ETV Bharat / state

ಹಾಸನ ವಿಧಾನಸಭೆ ಸೇರಿ ಅಭ್ಯರ್ಥಿಗಳ 2ನೇ ಪಟ್ಟಿ ಸೋಮವಾರ ಬಿಡುಗಡೆ: ಹೆಚ್​ಡಿಕೆ

ಹಾಸನ ವಿಧಾನಸಭಾ ಸೇರಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಅಂತಿಮಗೊಳಿಸಿ ಸೋಮವಾರ ಬಿಡುಗಡೆ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ತಿಳಿಸಿದರು.

there-is-no-truth-in-pre-election-survey-reports-hdk
ಚುನಾವಣಾ ಪೂರ್ವ ಸಮೀಕ್ಷಾ ವರದಿಗಳಲ್ಲಿ ಯಾವುದೇ ಸತ್ಯಾಂಶವಿಲ್ಲ: ಹೆಚ್​ಡಿಕೆ
author img

By

Published : Apr 1, 2023, 5:19 PM IST

ಬೆಂಗಳೂರು: ಮತದಾರರ ಆಶೀರ್ವಾದದಿಂದ ಸರ್ಕಾರ ರಚನೆಗೆ ಅಗತ್ಯವಿರುವ 113 ಸ್ಥಾನಗಳನ್ನು ಗೆದ್ದೇ ಗೆಲ್ಲುತ್ತೇವೆ. ಚುನಾವಣಾ ಪೂರ್ವ ಸಮೀಕ್ಷಾ ವರದಿಗಳಲ್ಲಿ ಯಾವುದೇ ಸತ್ಯಾಂಶವಿಲ್ಲ. ಜೆಡಿಎಸ್ ರಾಜ್ಯದ ಚುಕ್ಕಾಣಿ ಹಿಡಿಯುವುದು ನಿಶ್ಚಿತ. ರಾಷ್ಟ್ರೀಯ ಪಕ್ಷಗಳು ದುಡ್ಡು ಕೊಟ್ಟು ಮಾಡಿಸಿರುವ ಸಮೀಕ್ಷೆಗಳನ್ನು ಗಣನೆಗೆ ತೆಗೆದುಕೊಳ್ಳಬೇಡಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಯಲಹಂಕ ಕ್ಷೇತ್ರದ ದಾಸನಪುರ ಹೋಬಳಿ ಕಾಂಗ್ರೆಸ್ ಮುಖಂಡ ಚಂದ್ರಪ್ಪ ಹಾಗೂ ಅವರ ಬೆಂಬಲಿಗರು ಮತ್ತು ಬಿಜೆಪಿ ಮುಖಂಡರು ಜೆಡಿಎಸ್​ಗೆ ಸೇರ್ಪಡೆಯಾದ ಬಳಿಕ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿಗಿಂತ ಜೆಡಿಎಸ್ ಹೆಚ್ಚಿನ ಸ್ಥಾನಗಳಿಸಿ ಅಧಿಕಾರ ಹಿಡಿಯುವುದರಲ್ಲಿ ಯಾವುದೇ ಅನುಮಾನ ಇಲ್ಲ. ರಾಜ್ಯದಲ್ಲಿ ಪ್ರವಾಸ ಮಾಡುವಾಗ ಜೆಡಿಎಸ್ ಪರ ಅಪಾರ ಜನ ಬೆಂಬಲ ವ್ಯಕ್ತವಾಗಿರುವುದು ಖಚಿತವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕ್ಷೇತ್ರದಲ್ಲಿ ನಡೆಯುತ್ತಿರುವ ದರ್ಪ-ದೌರ್ಜನ್ಯಕ್ಕೆ ಮುಕ್ತಿ ಕೊಡಲು ಮುನೇಗೌಡರನ್ನು ಆಶೀರ್ವದಿಸಿ ಎಂದು ಮನವಿ ಮಾಡಿದರು. ನಾನು ಸಿಎಂ ಆಗಿದ್ದಾಗ ಶಿವರಾಮ ಕಾರಂತ ಸೇರಿ ನಾಲ್ಕು ಬಡಾವಣೆ ನಿರ್ಮಾಣ ರಚನೆಗೆ ಯೋಜನೆ ರೂಪಿಸಿದ್ದೆ. ಆದರೆ, ಶಾಸಕ ವಿಶ್ವನಾಥ್ ಬಿಡಿಎ ಅಧ್ಯಕ್ಷರಾದ ಮೇಲೆ ಸಂಪೂರ್ಣವಾಗಿ ಅಭಿವೃದ್ಧಿ ಹೊಂದಿರುವ ಪ್ರದೇಶಗಳಲ್ಲಿ ಕಟ್ಟಿಕೊಂಡಿರುವ ಮನೆಗಳನ್ನು ಧ್ವಂಸ ಮಾಡಿ ಜನರಿಗೆ ತೊಂದರೆ ಕೊಡಲಾಗುತ್ತಿದೆ ಎಂದು ಹೇಳಿದರು.

ಬೆಂಗಳೂರು ನಗರದಲ್ಲಿ 7 ರಿಂದ 10 ಸ್ಥಾನ ಗೆಲ್ಲುವ ಗುರಿ: ಯಲಹಂಕ ವಿಧಾನಸಭೆಯಲ್ಲಿ ಹತ್ತು ಹದಿನೈದು ವರ್ಷಗಳಿಂದ ಕಾರ್ಯಕರ್ತರು ನೊಂದಿದ್ದಾರೆ. ಅಭಿವೃದ್ಧಿ ಹೆಸರಿನಲ್ಲಿ ಕೋಟ್ಯಾಂತರ ಹಣ ಲೂಟಿಯಾಗಿದೆ. ಇದು ಜನರಿಗೂ ಅರ್ಥವಾಗಿದೆ. ಬೆಂಗಳೂರು ನಗರದಲ್ಲಿ 7 ರಿಂದ 10 ಸ್ಥಾನಗಳ ಗುರಿ ಇಟ್ಟಿದ್ದೇನೆ. ಆ ಗುರಿ ತಲುಪುವದರಲ್ಲಿ ಸಂಶಯವಿಲ್ಲ. ನಿನ್ನೆ ಬಸವನಗುಡಿಯಲ್ಲಿ ಪ್ರಚಾರ ನಡೆಸಿದ್ದು, ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಅದೇ ರೀತಿ ಯಶವಂತಪುರ, ಗಾಂಧಿನಗರ ಮತ್ತಿತರ ಕ್ಷೇತ್ರಗಳಲ್ಲಿ ಉತ್ತಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ ಎಂದು ತಿಳಿಸಿದರು.

2ನೇ ಪಟ್ಟಿ ಸೋಮವಾರ ಬಿಡುಗಡೆ: ಹಾಸನ ವಿಧಾನಸಭಾ ಸೇರಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಅಂತಿಮಗೊಳಿಸಿ ಸೋಮವಾರ ಬಿಡುಗಡೆ ಮಾಡುವುದಾಗಿ ಹೇಳಿದರು. ಜೆಡಿಎಸ್ ಅಭ್ಯರ್ಥಿ ಮುನೇಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಇ.ಕೃಷ್ಣಪ್ಪ, ಕ್ಷೇತ್ರದ ಜೆಡಿಎಸ್ ಅಧ್ಯಕ್ಷ ಎನ್.ಕೃಷ್ಣಪ್ಪ, ಚಂದ್ರಪ್ಪ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಜೆಡಿಎಸ್ ಅಭ್ಯರ್ಥಿಗಳಿಗೆ ಎಚ್ಚರಿಕೆ ಕೊಟ್ಟ ಕುಮಾರಸ್ವಾಮಿ: ಇದಕ್ಕೂ ಮುನ್ನ ಜೆಪಿ ನಗರದ ತಮ್ಮ ನಿವಾಸದಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಹೆಚ್​​ಡಿಕೆ, ರಾಜ್ಯ ವಿಧಾನಸಭೆ ಚುನಾವಣೆ ಸಿದ್ಧತೆಯ ಭಾಗವಾಗಿ ಶನಿವಾರ ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಎಲ್ಲ ಶಾಸಕರು, ಅಭ್ಯರ್ಥಿಗಳಿಗೆ ಆನ್ಲೈನ್ ವೇದಿಕೆಯ ಮಹತ್ವದ ಟಿಪ್ಸ್ ನೀಡಿದರು. ಇನ್ನು ಕೆಲ ಅಭ್ಯರ್ಥಿಗಳಿಗೆ ಚಾಟಿ ಬೀಸಿದರು. ಅಲ್ಲದೆ, ಚುನಾವಣೆಯನ್ನು ಲಘುವಾಗಿ ಪರಿಗಣಿಸಬಾರದು ಹಾಗೂ ಗೆಲುವಿನ ಅವಕಾಶ ಕಳೆದುಕೊಳ್ಳಬೇಡಿ ಎಂದು ಕಿವಿಮಾತು ಹೇಳಿದರು.

ಪಂಚರತ್ನ ರಥಯಾತ್ರೆ ಯಶಸ್ವಿ ಆಗಿದೆ. ಮೈಸೂರಿನಲ್ಲಿ ಸಮಾರೋಪ ಸಮಾವೇಶ ಯಶಸ್ವಿ ಆಗಿದೆ. ಪಂಚರತ್ನ ಯೋಜನೆಗಳನ್ನು ಮನೆ ಮನೆಗೂ ತೆಗೆದುಕೊಂಡು ಹೋಗಿ. ಯೋಜನೆಗಳ ಬಗ್ಗೆ ಜನರಿಗೆ ಮನದಟ್ಟು ಮಾಡಿಕೊಡಿ ಎಂದು ಅಭ್ಯರ್ಥಿಗಳಿಗೆ ಸೂಚಿಸಿದರು. ಇದೇ ವೇಳೆ ಅಭ್ಯರ್ಥಿಗಳ ಪ್ರಶ್ನೆಗಳಿಗೆ ಕುಮಾರಸ್ವಾಮಿ ಅವರು ಉತ್ತರ ನೀಡಿದರು.

ಇದನ್ನೂ ಓದಿ: ಆಕಾಂಕ್ಷಿಗಳ ಟಿಕೆಟ್ ನೀಡಲು ಕಾರ್ಯಕರ್ತರಿಂದ‌ ಅಭಿಪ್ರಾಯ ಸಂಗ್ರಹಿಸಿದ ಬಿಜೆಪಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.