ETV Bharat / state

ಎನ್​ಡಿಎನೂ ಇಲ್ಲ, ಯುಪಿಎನೂ ಇಲ್ಲ: ಯಾವ ಮೈತ್ರಿಕೂಟದ ಜೊತೆಗೂ ಸೇರುವ ಪ್ರಶ್ನೆ ಇಲ್ಲ - ಹೆಚ್.ಡಿ.ದೇವೇಗೌಡ - etv bharat kannda

ಪ್ರಾದೇಶಿಕ ಪಕ್ಷ ಉಳಿಸೋದು ರಾಜ್ಯದ ಜನರ ಹಿತದೃಷ್ಟಿಯಿಂದ ಅಗತ್ಯ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ.

hd-devegowda-reaction-on-jds-alliance
ಎನ್​ಡಿಎನೂ ಇಲ್ಲ, ಯುಪಿಎನೂ ಇಲ್ಲ: ಯಾವ ಮೈತ್ರಿಕೂಟದ ಜೊತೆಯೂ ಸೇರುವ ಪ್ರಶ್ನೆಯೇ ಇಲ್ಲ - ಹೆಚ್.ಡಿ.ದೇವೇಗೌಡ
author img

By

Published : Jul 21, 2023, 7:08 PM IST

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಸೋತಿರುವ ಬಿಜೆಪಿ ಹಾಗೂ ಜೆಡಿಎಸ್ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಬಗ್ಗೆ ವೇದಿಕೆ ಸಿದ್ಧವಾಗುತ್ತಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿತ್ತು. ಆದರೆ, ನಿನ್ನೆ ತಡರಾತ್ರಿವರೆಗೂ ನಡೆದ ಸಭೆಯಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಈ ಕುರಿತು ಶಾಸಕರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹೆಚ್.ಡಿ.ದೇವೇಗೌಡ, ಯಾವ ಮೈತ್ರಿಕೂಟದ ಜೊತೆಯೂ ಸೇರುವ ಪ್ರಶ್ನೆಯೇ ಇಲ್ಲ. ನಮ್ಮದು ಪ್ರಾದೇಶಿಕ ಪಕ್ಷ. ಈ ಪ್ರಾದೇಶಿಕ ಪಕ್ಷ ಉಳಿಸುವ ನಿಟ್ಟಿನಲ್ಲಿ ಚರ್ಚೆ ಆಗಿದೆ. ನಾನು ಎಲ್ಲರನ್ನೂ ಭೇಟಿ ಮಾಡಿ ಮುಂದೆ ಯಾವ ಮಾರ್ಗದಲ್ಲಿ ಹೋಗಬೇಕೆನ್ನುವ ಸಲಹೆಯನ್ನು ಶಾಸಕರಿಗೆ ನೀಡಿದ್ದೇನೆ. ಒಂದು ಕಡೆ ಎನ್​ಡಿಎ, ಇನ್ನೊಂದೆಡೆ ಇಂಡಿಯಾ ಹಾಗಾಗಿ, ನನಗಿರುವ ಅನುಭವವನ್ನು ಅವರ ಬಳಿ ಹಂಚಿಕೊಂಡಿದ್ದೇನೆ. ಹೆಚ್.ಡಿ.ಕುಮಾರಸ್ವಾಮಿ ಪಕ್ಷದ ನಾಯಕರಾಗಿದ್ದಾರೆ. ಅವರು ಪಕ್ಷದ ಹೊಣೆ ಹೊತ್ತು ಕೆಲಸ ಮಾಡುತ್ತಿದ್ದಾರೆ. ನನ್ನ ಅನುಭವವನ್ನು ಅವರಿಗೂ ಹೇಳಿದ್ದೇನೆ. ಇದರ ಜೊತೆಗೆ ಈಗಲೂ ಸಲಹೆ ನೀಡಲು ಸಿದ್ದನಿದ್ದೇನೆ ಎಂದರು.

ಕುಮಾರಸ್ವಾಮಿ ಅವರು ಮೊನ್ನೆ ಪ್ರತಿಪಕ್ಷಗಳ ಸಭೆಗೆ ಐಎಎಸ್ ಅಧಿಕಾರಿಗಳ ಬಳಕೆ ವಿರೋಧೀಸಿ ಟ್ವೀಟ್ ಮಾಡಿದ್ದರು. ಅದನ್ನು ಹಿಡಿದುಕೊಂಡು ಬಿಜೆಪಿ ನಾಯಕರು ಸದನದಲ್ಲಿ ಹೋರಾಟ ಮಾಡಿದರು. ಸದನದಲ್ಲಿ ಬಿಜೆಪಿಗೆ ಸಂಖ್ಯಾಬಲ ಹೆಚ್ಚಿದೆ. ಅದನ್ನು ಕಡೆಗಣಿಸಲು ಸಾಧ್ಯವಿಲ್ಲ. ಬಿಜೆಪಿಯವರು ಕಲಾಪ ಬಹಿಷ್ಕರಿಸಿದರು. ಆಗ ಕುಮಾರಸ್ವಾಮಿ ಅವರು ಸಹ ಬಿಜೆಪಿಯವರನ್ನು ಅನುಸರಿಸಿದರು. ಅದಕ್ಕಾಗಿ ಬಿಜೆಪಿ-ಜೆಡಿಎಸ್ ಒಟ್ಟಾಗಿದೆ ಎಂದು ಕಥೆ ಕಟ್ಟುವುದು ಹಾಗೂ ಸಂಬಂಧ ಕಲ್ಪಿಸುವುದು ಬೇಡ ಎಂದು ಹೆಚ್.ಡಿ.ದೇವೇಗೌಡ ಮೈತ್ರಿ ಕುರಿತ ಊಹಪೋಹಗಳಿಗೆ ತೆರೆ ಎಳೆದರು.

ರಾಷ್ಟ್ರ ರಾಜಕಾರಣದ ಬಗ್ಗೆ ನನಗೆ ಚೆನ್ನಾಗಿ ಗೊತ್ತಿದೆ. ಈ ಪ್ರಾದೇಶಿಕ ಪಕ್ಷ ಉಳಿಸೋದು ರಾಜ್ಯದ ಜನರ ಹಿತದೃಷ್ಟಿಯಿಂದ ಅಗತ್ಯ. ನಮ್ಮ ಪಕ್ಷಕ್ಕಾಗಿರುವ ಅನ್ಯಾಯ ಅದೆಲ್ಲವನ್ನು ಜನರೆ ಮುಂದೆ ಇಟ್ಟು, ಕರ್ನಾಟಕದಲ್ಲಿ ಸಾಮರ್ಥ್ಯ ಇದೆ ಅನ್ನುವುದನ್ನು ಸಾಬೀತು ಮಾಡುತ್ತೇವೆ.
ನಾನು ರಾಜಕೀಯ ಲಾಭ ಮತ್ತು ತೋರಿಕೆಗಾಗಿ ಹೇಳುತ್ತಿಲ್ಲ. ಜೀವನದ ಉದ್ದಕ್ಕೂ ಹೋರಾಟ ಮಾಡ್ತೇವೆ. ಎನ್​ಡಿಎನೂ ಇಲ್ಲ, ಯುಪಿಎನೂ ಇಲ್ಲ. ಸ್ವತಂತ್ರವಾಗಿ ಹೋರಾಟ ಮಾಡುತ್ತೇವೆ ಎಂದು ಜೆಡಿಎಸ್ ವರಿಷ್ಠ ಮಾರ್ಮಿಕವಾಗಿ ನುಡಿದರು.

ಜೆಡಿಎಸ್ ಪ್ರಾದೇಶಿಕ ಪಕ್ಷ. ವಿಧಾನ ಮಂಡಲ ಕಲಾಪ ಮುಗಿಯುವ ಹಿನ್ನೆಲೆಯಲ್ಲಿ ನಮ್ಮ ಪಕ್ಷದ 19 ವಿಧಾನಸಭೆ ಸದಸ್ಯರು ಮತ್ತು 7 ಮಂದಿ ವಿಧಾನ ಪರಿಷತ್ ಸದಸ್ಯರು ಎಲ್ಲರೂ ಒಗ್ಗಟ್ಟಾಗಿ ತೀರ್ಮಾನ ತೆಗೆದುಕೊಂಡಿದ್ದಾರೆ. ಪ್ರಾದೇಶಿಕ ಪಕ್ಷವನ್ನು ಹೇಗೆ ಉಳಿಸಬೇಕೆಂದು ಸುದೀರ್ಘವಾಗಿ ಚರ್ಚೆ ಮಾಡಿ ತೀರ್ಮಾನ ಮಾಡಿದ್ದಾರೆ. ನಾನು ಇವತ್ತು ಅವರನ್ನು ಭೇಟಿಯಾಗಿ ಮುಂದೆ ಯಾವ ಮಾರ್ಗದಲ್ಲಿ ಹೋಗಬೇಕು ಎಂಬುದನ್ನು ಶಾಸಕರ ಜೊತೆ ಹಂಚಿಕೊಂಡಿದ್ದೇನೆ ಎಂದು ತಿಳಿಸಿದರು.

ಇದನ್ನೂ ಓದಿ: ಈಗ ನಾನೇ ವಿರೋಧ ಪಕ್ಷದ ನಾಯಕ!: ಅಚ್ಚರಿಯ ಹೇಳಿಕೆ ನೀಡಿದ ಬಿಜೆಪಿ ರೆಬೆಲ್ ಸದಸ್ಯ ಹೆಚ್.ವಿಶ್ವನಾಥ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.