ETV Bharat / state

ಮಾಡಿದ ತಪ್ಪನ್ನೇ ಲಜ್ಜೆಗೆಟ್ಟು ಸಮರ್ಥಿಸಿಕೊಳ್ಳುವುದು ಬಿಜೆಪಿಗೆ ಸಿದ್ಧಿಸಿರುವ ಕಲೆ: ಜೆಡಿಎಸ್‍ ವಾಗ್ದಾಳಿ - JDS tweets against bjp

ಕೆಂಪೇಗೌಡರ ಪ್ರತಿಮೆ ಅನಾವಣ ಕಾರ್ಯಕ್ರಮಕ್ಕೆ ಅಧಿಕೃತ ಆಹ್ವಾನ ಪತ್ರಿಕೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಹೆಸರಿಲ್ಲ. ಆದರೆ, ಮುಖ್ಯಮಂತ್ರಿಗಳೇ ಪತ್ರ ಬರೆದು ಹೆಚ್ ಡಿ ದೇವೇಗೌಡರನ್ನು ಆಹ್ವಾನಿಸಿದ್ದಾರೆಂದು ಜನರ ದಿಕ್ಕು ತಪ್ಪಿಸುತ್ತಿರುವ ರಾಜ್ಯ ಬಿಜೆಪಿ ಸರ್ಕಾರ, ಅಸಲಿ ಕಥೆಯನ್ನೇ ಮುಚ್ಚಿಡುತ್ತಿದೆ ಎಂದು ಜೆಡಿಎಸ್​ ಆಕ್ರೋಶ ವ್ಯಕ್ತಪಡಿಸಿದೆ.

jds
ಜೆಡಿಎಸ್‍
author img

By

Published : Nov 12, 2022, 11:11 AM IST

ಬೆಂಗಳೂರು : ಮಾಡಿದ ತಪ್ಪನ್ನೇ ಲಜ್ಜೆಗೆಟ್ಟು ಸಮರ್ಥಿಸಿಕೊಳ್ಳುವುದು ಭಾರತೀಯ ಜನತಾ ಪಕ್ಷಕ್ಕೆ ಸಿದ್ಧಿಸಿರುವ ಕಲೆ ಎಂದು ಜೆಡಿಎಸ್‍ ಪಕ್ಷ ಲೇವಡಿ ಮಾಡಿದೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಜೆಡಿಎಸ್‍, ಕೆಂಪೇಗೌಡರ ಪ್ರತಿಮೆ ಅನಾವಣ ಕಾರ್ಯಕ್ರಮಕ್ಕೆ ಅಧಿಕೃತ ಆಹ್ವಾನ ಪತ್ರಿಕೆಯಲ್ಲಿ ಹೆಸರಿಲ್ಲ. ಆದರೆ, ಮುಖ್ಯಮಂತ್ರಿಗಳೇ ಪತ್ರ ಬರೆದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಆಹ್ವಾನಿಸಿದ್ದಾರೆಂದು ಜನರ ದಿಕ್ಕು ತಪ್ಪಿಸುತ್ತಿರುವ ರಾಜ್ಯ ಬಿಜೆಪಿ ಸರ್ಕಾರ, ಅಸಲಿ ಕಥೆಯನ್ನೇ ಮುಚ್ಚಿಡುತ್ತಿದೆ ಎಂದು ಕಿಡಿಕಾರಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಜಿ ಪ್ರಧಾನಿಗೆ ಕರೆ ಮಾಡಿ ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಆಹ್ವಾನಿಸಿ ಪತ್ರ ಬರೆದಿದ್ದಾರೆ ಎಂದು ಬಿಜೆಪಿ ಟ್ವೀಟ್ ಮಾಡಿದೆ. ನವೆಂಬರ್‌ 11ರ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಪತ್ರ ಬರೆದಿದ್ದು ಯಾವಾಗ?, ಆ ಪತ್ರವನ್ನು ಮಾಜಿ ಪ್ರಧಾನಿಯವರ ನಿವಾಸಕ್ಕೆ ತಲುಪಿಸಿದ್ದು ಯಾವಾಗ? ಎಂದು ಜೆಡಿಎಸ್‍ ಪ್ರಶ್ನಿಸಿದೆ.

  • ಕುಟುಂಬ ರಾಜಕಾರಣ ಅಂತೀರಾ? ಗುಜರಾತಿನಿಂದ ಶುರುವಾಗಿ ದೆಹಲಿವರೆಗೂ ಹಬ್ಬಿ, ಬಿಸಿಸಿಐ ಒಳಹೊಕ್ಕಿ ಕೂತಿದ್ದು ಯಾರ ಕುಟುಂಬ?
    ಕರ್ನಾಟಕದಲ್ಲಿ ಬೆಳೆದು ನಿಂತ ಬಿಜೆಪಿ ವಂಶವೃಕ್ಷಗಳೆಷ್ಟು? ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ, ಗುಜರಾತ್ ನಿಂದ ಒಡಿಶಾವರೆಗೆ ವ್ಯಾಪಿಸಿರುವ ಬಿಜೆಪಿ ವಂಶವೃಕ್ಷಗಳ ಕೊಂಬೆಗಳ ಲೆಕ್ಕ ಬಿಚ್ಚಿಡಬೇಕೆ? 8/8

    — Janata Dal Secular (@JanataDal_S) November 12, 2022 " class="align-text-top noRightClick twitterSection" data=" ">

ಕಮಲದವರ ಕಣ್ಣಿಗೆ ಕಾಮಾಲೆ ಬಡಿದಿದೆಯಾ, ಹೇಗೆ? ಘನತೆವೆತ್ತ ಮಾನ್ಯ ಮುಖ್ಯಮಂತ್ರಿಗಳು ಬರೆದ ʼಘನವೇತ್ತʼ ಪತ್ರವನ್ನೊಮ್ಮೆ 'ಸಂಘ ಸಂಸ್ಕಾರ'ದ ಬಿಜೆಪಿಗರು ಗಮನಿಸಬೇಕು. ಪತ್ರದಲ್ಲಿ ಮಾಜಿ ಪ್ರಧಾನಿಗಳ ಹೆಸರೆಲ್ಲಿ ಬರೆಯಲ್ಪಟ್ಟಿದೆ? (ಕೊನೆಯಲ್ಲಿ) ಕನ್ನಡ ನೆಲದ ಏಕೈಕ ಪ್ರಧಾನಿಯಾಗಿದ್ದ ಮೇರು ನಾಯಕರಿಗೆ ಪತ್ರ ಬರೆಯುವ ಸಂಸ್ಕಾರ, ಶಿಷ್ಟಾಚಾರ ಇದೇನಾ? ಎಂದು ಕಿಡಿಕಾರಿದೆ.

ಇದನ್ನೂ ಓದಿ: ದೇವೆಗೌಡರಿಗೆ ಆಹ್ವಾನಿಸದಿದ್ದಕ್ಕೆ ಜೆಡಿಎಸ್‍ ಆಕ್ರೋಶ: ನಾಡಪ್ರಭು ಕೆಂಪೇಗೌಡರು ಬಿಜೆಪಿ ಆಸ್ತಿಯಲ್ಲಎಂದು ಗರಂ

ಮರುದಿನ 12.50ರ ಸಮಾರಂಭಕ್ಕೆ ರಾತ್ರಿ 9 ಗಂಟೆಗೆ ಮಾಜಿ ಪ್ರಧಾನಿಗಳಿಗೆ ಕಾಟಾಚಾರದ ಕರೆ ಮಾಡಿದ ಮುಖ್ಯಮಂತ್ರಿಗಳು, ತಾವು ಬರೆದ ಪತ್ರವನ್ನು ತಲುಪಿಸಿದ್ದು ಮಧ್ಯರಾತ್ರಿ 12.30 ಗಂಟೆಗೆ. ಹಾಗಾದ್ರೆ, ಅವರ ಮೊದಲ ಪತ್ರ ಹೋಗಿದ್ದು ಯಾರಿಗೆ?, ಇಂಥ ಹಿರಿಯರ ವಿಷಯದಲ್ಲಿ ಜಬಾಬ್ದಾರಿ ಸ್ಥಾನದಲ್ಲಿರುವ ಮುಖ್ಯಮಂತ್ರಿಗಳು ವರ್ತಿಸುವ ರೀತಿ ಹೀಗೇನಾ?. ಇದರಲ್ಲಿ ಸುಳ್ಳಾಡುವುದೇನಿದೆ? ಮುಖ್ಯಮಂತ್ರಿಗಳು ಬರೆದ ಪತ್ರವನ್ನು ಇಲ್ಲಿ ಲಗತ್ತಿಸಲಾಗಿದೆ. ಹಾಗಾದರೆ, ಮುಖ್ಯಮಂತ್ರಿಗಳೇ ಎಲ್ಲವನ್ನೂ ಹೇಳಲಿ. ಜನರಿಗೂ ಸತ್ಯ ಯಾವುದು? ಸುಳ್ಳು ಯಾವುದು? ಎನ್ನುವುದು ತಿಳಿಯಲಿ. ಸತ್ಯ ಹೇಳುವ ಧಮ್ಮು, ತಾಕತ್ತು ಮುಖ್ಯಮಂತ್ರಿಗಳಿಗೆ ಇದೆ ಎಂದು ನಾವು ಭಾವಿಸುತ್ತೇವೆ ಎಂದು ಸಿಎಂಗೆ ತಿರುಗೇಟು ನೀಡಿದೆ.

  • ಇದರಲ್ಲಿ ಸುಳ್ಳಾಡುವುದೇನಿದೆ? ಮುಖ್ಯಮಂತ್ರಿಗಳು ಬರೆದ ಪತ್ರವನ್ನು ಇಲ್ಲಿ ಲಗತ್ತಿಸಲಾಗಿದೆ. ಹಾಗಾದರೆ, ಮುಖ್ಯಮಂತ್ರಿಗಳೇ ಎಲ್ಲವನ್ನೂ ಹೇಳಲಿ. ಜನರಿಗೂ ಸತ್ಯ ಯಾವುದು? ಸುಳ್ಳು ಯಾವುದು? ಎನ್ನುವುದು ತಿಳಿಯಲಿ.
    ಸತ್ಯ ಹೇಳುವ ದಮ್ಮು, ತಾಖತ್ತು ಮುಖ್ಯಮಂತ್ರಿಗಳಿಗೆ ಇದೆ ಎಂದು ನಾವು ಭಾವಿಸುತ್ತೇವೆ. 5/8 pic.twitter.com/e0fdTqHB1X

ಬಿಜೆಪಿಗೆ ನಾಚಿಕೆಯಾಗಬೇಕು, ಹಿಂದಿ ಹೇರಿಕೆ ವಾಕರಿಕೆ ಬರುವಷ್ಟಿದೆ. ಉದ್ಯೋಗದಲ್ಲಿ ಕನ್ನಡಿಗರಿಗೆ ಪಂಗನಾಮ. ಈ ನೆಲದ ಸಂಸ್ಕೃತಿ, ಭಾಷೆ, ಆಚಾರ-ವಿಚಾರಗಳನ್ನು ಹತ್ತಿಕ್ಕಿ ಇಡೀ ದಕ್ಷಿಣ ಭಾರತೀಯರನ್ನು ದೆಹಲಿ ಗುಲಾಮರನ್ನಾಗಿ ಮಾಡಲು ಹೊರಟಿರುವ ಬಿಜೆಪಿಗರು ಕನ್ನಡದ ಮಣ್ಣಿನ ಮಕ್ಕಳನ್ನು ಗುರುತಿಸಿದ್ದಾರಾ? ಎಂದು ಜನತಾ ಪಕ್ಷ ಪ್ರಶ್ನೆ ಮಾಡಿದೆ.

ಇದನ್ನೂ ಓದಿ: ನ.14 ರಿಂದ ಜೆಡಿಎಸ್‍ ಪಂಚರತ್ನ ರಥಯಾತ್ರೆ ಆರಂಭ

'ಸಬ್ ಕಾ ಸಾಥ್, ಸಬ್ ಕಾ ವಿಕಾಸ್' ಇದು ಭಾರತ ಕಂಡ ಪರಮ ಢೋಂಗಿ ಘೋಷಣೆ. ಇದಕ್ಕೆ 'ಸಬ್ ಕಾ ಸರ್ವನಾಶ್' ಎಂದು ಸೇರಿದರೆ ಪರಿಪೂರ್ಣ. ಕರ್ನಾಟಕದಲ್ಲಿ ಶಿಕ್ಷಣ, ಧರ್ಮ, ಜಾತಿ, ಆಚಾರ, ವಿಚಾರ, ಆಹಾರ, ಉಡುಪುಗಳ ವಿಷಯದಲ್ಲೂ ಬಿಜೆಪಿ ಮಾಡಿದ್ದು ಸಾಕ್ಷಾತ್ ಸರ್ವನಾಶವೇ ಎಂದು ಬಿಜೆಪಿ ಸರ್ಕಾರದ ವಿರುದ್ಧ ಜೆಡಿಎಸ್​ ವಾಗ್ದಾಳಿ ನಡೆಸಿದೆ.

ಕುಟುಂಬ ರಾಜಕಾರಣ ಅಂತೀರಾ? ಗುಜರಾತಿನಿಂದ ಶುರುವಾಗಿ ದೆಹಲಿವರೆಗೂ ಹಬ್ಬಿ, ಬಿಸಿಸಿಐ ಒಳಹೊಕ್ಕಿ ಕೂತಿದ್ದು ಯಾರ ಕುಟುಂಬ?. ಕರ್ನಾಟಕದಲ್ಲಿ ಬೆಳೆದು ನಿಂತ ಬಿಜೆಪಿ ವಂಶ ವೃಕ್ಷಗಳೆಷ್ಟು?, ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ, ಗುಜರಾತ್​ನಿಂದ ಒಡಿಶಾವರೆಗೆ ವ್ಯಾಪಿಸಿರುವ ಬಿಜೆಪಿ ವಂಶ ವೃಕ್ಷಗಳ ಕೊಂಬೆಗಳ ಲೆಕ್ಕ ಬಿಚ್ಚಿಡಬೇಕೆ? ಎಂದು ಜೆಡಿಎಸ್‍ ಪ್ರಶ್ನಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.