ETV Bharat / state

ಅರಣ್ಯ, ಕಂದಾಯ ಭೂಮಿ ವಿಚಾರದಲ್ಲಿ ಸಮಸ್ಯೆ ನಿವಾರಣೆಗೆ ಜಂಟಿ ಸರ್ವೇ ಸೂಕ್ತ : ಸಚಿವ ಖಂಡ್ರೆ

ವಿಧಾನಸೌಧದ ಸಭಾಂಗಣದಲ್ಲಿ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ ಜೆ ಜಾರ್ಜ್ ಹಾಗೂ ಜಿಲ್ಲೆಯ ಶಾಸಕರುಗಳೊಂದಿಗೆ ಉನ್ನತ ಮಟ್ಟದ ಸಭೆಯನ್ನು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ನಡೆಸಿದರು.

Forest Minister Ishwar Khandre held a meeting at Vidhana Soudha.
ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ವಿಧಾನಸೌಧ ಸಭಾಂಗಣದಲ್ಲಿ ಸಭೆ ನಡೆಸಿದರು.
author img

By ETV Bharat Karnataka Team

Published : Nov 9, 2023, 10:40 PM IST

ಬೆಂಗಳೂರು: ರಾಜ್ಯದಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯ ವಿಚಾರದಲ್ಲಿ ಸಮಸ್ಯೆಗಳಿದ್ದು, ಅದನ್ನು ಜಂಟಿ ಸರ್ವೆಯ ಮೂಲಕ ಬಗೆಹರಿಸಬೇಕಾಗಿದೆ. ಪರಿಭಾವಿತ ಅರಣ್ಯ ಎಂದು ಘೋಷಿಸಲಾಗಿರುವ ಸರ್ವೆ ನಂಬರ್ ಮತ್ತು ಲಭ್ಯ ನಕ್ಷೆಯನ್ನು ಸಾರ್ವಜನಿಕವಾಗಿ ಲಭ್ಯವಾಗುವಂತೆ ಮಾಡುವ ಅಗತ್ಯವಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಅಭಿಪ್ರಾಯ ವ್ಯಕ್ತಪಡಿಸಿದರು.

ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ ಜೆ ಜಾರ್ಜ್ ಹಾಗೂ ಜಿಲ್ಲೆಯ ಶಾಸಕರುಗಳೊಂದಿಗೆ ವಿಧಾನಸೌಧದ ಸಮಿತಿ ಸಭಾಂಗಣದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪರಿಭಾವಿತ (ಡೀಮ್ಡ್)ಅರಣ್ಯದ ವಿಚಾರದಲ್ಲಿ ಈಗಾಗಲೇ ಸುಪ್ರೀಂಕೋರ್ಟ್ ಗೆ ಪ್ರಮಾಣಪತ್ರ ಸಲ್ಲಿಸಲಾಗಿದೆ. 3.3 ಲಕ್ಷಕ್ಕೂ ಹೆಚ್ಚು ಪ್ರದೇಶವನ್ನು ಪರಿಭಾವಿತ ಅರಣ್ಯ ಎಂದು ಅಂತಿಮಗೊಳಿಸಲಾಗಿದೆ.

ಇದರಲ್ಲೂ ಕೆಲವು ಪಟ್ಟಾ ಭೂಮಿ ಇದೆ. ಶಾಲೆ ಇದೆ ಎಂದು ಹೇಳಲಾಗುತ್ತಿದೆ. ಈಗ ಪ್ರತಿ ಜಿಲ್ಲೆಯಲ್ಲಿನ ಸಮಸ್ಯೆಗಳ ಬಗ್ಗೆ ಪ್ರತ್ಯೇಕ ಪ್ರಮಾಣಪತ್ರ ಸಲ್ಲಿಸಲು ಸಾಧ್ಯವಿಲ್ಲ. ಹೀಗಾಗಿ ಎಲ್ಲ ಜಿಲ್ಲಾಧಿಕಾರಿಗಳು ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಜಂಟಿ ಸರ್ವೆ ಮಾಡಿಸಿದಲ್ಲಿ ಎಲ್ಲ ಮಾಹಿತಿಯನ್ನೂ ಕ್ರೋಡೀಕರಿಸಿ ಮತ್ತೊಮ್ಮೆ ಸುಪ್ರೀಂಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಬಹುದು. ಆಗ ಮಾತ್ರ ಈ ಸಮಸ್ಯೆ ಪರಿಹರಿಸಲು ಸಾಧ್ಯ ಎಂದು ತಿಳಿಸಿದರು.

ಡೀಮ್ಡ್ 1 ಎಂದು ಘೋಷಿಸಲಾಗಿದ್ದನ್ನು ಈಗಾಗಲೇ ಕೈಬಿಡಲಾಗಿದೆ. ಡೀಮ್ಡ್ 2 ಎಂದು ಘೋಷಿಸಿರುವುದು ಅಂತಿಮವಾಗಿದೆ. ಇದರಲ್ಲಿ ಏನಾದರೂ ಸಮಸ್ಯೆಗಳಿದ್ದರೆ ಅದನ್ನು ಪರಿಹರಿಸಲು ಪ್ರಯತ್ನಿಸಲಾಗುವುದು, ಜಂಟಿ ಸಮೀಕ್ಷೆ ಪೂರ್ಣವಾಗುವವರೆಗೆ 4(1) ಪ್ರಕ್ರಿಯೆ ನಡೆಸದಂತೆ ಸೂಚಿಸುವುದಾಗಿ ಚಿಕ್ಕಮಗಳೂರು ಭಾಗದ ಶಾಸಕರುಗಳಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದರು.

ಕಾಡಾನೆಗಳ ಸಮಸ್ಯೆ:ಮಳೆ ಕೊರತೆಯಿಂದ ಕಾಡಾನೆಗಳ ಹಾವಳಿಯೂ ಹೆಚ್ಚಳವಾಗುತ್ತಿದೆ. ರೈಲ್ವೆ ಬ್ಯಾರಿಕೇಡ್ ಅಳವಡಿಕೆ ಇದಕ್ಕೆ ಸೂಕ್ತ ಪರಿಹಾರ ಮಾರ್ಗವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತಾವನೆ ಸಲ್ಲಿಸಲು ಇಲಾಖೆಗೆ ಸೂಚಿಸಲಾಗಿದೆ . ಚಿಕ್ಕಮಗಳೂರು ಭಾಗದಲ್ಲಿ ಬೀಡು ಬಿಟ್ಟಿರುವ ಆನೆಗಳನ್ನು ಕಾಡಿಗೆ ಮರಳಿಸಲು ಮತ್ತು ಪುಂಡಾನೆಯನ್ನು ಹಿಡಿದು ಆನೆ ಶಿಬಿರಕ್ಕೆ ಸ್ಥಳಾಂತರಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ ಮಾತನಾಡಿ, ವಾರದೊಳಗೆ ಪರಿಭಾವಿತ ಅರಣ್ಯ, ಮೀಸಲು ಅರಣ್ಯದ ಮಾಹಿತಿಯನ್ನು ಸಾರ್ವಜನಿಕವಾಗಿ ಲಭ್ಯವಾಗುವಂತೆ ಮಾಡಲಾಗುವುದು. ಈಗ ಅತ್ಯಾಧುನಿಕ ಡ್ರೋನ್ ನಂತಹ ಸಲಕರಣೆ ಇದ್ದು, ಜಂಟಿ ಸರ್ವೆಯನ್ನು ಮಾಡಲು ಸಹಕರಿಸಲಾಗುವುದು ಎಂದು ತಿಳಿಸಿದರು.

ಇದನ್ನೂಓದಿ:ಕಿಯೋನಿಕ್ಸ್​ನಲ್ಲಿ 500 ಕೋಟಿ ರೂ ಅವ್ಯವಹಾರ : ಜಸ್ಟೀಸ್ ನಾಗಮೋಹನ್​ ದಾಸ್ ನೇತೃತ್ವದಲ್ಲಿ ತನಿಖೆ - ಸಚಿವ ಪ್ರಿಯಾಂಕ್ ಖರ್ಗೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.