ETV Bharat / state

ಇದು ಚುನಾವಣೆ ವರ್ಷ, ಪಕ್ಷದಲ್ಲಿ ಕೆಲಸ ಮಾಡಿ ಇಲ್ಲವೇ ಜಾಗ ಖಾಲಿ ಮಾಡಿ: ಕುಮಾರಸ್ವಾಮಿ ತಾಕೀತು - ಪದಾಧಿಕಾರಿಗಳಿಗೆ ಸ್ಪಷ್ಟ ಕಾರ್ಯಸೂಚಿ ಹೆಚ್​​ಡಿಕೆ ನಿಗದಿ

ಜೆಡಿಎಸ್ ಪದಾಧಿಕಾರಿಗಳ ಸಭೆ. ಹೊಸ ನಾಯಕರತ್ವ ಹುಟ್ಟು ಹಾಕಲು ಕುಮಾರಸ್ವಾಮಿ ಕಿವಿಮಾತು. ಜೊತೆಗೆ ಪಕ್ಷದಲ್ಲಿ ಮಾಡಿ ಇಲ್ಲವೇ ಜಾಗ ಖಾಲಿ ಮಾಡಿ ಎಂದು ಎಚ್ಚರಿಕೆ ನೀಡಿದರು.

ಜೆಡಿಎಸ್ ರಾಜ್ಯ ಪದಾಧಿಕಾರಿಗಳ ಸಭೆ
ಜೆಡಿಎಸ್ ರಾಜ್ಯ ಪದಾಧಿಕಾರಿಗಳ ಸಭೆ
author img

By

Published : Sep 26, 2022, 3:53 PM IST

Updated : Sep 26, 2022, 9:15 PM IST

ಬೆಂಗಳೂರು: ಪಕ್ಷದ ಕೆಲಸ ಮಾಡದೇ ನಿರ್ಲಕ್ಷ್ಯ ಮಾಡುವವರಿಗೆ ಪಕ್ಷದಲ್ಲಿ ಜಾಗವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಪಕ್ಷ ಸಂಘಟನೆ, ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ರಾಜ್ಯ ಕಾರ್ಯಕಾರಿಣಿ ಮತ್ತು ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಪದಾಧಿಕಾರಿಗಳಾದವರು ಬದ್ಧತೆಯಿಂದ ಕೆಲಸ ಮಾಡಬೇಕು. ಪಕ್ಷದ ಕೆಲಸ ನಿರ್ಲಕ್ಷ್ಯ ಮಾಡುವುದನ್ನು ಸಹಿಸುವುದಿಲ್ಲ. ಇದು ಚುನಾವಣೆ ವರ್ಷ, ಎಲ್ಲರೂ ಸಂಘಟನೆ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕುಮಾರಸ್ವಾಮಿ ತಾಕೀತು ಮಾಡಿದರು. ಹಳೆ ಮೈಸೂರು ಭಾಗ ಮಾತ್ರವಲ್ಲದೆ, ಉತ್ತರ ಕರ್ನಾಟಕ ಸೇರಿದಂತೆ ಕಲ್ಯಾಣ ಕರ್ನಾಟಕದಲ್ಲಿ ಜೆಡಿಎಸ್ ಪಕ್ಷ ಬಲವಾಗಿದೆ. ಜನರಲ್ಲಿ ನಮ್ಮ ಪಕ್ಷದ ಬಗ್ಗೆ ಬಹಳ ನಂಬಿಕೆ ಇದೆ. ನಮ್ಮ ಪಕ್ಷದಿಂದ ಒಳ್ಳೆಯದಾಗುತ್ತದೆ ಎನ್ನುವ ವಿಶ್ವಾಸ ಜನರಿಗೆ ಇದೆ. ಇದನ್ನು ಮುಖಂಡರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

ಪದಾಧಿಕಾರಿಗಳು ಎಲ್ಲರೂ ತಮ್ಮ ಜಿಲ್ಲೆ, ತಾಲೂಕು ಸೇರಿದಂತೆ ಅಗತ್ಯ ಇರುವ ಕಡೆಯೆಲ್ಲಾ ಪ್ರವಾಸ ಮಾಡಬೇಕು. ಮುಂದಿನ ಆರು ತಿಂಗಳು ಸವಾಲಾಗಿ ಸ್ವೀಕಾರ ಮಾಡಿ ಶ್ರಮಿಸಿ ದುಡಿಮೆ ಮಾಡಬೇಕು. ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಹಣ ಬಲದಿಂದ ಚುನಾವಣೆ ಎದುರಿಸುತ್ತಿವೆ. ಆದರೆ, ನಮ್ಮ ಪಕ್ಷ ಜನ ಬಲದಿಂದ ಚುನಾವಣೆ ಎದುರಿಸಬೇಕಿದೆ ಎಂದರು.(ಇದನ್ನೂ ಓದಿ: ನಿಖಿಲ್ ಕುಮಾರಸ್ವಾಮಿ ಪುತ್ರ ಆವ್ಯಾನ್ ಜನ್ಮದಿನ: ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಕೆ)

ಪಕ್ಷದ ಕೆಲಸ ಮಾಡಲು ನಾಯಕರಿಗೆ ತಾಕೀತು ಮಾಡಿದ ಹೆಚ್​​ಡಿಕೆ, ನಾಯಕತ್ವ ಬೆಳೆಸಿಕೊಂಡು ಹೊಸ ನಾಯಕರನ್ನು ಹುಟ್ಟು ಹಾಕಲು ಸಲಹೆ ನೀಡಿದರು. ಪಕ್ಷ ಸಂಘಟನೆಗೆ ಜಿಲ್ಲಾವಾರು, ತಾಲೂಕುವಾರು ಪ್ರವಾಸ ಮಾಡುವಂತೆ ನಾಯಕರಿಗೆ ಇದೇ ಸಂದರ್ಭದಲ್ಲಿ ಅವರು ಸೂಚನೆ ನೀಡಿದ್ದಾರೆ.

ಹುದ್ದೆಯಿಂದ ಕಿತ್ತು ಹಾಕುತ್ತೇನೆ ಸಿಎಂ ಇಬ್ರಾಹಿಂ: ಕುಮಾರಸ್ವಾಮಿ ಅವರ ಮಾತಿಗೆ ದನಿಗೂಡಿಸಿ ಮಾತನಾಡಿದ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಪಕ್ಷದ ಸಂಘಟನೆ, ಕಾರ್ಯಗಳನ್ನು ಅಲಕ್ಷ್ಯ ಮಾಡುವ ಪದಾಧಿಕಾರಿಗಳನ್ನು ಮುಲಾಜಿಲ್ಲದೆ ಕಿತ್ತು ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು. ಪಕ್ಷದ ಕೆಲಸ ಮಾಡಿ. ಇಲ್ಲವಾದರೆ ಕೆಲಸ ಮಾಡುವವರಿಗೆ ಜಾಗ ಬಿಡಿ. ಮುಂದಿನ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ. ಹಾಗಾಗಿ ಎಲ್ಲರೂ ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಪಕ್ಷ ಸಂಘಟನೆಯಲ್ಲಿ ಎಲ್ಲರೂ ತೊಡಗಿಕೊಳ್ಳಬೇಕು ಎಂದರು.

ಯುವ ಜನತಾದಳ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿ, ಯುವ ಜನತಾ ದಳ ಘಟಕವನ್ನು ಬಲಪಡಿಸುವುದು ಹಾಗೂ ರಾಜ್ಯದ ಉದ್ದಗಲಕ್ಕೂ ಯುವ ಕಾರ್ಯಕರ್ತರನ್ನು ಸಜ್ಜು ಮಾಡಲು ತಕ್ಷಣವೇ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು. ಶಾಸಕರಾದ ಸಿ.ಎಸ್.ಪುಟ್ಟರಾಜು, ವೆಂಕಟರಾವ್ ನಾಡಗೌಡ, ಕೆ.ಎಂ.ಕೃಷ್ಣಾರೆಡ್ಡಿ, ವೀರಭದ್ರಪ್ಪ, ವಿಧಾನ ಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ, ಟಿ.ಎ.ಶರವಣ, ಮಾಜಿ ಸಚಿವ ಎನ್.ಎಂ.ನಬಿ, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಪ್ರುಲ್ಲಾ ಖಾನ್ ಮುಂತಾದವರು ಹಾಗೂ ಕಾರ್ಯಕಾರಿಣಿಯ ಎಲ್ಲ ಸದಸ್ಯರು, ಪದಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Last Updated : Sep 26, 2022, 9:15 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.