ETV Bharat / state

ಸ್ಮಶಾನಗಳಿಗೆ ಭೂಮಿ ಒದಗಿಸದ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ: ವರದಿ ಕೇಳಿದ ಹೈಕೋರ್ಟ್

author img

By

Published : Aug 5, 2021, 3:14 PM IST

ರಾಜ್ಯದ ಹಲವು ನಗರ, ಪಟ್ಟಣ ಹಾಗೂ ಗ್ರಾಮಗಳಲ್ಲಿ ಶವಸಂಸ್ಕಾರ ನಡೆಸಲು ಸ್ಮಶಾನಗಳಿಲ್ಲ. ಹೀಗಾಗಿ ಅಗತ್ಯ ಭೂಮಿ ಮಂಜೂರು ಮಾಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಬೆಂಗಳೂರಿನ ಮಹಮ್ಮದ್ ಇಕ್ಬಾಲ್ ಎಂಬುವರು ಪಿಐಎಲ್ ಸಲ್ಲಿಸಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿದ ಪೀಠ, ಈ ಸಂಬಂಧ ವರದಿ ನೀಡುವಂತೆ ಆದೇಶಿಸಿ ಸರ್ಕಾರಕ್ಕೆ 1 ವಾರ ಕಾಲಾವಕಾಶ ನೀಡಿದೆ.

High Court
ಹೈಕೋರ್ಟ್

ಬೆಂಗಳೂರು : ರಾಜ್ಯದಲ್ಲಿ ಸ್ಮಶಾನವಿಲ್ಲದ ಗ್ರಾಮಗಳು ಹಾಗೂ ಪಟ್ಟಣಗಳಿಗೆ ಅಗತ್ಯ ಜಮೀನು ಮಂಜೂರು ಮಾಡುವ ಸಂಬಂಧ ನ್ಯಾಯಾಲಯ ಈ ಹಿಂದೆ ನೀಡಿರುವ ಆದೇಶಾನುಸಾರ ಕೈಗೊಂಡಿರುವ ಕ್ರಮಗಳ ಕುರಿತು ವರದಿ ಸಲ್ಲಿಸಲು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ 1 ವಾರ ಕಾಲಾವಕಾಶ ನೀಡಿದೆ.

ರಾಜ್ಯದ ಹಲವು ನಗರ, ಪಟ್ಟಣ ಹಾಗೂ ಗ್ರಾಮಗಳಲ್ಲಿ ಶವಸಂಸ್ಕಾರ ನಡೆಸಲು ಸ್ಮಶಾನಗಳಿಲ್ಲ. ಹೀಗಾಗಿ ಅಗತ್ಯ ಭೂಮಿ ಮಂಜೂರು ಮಾಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಬೆಂಗಳೂರಿನ ಮಹಮ್ಮದ್ ಇಕ್ಬಾಲ್ ಎಂಬುವರು ಪಿಐಎಲ್ ಸಲ್ಲಿಸಿದ್ದರು. ಅದರಂತೆ ಅಗತ್ಯ ಜಮೀನು ಮಂಜೂರು ಮಾಡುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿತ್ತು. ಆದರೆ, ಸರ್ಕಾರ ನ್ಯಾಯಾಲಯದ ಆದೇಶ ಪಾಲಿಸದ ಹಿನ್ನೆಲೆಯಲ್ಲಿ ಅರ್ಜಿದಾರರು ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ಒಂದು ವಾರದಲ್ಲಿ ವರದಿ ನೀಡುವಂತೆ ನಿರ್ದೇಶಿಸಿದೆ.

ವಿಚಾರಣೆ ವೇಳೆ, ಸರ್ಕಾರದ ಪರ ವಕೀಲರು ಪೀಠಕ್ಕೆ ಮನವಿ ಮಾಡಿ ರಾಜ್ಯದಲ್ಲಿ ಸ್ಮಶಾನ ಜಾಗವಿಲ್ಲದ ಗ್ರಾಮಗಳು ಹಾಗೂ ಪಟ್ಟಣಗಳಿಗೆ ಅಗತ್ಯ ಜಮೀನು ಮಂಜೂರು ಮಾಡುವಂತೆ ಸರ್ಕಾರಕ್ಕೆ ಸೂಚಿಸಿ ಹೈಕೋರ್ಟ್ ಆದೇಶಿಸಿರುವಂತೆ ಕೆಲ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಕುರಿತು ವರದಿ ಸಲ್ಲಿಸಲು 1 ವಾರ ಕಾಲಾವಕಾಶ ನೀಡಬೇಕು ಎಂದು ಕೋರಿದರು.

ಇದಕ್ಕೆ ಒಪ್ಪಿದ ಪೀಠ ಕಾಲಾವಕಾಶ ನೀಡಿ ವಿಚಾರಣೆ ಮುಂದೂಡಿತು. ಅಷ್ಟರೊಳಗೆ ನ್ಯಾಯಾಲಯದ ಆದೇಶಾನುಸಾರ ಕೈಗೊಂಡ ಕ್ರಮಗಳ ಕುರಿತು ವರದಿ ಸಲ್ಲಿಸುವಂತೆ ಸೂಚಿಸಿತು.

ಪ್ರಕರಣದ ಹಿನ್ನೆಲೆ :

ರಾಜ್ಯದಲ್ಲಿ ಸ್ಮಶಾನಕ್ಕೆ ಜಾಗವಿಲ್ಲದ 6 ಸಾವಿರಕ್ಕೂ ಅಧಿಕ ಗ್ರಾಮಗಳು ಹಾಗೂ 218 ಪಟ್ಟಣಗಳಿಗೆ ಅಗತ್ಯ ಜಮೀನು ಮಂಜೂರು ಮಾಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. 2019ರ ಆಗಸ್ಟ್ 23ರಂದು ಅರ್ಜಿ ಇತ್ಯರ್ಥಪಡಿಸಿದ್ದ ಪೀಠ, ಸ್ಮಶಾನ ಜಾಗವಿಲ್ಲದ ಗ್ರಾಮಗಳು ಮತ್ತು ಪಟ್ಟಣಗಳಿಗೆ 6 ತಿಂಗಳಲ್ಲಿ ಅಗತ್ಯ ಜಮೀನು ಒದಗಿಸಲು ಕ್ರಮ ಕೈಗೊಳ್ಳಬೇಕೆಂದು ಸರ್ಕಾರಕ್ಕೆ ನಿರ್ದೇಶಿಸಿತ್ತು. ಆದರೆ, 2020ರಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿರುವ ಅರ್ಜಿದಾರರು, ಕೋರ್ಟ್ ಆದೇಶದಂತೆ ಸರ್ಕಾರ ಕ್ರಮ ಕೈಗೊಂಡಿಲ್ಲ. ಆದ್ದರಿಂದ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಆರೋಪದಡಿ ಕ್ರಮ ಜರುಗಿಸಬೇಕು ಹಾಗೂ ಆದೇಶ ಪಾಲಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿದ್ದಾರೆ.

ಓದಿ: ಜಮೀರ್ ನಿವಾಸದ ಮೇಲೆ ಇಡಿ ದಾಳಿ: ಕಾಂಗ್ರೆಸ್ ನಾಯಕರಲ್ಲಿ ಮತ್ತೆ ಆತಂಕ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.