ETV Bharat / state

ಹಾಸನದಲ್ಲಿ ಕಣಕ್ಕಿಳಿಯಲಿದ್ದಾರಾ ಭವಾನಿ ರೇವಣ್ಣ​? ಜೆಡಿಎಸ್​ ಚುನಾವಣೆ ಲೆಕ್ಕಾಚಾರ ಏನು?

author img

By

Published : Feb 11, 2023, 2:40 PM IST

ಭವಾನಿ ರೇವಣ್ಣ ಹಾಸನದಲ್ಲಿ ಸ್ಪರ್ಧಿಸಲಿದ್ದಾರಾ? ಎಂಬ ಪ್ರಶ್ನೆ ಕುತೂಹಲ ಮೂಡಿಸಿದೆ. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕೆಲವೊಂದು ನಿರ್ಧಾರಗಳನ್ನು ಪಕ್ಷದ ಗೆಲುವಿಗಾಗಿ ತೆಗೆದುಕೊಂಡಿದ್ದಾರೆ.

jds
ಜೆಡಿಎಸ್​

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಮಾಜಿ ಸಚಿವ ಹೆಚ್​ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಸ್ಪರ್ಧಿಸಲು ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ದೇವೇಗೌಡರು ಒಲವು ತೋರಿದ್ದಾರೆ ಎಂದು ಹೇಳಲಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ವಿರೋಧದ ನಡುವೆಯೂ ರೇವಣ್ಣ ದಂಪತಿಗಳ ಒತ್ತಡಕ್ಕೆ ಮಣಿದು ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಲು ದೇವೇಗೌಡರು ಹಸಿರು ನಿಶಾನೆ ತೋರಿದ್ದಾರೆ ಎನ್ನಲಾಗಿದೆ.

ಭವಾನಿ ರೇವಣ್ಣ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕೆನ್ನುವುದರ ಬಗ್ಗೆ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದಲ್ಲಿ ಈಗ ಜಿಜ್ನಾಸೆ ಮೂಡಿದೆ. ಹಾಸನ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಭವಾನಿಯವರು ಹೆಚ್ಚಿನ ಆಸಕ್ತಿ ಹೊಂದಿದ್ದು, ಚುನಾವಣೆ ಸಂಬಂಧ ಮತದಾರರನ್ನು ಭೇಟಿ ಮಾಡಿ ಪ್ರಚಾರ ಕಾರ್ಯದಲ್ಲಿ ಈಗಾಗಲೇ ತೊಡಗಿದ್ದಾರೆ. ಅಷ್ಟೇ ಅಲ್ಲ, ಸ್ಪರ್ಧೆಗೆ ಯಾವುದೇ ವಿಘ್ನಗಳು ಬಾರದಿರಲಿ ಎಂದು ಪೂಜೆ ಪುನಸ್ಕಾರ ಮಾಡುತ್ತ ಟೆಂಪಲ್​ರನ್​ನಲ್ಲಿ ತೊಡಗಿದ್ದಾರೆ.

ಹಾಸನ ಬದಲು ಬೇರೆ ಸೂಕ್ತ ಕ್ಷೇತ್ರದಲ್ಲಿ ಭವಾನಿ ರೇವಣ್ಣನವರನ್ನು ಸ್ಪರ್ಧೆಗಿಳಿಸುವುದರ ಕುರಿತು ದಳಪತಿಗಳ ಮನೆಯಲ್ಲಿ ಸುದೀರ್ಘ ಚರ್ಚೆ ನಡೆದಿದೆ. ಭವಾನಿ ಅವರ ಸ್ಪರ್ಧೆಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಾ ಬಂದಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹಾಸನದ ಬದಲಿಗೆ ಹೊಳೆನರಸೀಪುರ ಅಥವಾ ಕೆ ಆರ್ ಪೇಟೆಯಲ್ಲಿ ಕಣಕ್ಕಿಳಿಯುವುದು ಉತ್ತಮ ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಆಪರೇಷನ್ ಕಮಲದಲ್ಲಿ ಜೆಡಿಎಸ್ ತೊರೆದು ಬಿಜೆಪಿ ಸೇರಿ ಸಚಿವರಾಗಿರುವ ಡಾ.ನಾರಾಯಣಗೌಡರನ್ನು ಸೋಲಿಸಲು ಪ್ರಬಲ ಅಭ್ಯರ್ಥಿ ಅಗತ್ಯವಿದ್ದು ಕೆ.ಆರ್ ಪೇಟೆಯಲ್ಲಿ ಚುನಾವಣೆಗೆ ನಿಲ್ಲುವುದು ಉತ್ತಮ ಎಂದು ಹೆಚ್​ಡಿಕೆ ಹೇಳುತ್ತಿದ್ದಾರಂತೆ. ಹಾಸನದಲ್ಲಿ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿರುವ ಪಕ್ಷದ ಸ್ಥಳೀಯ ಕಾರ್ಯಕರ್ತ ಸ್ವರೂಪ್​ಗೆ ಟಿಕೆಟ್ ಕೊಟ್ಟು, ಹಾಸನ ಕ್ಷೇತ್ರದ ಮೇಲೆ ಕಣ್ಣಿಟ್ಟಿರುವ ಭವಾನಿ ರೇವಣ್ಣ ಅವರನ್ನು ಪತಿ ರೇವಣ್ಣ ಕ್ಷೇತ್ರವಾಗಿರುವ ಹೊಳೆನರಸೀಪುರದಲ್ಲಿ ಕಣಕ್ಕಿಳಿಸುವ ಕುರಿತು ಸಮಾಲೋಚನೆ ನಡೆದಿದೆ.

ಹೊಳೆನರಸೀಪುರ ಕ್ಷೇತ್ರವನ್ನು ಪತ್ನಿಗೆ ಬಿಟ್ಟುಕೊಡುವ ರೇವಣ್ಣಗೆ ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ಕ್ಷೇತ್ರದಲ್ಲಿ ಜೆಡಿಎಸ್​ಗೆ ಕೈಕೊಟ್ಟಿರುವ ಸಚಿವ ನಾರಾಯಣ ಗೌಡರ ವಿರುದ್ಧ ನಿಲ್ಲಿಸುವ ಸಾಧ್ಯತೆಗಳ ಬಗ್ಗೆ ಅಭಿಪ್ರಾಯ ಸಂಗ್ರಹ ಮಾಡಲಾಗುತ್ತಿದೆ. ಆದರೆ, ಹೊಳೆನರಸೀಪುರ ಕ್ಷೇತ್ರವನ್ನು ಪತ್ನಿ ಭವಾನಿಯವರಿಗೆ ಬಿಟ್ಟುಕೊಡಲು ರೇವಣ್ಣನವರಿಗೆ ಹೆಚ್ಚು ಒಲವಿಲ್ಲ ಎಂದು ಗೊತ್ತಾಗಿದೆ. ಮಾಜಿ ಪ್ರಧಾನಿ ದೇವೇಗೌಡರ ಮೇಲೆ ಒತ್ತಡ ಹಾಕುತ್ತಿದ್ದು, ಹಾಸನದಲ್ಲಿಯೇ ಟಿಕೆಟ್ ಗಿಟ್ಟಿಸಿಕೊಳ್ಳುವ ಪ್ರಯತ್ನ ರೇವಣ್ಣ ಕುಟುಂಬದಿಂದ ಮುಂದುವರಿದಿದೆ.

ಕುಮಾರಸ್ವಾಮಿ ಲೆಕ್ಕಾಚಾರವೇನು..?: ವಿಧಾನಸಭೆ ಚುನಾವಣೆಯಲ್ಲಿ ಭವಾನಿ ರೇವಣ್ಣ ಸ್ಪರ್ಧಿಸುವುದಕ್ಕೆ ತೀವ್ರ ಆಕ್ಷೇಪವೆತ್ತಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಭವಾನಿ ರೇವಣ್ಣ ಅವರ ಸ್ಪರ್ಧೆ ತಡೆಯುವ ಉದ್ದೇಶದಿಂದಲೇ ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ ಬರಲಿರುವ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದನ್ನು ಸ್ಥಗಿತಗೊಳಿಸಿ ಮಗ ನಿಖಿಲ್ ಕುಮಾರಸ್ವಾಮಿಯವರಿಗೆ ಟಿಕೆಟ್ ಘೋಷಣೆ ಮಾಡಿದ್ದಾರೆ. ಅನಿತಾ ಕುಮಾರಸ್ವಾಮಿ ಶಾಸಕಿಯಾದ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ ಅವರು ತಾವು ಸಹ ಶಾಸಕರಾಗಬೇಕು ಎಂದು ಪಟ್ಟು ಹಿಡಿದಿದ್ದರಿಂದ ವಿಧಾನಸಭೆ ಪ್ರವೇಶಿಸುವುದನ್ನು ತಡೆಗಟ್ಟಲು ಕುಮಾರಸ್ವಾಮಿ ಅವರು ತಮ್ಮ ಪತ್ನಿಯನ್ನೇ ಚುನಾವಣಾ ಕಣದಿಂದ ನಿವೃತ್ತಿಗೊಳಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಮುಂದುವರಿದ ಪಂಚರತ್ನ ಯಾತ್ರೆ: ತರಕಾರಿ, ಅಡಕೆ ಹಾರ ಹಾಕಿ ಹೆಚ್​​ಡಿಕೆ ಬರಮಾಡಿಕೊಂಡ ಜನ

ಭವಾನಿ ರೇವಣ್ಣ ಅವರ ಟಿಕೆಟ್ ಅನ್ನು ತಪ್ಪಿಸಲು ಕುಮಾರಸ್ವಾಮಿ ಅವರು ಈ ಹಿಂದಿನ ಚುನಾವಣೆಗಳಲ್ಲಿ ತಮ್ಮದೇ ಆದ ರಾಜಕೀಯ ಕಾರ್ಯತಂತ್ರ ಅನುಸರಿಸಿದ್ದರಂತೆ. 2018ರ ವಿಧಾನಸಭಾ ಚುನಾವಣೆಯ ವೇಳೆ ಅನಿತಾ ಕುಮಾರಸ್ವಾಮಿಯವರಿಗೆ ಟಿಕೆಟ್ ನೀಡಿದರೆ ತಮಗೂ ಟಿಕೆಟ್ ನೀಡಬೇಕೆಂದು ಭವಾನಿ ರೇವಣ್ಣ ಪಟ್ಟು ಹಿಡಿಯುತ್ತಾರೆ ಎನ್ನುವ ಮುಂದಾಲೋಚನೆಯಿಂದ ಆಗ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಕುಮಾರಸ್ವಾಮಿ ಅವರು ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿಗೆ ಟಿಕೆಟ್ ನೀಡದೆ ರಾಮನಗರ ಮತ್ತು ಚನ್ನಪಟ್ಟಣ ಎರಡೂ ಕ್ಷೇತ್ರಗಳಲ್ಲಿ ತಾವೇ ಸ್ಪರ್ಧೆ ಮಾಡಿದ್ದರು. ಎರಡರಲ್ಲೂ ಗೆದ್ದ ಬಳಿಕ ಚನ್ನಪಟ್ಟಣವನ್ನು ಉಳಿಸಿಕೊಂಡು ರಾಮನಗರಕ್ಕೆ ಉಪಚುನಾವಣೆಯಲ್ಲಿ ಅನಿತಾ ಕುಮಾರಸ್ವಾಮಿ ಅವರಿಗೆ ಟಿಕೆಟ್ ನೀಡಿ ಗೆಲ್ಲಿಸಿಕೊಂಡು ಬಂದಿದ್ದರು.

ಅನಿತಾ ಕುಮಾರಸ್ವಾಮಿಯವರಿಗೆ ಟಿಕೆಟ್ ನೀಡದೆ ಎರಡು ಕ್ಷೇತ್ರಗಳಲ್ಲಿ ಕುಮಾರಸ್ವಾಮಿ ಸ್ಪರ್ಧೆ ಮಾಡಿದ್ದು, ಭವಾನಿ ರೇವಣ್ಣಗೆ ಟಿಕೆಟ್ ತಪ್ಪಿಸುವ ರಾಜಕೀಯ ಉದ್ದೇಶದಿಂದಲೇ ಕೂಡಿತ್ತು ಎನ್ನುವುದು ನಿರ್ವಿವಾದ. ಈ ಬಾರಿಯ ಚುನಾವಣೆಯಲ್ಲಿ ಸಹ ಭವಾನಿ ರೇವಣ್ಣ ಅವರಿಗೆ ಜೆಡಿಎಸ್ ಟಿಕೆಟ್ ಅನ್ನು ನೀಡದಿರಲು ಕುಮಾರಸ್ವಾಮಿ ಶತಾಯಗತಾಯ ತಮ್ಮ ಪ್ರಯತ್ನವನ್ನು ಮುಂದುವರಿಸಿದ್ದಾರೆ. ದೇವೇಗೌಡರ ಮೇಲೂ ಸಹ ಟಿಕೆಟ್ ನೀಡದಂತೆ ಒತ್ತಡವನ್ನು ಹೇರತೊಡಗಿದ್ದಾರೆ. ಭವಾನಿ ರೇವಣ್ಣ ಅವರಿಗೆ ವಿಧಾನಸಭಾ ಚುನಾವಣೆಗೆ ಕಣಕ್ಕಿಳಿಯಲು ಟಿಕೆಟ್ ನೀಡಿದರೆ ಕುಟುಂಬ ರಾಜಕಾರಣ ಎನ್ನುವ ಅಪವಾದ ಮತ್ತಷ್ಟು ಹೆಚ್ಚಾಗಿ ಜೆಡಿಎಸ್ ಹೆಚ್ಚಿನ ಸೀಟನ್ನು ಗೆದ್ದು ಅಧಿಕಾರಕ್ಕೆ ಬರಲು ತೊಡಕಾಗುತ್ತದೆ ಎನ್ನುವ ಆತಂಕ ಕುಮಾರಸ್ವಾಮಿ ಅವರದ್ದಾಗಿದೆ.

ಹೆಚ್​ಡಿ ರೇವಣ್ಣ ಅವರ ಮನೆಯಲ್ಲಿ ಈಗಾಗಲೇ ರೇವಣ್ಣ ಅವರು ಶಾಸಕರಾಗಿದ್ದಾರೆ. ಅವರ ಇಬ್ಬರು ಮಕ್ಕಳಲ್ಲಿ ಡಾ.ಸೂರಜ್ ರೇವಣ್ಣ ವಿಧಾನ ಪರಿಷತ್​ ಸದಸ್ಯರಾಗಿ, ಮತ್ತೊಬ್ಬ ಪ್ರಜ್ವಲ್ ರೇವಣ್ಣ ಲೋಕಸಭೆ ಸದಸ್ಯರಾಗಿ ಚುನಾಯಿತರಾಗಿದ್ದಾರೆ. ಭವಾನಿ ರೇವಣ್ಣ ಅವರು ಸಹ ಶಾಸಕ ಸ್ಥಾನಕ್ಕೆ ಸ್ಪರ್ಧಿಸಿದರೆ ಕುಟುಂಬ ರಾಜಕಾರಣ ಎನ್ನುವ ಪ್ರತಿಪಕ್ಷಗಳ ದಾಳಿಗೆ ಒಳಗಾಗಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ಕಟು ಟೀಕೆಗೆ ಗುರಿಯಾಗಬೇಕಾಗುತ್ತದೆ ಎನ್ನುವುದು ಕುಮಾರಸ್ವಾಮಿಯವರ ವಾದವಾಗಿದೆ.

ಕಳೆದ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಪರಾಭವಗೊಳ್ಳಲು ಪ್ರಮುಖ ಕಾರಣ ಸಹ ಫ್ಯಾಮಿಲಿ ಪೊಲಿಟಿಕ್ಸ್ ಆಗಿದೆ ಎನ್ನುವುದನ್ನು ನೆನೆಪಿಸಿದ್ದಾರೆ ಎಂದು ಹೇಳಲಾಗಿದೆ. ಜಾತ್ಯತೀತ ಜನತಾ ದಳದಲ್ಲಿ ಭವಾನಿ ರೇವಣ್ಣ ಅವರ ಸ್ಪರ್ಧೆ ಸಂಗತಿ ಕಗ್ಗಂಟನ್ನು ಸೃಷ್ಟಿಸಿದೆ. ಕುಟುಂಬದ ಹಿರಿಯರಾದ ಮಾಜಿ ಪ್ರಧಾನಿ ದೇವೇಗೌಡರು ತೆಗೆದುಕೊಳ್ಳುವ ತೀರ್ಮಾನದ ಮೇಲೆ ಭವಾನಿ ರೇವಣ್ಣ ಅವರ ವಿಧಾನಸಭೆ ಚುನಾವಣೆ ಸ್ಪರ್ಧೆ ಅವಲಂಬಿತವಾಗಿದೆ.

ಇದನ್ನೂ ಓದಿ: ಜೆಡಿಎಸ್​ನ 93 ಅಭ್ಯರ್ಥಿಗಳ ಜೊತೆ ಹೆಚ್ ಡಿ ಕುಮಾರಸ್ವಾಮಿ ಸಭೆ: ಆರೇಳು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಬದಲಾವಣೆ ಸುಳಿವು!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.