ಬೆಂಗಳೂರು : ನಗರದ ಟೌನ್ ಹಾಲ್ ಮುಂಭಾಗ ಲಾರಿಯೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿದ್ದ ಹಿರಿಯ ಪತ್ರಕರ್ತ ಗಂಗಾಧರ ಮೂರ್ತಿ (49) ಮೃತಪಟ್ಟಿದ್ದಾರೆ. ಮೃತರಿಗೆ ಪತ್ನಿ, ಇಬ್ಬರು ಮಕ್ಕಳಿದ್ದಾರೆ.
ಬೈಕ್ನಲ್ಲಿ ಚಾಮರಾಜಪೇಟೆಯಲ್ಲಿರುವ ಪತ್ರಿಕೆಯ ಕಚೇರಿಗೆ ಬರುತ್ತಿದ್ದಾಗ ಟೌನ್ ಹಾಲ್ ಬಳಿ ನಿಯಂತ್ರಣ ತಪ್ಪಿದ ಲಾರಿ ಡಿವೈಡರ್ಗೆ ಡಿಕ್ಕಿ ಹೊಡೆದು ಬಿದ್ದಿದ್ದು, ಲಾರಿ ಅಡಿಯಲ್ಲಿ ಸಿಲುಕಿದ ಗಂಗಾಧರ ಮೂರ್ತಿ ತೀವ್ರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನ ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗಿದ್ದು, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
ಗಂಗಾಧರ ಮೂರ್ತಿ ಪತ್ರಕರ್ತ ವೃತ್ತಿ ಸೇವೆ ಗುರುತಿಸಿ ಕಳೆದ ವರ್ಷ ಕೆಯುಡಬ್ಲ್ಯೂಜೆ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಂಗಳೂರು ಕಾರ್ಯನಿರತ ಪತ್ರಕರ್ತರ ಸಂಘ ಸನ್ಮಾನಿಸಿತ್ತು.
ಸಿಎಂ ಸಂತಾಪ.. ಹಿರಿಯ ಪತ್ರಕರ್ತ ಗಂಗಾಧರ ಮೂರ್ತಿ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಇಂದು ಮಧ್ಯಾಹ್ನ ಕಚೇರಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಇದು ನಿಜಕ್ಕೂ ಆಘಾತಕಾರಿ ಘಟನೆ. ದೇವರು ಗಂಗಾಧರ ಮೂರ್ತಿ ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಅಗಲಿಕೆಯ ದುಃಖವನ್ನು ತಡೆಯುವ ಶಕ್ತಿಯನ್ನು ಆ ದೇವರು ಅವರ ಕುಟುಂಬದವರಿಗೆ ನೀಡಲಿ ಎಂದು ಸಿಎಂ ಕಂಬನಿ ಮಿಡಿದಿದ್ದಾರೆ.
ಗಂಗಾಧರ ಮೂರ್ತಿ ಒಬ್ಬ ಸೃಜನಶೀಲ ಪತ್ರಕರ್ತರಾಗಿದ್ದರು. ತಮ್ಮ ಕರ್ತವ್ಯವನ್ನು ಅಚ್ಚು ಕಟ್ಟಾಗಿ ನಿರ್ವಹಿಸುತ್ತಿದ್ದರು. ಅವರ ಸಾವು ನನಗೆ ಆಘಾತವುಂಟು ಮಾಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗಂಗಾಧರ ಮೂರ್ತಿ ನಿಧನಕ್ಕೆ ಪತ್ರಿಕಾ ಬಳಗ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ