ETV Bharat / state

ಚುನಾವಣೆಗೆ ಸಜ್ಜಾಗುತ್ತಿರುವ ಜೆಡಿಎಸ್​​​: ಇಂದಿನಿಂದ ಜಿಲ್ಲಾವಾರು ಸಭೆ - ಚುನಾವಣೆ ಸಿದ್ಧತೆ

ಪಕ್ಷ ಸಂಘಟನೆ, ಮುಂಬರುವ ಚುನಾವಣೆಗೆ ಸಿದ್ಧತೆ, ಪದಾಧಿಕಾರಿಗಳ ಬದಲಾವಣೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಲು ಇಂದಿನಿಂದ ಮತ್ತೆ ಜೆಡಿಎಸ್ ಜಿಲ್ಲಾವಾರು ಸಭೆಗಳನ್ನು ನಡೆಸುತ್ತಿದೆ.

ಜೆಡಿಎಸ್
author img

By

Published : Sep 16, 2019, 12:49 PM IST

ಬೆಂಗಳೂರು: ಪಕ್ಷ ಸಂಘಟನೆ, ಮುಂಬರುವ ಚುನಾವಣೆಗೆ ಸಿದ್ಧತೆ, ಪದಾಧಿಕಾರಿಗಳ ಬದಲಾವಣೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಲು ಇಂದಿನಿಂದ ಮತ್ತೆ ಜೆಡಿಎಸ್ ಜಿಲ್ಲಾವಾರು ಸಭೆಗಳನ್ನು ನಡೆಸುತ್ತಿದೆ.

ಕಳೆದ ಆಗಸ್ಟ್ ತಿಂಗಳಿನಲ್ಲಿ 13 ಜಿಲ್ಲೆಗಳ ಸಭೆ ನಡೆಸಿದ ಜೆಡಿಎಸ್, ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದಿನಿಂದ ಸೆಪ್ಟೆಂಬರ್ 20ರವರೆಗೆ ಮತ್ತೆ 17 ಜಿಲ್ಲೆಗಳ ಜಿಲ್ಲಾವಾರು ಸಭೆಗಳನ್ನು ನಡೆಸುತ್ತಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭಾಗವಹಿಸಲಿದ್ದು, ಜಿಲ್ಲಾವಾರು ಮುಖಂಡರು, ಪದಾಧಿಕಾರಿಗಳು, ಮಾಜಿ ಸಚಿವರು, ಮಾಜಿ ಸಂಸದರು, ಶಾಸಕರು, ಮಾಜಿ ಶಾಸಕರು, ಲೋಕಸಭೆ, ವಿಧಾನಸಭೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳನ್ನು ಸಭೆಗೆ ಆಹ್ವಾನಿಸಲಾಗಿದೆ.

ಇಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ಮುಖಂಡರ ಸಭೆ ನಡೆಯಲಿದೆ. ಸೆಪ್ಟೆಂಬರ್ 17ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಸೆಪ್ಟೆಂಬರ್ 18ರಂದು ರಾಯಚೂರು, ಯಾದಗಿರಿ, ಕಲಬುರಗಿ, 19ರಂದು ವಿಜಯಪುರ, ಬಾಗಲಕೋಟೆ, ಚಿಕ್ಕೋಡಿ, ಬೆಳಗಾವಿ, 20ರಂದು ಹುಬ್ಬಳ್ಳಿ, ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳ ಸಭೆ ನಡೆಸಲಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಹಳೇ ಮೈಸೂರು ಭಾಗದ 13 ಜಿಲ್ಲೆಗಳ ಪದಾಧಿಕಾರಿಗಳು ಹಾಗೂ ಮುಖಂಡರ ಸಭೆಯನ್ನು ಆಗಸ್ಟ್ ತಿಂಗಳಿನಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ನಡೆಸಿದ್ದರು. ಉತ್ತರ ಕರ್ನಾಟಕ ಹಾಗೂ ಕರಾವಳಿ ಭಾಗದಲ್ಲಿ ಮಳೆ ಹಾಗೂ ಪ್ರವಾಹ ಉಂಟಾಗಿದ್ದ ಹಿನ್ನೆಲೆಯಲ್ಲಿ ಜಿಲ್ಲಾವಾರು ಸಭೆಗಳನ್ನು ಮುಂದೂಡಲಾಗಿತ್ತು.

Intro:ಬೆಂಗಳೂರು : ಪಕ್ಷ ಸಂಘಟನೆ, ಮುಂಬರುವ ಚುನಾವಣೆ ಸಿದ್ಧತೆ, ಪದಾಧಿಕಾರಿಗಳ ಬದಲಾವಣೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಲು ಇಂದಿನಿಂದ ಮತ್ತೆ ಜೆಡಿಎಸ್ ಜಿಲ್ಲಾವಾರು ಸಭೆಗಳನ್ನು ನಡೆಸುತ್ತಿದೆ.Body:ಕಳೆದ ಆಗಸ್ಟ್ ತಿಂಗಳಿನಲ್ಲಿ 13 ಜಿಲ್ಲೆಗಳ ಸಭೆ ನಡೆಸಿದ ಜೆಡಿಎಸ್, ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದಿನಿಂದ ಸೆಪ್ಟೆಂಬರ್ 20 ರವರೆಗೆ ಮತ್ತೆ 17 ಜಿಲ್ಲೆಗಳ ಜಿಲ್ಲಾವಾರು ಸಭೆಗಳನ್ನು ನಡೆಸಲಾಗುತ್ತಿದೆ.
ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ಕೆ. ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭಾಗವಹಿಸಲಿದ್ದು,
ಜಿಲ್ಲಾವಾರು ಮುಖಂಡರು, ಪದಾಧಿಕಾರಿಗಳು, ಮಾಜಿ ಸಚಿವರು, ಮಾಜಿ ಸಂಸದರು, ಶಾಸಕರು, ಮಾಜಿ ಶಾಸಕರು, ಲೋಕಸಭೆ, ವಿಧಾನಸಭೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳನ್ನು ಸಭೆಗೆ ಆಹ್ವಾನಿಸಲಾಗಿದೆ.
ಇಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ಮುಖಂಡರ ಸಭೆ ನಡೆಯಲಿದೆ.
ಸೆ. 17 ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳ ಸಭೆ ನಡೆಸಲು ತೀರ್ಮಾನಿಸಲಾಗಿದೆ.
ಸೆ.18 ರಂದು ರಾಯಚೂರು, ಯಾದಗಿರಿ, ಕಲಬುರಗಿ, 19 ರಂದು ವಿಜಯಪುರ, ಬಾಗಲಕೋಟೆ, ಚಿಕ್ಕೋಡಿ, ಬೆಳಗಾವಿ, 20 ರಂದು ಹುಬ್ಬಳ್ಳಿ, ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳ ಸಭೆ ನಡೆಸಲಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಹಳೇ ಮೈಸೂರು ಭಾಗದ 13 ಜಿಲ್ಲೆಗಳ ಪದಾಧಿಕಾರಿಗಳು ಹಾಗೂ ಮುಖಂಡರ ಸಭೆಯನ್ನು ಆಗಸ್ಟ್ ತಿಂಗಳಿನಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ನಡೆಸಿದ್ದರು. ಉತ್ತರ ಕರ್ನಾಟಕ ಹಾಗೂ ಕರಾವಳಿ ಭಾಗದಲ್ಲಿ ಮಳೆ ಹಾಗೂ ಪ್ರವಾಹ ಉಂಟಾಗಿದ್ದ ಹಿನ್ನೆಲೆಯಲ್ಲಿ ಜಿಲ್ಲಾವಾರು ಸಭೆಗಳನ್ನು ಮುಂದೂಡಲಾಗಿತ್ತು.
Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.