ಬೆಂಗಳೂರು: ಕೆಂಪೇಗೌಡ ಪ್ರತಿಮೆ ಉದ್ಘಾಟನೆಗೆ ದೇವೇಗೌಡರಿಲ್ಲ ಆಹ್ವಾನ ನೀಡಿಲ್ಲ ಎಂದು ಕೆಂಪೇಗೌಡ ಪ್ರತಿಮೆ ಬಳಿ ಜೆಡಿಎಸ್ ಮುಖಂಡ ಶರವಣ ನೇತೃತ್ವದಲ್ಲಿ ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಯಿತು.
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿನ್ನೆಯಷ್ಟೇ ನಾಡಪ್ರಭು ಕೆಂಪೇಗೌಡರ 108 ಅಡಿ ಪ್ರಗತಿ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದರು. ಆದರೆ, ಈ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ದೇವೇಗೌಡರನ್ನು ಆಹ್ವಾನಿಸಿರಲಿಲ್ಲ. ಇದರಿಂದ ಆಕ್ರೋಶಗೊಂಡ ಜೆಡಿಎಸ್ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದ್ದಾರೆ.
ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಸೇರಿದಂತೆ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಶರವಣ ಮಾತನಾಡಿ, ದೇವೇಗೌಡರನ್ನು ನಿರ್ಲಕ್ಷ್ಯ ಮಾಡಿ ಒಕ್ಕಲಿಗ ಸಮುದಾಯಕ್ಕೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿದರು. ಜೊತೆಗೆ ನಿಸರ್ಗ ನಾರಾಯಣಸ್ವಾಮಿ ಮಾತನಾಡಿ, ದೇವೇಗೌಡರನ್ನು ಆಹ್ವಾನಿಸದೇ ಕೇವಲ ಬಿಜೆಪಿ ಕಾರ್ಯಕ್ರಮವಾಗಿ ಮಾಡಿರುವ ಬಗ್ಗೆ ಮುಂದೆ ರಾಜ್ಯದ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಇದನ್ನೂ ಓದಿ:ಕೆಂಪೇಗೌಡರನ್ನು ಒಂದು ಸಮುದಾಯಕ್ಕೆ ಸೀಮಿತವಾಗಿರಿಸುವುದು ಸರಿಯಲ್ಲ: ಎಂ ಬಿ ಪಾಟೀಲ್