ETV Bharat / state

ಸತತ ಸೋಲಿನ ಕಹಿಯಿಂದ ಎಚ್ಚೆತ್ತು ಪಕ್ಷ ಬಲವರ್ಧನೆಗೆ ಮುಂದಾದ ಜೆಡಿಎಸ್​​​ - JDS party leaders

ಶಿರಾ ಮತ್ತು ಆರ್.ಆರ್. ನಗರ ಉಪಚುನಾವಣೆ ಹಾಗೂ ವಿಧಾನ ಪರಿಷತ್‌ನ 4 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಸೋಲಿನ ಕಹಿ ಅನುಭವಿಸಿರುವ ಜೆಡಿಎಸ್ ವರಿಷ್ಠರು ಸಭೆಯಲ್ಲಿ ಸೋಲಿನ ಪರಾಮರ್ಶೆ ನಡೆಸಲಿದ್ದಾರೆ.

JDS party Organization
ಸಂಗ್ರಹ ಚಿತ್ರ
author img

By

Published : Nov 25, 2020, 10:41 PM IST

ಬೆಂಗಳೂರು: ಉಪಚುನಾವಣೆಯಲ್ಲಿ ಸೋಲಿನ ಕಹಿ ಹಾಗೂ ಕೆಲ ಜೆಡಿಎಸ್ ಮುಖಂಡರು ಕಾಂಗ್ರೆಸ್-ಬಿಜೆಪಿಗೆ ವಲಸೆ ಹೋಗಿರುವುದರಿಂದ ಎಚ್ಚೆತ್ತುಕೊಂಡ ಜೆಡಿಎಸ್, ಮುಂಬರುವ ಗ್ರಾಮ ಪಂಚಾಯತ್​ ಚುನಾವಣೆ ಹಾಗೂ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಮುಂದಾಗಿದೆ.

ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಬಿಜೆಪಿ ಸರ್ಕಾರ, ಅವಧಿ ಪೂರ್ಣಗೊಂಡಿದ್ದ ಗ್ರಾಮ ಪಂಚಾಯತ್​ಗಳಿಗೆ ನಡೆಸಬೇಕಾಗಿದ್ದ ಚುನಾವಣೆ ಮುಂದೂಡಿದ್ದು, ಈ ಗ್ರಾಮ ಪಂಚಾಯತ್​ಗಳಿಗೆ ಚುನಾವಣೆ ನಡೆಸುವಂತೆ ಹೈಕೋರ್ಟ್‌ ಆದೇಶ ನೀಡಿದೆ. ಅದರಂತೆ ರಾಜ್ಯ ಚುನಾವಣಾ ಆಯೋಗ ರಾಜ್ಯದಲ್ಲಿರುವ ಒಟ್ಟು 5800 ಗ್ರಾಮ ಪಂಚಾಯತ್​ಗಳಿಗೆ ಇನ್ನು ಕೆಲವೇ ದಿನಗಳಲ್ಲಿ ಚುನಾವಣಾ ಅಧಿಸೂಚನೆ ಹೊರಡಿಸಲಿದೆ.

ಈ ಬಗ್ಗೆ ಆಂತರಿಕವಾಗಿ ಪಕ್ಷದಲ್ಲಿ ತುರ್ತಾಗಿ ಚರ್ಚಿಸುವುದು ಅವಶ್ಯವಿದೆ. ಅಲ್ಲದೆ ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿನ ಬಿಜೆಪಿ ಸರ್ಕಾರ ಚುನಾವಣೆಗಳಲ್ಲಿ ನಡೆಸಿರುವ ಅಕ್ರಮ ಮತ್ತು ಅವ್ಯವಹಾರ ಬಗ್ಗೆ ಹಾಗೂ ಮುಂದಿನ ದಿನಗಳಲ್ಲಿ ಕೆಳ ಹಂತದಿಂದ ಪಕ್ಷದ ಸಂಘಟನೆ ಮತ್ತು ಬಲವರ್ಧನೆ ಕುರಿತು ಚರ್ಚಿಸುವುದು ಅತ್ಯವಶ್ಯವಾಗಿದೆ.

ಜೆಡಿಎಸ್ ಸಭೆ: ಮುಂಬರುವ ಗ್ರಾಮ ಪಂಚಾಯತ್​ ಚುನಾವಣೆ ಹಾಗೂ ಪಕ್ಷದ ಸಂಘಟನೆ/ಬಲವರ್ಧನೆ ಕುರಿತು ನವೆಂಬರ್ 28ರಂದು ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ತಾಲೂಕು, ಜಿಲ್ಲಾ ಮತ್ತು ರಾಜ್ಯಮಟ್ಟದ ಪ್ರಮುಖರ ಸಭೆ ಕರೆಯಲಾಗಿದೆ. ಪಕ್ಷ ಬಲಪಡಿಸುವ ಕುರಿತು ಕೈಗೊಳ್ಳಬೇಕಾಗಿರುವ ಮಾರ್ಗೋಪಾಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಿದ್ದಾರೆ. ಜಿಲ್ಲಾ ಹಾಗೂ ತಾಲೂಕು ಅಧ್ಯಕ್ಷರು, ಶಾಸಕರು, ಮಾಜಿ ಶಾಸಕರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಪಕ್ಷದ ಅಭ್ಯರ್ಥಿಗಳು, ರಾಜ್ಯ ಪದಾಧಿಕಾರಿಗಳು, ಪಕ್ಷದ ಇತರ ಮುಖಂಡರು ಮತ್ತು ಪ್ರಮುಖರನ್ನು ಒಳಗೊಂಡಂತೆ ಜೆಡಿಎಸ್ ವರಿಷ್ಠರು ಸಭೆ ಕರೆದಿದ್ದಾರೆ.

ಬೂತ್ ಮಟ್ಟದಲ್ಲಿನ ಕಾರ್ಯಕರ್ತರನ್ನು ಹೆಚ್ಚು ಸಕ್ರಿಯಗೊಳಿಸಲು ಯೋಜನೆ ರೂಪಿಸುತ್ತಿರುವ ಜೆಡಿಎಸ್, ಮುಂದಿನ ಚುನಾವಣೆಗಳಲ್ಲಿ ಸ್ಥಳೀಯ ನಾಯಕರಿಗೆ ಉಸ್ತುವಾರಿ ವಹಿಸುವ ಬಗ್ಗೆಯೂ ಪಕ್ಷದಲ್ಲಿ ಚಿಂತನೆ ನಡೆಯುತ್ತಿದೆ. ಇದರ ಜೊತೆಗೆ ಬೇರೆ ಬೇರೆ ರೀತಿಯ ಕಾರ್ಯತಂತ್ರಗಳ ಮೂಲಕ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಮಣಿಸಲು ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ಮೂಲಗಳು ತಿಳಿಸಿವೆ.

ಸೋಲಿನ ಪರಾಮರ್ಶೆ: ಶಿರಾ ಮತ್ತು ಆರ್.ಆರ್. ನಗರ ಉಪ ಚುನಾವಣೆ ಹಾಗೂ ವಿಧಾನ ಪರಿಷತ್‌ನ 4 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಸೋಲಿನ ಕಹಿ ಅನುಭವಿಸಿರುವ ಜೆಡಿಎಸ್ ವರಿಷ್ಠರು ಸಭೆಯಲ್ಲಿ ಸೋಲಿನ ಪರಾಮರ್ಶೆ ನಡೆಸಲಿದ್ದಾರೆ. ಬಿಜೆಪಿ ಹಾಗೂ ಕಾಂಗ್ರೆಸ್‌ನ ಹಣಾಹಣಿ ನಡುವೆಯೂ ಜೆಡಿಎಸ್ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿತ್ತಾದರೂ ಒಂದು ಸ್ಥಾನವನ್ನೂ ಗೆಲ್ಲಲು ಸಾಧ್ಯವಾಗಿಲ್ಲ. ಇನ್ನು ಹಳೇ ಮೈಸೂರು ಭಾಗದಲ್ಲೂ ಜೆಡಿಎಸ್ ದಿನೇ ದಿನೆ ಕ್ಷೀಣಿಸುತ್ತಿರುವುದು ವರಿಷ್ಠರಲ್ಲದೆ, ಶಾಸಕರನ್ನು ಮುಂದಿನ ರಾಜಕೀಯ ಭವಿಷ್ಯಕ್ಕಾಗಿ ಚಿಂತಿಸುವಂತೆ ಮಾಡಿದೆ. ಕಾರ್ಯಕರ್ತರಲ್ಲೂ ಪಕ್ಷದ ಭವಿಷ್ಯದ ಬಗ್ಗೆ ಆತಂಕ ಮೂಡಿಸಿದೆ. ಕೆಲವು ಶಾಸಕರು ಸೇರಿ ಮುಖಂಡರು, ಕಾರ್ಯಕರ್ತರು ಬೇರೆ ಪಕ್ಷಗಳತ್ತ ಮುಖ ಮಾಡಿದ್ದಾರೆ. ಹಾಗಾಗಿ ಮುಖಂಡರು, ಕಾರ್ಯಕರ್ತರಲ್ಲಿ ಧೈರ್ಯ ತುಂಬಿ ಆತ್ಮವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಪಕ್ಷದ ನಾಯಕರು ಸಭೆ ಸೇರಿ ಸಲಹೆ-ಸೂಚನೆಗಳನ್ನು ನೀಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.