ETV Bharat / state

ಉಪಚುನಾವಣೆ, ಪರಿಷತ್ ಚುನಾವಣೆಯಲ್ಲಿ ಮುಗ್ಗರಿಸಿದ ಜೆಡಿಎಸ್! - council elections

ಉಪಚುನಾವಣೆ ಘೋಷಣೆಯಾದ ನಂತರ ಬಿಜೆಪಿ ಮತ್ತು ಕಾಂಗ್ರೆಸ್ ನ ಆರ್ಭಟದಲ್ಲಿ ಜೆಡಿಎಸ್ ಮಂಕಾಗಿ ಹೋಯಿತು.ಪ್ರಚಾರದಲ್ಲೂ ಹಿನ್ನಡೆ ಅನುಭವಿಸಿತು. ಶಿರಾ ಕ್ಷೇತ್ರದಲ್ಲಿ ಅಮ್ಮಾಜಮ್ಮ ಅವರಿಗೆ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಅವರು ಕೊರೊನಾ ಸೋಂಕಿತರಾದರು. ನಾಮಪತ್ರ ಸಲ್ಲಿಕೆಯಿಂದ ಹಿಡಿದು ಪ್ರಚಾರ ಮುಕ್ತಾಯವಾಗುವವರೆಗೆ ಅಮ್ಮಾಜಮ್ಮ ಅವರು ಹೊರಗೆ ಕಾಣಿಸಿಕೊಳ್ಳಲೇ ಇಲ್ಲ ಈ ಎಲ್ಲಾ ಕಾರಣಗಳು ಅಭ್ಯರ್ಥಿಗಳ ಸೋಲಿಗೆ ಕಾರಣವಾಗಿದೆ.

jds-stumbles-on-council-elections
ಉಪಚುನಾವಣೆ, ಪರಿಷತ್ ಚುನಾವಣೆಯಲ್ಲಿ ಮುಗ್ಗರಿಸಿದ ಜೆಡಿಎಸ್
author img

By

Published : Nov 11, 2020, 12:17 AM IST

ಬೆಂಗಳೂರು : ಶಿರಾ ಹಾಗೂ ರಾಜರಾಜೇಶ್ವರಿನಗರ ಕ್ಷೇತ್ರಗಳ ಉಪಚುನಾವಣೆಯಲ್ಲಿ ಮುಗ್ಗರಿಸಿದ ಜೆಡಿಎಸ್, ಚುನಾವಣಾ ಪೂರ್ವ ನಡೆದ ಸಮೀಕ್ಷೆಯಂತೆಯೇ ಎರಡು ಕ್ಷೇತ್ರದಲ್ಲಿಯೂ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

ಶಾಸಕ ದಿ. ಸತ್ಯನಾರಾಯಣ ಅವರ ಅಕಾಲಿಕ ನಿಧನದಿಂದಾಗಿ ಎದುರಾದ ಉಪಚುನಾವಣೆಯಲ್ಲಿ ಜೆಡಿಎಸ್ ವರಿಷ್ಠರು ಅನುಕಂಪದ ಆಧಾರದ ಮೇಲೆ ಗೆಲುವನ್ನು ನಿರೀಕ್ಷಿಸಿ ಸತ್ಯನಾರಾಯಣ ಪತ್ನಿ ಅಮ್ಮಾಜಮ್ಮ ಅವರನ್ನು ಕಣಕ್ಕಿಳಿಸಿದ್ದರು. ಅನುಕಂಪದ ಮತಗಳು ಪಕ್ಷದ ಗೆಲುವಿಗೆ ನೆರವಾಗುತ್ತದೆ ಎಂದು ನಂಬಿದ್ದರು. ಆದರೆ, ಜೆಡಿಎಸ್ ನಿರೀಕ್ಷೆ ಸುಳ್ಳಾಯಿತು.

ಶಿರಾದಲ್ಲಿ ತೀವ್ರ ಹಿನ್ನಡೆ ಅನುಭವಿಸುದ ಜೆಡಿಎಸ್, ತನ್ನ ಹಿಡಿತದಲ್ಲಿದ್ದ ಶಿರಾ ಕ್ಷೇತ್ರವನ್ನು ಕಳೆದುಕೊಂಡು ಬಿಜೆಪಿಗೆ ಬಿಟ್ಟುಕೊಟ್ಟಿದೆ.ಇನ್ನು ರಾಜರಾಜೇಶ್ವರಿನಗರದಲ್ಲಿ ಒಕ್ಕಲಿಗರ ಮತಗಳೇ ನಿರ್ಣಾಯಕವಾಗಿದೆ. ಹೀಗಾಗಿ ಪಕ್ಷದ ಕಾರ್ಯಕರ್ತ ಹಾಗೂ ಒಕ್ಕಲಿಗ ಸಮುದಾಯದ ವಿ. ಕೃಷ್ಣಮೂರ್ತಿ ಅವರಿಗೆ ಜೆಡಿಎಸ್ ಟಿಕೆಟ್ ನೀಡಿತ್ತು. ಕಾಂಗ್ರೆಸ್ ಸಹ ಒಕ್ಕಲಿಗ ಮತಗಳ ಮೇಲೆ ಕಣ್ಣಿಟ್ಟಿದ್ದರಿಂದ ಕುಸುಮಾ ಅವರಿಗೆ ಟಿಕೆಟ್ ನೀಡಿತ್ತು. ಕುಸುಮಾ ಮತ್ತು ಕೃಷ್ಣಮೂರ್ತಿ ನಡುವೆ ಮತ ವಿಭಜನೆಯಾದ ಪರಿಣಾಮ ಮುನಿರತ್ನ ಗೆಲುವಿಗೆ ತುಸು ಸಹಕಾರಿಯಾಯಿತು.

ಉಪಚುನಾವಣೆ ಘೋಷಣೆಯಾದ ನಂತರ ಬಿಜೆಪಿ ಮತ್ತು ಕಾಂಗ್ರೆಸ್ ನ ಆರ್ಭಟದಲ್ಲಿ ಜೆಡಿಎಸ್ ಮಂಕಾಗಿ ಹೋಯಿತು.ಪ್ರಚಾರದಲ್ಲೂ ಹಿನ್ನಡೆ ಅನುಭವಿಸಿತು. ಶಿರಾ ಕ್ಷೇತ್ರದಲ್ಲಿ ಅಮ್ಮಾಜಮ್ಮ ಅವರಿಗೆ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಅವರು ಕೊರೊನಾ ಸೋಂಕಿತರಾದರು. ನಾಮಪತ್ರ ಸಲ್ಲಿಕೆಯಿಂದ ಹಿಡಿದು ಪ್ರಚಾರ ಮುಕ್ತಾಯವಾಗುವವರೆಗೆ ಅಮ್ಮಾಜಮ್ಮ ಅವರು ಹೊರಗೆ ಕಾಣಿಸಿಕೊಳ್ಳಲೇ ಇಲ್ಲ. ಸಂಸದ ಪ್ರಜ್ವಲ್ ರೇವಣ್ಣ, ಮಾಜಿ ಸಚಿವ ಹೆಚ್.ಡಿ.ರೇವಣ್ಣ ಕ್ಷೇತ್ರದಲ್ಲಿ ಮೊಕ್ಕಂ ಹೂಡಿ ಪ್ರಚಾರ ಕೈಗೊಂಡರು. ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಹೆಚ್ .ಡಿ.ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಪ್ರಚಾರದಲ್ಲಿ ತೊಡಗಿದರು. ಆದರೂ ಅಭ್ಯರ್ಥಿಯನ್ನು ಗೆಲ್ಲಿಸುವಲ್ಲಿ ರಾಜಕೀಯ ರಣತಂತ್ರ ರೂಪಿಸುವಲ್ಲಿ ವಿಫಲವಾದರು.

ದೇವೇಗೌಡರ ಇಡೀ ಕುಟುಂಬ ಶಿರಾದಲ್ಲಿ ಹೆಚ್ಚಿನ ಪ್ರಚಾರ ಕೈಗೊಂಡರೂ ಮತದಾರರನ್ನು ಸೆಳೆಯಲು ಸಾಧ್ಯವಾಗಲಿಲ್ಲ.ಮತ್ತೊಂದೆಡೆ ಆರ್.ಆರ್.ನಗರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ವಿ.ಕೃಷ್ಣಮೂರ್ತಿ ಕಣ್ಣೀರು ಹಾಕಿದರೂ ಮತದಾರರು ಮರಳಾಗಲಿಲ್ಲ. ಕಾಂಗ್ರೆಸ್, ಬಿಜೆಪಿ ಪ್ರಚಾರದ ಅಬ್ಬರದಲ್ಲಿ ಜೆಡಿಎಸ್ ಸದ್ದು ಅಡಗಿತ್ತು. ಕೃಷ್ಣಮೂರ್ತಿ ಪರ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ವಿಧಾನಪರಿಷತ್ ಮಾಜಿ ಸದಸ್ಯ ಟಿ.ಎ.ಶರವಣ ಮತ್ತಿತರ ನಾಯಕರು ಪ್ರಚಾರ ಕೈಗೊಂಡರು. ಪ್ರಚಾರ ಮುಕ್ತಾಯದ ಅಂತಿಮ ಹಂತದಲ್ಲಿ ಜೆಡಿಎಸ್ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪ್ರಚಾರದ ಕಣಕ್ಕಿಳಿದರು. ಪ್ರಚಾರದಲ್ಲಿ ಕಾಂಗ್ರೆಸ್, ಬಿಜೆಪಿ ವಿರುದ್ಧ ಟೀಕಾಪ್ರಕಾರ ಮಾಡಲಾಯಿತೇ ಹೊರತು ಮತದಾರರ ಮನವೊಲಿಕೆ ಮಾಡುವ ಪ್ರಯತ್ನ ಮಾಡಲಿಲ್ಲ.

ಶಿರಾ ಕ್ಷೇತ್ರದಲ್ಲಿ ಗೌರವಯುತವಾಗಿ ಸೋಲನುಭವಿಸಿದರೆ, ರಾಜರಾಜೇಶ್ವರಿನಗರದಲ್ಲಿ ಠೇವಣಿ ಕಳೆದುಕೊಂಡು ಸೋಲನುಭವಿಸಿದೆ. ಎರಡೂ ಕ್ಷೇತ್ರದಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿರುವ ಜೆಡಿಎಸ್ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ ಎಂಬ ಮಾತು ಇದೀಗ ಪಕ್ಷದಲ್ಲೇ ಕೇಳಿಬರುತ್ತಿದೆ.

ಪರಿಷತ್ ಚುನಾವಣೆಯಲ್ಲೂ ಅದೇ ಕಥೆ :

ಪಶ್ವಿಮ ಪದವೀಧರ , ಬೆಂಗಳೂರು ಶಿಕ್ಷಕರ ಮತ್ತು ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದ ಪುಟ್ಟಣ್ಣ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಜಯಗಳಿಸಿ ವಿಧಾನಪರಿಷತ್​ಗೆ ಪುನರಾಯ್ಕೆಯಾಗಿದ್ದಾರೆ. ಜೆಡಿಎಸ್ ಅಭ್ಯರ್ಥಿ ಎ.ಪಿ.ರಂಗನಾಥ್ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಕೊಳ್ಳಬೇಕಾಗಿದೆ.ಇನ್ನು ಪಶ್ಚಿಮ ಪದವೀಧರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಎಸ್.ವಿ.ಸಂಕನೂರು ಪುನರಾಯ್ಕೆಯಾಗಿದ್ದಾರೆ.

ಅಂತಿಮ ಕ್ಷಣದಲ್ಲಿ ಜೆಡಿಎಸ್ ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ ಅವರಿಗೆ ಬೆಂಬಲ ಸೂಚಿಸಿತ್ತು. ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿದ್ದ ಬಸವರಾಜ ಗುರಿಕಾರ ಅವರು ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ.ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಶಿಲ್ ನಮೋಶಿ ಜಯಗಳಿಸಿದ್ದಾರೆ. ಇಲ್ಲೂ ಸಹ ಜೆಡಿಎಸ್ ಅಭ್ಯರ್ಥಿ ತಿಮ್ಮಯ್ಯ ಪರಭಾವಗೊಂಡು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳಗಳುವಂತಾಗಿದೆ. ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣಾ ಫಲಿತಾಂಶ ಇನ್ನೂ ಪ್ರಕಟವಾಗಿಲ್ಲ. ಇಂದು ಮಧ್ಯಾಹ್ನ ವೇಳೆ ಫಲಿತಾಂಶ ಪ್ರಕಟಗೊಳ್ಳುವ ಸಾದ್ಯತೆ ಇದ್ದು, ಇಲ್ಲಿ ಜೆಡಿಎಸ್ ಸ್ಥಾನ ಉಳಿಸಿಕೊಳ್ಳುವುದೇ ಎಂಬುದು ಕಾದುನೋಡಬೇಕಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.