ETV Bharat / state

ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿದೆ ಉದ್ಯೋಗಾವಕಾಶ - Government Job Recruitment in Bangalore

ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಕುರಿತ ಮಾಹಿತಿ ಇಲ್ಲಿದೆ.

Job opportunity in Bangalore Agricultural University

author img

By

Published : Mar 30, 2023, 3:47 PM IST

ಬೆಂಗಳೂರು ಕೃಷಿ ವಿಜ್ಞಾನ ವಿಶ್ವ ವಿದ್ಯಾಲಯದಲ್ಲಿ ಅಸಿಸ್ಟೆಂಟ್​ ಪ್ರೊಫೆಸರ್​ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೃಷಿ ಪದವಿ ಪಡೆದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು 15 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದ್ದು, ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆ ವಿವರ: ಬೆಂಗಳೂರು ಕೃಷಿ ವಿಶ್ವವಿದ್ಯಾಲದಲ್ಲಿ ಕೃಷಿ ಆರ್ಥಿಕತೆ, ಮೈಕ್ರೊಬಯೋಲಾಜಿ, ದೈಹಿಕ ಶಿಕ್ಷಣ, ಮಣ್ಣು ವಿಜ್ಞಾನ ಸೇರಿದಂತೆ ವಿವಿಧ ವಿಷಯಗಳಲ್ಲಿ ಸಹಾಯಕ ಪ್ರೊಫೆಸರ್​ ಹುದ್ದೆ ಭರ್ತಿಗೆ ಕ್ರಮಕ್ಕೆ ಮುಂದಾಗಲಾಗಿದೆ

ಆಧಿಸೂಚನೆ
ಆಧಿಸೂಚನೆ

ಈ ಹುದ್ದೆಗಳಿಗೆ ಮಾಸಿಕ 57700 ರೂ ನಿಂದ 182400 ರೂ.ವರೆಗೆ ಮಾಸಿಕ ವೇತನ ನಿಗದಿ ಮಾಡಲಾಗಿದೆ.

ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಗರಿಷ್ಠ 42 ವರ್ಷ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 1 ವರ್ಷ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಸಲ್ಲಿಕೆ ವಿವರ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು 2000 ರೂ. ಅರ್ಜಿ ಶುಲ್ಕ ಪಾವತಿ ಮಾಡಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 1000 ರೂ. ವೇತನ ನಿಗದಿ ಮಾಡಲಾಗಿದ್ದು, ಮಾಜಿ ಸೇವಕರು, ವಿಕಲಚೇತನರಿಗೆ ಯಾವುದೇ ಅರ್ಜಿ ಶುಲ್ಕ ನಿಗದಿಸಲಾಗಿಲ್ಲ.

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ಸಂಪೂರ್ಣ ವಿವರ, ಹುದ್ದೆ ಅನುಭವ, ಪ್ರಮಾಣಪತ್ರ ಮತ್ತು ದಾಖಲಾತಿಗಳನ್ನು ಈ ವಿಳಾಸಕ್ಕೆ ಕಳುಹಿಸಬೇಕಿದೆ.

ಆಡಳಿತಾತ್ಮಕ ಕಚೇರಿ, ಕೃಷಿ ವಿಜ್ಞಾನ ವಿಶ್ವವಿದ್ಯಾಲ, ಜಿಕೆವಿಕೆ, ಬೆಂಗಳೂರು - 560065

ಹುದ್ದೆ ಆಯ್ಕೆ: ಈ ಹುದ್ದೆಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಈ ಹುದ್ದೆಗೆ ಮಾರ್ಚ್​ 24 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಏಪ್ರಿಲ್​ 24 ಆಗಿದೆ.

ಈ ಹುದ್ದೆ ಕುರಿತು ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಇನ್ನಿತರ ವಿವರ ಪಡೆಯಲು ಅಧಿಕೃತ ಜಾಲತಾಣ uasbangalore.edu.in ಕ್ಕೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ: ಚಿಕ್ಕಮಗಳೂರು ಮೆಡಿಕಲ್​ ಕಾಲೇಜ್​ನಲ್ಲಿ ನೇಮಕಾತಿ: ₹20 ಸಾವಿರ ವೇತನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.