ಬೆಂಗಳೂರು: ಇತ್ತೀಚೆಗೆ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಇಬ್ಬರು ಶಾಸಕರ ವಿರುದ್ಧ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ದೂರು ನೀಡಲು ಜೆಡಿಎಸ್ ತಯಾರಿ ಮಾಡಿಕೊಂಡಿದೆ.
ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಜೆಡಿಎಸ್‌ನ ಸಚೇತಕ ವೆಂಕಟರಾವ್ ನಾಡಗೌಡ ಪಕ್ಷದ ಎಲ್ಲ ಶಾಸಕರಿಗೂ ವಿಪ್ ನೀಡಿ ಕುಪೇಂದ್ರ ರೆಡ್ಡಿ ಅವರಿಗೆ ಮತ ಚಲಾಯಿಸುವಂತೆ ಸೂಚಿಸಿದ್ದರು. ಆದರೆ, ವಿಪ್ ಉಲ್ಲಂಘಿಸಿ ಕೋಲಾರ ಶಾಸಕ ಶ್ರೀನಿವಾಸಗೌಡ ಅವರು ಕಾಂಗ್ರೆಸ್ ಅಭ್ಯರ್ಥಿಗೆ ಹಾಗೂ ಗುಬ್ಬಿ ಶಾಸಕ ಎಸ್. ಆರ್ ಶ್ರೀನಿವಾಸ್ (ವಾಸು) ಬಿಜೆಪಿ ಅಭ್ಯರ್ಥಿಗೆ ಮತ ಚಲಾಯಿಸಿದ್ದಾರೆ ಎಂಬ ಆರೋಪವನ್ನು ಜೆಡಿಎಸ್ ನಾಯಕರು ಮಾಡಿದ್ದಾರೆ. ಹಾಗಾಗಿ, ಶಾಸಕರ ಸದಸ್ಯತ್ವ ಅನರ್ಹಗೊಳಿಸುವಂತೆ ಎರಡು ದಿನದಲ್ಲಿ ದೂರು ಸಲ್ಲಿಸಲಾಗುತ್ತದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ನಾನು ಅಡ್ಡ ಮತದಾನ ಮಾಡಿಲ್ಲ. ಕಾಂಗ್ರೆಸ್ಗೆ ಮತ ಚಲಾಯಿಸಿರುವುದಾಗಿ ಶ್ರೀನಿವಾಸಗೌಡ ಹೇಳಿದ್ದರು. ಶಾಸಕ ಶ್ರೀನಿವಾಸ್ ಅವರು, ತಾವು ಬಿಜೆಪಿ ಪರ ಮತ ಚಲಾಯಿಸಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಆದರೆ, ಇದನ್ನು ಒಪ್ಪದ ಜೆಡಿಎಸ್, ಆ ಇಬ್ಬರು ಶಾಸಕರ ವಿರುದ್ಧ ಸ್ಪೀಕರ್ಗೆ ದೂರು ನೀಡಲು ನಿರ್ಧರಿಸಿದ್ದು, ಒಂದೆರಡು ದಿನಗಳಲ್ಲಿ ದೂರು ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಓದಿ: ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನ: ಪ್ರಧಾನಿ ಸ್ವಾಗತಕ್ಕೆ ಸಿದ್ಧವಾದ ಸಾಂಸ್ಕೃತಿಕ ನಗರಿ