ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಜಾತ್ಯತೀತರಾಗಿರದೇ ಇದ್ದಲ್ಲಿ ನೀವು ಈವರೆಗೆ ಏನೇನೋ ಆಗಿದ್ದೀರಲ್ಲಾ ಅದರಲ್ಲಿ ಏನೊಂದೂ ಆಗುತ್ತಿರಲಿಲ್ಲ. ನಿಮಗೆ ಏಣಿಯಾಗಿ, ಹೆಗಲಾಗಿದ್ದ ಅವರ ಬೆನ್ನಿಗಿರಿದ ಅಪರ ಬ್ರೂಟಸ್ ನೀವು. ಬೂಟಾಟಿಕೆ ಮಾಡಿಕೊಂಡೇ ರಾಜಕೀಯ ಬದುಕು ಕಟ್ಟಿಕೊಂಡವರು ನೀವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ಟೀಕೆ ಮಾಡಿದೆ.
ಜೆಡಿಎಸ್ ಟೀಕಾಸಮರ: ಶಾಪ ಹಾಕುವುದನ್ನು ಗೌಡರೆಂದೂ ಮಾಡಿಲ್ಲ, ಮಾಡುವುದೂ ಇಲ್ಲ. ಅವರ ಹಸ್ತ ಅಭಯ ಹಸ್ತ. ಅದು ಆಶೀರ್ವಾದ, ಅನುಗ್ರಹದ ದ್ಯೋತಕ. ಗುರುಸ್ವಾಮಿ ಎಂಬ ಅನಾಮಧೇಯ ವ್ಯಕ್ತಿ ಎದುರು ಸೋತ ನಿಮ್ಮನ್ನು ಅನುಗ್ರಹದಲ್ಲಿಯೇ ಅವರು ಅನುಗ್ರಹಿಸಿದ್ದು ಮರೆತಿರಾ?. ಅಂದು ಆ ಕೈ ನಿಮ್ಮ ಕೈ ಹಿಡಿಯದಿದ್ದರೆ ನೀವಿಷ್ಟು ಎತ್ತರಕ್ಕೇರಲು ಸಾಧ್ಯವಿತ್ತೆ ಸಿದ್ದರಾಮಯ್ಯನವರೇ?.
-
ಮಾನ್ಯ ಮಾಜಿ ಪ್ರಧಾನಿಗಳು ಹೇಳಿದ್ದರಲ್ಲಿ ಲವಲೇಶವೂ ಉತ್ಪ್ರೇಕ್ಷೆ ಇಲ್ಲ. ಸಿದ್ದರಾಮಯ್ಯ, ಡಿಕೆಶಿ ನೇತೃತ್ವದಲ್ಲಿ ಇಲ್ಲಿ ಕಾಂಗ್ರೆಸ್ ಅಂತ್ಯ ಕಾಣುತ್ತದೆ, ಹೌದು. ದೇಶವನ್ನು ಜಾತಿ,ಧರ್ಮದಿಂದಲೇ ವಿಭಜಿಸಿ ಪ್ರಜಾಪ್ರಭುತ್ವವನ್ನೇ ಅಂತ್ಯ ಕಾಣಿಸಲು ಹೊರಟಿದ್ದ ಕಾಂಗ್ರೆಸ್, ಚರಿತ್ರೆಯ ಕೊನೇಪುಟದಲ್ಲಿ ಏದುಸಿರು ಬಿಡುತ್ತಿದೆ.1/11#ಸೊಕ್ಕಿನ_ಮನುಷ್ಯ
— Janata Dal Secular (@JanataDal_S) January 7, 2024 " class="align-text-top noRightClick twitterSection" data="
">ಮಾನ್ಯ ಮಾಜಿ ಪ್ರಧಾನಿಗಳು ಹೇಳಿದ್ದರಲ್ಲಿ ಲವಲೇಶವೂ ಉತ್ಪ್ರೇಕ್ಷೆ ಇಲ್ಲ. ಸಿದ್ದರಾಮಯ್ಯ, ಡಿಕೆಶಿ ನೇತೃತ್ವದಲ್ಲಿ ಇಲ್ಲಿ ಕಾಂಗ್ರೆಸ್ ಅಂತ್ಯ ಕಾಣುತ್ತದೆ, ಹೌದು. ದೇಶವನ್ನು ಜಾತಿ,ಧರ್ಮದಿಂದಲೇ ವಿಭಜಿಸಿ ಪ್ರಜಾಪ್ರಭುತ್ವವನ್ನೇ ಅಂತ್ಯ ಕಾಣಿಸಲು ಹೊರಟಿದ್ದ ಕಾಂಗ್ರೆಸ್, ಚರಿತ್ರೆಯ ಕೊನೇಪುಟದಲ್ಲಿ ಏದುಸಿರು ಬಿಡುತ್ತಿದೆ.1/11#ಸೊಕ್ಕಿನ_ಮನುಷ್ಯ
— Janata Dal Secular (@JanataDal_S) January 7, 2024ಮಾನ್ಯ ಮಾಜಿ ಪ್ರಧಾನಿಗಳು ಹೇಳಿದ್ದರಲ್ಲಿ ಲವಲೇಶವೂ ಉತ್ಪ್ರೇಕ್ಷೆ ಇಲ್ಲ. ಸಿದ್ದರಾಮಯ್ಯ, ಡಿಕೆಶಿ ನೇತೃತ್ವದಲ್ಲಿ ಇಲ್ಲಿ ಕಾಂಗ್ರೆಸ್ ಅಂತ್ಯ ಕಾಣುತ್ತದೆ, ಹೌದು. ದೇಶವನ್ನು ಜಾತಿ,ಧರ್ಮದಿಂದಲೇ ವಿಭಜಿಸಿ ಪ್ರಜಾಪ್ರಭುತ್ವವನ್ನೇ ಅಂತ್ಯ ಕಾಣಿಸಲು ಹೊರಟಿದ್ದ ಕಾಂಗ್ರೆಸ್, ಚರಿತ್ರೆಯ ಕೊನೇಪುಟದಲ್ಲಿ ಏದುಸಿರು ಬಿಡುತ್ತಿದೆ.1/11#ಸೊಕ್ಕಿನ_ಮನುಷ್ಯ
— Janata Dal Secular (@JanataDal_S) January 7, 2024
ಜಾತ್ಯತೀತತೆ ನೀವಷ್ಟೇ ಹೇಳಬೇಕು ಸಿದ್ದರಾಮಯ್ಯನವರೇ. ಸಿಎಂ ಸಚಿವಾಲಯದ ಕೊಳಕು ಕೊಡವಿದರೆ ನಿಮ್ಮ ಢೋಂಗಿ ಜಾತ್ಯತೀತತೆಯ ಅಸಲಿ ಮುಖ ಕಳಚಿ ಬೀಳುತ್ತದೆ. ಅಭಿಪ್ರಾಯ, ಭಿನ್ನಾಭಿಪ್ರಾಯ, ಪ್ರಾಮಾಣಿಕತೆ, ಜಾತ್ಯತೀತತೆ ಈ ಪದಗಳೆಲ್ಲ ನಿಮಗೆ ಆಗಿ ಬರಲ್ಲ. ನಿಮ್ಮದೇನಿದ್ದರೂ ಏಕಾಭಿಪ್ರಾಯ. ಸರ್ವಾಧಿಕಾರ ಧೋರಣೆ, ತುಘಲಕ್ ಮನಸ್ಥಿತಿ. ಹೆಚ್.ಡಿ.ದೇವೇಗೌಡರು ಸಾಮಾಜಿಕ ನ್ಯಾಯ, ಜಾತ್ಯತೀತತೆ, ನಂಬಿಕೆ, ವಿಶ್ವಾಸಾರ್ಹತೆ ಉಳ್ಳವರು ಆಗಿಲ್ಲದಿದ್ದಿದ್ದರೆ ನೀವು ಈವರೆಗೆ ಏನೇನೋ ಆಗಿದ್ದಿರಲ್ಲಾ ಅದರಲ್ಲಿ ಏನೊಂದೂ ಆಗುತ್ತಿರಲಿಲ್ಲ. ನಿಮಗೆ ಏಣಿಯಾಗಿ, ಹೆಗಲಾಗಿದ್ದ ಅವರ ಬೆನ್ನಿಗಿರಿದ 'ಅಪರ ಬ್ರೂಟಸ್' ನೀವು. ಬೂಟಾಟಿಕೆ ಮಾಡಿಕೊಂಡೇ ರಾಜಕೀಯ ಬದುಕು ಕಟ್ಟಿಕೊಂಡವರು ನೀವು.
ಯಾರು, ಯಾರ ಸಂಗ ಮಾಡಿದ್ದರು?. ಯಾವ ಗಾಳಿ ಯಾರಿಗೆ ಸೋಕಿತ್ತು? ನಿಮ್ಮ ಇಂಥ ಕಾಗಕ್ಕ, ಗುಬ್ಬಕ್ಕ ಕಥೆಗಳ ಮೂಲಕ್ಕೆ ಹೋದರೆ ನೀವೇ ಬೆತ್ತಲೆ ಸ್ಥಿತಿಯಲ್ಲಿ ನಿಲ್ಲಬೇಕಾಗುತ್ತದೆ. ಅಂತಹ ಸ್ಥಿತಿ ತಂದುಕೊಳ್ಳಬೇಡಿ. ನಿಮ್ಮ ರಾಜಕೀಯ ಅಂತ್ಯಕಾಲ ಆನಂದವಾಗಿರಲಿ, ಅದಕ್ಕೆ ಕಳಂಕ ಮೆತ್ತಿಕೊಳ್ಳಬೇಡಿ ಎನ್ನುವುದು ನಮ್ಮ ಕಳಕಳಿಯ ಸಲಹೆ. ನಿಮ್ಮಂಥ ಆತ್ಮಸಾಕ್ಷಿಹೀನರು ಇದ್ದರೆ ಕಾಂಗ್ರೆಸ್ ಅಂತ್ಯವಾಗುತ್ತದೆ, ನಿಜ. ಜೆಡಿಎಸ್ ಪಕ್ಷವನ್ನು ಅಂತ್ಯ ಕಾಣಿಸಲು ನೀವು ಆಡುತ್ತಿರುವ 'ಸಿದ್ದಾರಮೆ ಆಟ' ಯಾರಿಗೆ ಗೊತ್ತಿಲ್ಲ?. ಇವತ್ತಿಗೂ ಕತ್ತಲಾದೊಡನೆ ನಮ್ಮ ಪಕ್ಷದ ನಾಯಕರ ಮನೆಗಳ ಮುಂದೆ ಠಳಾಯಿಸುವ ನಿಮ್ಮ ಕತ್ತಲು ಗಿರಾಕಿಗಳ ಬಗ್ಗೆ ಹೇಳಬೇಕೆ? ಜೆಡಿಎಸ್ನ ಅಂತ್ಯ ನಿಮ್ಮ ಕನಸು ಅಷ್ಟೇ.
-
ನೈಸ್ ಯೋಜನೆ ಸರಕಾರದ ವಶಕ್ಕೆ ಪಡೆಯುವುದು ನಿಮಗೆ ಇಷ್ಟ ಇಲ್ಲದಿದ್ದರೆ ಹೇಳಿ? ಆ ಕಳಂಕ, ಆ ಕಪ್ಪುಚುಕ್ಕೆ ಹೊತ್ತುಕೊಂಡೇ ರಾಜಕೀಯ ಅಂತ್ಯ ಕಾಣಬೇಕೆ? ನಿಮ್ಮ ಹಣೆಯಲ್ಲಿ ಹಾಗೆಯೇ ಬರೆದಿದ್ದರೆ ಯಾರು ಏನು ಮಾಡಿಯಾರು? ಅಲ್ಲಿಯೂ ಯಾವುದಾದರೂ 'ಅತೀಂದ್ರ ಶಕ್ತಿ' ಅಡಗಿ ಕೂತಿದೆಯಾ? ನಿಮ್ಮ ಮೌನ ಆ ಅನುಮಾನಕ್ಕೆ ಕಾರಣ. ದಯಮಾಡಿ ಮಾತನಾಡಿ.11/11
— Janata Dal Secular (@JanataDal_S) January 7, 2024 " class="align-text-top noRightClick twitterSection" data="
">ನೈಸ್ ಯೋಜನೆ ಸರಕಾರದ ವಶಕ್ಕೆ ಪಡೆಯುವುದು ನಿಮಗೆ ಇಷ್ಟ ಇಲ್ಲದಿದ್ದರೆ ಹೇಳಿ? ಆ ಕಳಂಕ, ಆ ಕಪ್ಪುಚುಕ್ಕೆ ಹೊತ್ತುಕೊಂಡೇ ರಾಜಕೀಯ ಅಂತ್ಯ ಕಾಣಬೇಕೆ? ನಿಮ್ಮ ಹಣೆಯಲ್ಲಿ ಹಾಗೆಯೇ ಬರೆದಿದ್ದರೆ ಯಾರು ಏನು ಮಾಡಿಯಾರು? ಅಲ್ಲಿಯೂ ಯಾವುದಾದರೂ 'ಅತೀಂದ್ರ ಶಕ್ತಿ' ಅಡಗಿ ಕೂತಿದೆಯಾ? ನಿಮ್ಮ ಮೌನ ಆ ಅನುಮಾನಕ್ಕೆ ಕಾರಣ. ದಯಮಾಡಿ ಮಾತನಾಡಿ.11/11
— Janata Dal Secular (@JanataDal_S) January 7, 2024ನೈಸ್ ಯೋಜನೆ ಸರಕಾರದ ವಶಕ್ಕೆ ಪಡೆಯುವುದು ನಿಮಗೆ ಇಷ್ಟ ಇಲ್ಲದಿದ್ದರೆ ಹೇಳಿ? ಆ ಕಳಂಕ, ಆ ಕಪ್ಪುಚುಕ್ಕೆ ಹೊತ್ತುಕೊಂಡೇ ರಾಜಕೀಯ ಅಂತ್ಯ ಕಾಣಬೇಕೆ? ನಿಮ್ಮ ಹಣೆಯಲ್ಲಿ ಹಾಗೆಯೇ ಬರೆದಿದ್ದರೆ ಯಾರು ಏನು ಮಾಡಿಯಾರು? ಅಲ್ಲಿಯೂ ಯಾವುದಾದರೂ 'ಅತೀಂದ್ರ ಶಕ್ತಿ' ಅಡಗಿ ಕೂತಿದೆಯಾ? ನಿಮ್ಮ ಮೌನ ಆ ಅನುಮಾನಕ್ಕೆ ಕಾರಣ. ದಯಮಾಡಿ ಮಾತನಾಡಿ.11/11
— Janata Dal Secular (@JanataDal_S) January 7, 2024
ಸೊಕ್ಕು ಎನ್ನುವುದು ನಿಮ್ಮ ಪೇಟೆಂಟ್. ಆ ನಿಮ್ಮ ಸದ್ಗುಣವನ್ನು ದೇವೇಗೌಡರಿಗೆ ಅಂಟಿಸುವ ಪಾಪದ ಕೆಲಸ ಮಾಡಬೇಡಿ. ಕರ್ನಾಟಕದ 'ಸೊಕ್ಕಿನ ಮನುಷ್ಯ' ಅಂತ ಯಾರಾದರೂ ಇದ್ದರೆ ಅದು ತಾವೇ ಸಿದ್ದರಾಮಯ್ಯನವರೇ. ನಿಮ್ಮ ಪಕ್ಷದ ಪಡಸಾಲೆಗೆ ಬಂದರೆ ಅಲ್ಲಿರುವ ಪ್ರತಿ ಬಾಗಿಲು ನಿಮ್ಮ ಸೊಕ್ಕಿನ ಕಥೆಗಳನ್ನೇ ಹೇಳುತ್ತವೆ. ಜನಾದೇಶವನ್ನು ದೇವೇಗೌಡರು ಎಂದೂ ಧಿಕ್ಕರಿಸಿಲ್ಲ. ಶಿರಸಾ ವಹಿಸಿದ್ದಾರೆ. ಅಂತಹ ಆಚಾರ, ವಿಚಾರ, ಸದ್ವಿಚಾರ, ಶಿಷ್ಟಾಚಾರವನ್ನು ನಿಮಗೆ ಕಲಿಸಿದ್ದೇ ಅವರು. ಆದರೆ, ಅಡ್ಡದಾರಿ ಆಯ್ಕೆ ಮಾಡಿಕೊಂಡ ನಿಮಗೆ ಇವೆಲ್ಲಾ ರುಚಿಸುತ್ತಿಲ್ಲ. ಸದ್ಯಕ್ಕೆ ನಿಮಗೆ ನೆಲ ಕಾಣುತ್ತಿಲ್ಲ. ನೆಲವೇ ಬುದ್ದಿ ಕಲಿಸುವ ಕಾಲ ಹತ್ತಿರದಲ್ಲಿದೆ. ಕಾಲ ಕ್ಷಣಿಕ.
ಜೆಡಿಎಸ್, ಬಿಜೆಪಿ ಬಿ ಟೀಮ್ ಎನ್ನುವ ನೀವು ಚುನಾವಣೆ ಬಂದಾಗಲೆಲ್ಲಾ ಮಾಡುವ ಮೊದಲ ಕೆಲಸ ಮ್ಯಾಚ್ ಫಿಕ್ಸಿಂಗ್ & ಇನ್ನೊಂದು ಟೀಮ್ ಗೆ ಬಾಲಂಗೋಚಿ ಆಗುವುದು. 2023ರ ವಿಧಾನಸಭೆ ಚುನಾವಣೆಯಲ್ಲೂ ಇದೇ ಆಟ ಅಡಿದಿರಿ. ಆ ನಿಮ್ಮ ರಂಗಿನಾಟ, ಕಳ್ಳಾಟ ದೇಶ ರಾಜಕಾರಣಕ್ಕೆ ಮಾದರಿ, ಏನಂತೀರಿ?.
ಮಾಜಿ ಪ್ರಧಾನಿಗಳು ಹೇಳಿದ್ದರಲ್ಲಿ ಲವಲೇಶವೂ ಉತ್ಪ್ರೇಕ್ಷೆ ಇಲ್ಲ. ಸಿದ್ದರಾಮಯ್ಯ, ಡಿಕೆಶಿ ನೇತೃತ್ವದಲ್ಲಿ ಇಲ್ಲಿ ಕಾಂಗ್ರೆಸ್ ಅಂತ್ಯ ಕಾಣುತ್ತದೆ, ಹೌದು. ದೇಶವನ್ನು ಜಾತಿ, ಧರ್ಮದಿಂದಲೇ ವಿಭಜಿಸಿ ಪ್ರಜಾಪ್ರಭುತ್ವವನ್ನೇ ಅಂತ್ಯ ಕಾಣಿಸಲು ಹೊರಟಿದ್ದ ಕಾಂಗ್ರೆಸ್, ಚರಿತ್ರೆಯ ಕೊನೆ ಪುಟದಲ್ಲಿ ಏದುಸಿರು ಬಿಡುತ್ತಿದೆ ಎಂದು ಸಿದ್ದರಾಮಯ್ಯ ವಿರುದ್ಧ ಸೊಕ್ಕಿನ ಮನುಷ್ಯ ಎನ್ನುವ ಹ್ಯಾಷ್ ಟ್ಯಾಗ್ ಬಳಸಿ ಜೆಡಿಎಸ್ ಟೀಕಿಸಿದೆ.
ಇದನ್ನೂ ಓದಿ: ಕತ್ತಲಲ್ಲಿ ಗೋಡೆ ಮೇಲೆ ಪೋಸ್ಟರ್ ಅಂಟಿಸುವ ಸ್ಥಿತಿಗೆ ಕಾಂಗ್ರೆಸ್ ಬಂದಿದೆ : ಜೆಡಿಎಸ್ ಕಿಡಿ
ದೇವೇಗೌಡರು ಕೇಳಿದ್ದು ನೈಸ್ ಯೋಜನೆಯನ್ನು ಸರ್ಕಾರದ ವಶಕ್ಕೆ ಪಡೆಯಿರಿ ಎಂದು. ಅವರು ಅದನ್ನೇ ಆಗ್ರಹಿಸಿ ಪತ್ರ ಬರೆದಿದ್ದರು. ನೀವು ಆ ಪಾಯಂಟ್ಗೆ ಬರುತ್ತಿಲ್ಲ. ಸತ್ಯದ ಸೊಲ್ಲೆತ್ತದೆ ಸೈಲೆಂಟಾಗಿ ನೈಸ್ ಅನ್ನು ಪಕ್ಕಕ್ಕೆ ಸರಿಸುತ್ತಿದ್ದೀರಿ. ಯಾಕೆ? ಹೇಳಿಬಿಡಿ ಕಾರಣ. ನೈಸ್ ಯೋಜನೆ ಸರ್ಕಾರದ ವಶಕ್ಕೆ ಪಡೆಯುವುದು ನಿಮಗೆ ಇಷ್ಟ ಇಲ್ಲದಿದ್ದರೆ ಹೇಳಿ? ಆ ಕಳಂಕ, ಆ ಕಪ್ಪು ಚುಕ್ಕೆ ಹೊತ್ತುಕೊಂಡೇ ರಾಜಕೀಯ ಅಂತ್ಯ ಕಾಣಬೇಕೆ?. ನಿಮ್ಮ ಹಣೆಯಲ್ಲಿ ಹಾಗೆಯೇ ಬರೆದಿದ್ದರೆ ಯಾರು ಏನು ಮಾಡಿಯಾರು? ಅಲ್ಲಿಯೂ ಯಾವುದಾದರೂ 'ಅತೀಂದ್ರ ಶಕ್ತಿ' ಅಡಗಿ ಕೂತಿದೆಯಾ?, ನಿಮ್ಮ ಮೌನ ಆ ಅನುಮಾನಕ್ಕೆ ಕಾರಣ. ದಯಮಾಡಿ ಮಾತನಾಡಿ ಎಂದು ಜೆಡಿಎಸ್ ಆಗ್ರಹಿಸಿದೆ.