ETV Bharat / state

ರಾಷ್ಟ್ರ ಮಟ್ಟದಲ್ಲಿ ಬದಲಾವಣೆ ತರುವ ದೃಷ್ಟಿಯಿಂದ ತೆಲಗಾಂಣ, ಪ.ಬಂಗಾಳದ ಮುಖ್ಯಮಂತ್ರಿ ಜೊತೆ ಮಾತುಕತೆ: ಹೆಚ್.ಡಿ.ದೇವೇಗೌಡ - ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023

ಜೆಪಿ ಭವನದಲ್ಲಿ ನಡೆದ ಜೆಡಿಎಸ್ ಪಕ್ಷದ ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡರವರು ಹಲವಾರು ವಿಚಾರಗಳ ಕುರಿತು ಮಾತನಾಡಿದ್ದಾರೆ.

jds
ದೇವೇಗೌಡರು
author img

By

Published : Apr 27, 2023, 3:32 PM IST

ಬೆಂಗಳೂರು : ಮುಂದಿನ ದಿನಗಳಲ್ಲಿ ರಾಷ್ಟ್ರ ರಾಜಕಾರಣದಲ್ಲಿ ಹಲವು ಬದಲಾವಣೆಗಳು ಆಗುವ ಸಾಧ್ಯತೆ ಇದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರ ಮಟ್ಟದಲ್ಲಿ ಬದಲಾವಣೆ ತರುವ ದೃಷ್ಟಿಯಿಂದ ತೆಲಗಾಂಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಂದಿಗೆ ಮಾತುಕತೆ ನಡೆಯುತ್ತಿದೆ ಎಂದರು.

ಈ ಬಾರಿ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ : ಚಂದ್ರಶೇಖರ್ ರಾವ್ ಅವರು ವಿಧಾನಸಭೆ ಚುನಾವಣಾ ಪ್ರಚಾರಕ್ಕೆ ಬರುವುದಾಗಿ ಹೇಳಿದ್ದಾರೆ. ಕೆಲವು ಮುಖಂಡರು ಕುಮಾರಸ್ವಾಮಿ ಜೊತೆ ಸಂಪರ್ಕದಲ್ಲಿದ್ದಾರೆ. ಬಹುಶಃ ಮುಂದಿನ ದಿನಗಳಲ್ಲಿ ರಾಷ್ಟ್ರೀಯ ರಾಜಕಾರಣದಲ್ಲಿ ಅನೇಕ ಬದಲಾವಣೆಗಳಾಗಬಹದು ಎಂದು ಹೇಳಿದರು. ರಾಜ್ಯದ ಜನರು ಬದಲಾವಣೆ ಬಯಸುತ್ತಿದ್ದು, ಈ ಬಾರಿ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹೆಚ್.ಡಿ. ಕುಮಾರಸ್ವಾಮಿ ಅವರು ವಿನೂತನವಾದ ಪಂಚರತ್ನ ಯೋಜನೆ ರೂಪಿಸಿದ್ದಾರೆ. ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ ಆ ಯೋಜನೆಯ ಬಗ್ಗೆ ತಿಳಿಸುತ್ತಿದ್ದಾರೆ. ಈ ಬಾರಿ ಕುಮಾರಸ್ವಾಮಿ ಸ್ವತಂತ್ರವಾಗಿ ಸರ್ಕಾರ ಮಾಡಬಹುದು ಎಂಬ ಪ್ರಾಮಾಣಿಕ ಭಾವನೆ ನನಗಿದೆ ಎಂದು ನುಡಿದರು. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರು ಜೆಡಿಎಸ್ ಗೆ ಕೇವಲ 10ರಿಂದ 15 ಸ್ಥಾನ ಬರಲಿದೆ ಎಂದು ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ದೇವೇಗೌಡರು, ಹೇಳಿಕೆ ನೀಡಲು ಅವರಿಗೆ ಸ್ವಾತಂತ್ರ್ಯವಿದೆ. ನಾವು ಅದನ್ನು ತಡೆಯಲು ಆಗುವುದಿಲ್ಲ. ಕಾಂಗ್ರೆಸ್‍ನವರು 25 ಸ್ಥಾನ ಬರುತ್ತದೆ ಎಂದು ಹೇಳುತ್ತಾರೆ. ತೀರ್ಮಾನ ಮಾಡುವುದು ಜನರು. ಮೇ 13 ರಂದು ಜನಾದೇಶ ಬರಲಿದ್ದು, ಅಲ್ಲಿವರೆಗೆ ಕಾದು ನೋಡೋಣ ಎಂದರು.

ಜೆಡಿಎಸ್ ವಿರುದ್ಧ ಸಂಸದೆ ಸುಮಲತಾ ಅಂಬರೀಶ್ ಅವರ ಟೀಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ದೊಡ್ಡವರ ಹೆಸರನ್ನು ಪ್ರಸ್ತಾಪ ಮಾಡಿ ಯಾವುದೇ ಗೊಂದಲಕ್ಕೆ ಒಳಗಾಗುವುದಿಲ್ಲ. ಪ್ರತಿಯೊಬ್ಬರಿಗೂ ಅಭಿವ್ಯಕ್ತಿ ಸ್ವಾತಂತ್ರ್ಯವಿದೆ. ಯಾರು ಏನು ಹೇಳಿದರೂ ಅದಕ್ಕೆ ಪ್ರತಿಕ್ರಿಯಿಸುವುದಿಲ್ಲ ಎಂದರು. ನಾನು ಮುಖ್ಯಮಂತ್ರಿಯಾಗಿದ್ದ ವೇಳೆ 11 ಕ್ಷೇತ್ರಗಳ ಪೈಕಿ 9 ಕ್ಷೇತ್ರಗಳಲ್ಲಿ ಗೆಲುವು ತಂದು ಕೊಟ್ಟ ಜಿಲ್ಲೆ ತುಮಕೂರು. ಕೋಲಾರ, ಹಾಸನ, ಮಂಡ್ಯದಲ್ಲಿ ಎಲ್ಲಾ ಕ್ಷೇತಗಳನ್ನು ಗೆದ್ದಿದ್ದೆವು. ಲೋಕಸಭೆಗೆ ಶಂಕರೇಗೌಡರನ್ನು ಚುನಾಯಿಸಿ ಕಳುಹಿಸಲಾಗಿತ್ತು. ಈಗ ಅವರ ಮೊಮ್ಮಗ ಮಂಡ್ಯದಲ್ಲಿ ಬಂಡಾಯ ಸ್ಪರ್ಧೆ ಮಾಡಿದ್ದಾರೆ. ಅವರ ಮನವೊಲಿಕೆಗೆ ಮರಳಿ ಯತ್ನವನ್ನು ಮಾಡುತ್ತೇವೆ ಎಂದರು.

ಮೇ 8ವರೆಗೂ ಪ್ರಚಾರ ನಡೆಸಲಿರುವ ಹೆಚ್ ಡಿಡಿ: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ನಾಳೆಯಿಂದ ಮೇ 8 ವರಗೆ ಪ್ರಚಾರ ಕೈಗೊಳ್ಳಲಾಗುವುದು. ಈ ಚುನಾವಣೆಯಲ್ಲಿ ಸುಮಾರು 42 ಕಡೆ ಪ್ರಚಾರ ಮಾಡಲು ತಾತ್ಕಾಲಿಕ ಕಾರ್ಯಕ್ರಮ ನಿಗದಿಯಾಗಿದೆ. ರಾಜ್ಯದ 224 ಕ್ಷೇತ್ರಗಳ ಪೈಕಿ 211 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಸಲಾಗಿತ್ತು. 207 ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳಿದ್ದಾರೆ. ಇಬ್ಬರು ನಾಮಪತ್ರಗಳನ್ನು ಹಿಂದಕ್ಕೆ ಪಡೆದಿದ್ದು, ಮತ್ತಿಬ್ಬರ ನಾಮಪತ್ರಗಳು ತಿರಸ್ಕೃತವಾಗಿವೆ.

ಸಿಪಿಐಎಂ, ಆರ್ ಪಿಐ ಸೇರಿದಂತೆ ಏಳು ಕ್ಷೇತ್ರಗಳಲ್ಲಿ ಬೆಂಬಲ ನೀಡಲಾಗಿದೆ. ನಂಜನಗೂಡು ಕ್ಷೇತ್ರದಲ್ಲಿ ದರ್ಶನ್ ಧೃವನಾರಯಣ್‍ಗೆ ಮಾನವೀಯ ನೆಲೆಯಲ್ಲಿ ಬೆಂಬಲ ಕೊಟ್ಟಿದ್ದೇವೆ ಎಂದು ಗೌಡರು ತಿಳಿಸಿದರು. ಆರೋಗ್ಯದ ದೃಷ್ಟಿಯಿಂದ ವಾರದಲ್ಲಿ ಒಂದು ದಿನ ವಿಶ್ರಾಂತಿ ಮಾಡಲು ವೈದ್ಯರು ಸಲಹೆ ಮಾಡಿದ್ದಾರೆ. ಮುಖ್ಯಮಂತ್ರಿ ಹಾಗೂ ಪ್ರಧಾನ ಮಂತ್ರಿ ಆಗಿದ್ದ ಅವಧಿಯಲ್ಲಿ ಬೆಂಗಳೂರಿಗೆ ನಾನು ಏನು ಮಾಡಿದ್ದೇನೆ ಎಂಬುದರ ಬಗ್ಗೆ ಸಾಕಷ್ಟು ಹೇಳಬಹುದು ಎಂದರು.

ದೇವೇಗೌಡರು ರೈತರ ಪರ ನಗರ ಪ್ರದೇಶದ ಬಗ್ಗೆ ಆಸಕ್ತಿ ಇಲ್ಲ ಎಂದು ಆರೋಪಿಸುತ್ತಾರೆ. ಅದರಲ್ಲಿ ತಪ್ಪೇನಿಲ್ಲ. ನಾನು ಹಳ್ಳಿಯವನು. ಗ್ರಾಮೀಣ ಭಾಗದ ಬಗ್ಗೆ ಹೆಚ್ಚು ಕಾಳಜಿ ಇದೆ. ಆದರೂ ನಗರ ಪ್ರದೇಶಕ್ಕೂ ಸಾಕಷ್ಟು ಕೊಡುಗೆ ಕೊಟ್ಟಿದ್ದೇನೆ. ಕಾವೇರಿ ನೀರನ್ನು ಬೆಂಗಳೂರಿಗೆ ಕುಡಿಯುವ ಉದ್ದೇಶಕ್ಕೆ ಹಂಚಿಕೆ ಮಾಡಿದ್ದು, ನನ್ನ ಆಡಳಿತಾವಧಿಯಲ್ಲಿ. ದಾಬಸಪೇಟೆಯಿಂದ ಆದಿಚುಂಚನಗಿರಿವರೆಗೂ ರಸ್ತೆ ನಿರ್ಮಾಣ, ಎಚ್ ಎಎಲ್ ನಲ್ಲಿ ತೇಜಸ್ ಜೆಟ್ ಉತ್ಪಾದನೆಗೆ ಅನುಮತಿ ನೀಡಲಾಯಿತು.

ಬೆಂಗಳೂರಿನ ವರ್ತುಲ ರಸ್ತೆ ನಿರ್ಮಾಣಕ್ಕೆ ರಕ್ಷಣಾ ಇಲಾಖೆ ಭೂಮಿ ಮಂಜೂರು ಮಾಡಲಾಯಿತು. ಮೈಸೂರು ರಸ್ತೆ ಮೇಲ್ಸೇತುವೆ ನಿರ್ಮಾಣ ಸೇರಿದಂತೆ ಹಲವು ನಿದರ್ಶನಗಳನ್ನು ಕೊಡಬಹುದು. ಹಿಂದೆ ಇದ್ದ ಏಳು ನಗರಸಭೆಗಳನ್ನು ಬಿಬಿಎಂಪಿಗೆ ಸೇರಿಸಿ ಸೇರಿಸಿ ಮೂಲ ಸೌಕರ್ಯಗಳನ್ನು ನೀಡಿಲಾಗಿದೆ. ಬೆಂಗಳೂರಿನಲ್ಲಿ ಇಷ್ಟು ಅಭಿವೃದ್ಧಿಯನ್ನು ಯಾವುದೋ ಹಣದ ಆಮಿಷಕ್ಕೆ ಬಲಿಯಾಗಿ ಮಾಡಿಲ್ಲ ಎಂದು ದೇವೇಗೌಡರು ಹೇಳಿದರು. ಈ ಸಂದರ್ಭದಲ್ಲಿ ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾಖಾನ್, ಬೆಂಗಳೂರು ನಗರ ಘಟಕದ ಅಧ್ಯಕ್ಷ ರಮೇಶ್ ಗೌಡ ಉಪಸ್ಥಿತರಿದ್ದರು.

ಇದನ್ನೂ ಓದಿ: ರಾಹುಲ್ ಗಾಂಧಿ 224 ಕ್ಷೇತ್ರಕ್ಕೂ ಹೋಗಲಿ, ಅವರು ಹೋದಲೆಲ್ಲ ಕಾಂಗ್ರೆಸ್ ಸೋತಿದೆ: ನಳಿನ್ ಕುಮಾರ್ ಕಟೀಲ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.