ETV Bharat / state

ಬಿಬಿಎಂಪಿ ಚುನಾವಣೆಗೆ ಸಿದ್ಧತೆ: ಗುಂಪುಗಾರಿಕೆ ಸಹಿಸುವುದಿಲ್ಲ, ನಿಷ್ಠೆಯಿಂದ ಪಕ್ಷದ ಕೆಲಸ ಮಾಡಿ ಎಂದ ಹೆಚ್​ಡಿಕೆ

ಶೀಘ್ರದಲ್ಲೇ ಬಿಬಿಎಂಪಿ ಚುನಾವಣೆ ನಡೆಯಲಿದ್ದು, ಜೆಡಿಎಸ್ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಹೆಚ್​ಡಿಕೆ ಪ್ರಮುಖ ಮುಖಂಡರ ಜೊತೆ ಸಮಾಲೋಚನೆ ನಡೆಸಿದರು.

jds
ಜೆಡಿಎಸ್​
author img

By

Published : Jun 1, 2023, 4:07 PM IST

ಬೆಂಗಳೂರು: ಮುಂಬರುವ ಬಿಬಿಎಂಪಿ ಚುನಾವಣೆಗೆ ಜೆಡಿಎಸ್ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಬೆಂಗಳೂರು ಮಹಾನಗರದ ಎಲ್ಲ 28 ಕ್ಷೇತ್ರಗಳ ಪ್ರಮುಖ ಮುಖಂಡರ ಜೊತೆ ಇಂದು ಸಮಾಲೋಚನೆ ನಡೆಸಿದರು. ಬಿಡದಿಯ ತೋಟದಲ್ಲಿ ಆಯೋಜಿಸಲಾಗಿದ್ದ ಈ ಸಭೆಯಲ್ಲಿ ಪಕ್ಷ ಸಂಘಟನೆ ಹಾಗೂ ಪಾಲಿಕೆ ಚುನಾವಣೆಯ ಬಗ್ಗೆ ಕುಮಾರಸ್ವಾಮಿ ಅವರು ಮುಖಂಡರಿಗೆ ಕೆಲ ಗಂಭೀರ ಸೂಚನೆಗಳನ್ನು ನೀಡಿದರು.

ವಿಧಾನಸಭೆ ಚುನಾವಣೆಯ ಸೋಲಿನ ಕಾರಣಗಳನ್ನು ಮುಂದಿಟ್ಟುಕೊಂಡು ಕೆಲ ಮುಖಂಡರನ್ನು ತರಾಟೆಗೆ ತೆಗೆದುಕೊಂಡ ಹೆಚ್​​ಡಿಕೆ, "ಗುಂಪುಗಾರಿಕೆ ಬೇಡ, ಕೆಲಸ ಮಾಡುವವರಷ್ಟೇ ಬೇಕು, ಯಾವುದೇ ಕಾರಣಕ್ಕೂ ಗುಂಪುಗಾರಿಕೆ ಸಹಿಸುವ ಪ್ರಶ್ನೆ ಇಲ್ಲ. ಯಾರು ಯಾರನ್ನೂ ಮೆಚ್ಚಿಸುವ ರೀತಿಯಲ್ಲಿ ಕೆಲಸ ಮಾಡುವ ಅಗತ್ಯವಿಲ್ಲ. ಪಕ್ಷವನ್ನು ಇನ್ನೂ ಅಧೋಗತಿಗೆ ತಳ್ಳುವುದು ಬೇಡ. ಪಕ್ಷದ ನೆಲೆ ಇರುವ ವಾರ್ಡುಗಳಲ್ಲಿ ಉತ್ತಮವಾಗಿ ಕೆಲಸ ಮಾಡಿ. ಜನರ ಸಂಪರ್ಕದಲ್ಲಿರಿ ಹಾಗೂ ಅವರಲ್ಲಿ ವಿಶ್ವಾಸ ಮೂಡಿಸಿ" ಎಂದು ತಾಕೀತು ಮಾಡಿದರು.

"ಪ್ರತಿ ವಾರ್ಡಿನ, ಪ್ರತಿ ಮತಗಟ್ಟೆಯಲ್ಲಿ ಪಕ್ಷದ ಕಾರ್ಯಕರ್ತರನ್ನು ಬೆಳೆಸಿ. ಜನರು ಹೆಚ್ಚೆಚ್ಚು ಪಕ್ಷಕ್ಕೆ ಸೇರಿಸಿಕೊಳ್ಳುವ ವಾತಾವರಣವನ್ನು ಸೃಷ್ಟಿ ಮಾಡಿ. ಜನರಲ್ಲಿ ಪಕ್ಷದ ಪರ ಒಲವು ವ್ಯಕ್ತವಾಗುವ ರೀತಿಯಲ್ಲಿ ಕೆಲಸ ಮಾಡಿ" ಎಂದು ಮುಖಂಡರಿಗೆ ಕಿವಿಮಾತು ಹೇಳಿದರು. "ಯಾವುದೇ ಕ್ಷಣದಲ್ಲಿ ಬಿಬಿಎಂಪಿ ಚುನಾವಣೆ ಘೋಷಣೆ ಆಗುವ ಸಾಧ್ಯತೆ ಇದೆ. ಚುನಾವಣೆ ಯಾವಾಗ ಬೇಕಾದರೂ ಬರಲಿ. ನಮ್ಮ ಸಿದ್ಧತೆಗಳನ್ನು ನಾವು ಮಾಡಿಕೊಳ್ಳೋಣ. ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದೇವೆ ಎನ್ನುವ ಅಧೈರ್ಯ ಬೇಡ. ಅನೇಕ ಸೋಲುಗಳನ್ನು ದಾಟಿಕೊಂಡು ಜೆಡಿಎಸ್ ಪಕ್ಷ ಫೀನಿಕ್ಸ್ ಪಕ್ಷಿಯಂತೆ ಮೇಲೆದ್ದು ಬಂದಿದೆ" ಎಂದು ಆತ್ಮಸ್ಥೈರ್ಯ ತುಂಬಿದರು.

ಇದನ್ನೂ ಓದಿ: ನಾನು ಗ್ರಾಮೀಣ ಭಾಗದಿಂದ ಬಂದಿದ್ದರೂ, ಬೆಂಗಳೂರು ನಗರದ ಬಗ್ಗೆ ಅರಿತಿದ್ದೇನೆ: ಡಿಸಿಎಂ ಡಿಕೆ ಶಿವಕುಮಾರ್

ಪಕ್ಷ ಸಂಘಟನೆ ದೃಷ್ಟಿಯಿಂದ ಕಠಿಣ ಸೂಚನೆಗಳನ್ನು ಕೊಟ್ಟ ಕುಮಾರಸ್ವಾಮಿ ಅವರು, ವಿಧಾನಸಭೆ ಚುನಾವಣೆ ವೈಫಲ್ಯಗಳಿಂದ ಪಾಠ ಕಲಿಯುವಂತೆ ಹೇಳಿದರಲ್ಲದೇ, ಮಾಡಿದ ತಪ್ಪನ್ನೇ ಮತ್ತೆ ಮತ್ತೆ ಮಾಡಬೇಡಿ ಎಂದು ಎಚ್ಚರಿಕೆ ನೀಡಿದರು. ಈ ವೇಳೆ, ವಿಧಾನ ಪರಿಷತ್ ಸದಸ್ಯ ಕೆ ಎನ್ ತಿಪ್ಪೇಸ್ವಾಮಿ, ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಸೇರಿದಂತೆ 28 ವಿಧಾನಸಭೆ ಕ್ಷೇತ್ರಗಳ ಪ್ರಮುಖ ಮುಖಂಡರು ಭಾಗಿಯಾಗಿದ್ದರು.

ಬಿಬಿಎಂಪಿ ಚುನಾವಣೆಗೆ ಕಾಂಗ್ರೆಸ್​ ತಯಾರಿ: ಈಗಾಗಲೇ ವಿಧಾನಸಭೆ ಚುನಾವಣೆಯಲ್ಲಿ ಬಹುಮತದಿಂದ ಗೆದ್ದು ರಾಜ್ಯ ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಬಿಬಿಎಂಪಿ ಚುನಾವಣೆಗೂ ಭರ್ಜರಿಯಾಗಿಯೇ ತಯಾರಿ ನಡೆಸುತ್ತಿದೆ. ಇನ್ನೇನು ಕೆಲ ತಿಂಗಳಲ್ಲೇ ಅವಧಿ ಪೂರ್ಣಗೊಂಡಿರುವ ಬಿಬಿಎಂಪಿಗೆ ಚುನಾವಣೆ ಘೋಷಣೆ ಆಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರ ಸಚಿವ ಡಿ.ಕೆ. ಶಿವಕುಮಾರ್ ವಿಶೇಷ ಸಮಿತಿಯನ್ನು ಈಗಾಗಲೇ ರಚಿಸಿದ್ದಾರೆ. ಬಿಬಿಎಂಪಿ ಚುನಾವಣಾ ಪೂರ್ವತಯಾರಿ ಸಮಿತಿ ರಚನೆ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮೇ 25ರವರೆಗೆ 34,541 ಅನಧಿಕೃತ ಜಾಹೀರಾತು ಫಲಕ ತೆರವು: ಬಿಬಿಎಂಪಿಯಿಂದ ಹೈಕೋರ್ಟ್​ಗೆ ಮಾಹಿತಿ..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.