್ಯಜ್ಞಾನವೇ ಇಲ್ಲದ ಸಚಿವರಿಗೆ ಈ ಪರಿ ಅಜ್ಞಾನವಿದೆ ಎಂದು ನಾನಂತೂ ಎಣಿಸಿರಲಿಲ್ಲ. ಇಷ್ಟು ಅವಿವೇಕವುಳ್ಳ ಇವರ ಮುಂದಿನ ಆಡಳಿತದ ಈಗಲೇ ಆತಂಕವಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪಕ್ಷ ವಿಸರ್ಜನೆ, ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರಹೀನರಿಗೆ ಹೇಳುವುದು ಇಷ್ಟೇ. ನನಗೆ 123 ಸೀಟು ಬಂದಿಲ್ಲ, ಪಂಚರತ್ನ ಜಾರಿಗೆ ಜನರು ಅವಕಾಶವನ್ನೂ ಕೊಟ್ಟಿಲ್ಲ, ಹಾಗಾಗಿ ಪಕ್ಷವನ್ನು ವಿಸರ್ಜನೆ ಮಾಡುವುದೂ ಇಲ್ಲ. ಇನ್ನೇನಾದರೂ ಅನುಮಾನ ಇದ್ದವರು ಬರಲಿ, ಅಂಥವರ ಅಜ್ಞಾನ ಹೋಗಲಾಡಿಸುತ್ತೇನೆ ಎಂದು ಗುಡುಗಿದ್ದಾರೆ.

  • ನಾವು ಅರ್ಹ ಫಲಾನುಭವಿಗಳಿಗೆ ನಮ್ಮ ಗ್ಯಾರಂಟಿಗಳನ್ನು ಜಾರಿಗೊಳಿಸುವುದು ನಿಶ್ಚಿತ.

    ಕುಮಾರಸ್ವಾಮಿಯವರೇ, ಆ ಚಿಂತೆ ಬಿಡಿ.
    ಜೆಡಿಎಸ್ ಪಕ್ಷದ ವಿಸರ್ಜನಾ ಕಾರ್ಯಕ್ರಮದ ಮುಹೂರ್ತ ಯಾವಾಗ ಹೇಳಿ!? pic.twitter.com/jrEyzq4hIE

    — Karnataka Congress (@INCKarnataka) May 25, 2023 " class="align-text-top noRightClick twitterSection" data=" ">

ಸುಳ್ಳು ಗ್ಯಾರೆಂಟಿ ಆಮಿಷ ನೀಡಿ ಅಧಿಕಾರಕ್ಕೆ​: ಕಾಂಗ್ರೆಸ್ ಪಕ್ಷ ವ್ಯವಸ್ಥಿತವಾಗಿ ಅಪಪ್ರಚಾರ ನಡೆಸಿತು. ಸುಳ್ಳು ಗ್ಯಾರಂಟಿಗಳು ಹಾಗೂ ಕೂಪನ್‌ಗಳನ್ನು ಕೊಟ್ಟು ಜನರಿಗೆ ವಂಚಿಸಿ ಅಧಿಕಾರಕ್ಕೆ ಬಂದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮದೇ ಕುತಂತ್ರಗಾರಿಕೆ ಮಾಡಿದರು. ಅವರ ಪಕ್ಷದವರು ಒಂದು ಸಮುದಾಯ ನಮ್ಮ ವಿರುದ್ಧ ಎತ್ತಿ ಕಟ್ಟಿದರು ಎಂದು ಟೀಕಾಪ್ರಹಾರ ನಡೆಸಿದ್ದಾರೆ.

ಮುಂದಿನ ಲೋಕಸಭೆ ಚುನಾವಣೆ ಫಲಿತಾಂಶದ ಮೇಲೆ ಈ ಸರಕಾರದ ಭವಿಷ್ಯ ನಿಂತಿದೆ. ಈ ಸರಕಾರ ಇರಬಹುದು ಅಥವಾ ಹೋಗಬಹುದು. ನಾನೇನೂ ಭವಿಷ್ಯ ಹೇಳುತ್ತಿಲ್ಲ, ಆ ನಂತರ ಏನೆಲ್ಲ ಬೆಳೆವಣಿಗೆ ನಡೆಯುತ್ತಿದೆಯೋ ಗೊತ್ತಿಲ್ಲ. ಏನು ಬೇಕಾದರೂ ಆಗಬಹುದು ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂಓದಿ: ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್ಐಎ ದಾಳಿ

Last Updated : May 31, 2023, 10:22 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.