ETV Bharat / state

ಬೆಂಗಳೂರು ನಗರ ಜೆಡಿಎಸ್ ಪ್ರಮುಖರ ಸಭೆ: ಮಹತ್ವದ ವಿಷಯಗಳ ಚರ್ಚೆ - ಲೋಕಸಭೆ ಚುನಾವಣೆ

ಮುಂಬರುವ ಲೋಕಸಭೆ, ಬಿಬಿಎಂಪಿ ಸೇರಿದಂತೆ ವಿವಿಧ ಚುನಾವಣೆಗಳ ಸಿದ್ಧತೆಗಳಿಗಾಗಿ ಜೆಡಿಎಸ್​ ಪಕ್ಷದ ಕಚೇರಿಯಲ್ಲಿ ಇಂದು ಸಭೆ ನಡೆಯಿತು.

ಬೆಂಗಳೂರು ನಗರ ಜೆಡಿಎಸ್ ಪ್ರಮುಖರ ಸಭೆ
ಬೆಂಗಳೂರು ನಗರ ಜೆಡಿಎಸ್ ಪ್ರಮುಖರ ಸಭೆ
author img

By ETV Bharat Karnataka Team

Published : Dec 27, 2023, 10:24 PM IST

ಬೆಂಗಳೂರು: ಮುಂಬರುವ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ, ಬಿಬಿಎಂಪಿ ಹಾಗೂ ಲೋಕಸಭೆ ಚುನಾವಣೆಗಾಗಿ ಪಕ್ಷವನ್ನು ನಗರದಲ್ಲಿ ಸಂಘಟನೆ ಮಾಡುವುದು ಹಾಗೂ ಸದಸ್ಯತ್ವ ಅಭಿಯಾನವನ್ನು ದೊಡ್ಡ ಪ್ರಮಾಣದಲ್ಲಿ ಕೈಗೊಳ್ಳುವ ಬಗ್ಗೆ ಜೆಡಿಎಸ್​ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಬುಧವಾರ ವಿಸ್ತೃತವಾಗಿ ಚರ್ಚೆ ನಡೆಸಲಾಯಿತು.

ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಹಾಗೂ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರ ಸೂಚನೆಯ ಮೇರೆಗೆ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಸಭೆ ಕರೆದಿದ್ದ ನಗರ ಘಟಕದ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಹೆಚ್.ಎಂ.ರಮೇಶ್ ಗೌಡ ಅವರು, ಹಲವು ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಿದರು. ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಟಿ.ಎ.ಶರವಣ, ಗೊಟ್ಟಿಗೆರೆ ಮಂಜಣ್ಣ ಸೇರಿದಂತೆ ಅನೇಕ ಹಿರಿಯ ಮುಖಂಡರು ಭಾಗಿಯಾಗಿದ್ದ ಈ ಸಭೆಯಲ್ಲಿ, ನಗರದ ಎಲ್ಲಾ ವಿಧಾನಸಭೆ ಕ್ಷೇತ್ರಗಳಲ್ಲಿ ಬೃಹತ್ ಪ್ರಮಾಣದಲ್ಲಿ ಸದಸ್ಯತ್ವ ಅಭಿಯಾನ ಕೈಗೊಳ್ಳುವ ಬಗ್ಗೆ ನಿರ್ಧಾರ ಕೈಗೊಳ್ಳಲಾಯಿತು.

ಬಹುಮುಖ್ಯವಾಗಿ ಮುಂಬರುವ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯ ಸಿದ್ಧತೆ ಹಾಗೂ ಪಕ್ಷದ ಅಭ್ಯರ್ಥಿಗಳನ್ನು ಉತ್ತಮ ಅಂತರದಲ್ಲಿ ಗೆಲ್ಲಿಸಿಕೊಳ್ಳುವ ಬಗ್ಗೆ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಯಿತು. ಮಾಜಿ ಕಾರ್ಪೊರೇಟರ್ ತಿಮ್ಮೇಗೌಡ, ಪಕ್ಷದ ಕಾನೂನು ಘಟಕದ ರಾಜ್ಯಾಧ್ಯಕ್ಷ ಎ.ಪಿ.ರಂಗನಾಥ್, ಎಲ್ಲಾ ವಿಧಾನಸಭೆ ಕ್ಷೇತ್ರಗಳ ಅಧ್ಯಕ್ಷರು, ವಿವಿಧ ಘಟಕಗಳ ಅಧ್ಯಕ್ಷರು, ವಾರ್ಡ್ ಮುಖಂಡರು ಸೇರಿ ವಿವಿಧ ನಾಯಕರು ಸಭೆಯಲ್ಲಿ ಉಪಸ್ಥಿತರಿದ್ದರು. ಇದೇ ವೇಳೆ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಘಟಕದ ಅಧ್ಯಕ್ಷರನ್ನಾಗಿ ಎಂ.ನಾಗೇಂದ್ರ ಪ್ರಸಾದ್ (ಬಾಬು) ಅವರನ್ನು ನೇಮಕ ಮಾಡಲಾಗಿದ್ದು, ಸಭೆಯಲ್ಲಿ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು.

ಬಿಜೆಪಿ ನೂತನ ಪದಾಧಿಕಾರಿಗಳ ಸಭೆ: ಮತ್ತೊಂದೆಡೆ ರಾಜ್ಯ ಬಿಜೆಪಿ ನೂತನ ಪದಾಧಿಕಾರಿಗಳ ಮೊದಲ ಸಭೆ ಇಂದು ನಡೆಯಿತು. ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಅರ್ಧಗಂಟೆಗೂ ಹೆಚ್ಚು ಕಾಲ ಕೋವಿಡ್ ಅಕ್ರಮ ಬಗ್ಗೆ ಯತ್ನಾಳ್ ಮಾಡಿದ ಆರೋಪದ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಮೂಲಗಳಿಂದ ದೊರೆತ ಮಾಹಿತಿ.

ಉಳಿದಂತೆ ಪಕ್ಷ ಸಂಘಟನೆ ಮತ್ತು ಲೋಕಸಭಾ ಚುನಾವಣೆ ತಯಾರಿ ಕುರಿತು ಸಭೆಯಲ್ಲಿ ಚರ್ಚೆಗಳು ನಡೆದಿವೆ. ಮುಂಬರುವ ಚುನಾವಣೆಗಾಗಿ ಪಕ್ಷದ ಕಾರ್ಯಕರ್ತರೊಂದಿಗೆ ಪಕ್ಷವನ್ನು ಬಲವರ್ಧನೆ ಯಾವೆಲ್ಲ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಸೇರಿದಂತೆ ಹಲವು ವಿಷಯಗಳ ಬಗ್ಗೆಯೂ ಚರ್ಚೆಗಳಾಗಿದೆ. ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಡಲು ವಿಕಸಿತ ಭಾರತ ಕಾರ್ಯಕ್ರಮವನ್ನು ರಾಜ್ಯದೆಲ್ಲೆಡೆ ಯಶಸ್ವಿಗೊಳಿಸುವ ಬಗ್ಗೆಯೂ ಪದಾಧಿಕಾರಿಗಳ ಸಭೆಯಲ್ಲಿ ಚರ್ಚೆಯಾಗಿದೆ

ಇದನ್ನೂ ಓದಿ: ಬಿಜೆಪಿ ನೂತನ ಪದಾಧಿಕಾರಿಗಳ ಮೊದಲ ಸಭೆಯಲ್ಲೇ ಯತ್ನಾಳ್ ಬಗ್ಗೆ ಗಂಭೀರ ಚರ್ಚೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.