ETV Bharat / state

ಮಾನಸಪುತ್ರ ಕೃತಜ್ಞತಾಹೀನರಾಗಿ ದೇವೇಗೌಡರ ಬೆನ್ನಿಗೆ ಚೂರಿ ಹಾಕಿ ಕಾಂಗ್ರೆಸ್ ಸೇರುತ್ತಿದ್ದಾರೆ: ಜೆಡಿಎಸ್ - ಮಾನಸಪುತ್ರ

ಜೆಡಿಎಸ್​ ತೊರೆಯುತ್ತಿರುವ ವೈಎಸ್​ವಿ ದತ್ತಾ- ದೇವೇಗೌಡರ ಮಾನಸಪುತ್ರ ಕೃತಜ್ಞತಾಹೀನ- ಜೆಡಿಎಸ್​ ಟ್ವೀಟ್​

ವೈಎಸ್​ವಿ ದತ್ತಾ
ವೈಎಸ್​ವಿ ದತ್ತಾ
author img

By

Published : Jan 8, 2023, 3:44 PM IST

ಬೆಂಗಳೂರು: ಮಾಜಿ ನಾಯಕ, ಕಡೂರು ಕ್ಷೇತ್ರದ ಮಾಜಿ ಶಾಸಕ ವೈಎಸ್​ವಿ ದತ್ತಾ ಜಾತ್ಯತೀತ ಜನತಾದಳ(ಜೆಡಿಎಸ್​) ಪಕ್ಷವನ್ನು ತೊರೆಯಲು ಸಜ್ಜಾಗಿದ್ದಾರೆ. ಈ ಕುರಿತು ಇತ್ತೀಚೆಗೆ ಸ್ವತಃ ದತ್ತಾ ಅವರೇ ಮಾಧ್ಯಮಗೋಷ್ಟಿಯಲ್ಲಿ ಜೆಡಿಎಸ್​ ತೊರೆದು ಕಾಂಗ್ರೆಸ್​ ಸೇರುತ್ತಿರುವುದಾಗಿ ಹೇಳಿದ್ದರು. ಇದಕ್ಕೆ ಸಂಬಂಧಿಸಿದಂತೆ ಜೆಡಿಎಸ್​ ಟ್ವೀಟ್​ ಮಾಡಿದೆ. ಇವತ್ತು ಮಾನಸಪುತ್ರ ಎಲ್ಲವನ್ನೂ ಮರೆತು ಕೃತಜ್ಞತಾಹೀನರಾಗಿ ಅದೇ ದೇವೇಗೌಡರಿಗೆ ಬೆನ್ನಿಗೆ ಚೂರಿ ಹಾಕಿ ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ಜೆಡಿಎಸ್ ವೈಎಸ್​ವಿ ದತ್ತಾ ವಿರುದ್ಧ ಟ್ವೀಟ್ ಮೂಲಕ ಹರಿಹಾಯ್ದಿದೆ.

ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ: ಸರಣಿ ಟ್ವೀಟ್ ಮಾಡಿರುವ ಜೆಡಿಎಸ್ ರಾಜ್ಯದ ಅಗ್ರಮಾನ್ಯ ನಾಯಕರು, ಮಾಜಿ ಪ್ರಧಾನಮಂತ್ರಿಗಳು ಆಗಿರುವ ಹೆಚ್. ಡಿ ದೇವೇಗೌಡರ ' ಮಾನಸಪುತ್ರ 'ಎಂದೇ ಖ್ಯಾತಿ ಆಗಿರುವ ವೈ.ಎಸ್.ವಿ ದತ್ತಾ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ. ಕೈ ಹಿಡಿಯಲು ಅವರು ದಿನವನ್ನೂ ನಿಗದಿ ಮಾಡಿಕೊಂಡಿದ್ದಾರೆ ಎನ್ನುವುದು ಸದ್ಯದ ಸುದ್ದಿ.

  • ರಾಜ್ಯದ ಅಗ್ರಮಾನ್ಯ ನಾಯಕರು, ಮಾಜಿ ಪ್ರಧಾನಮಂತ್ರಿಗಳು ಆಗಿರುವ ಶ್ರೀ @H_D_Devegowdaರ ' ಮಾನಸಪುತ್ರ ' ಎಂದೇ ಖ್ಯಾತಿ ಆಗಿರುವ ಶ್ರೀ @YSV_Datta ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ, ಕೈ ಹಿಡಿಯಲು ಅವರು ದಿನವನ್ನೂ ನಿಗದಿ ಮಾಡಿಕೊಂಡಿದ್ದಾರೆ ಎನ್ನುವುದು ಸದ್ಯದ ಸುದ್ದಿ.
    1/5

    — Janata Dal Secular (@JanataDal_S) January 8, 2023 " class="align-text-top noRightClick twitterSection" data=" ">

ಹೆತ್ತ ತಂದೆಗಿಂತ ಹೆಚ್ಚು ಸಲುಹಿದ್ದರು, ಪೊರೆದಿದ್ದರು‌: ಬಹುತೇಕ ಕಡೆ ದೇವೇಗೌಡರ ' ಮಾನಸಪುತ್ರ ' ಜೆಡಿಎಸ್ ತೊರೆದು ಹೋಗುತ್ತಿದ್ದಾರೆ ಎಂದು ಪ್ರಚಾರ ಮಾಡಲಾಗುತ್ತಿದೆ. ' ಮಾನಸಪುತ್ರ ' ಎನ್ನುವ ಪದವೇ ಹೆಚ್ಚು ಸದ್ದು ಮಾಡುತ್ತಿದೆ. ದತ್ತಾ ಅವರು ಗೌಡರಿಗೆ ಮಾನಸಪುತ್ರರಾಗಿದ್ದರೋ ಇಲ್ಲವೋ ಗೊತ್ತಿಲ್ಲ. ಆದರೆ, ದೇವೇಗೌಡರು ಮಾತ್ರ ನಿಜಕ್ಕೂ ದತ್ತಾ ಅವರನ್ನು ಹೆತ್ತ ತಂದೆಗಿಂತ ಹೆಚ್ಚು ಸಲುಹಿದ್ದರು, ಪೊರೆದಿದ್ದರು‌ ಎಂದು ನೆನಪು ಮಾಡಿದೆ.

  • ಮಾನಸಪುತ್ರನನ್ನು ಇನ್ನೊಬ್ಬ ಪುತ್ರನೆಂದೇ ನಂಬಿದ್ದರು ದೇವೇಗೌಡರು. ನಂಬಿ ಪಕ್ಕದಲ್ಲಿ ಇಟ್ಟುಕೊಂಡರು. ಕೇಳಿದ್ದೆಲ್ಲಾ ಕೊಟ್ಟರು, ಕೇಳದಿದ್ದರೂ ಕೊಟ್ಟರು. ಪ್ರೀತಿ, ವಿಶ್ವಾಸ ಎಲ್ಲವನ್ನೂ ಧಾರೆ ಎರೆದರು. ಆದರೆ ಇವತ್ತು ಮಾನಸಪುತ್ರ ಎಲ್ಲವನ್ನೂ ಮರೆತು ಕೃತಜ್ಞತಾಹೀನರಾಗಿ ಅದೇ ಗೌಡರಿಗೆ ಬೆನ್ನಿಗೆ ಚೂರಿ ಹಾಕಿದ ಕಾಂಗ್ರೆಸ್ ಸೇರುತ್ತಿದ್ದಾರೆ.
    4/5

ಮಾನಸ ತಂದೆಯನ್ನು ತೊರೆಯುತ್ತಿದ್ದಾರೆ: ಅಂತಹ ದತ್ತಾ, ಮಾನಸಪುತ್ರನೆಂದು ಖ್ಯಾತಿಯ ಜತೆಗೆ ಸಕಲವನ್ನೂ ಸಂಪಾದನೆ ಮಾಡಿಕೊಂಡ ಮೇಲೆ ಸಲುಹಿದ, ಕಷ್ಟ ಬಂದಾಗ ಕಾಪಾಡಿದ, ಕಠಿಣ ಸಂದರ್ಭಗಳಲ್ಲಿ ಕಣ್ರೆಪ್ಪೆಯಂತೆ ಪೊರೆದ, ಅನೇಕ ಸಲ ಜನ್ಮಕೊಟ್ಟ ತಂದೆಗಿಂತ ಗಟ್ಟಿಯಾಗಿ ಜತೆಗೆ ನಿಂತು ಮುಳುಗೇ ಹೋಗುತ್ತಿದ್ದ ಬದುಕನ್ನು ಬದುಕಿಸಿಕೊಟ್ಟ ' ಮಾನಸ ತಂದೆ' ಯನ್ನು ಮರೆತು, ತೊರೆಯುತ್ತಿದ್ದಾರೆಯೇ? ಎಂದು ಪ್ರಶ್ನಿಸಿದೆ.

  • ಮಾನಸಪುತ್ರನಿಗೆ ನಂಬಿಕೆ ಎಂದರೆ ವ್ಯಾಪಾರ, ಪ್ರೀತಿ ಎಂದರೆ ಲಾಭದ ದಾರಿ, ವಿಶ್ವಾಸ ಎಂದರೆ ರಾಜಕೀಯ ಹಕೀಕತ್ತಿನ ರಾಜಮಾರ್ಗ. ಅಂಥ ಮಾನಸಪುತ್ರನ ಬಗ್ಗೆ ಗೌಡರು ಕೊರಗುವುದಿಲ್ಲ. ಏಕೆಂದರೆ, ಪಕ್ಷದ ಎಲ್ಲಾ ನಾಯಕರು, ಕಟ್ಟ ಕಡೆಯ ಕಾರ್ಯಕರ್ತನೂ ಮಾಜಿ ಪ್ರಧಾನಿಗಳ ಮಾನಸಪುತ್ರರೇ.. ಢೋಂಗಿ ಮಾನಸಪುತ್ರರನ್ನು ಮರೆ ಲೇಸು. ಅಲ್ಲವೇ?
    5/5

ಮಾನಸಪುತ್ರನ ಬಗ್ಗೆ ಗೌಡರು ಕೊರಗುವುದಿಲ್ಲ: ಮಾನಸಪುತ್ರನನ್ನು ಇನ್ನೊಬ್ಬ ಪುತ್ರನೆಂದೇ ನಂಬಿದ್ದರು ಹೆಚ್​ ಡಿ ದೇವೇಗೌಡರು. ನಂಬಿ ಪಕ್ಕದಲ್ಲಿ ಇಟ್ಟುಕೊಂಡರು. ಕೇಳಿದ್ದೆಲ್ಲಾ ಕೊಟ್ಟರು, ಕೇಳದಿದ್ದರೂ ಕೊಟ್ಟರು. ಪ್ರೀತಿ, ವಿಶ್ವಾಸ, ವಾತ್ಸಲ್ಯ ಎಲ್ಲವನ್ನೂ ಧಾರೆ ಎರೆದರು. ಮಾನಸಪುತ್ರನಿಗೆ ನಂಬಿಕೆ ಎಂದರೆ ವ್ಯಾಪಾರ, ಪ್ರೀತಿ ಎಂದರೆ ಲಾಭದ ದಾರಿ, ವಿಶ್ವಾಸ ಎಂದರೆ ರಾಜಕೀಯ ಹಕೀಕತ್ತಿನ ರಾಜಮಾರ್ಗ. ಅಂಥ ಮಾನಸಪುತ್ರನ ಬಗ್ಗೆ ಗೌಡರು ಕೊರಗುವುದಿಲ್ಲ. ಏಕೆಂದರೆ, ಪಕ್ಷದ ಎಲ್ಲಾ ನಾಯಕರು, ಕಟ್ಟ ಕಡೆಯ ಕಾರ್ಯಕರ್ತನೂ ಮಾಜಿ ಪ್ರಧಾನಿಗಳ ಮಾನಸಪುತ್ರರೇ. ಡೋಂಗಿ ಮಾನಸಪುತ್ರರನ್ನು ಮರೆಯುವುದೇ ಲೇಸು. ಅಲ್ಲವೇ? ಎಂದು ಟೀಕಿಸಿದೆ.

ಶಾಸಕ ವೈಎಸ್​ವಿ ದತ್ತಾ ಘೋಷಿಸಿದ್ದರು: ಜನವರಿ 15ರ ಬಳಿಕ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಪಕ್ಷ ಸೇರುತ್ತೇನೆ ಎಂದು ಮಾಜಿ ಶಾಸಕ ವೈಎಸ್​ವಿ ದತ್ತಾ ಇತ್ತೀಚೆಗೆ ಘೋಷಿಸಿದ್ದರು. ಕಳೆದ ಐವತ್ತು ವರ್ಷಗಳಿಂದ ಮಾಜಿ ಪ್ರಧಾನಿ ದೇವೇಗೌಡರು-ನನ್ನದು ತಂದೆ ಮಕ್ಕಳ ಸಂಬಂಧ ಆಗಿದೆ. ನಾನು ಎಲ್ಲೇ ಇದ್ದರೂ ಅವರ ಹಾರೈಕೆ ನನ್ನ ಮೇಲೆ ಇದ್ದೇ ಇರುತ್ತದೆ ಎಂದು ತಿಳಿಸಿದ್ದರು.

ದೇವೇಗೌಡರು ನನ್ನ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳುತ್ತಾರೆ: ನನ್ನನ್ನು ವಿಧಾನ ಪರಿಷತ್ ಸದಸ್ಯನನ್ನಾಗಿ ಮಾಡಿದ್ದೇ ದೇವೇಗೌಡರು. ಅದು ನನ್ನ ರಾಜಕೀಯ ಜೀವನಕ್ಕೆ ಸಿಕ್ಕ ತಿರುವಾಗಿದೆ. ಇದೀಗ ಅನಿವಾರ್ಯವಾಗಿ ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದೇನೆ. ಇದನ್ನು ಅವರಿಗೆ ಹೇಳಲು ಒಂದು ರೀತಿ ಮುಜುಗರವಾಗುತ್ತದೆ. ಆದರೆ, ದೇವೇಗೌಡರು ನನ್ನ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂಬುದು ನನ್ನ ಭಾವನೆ ಆಗಿದೆ ಎಂದು ಹೇಳುವ ಮೂಲಕ ವೈ ಎಸ್​ವಿ ದತ್ತಾ ಭಾವುಕರಾಗಿದ್ದರು.

ಓದಿ: ಕನ್ನಡದ ಕಣ್ಣಿಗೆ ಸುಣ್ಣ, ಬೇರೆ ಭಾಷೆಗಳಿಗೆ ಬೆಣ್ಣೆ: ಕನ್ನಡ ತಬ್ಬಲಿ ಮಕ್ಕಳ ಭಾಷೆಯೇ?: ಹೆಚ್​ಡಿಕೆ ಪ್ರಶ್ನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.