ETV Bharat / state

ಗೋಹತ್ಯೆ ನಿಷೇಧ ಮಸೂದೆಗೆ ಬೆಂಬಲ: ಬದಲಾದ ಜೆಡಿಎಸ್​​ ನಿಲುವು! - ban anti cattle slaughter bill

ಗೋಹತ್ಯೆ ನಿಷೇಧ ಮಸೂದೆಯನ್ನು ಜೆಡಿಎಸ್​ ಪಕ್ಷ ಬೆಂಬಲಿಸುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.

JDS party support for anti cattle slaughter bill
ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ
author img

By

Published : Jan 28, 2021, 10:09 PM IST

ಬೆಂಗಳೂರು: ರಾಜ್ಯ ವಿಧಾನ ಪರಿಷತ್​ನಲ್ಲಿ ಸರ್ಕಾರ ಮಂಡಿಸಲಿರುವ ಗೋಹತ್ಯೆ ನಿಷೇಧ ಮಸೂದೆಯನ್ನು ನಮ್ಮ ಪಕ್ಷ ಬೆಂಬಲಿಸುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.

ಜಂಟಿ ಅಧಿವೇಶನ ಪ್ರಾರಂಭಕ್ಕೂ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮುಂಬರುವ ಕಲಾಪದಲ್ಲಿ ಗೋಹತ್ಯೆ ನಿಷೇಧ ಕಾನೂನು ಚರ್ಚೆಗೆ ಬಂದಾಗ ಅದನ್ನು ವಿರೋಧಿಸುವ ಪ್ರಶ್ನೆಯೇ ಇಲ್ಲ ಎಂದರು.

ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ

75 ಸದಸ್ಯರ ವಿಧಾನ ಪರಿಷತ್​ನಲ್ಲಿ ಬಿಜೆಪಿ ಹಾಗೂ ಜೆಡಿಎಸ್ 43 ಸದಸ್ಯರನ್ನು ಹೊಂದಿದ್ದು, ಮಸೂದೆಯನ್ನು ಸಂಪೂರ್ಣವಾಗಿ ಬೆಂಬಲಿಸುವುದಾಗಿ ಸ್ಪಷ್ಟಪಡಿಸಿದರು. ಈ ಗೋಹತ್ಯೆ ನಿಷೇಧ ವಿಧೇಯಕ ವಿಚಾರದಲ್ಲಿ ಜೆಡಿಎಸ್​​ ತನ್ನ ನಿಲುವನ್ನು ಬದಲಾಯಿಸಿದ್ದು ಸ್ಪಷ್ಟವಾಗಿದೆ.

ಇನ್ನು ಸಭಾಪತಿ ಆಯ್ಕೆ ವಿಚಾರವಾಗಿ ಬಿಜೆಪಿ ಹೈಕಮಾಂಡ್ ಜೊತೆ ಚರ್ಚೆ ಆಗಿದೆ. ಉಪಸಭಾಪತಿ ಸ್ಥಾನವನ್ನು ಬಿಜೆಪಿಗೆ ಬಿಟ್ಟುಕೊಡುವುದಾಗಿ ತೀರ್ಮಾನ ಮಾಡಲಾಗಿದೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.