ETV Bharat / state

ರೆಮ್ಡಿಸಿವಿರ್, ಆಕ್ಸಿಜನ್, ಬೆಡ್ ಬ್ಲಾಕಿಂಗ್ ದಂಧೆ ಕುರಿತು ತೀವ್ರ ತನಿಖೆ: ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ - ಬೆಡ್​ ಬ್ಲಾಕಿಂಗ್ ದಂಧೆ ಬಗ್ಗೆ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್

ಕಾಳ ಸಂತೆಯಲ್ಲಿ ರೆಮ್ಡಿಸಿವಿರ್, ಆಕ್ಸಿಜನ್ ಮಾರಾಟ ಮಾಡುತ್ತಿರುವುದು ಹಲವು ಕಡೆಗಳಿಂದ ಮಾಹಿತಿ ಸಿಕ್ಕಿದೆ. ಈ ಕುರಿತು ಸಿಸಿಬಿ ಕಾರ್ಯಾಚರಣೆ ನಡೆಸಿದೆ. ಇಲ್ಲಿಯವರೆಗೂ 100 ಕ್ಕೂ ಅಧಿಕ ರೆಮ್ಡಿಸಿವಿರ್ ಜಪ್ತಿ ಮಾಡಲಾಗಿದೆ ಎಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಮಾಹಿತಿ ನೀಡಿದರು.

Joint Police Commissioner of CCB Sandeep Patil about Bed blocking scam
ಬೆಡ್​ ಬ್ಲಾಕಿಂಗ್ ದಂಧೆ ಬಗ್ಗೆ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್
author img

By

Published : May 8, 2021, 1:16 PM IST

Updated : May 8, 2021, 2:33 PM IST

ಬೆಂಗಳೂರು: ರೆಮ್ಡಿಸಿವಿರ್, ಆಕ್ಸಿಜನ್, ಬೆಡ್ ಬ್ಲಾಕಿಂಗ್ ದಂಧೆ ಕುರಿತು ತೀವ್ರ ತನಿಖೆ ನಡೆಸಲಾಗುವುದು ಎಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಹೇಳಿದರು.

ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್

ಬೆಡ್ ಬ್ಲಾಕಿಂಗ್ ದಂಧೆಯ ಕುರಿತಾದ ಹಲವು ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಕೋವಿಡ್ ಚಿಕಿತ್ಸೆಗೆ ಅಗತ್ಯವಿರುವ ರೆಮ್ಡಿಸಿವಿರ್ ಹಾಗೂ ಆಕ್ಸಿಜನ್ ದುರ್ಬಳಕೆ ಬಗ್ಗೆ ದೂರು ಕೇಳಿ ಬರುತ್ತಿವೆ. ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವುದು ಹಲವು ಕಡೆಗಳಿಂದ ಮಾಹಿತಿ ಸಿಕ್ಕಿದೆ. ಈ ಕುರಿತು ಸಿಸಿಬಿ ಕಾರ್ಯಾಚರಣೆ ನಡೆಸಿದೆ. ಇಲ್ಲಿಯವರೆಗೂ 100 ಕ್ಕೂ ಅಧಿಕ ರೆಮ್ಡಿಸಿವಿರ್ ಜಪ್ತಿ ಮಾಡಲಾಗಿದೆ ಎಂದರು.

ಈ ನಿಟ್ಟಿನಲ್ಲಿ ಒಂದು ಪ್ರಕರಣದಲ್ಲಿ ನಿನ್ನೆ ಸಿಸಿಬಿಗೆ ಮಾಹಿತಿ ಲಭ್ಯವಾಗಿತ್ತು. ಕಾಳ ಸಂತೆಯಲ್ಲಿ ಆಕ್ಸಿಜನ್ ಹತ್ತು ಪಟ್ಟು ಹಣಕ್ಕೆ ಮಾರಾಟ ಮಾಡಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ದಾಳಿ ಮಾಡಿ ಆರೋಪಿ ರವಿಕುಮಾರ್ ಎಂಬಾತನನ್ನು ದಸ್ತಗಿರಿ ಮಾಡಲಾಗಿದೆ. ರೆಮ್ಡಿಸಿವಿರ್ ಮಾರಾಟ ಮಾಡುತ್ತಿದ್ದ ಮೂವರನ್ನು ಸಹ ಬಂಧಿಸಲಾಗಿದೆ. ಅಕ್ರಮ ಬೆಡ್ ಬ್ಲಾಕಿಂಗ್ ದಂಧೆ ಕುರಿತು ತನಿಖೆ ನಡೆಯುತ್ತಿದೆ. ಭಾಗಿಯಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಕೊರೊನಾ ಸಾವಿನ "ಮನೆ": ಆಸ್ಪತ್ರೆಗೆ ಬರುವ ಮುನ್ನವೇ ಹಾರಿ ಹೋಗುತ್ತಿದೆ ಪ್ರಾಣಪಕ್ಷಿ!

ಶುಕ್ರವಾರ 18 ಪ್ರತಿಷ್ಠಿತ ಆಸ್ಪತ್ರೆಗಳ ಮೇಲೆ ದಾಳಿ ನಡೆಸಿ ಖಾಲಿ ಇರುವ ಬೆಡ್ ಬಗ್ಗೆ ತನಿಖೆ ಮಾಡಲಾಗಿದೆ. ಸಾರ್ವಜನಿಕರಿಗೆ ಬ್ಲಾಕ್ ಮಾರ್ಕೆಟ್ ಕಂಡು ಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡಬೇಕೆಂದು ಮನವಿ ಮಾಡಿದರು.

Last Updated : May 8, 2021, 2:33 PM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.