ETV Bharat / state

ಗಂಭೀರ ಆರೋಪ ಬಂದಾಗ ನ್ಯಾಯಾಧೀಶರು ಮಂಪರು ಪರೀಕ್ಷೆಗೆ ಒಳಪಡಬೇಕು: ನ್ಯಾ.ಕೃಷ್ಣ ಭಟ್

author img

By

Published : Aug 7, 2022, 9:38 AM IST

ಪ್ರತಿಯೊಬ್ಬ ನ್ಯಾಯಮೂರ್ತಿಯೂ ಕರ್ತವ್ಯದಲ್ಲಿ ಪ್ರಾಮಾಣಿಕವಾಗಿ ನಡೆದುಕೊಂಡರೆ ನ್ಯಾಯಾಂಗದ ಸ್ವಾತಂತ್ರ್ಯ ಕಾಪಾಡಬಹುದು. ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ಬೆದರಿಕೆ ಎನ್ನುವುದು ಕಲ್ಪಿತ ಕತೆ- ನ್ಯಾ.ಕೃಷ್ಣಭಟ್.

Justice P Krishna Bhat
ಹೈಕೋರ್ಟ್ ನ್ಯಾಯಮೂರ್ತಿ ಪಿ. ಕೃಷ್ಣಭಟ್

ಬೆಂಗಳೂರು: ನ್ಯಾಯಾಂಗದ ಉನ್ನತ ಅಧಿಕಾರಿಗಳಾದ ನ್ಯಾಯಾಧೀಶರು, ಲೋಕಾಯುಕ್ತರು, ಉಪಲೋಕಾಯುಕ್ತರು ಸೇರಿದಂತೆ ನ್ಯಾಯಾಂಗ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪ ವ್ಯಕ್ತವಾದಾಗ ಸಂಬಂಧಪಟ್ಟ ನ್ಯಾಯಾಧೀಶರು ಮತ್ತು ದೂರು ಕೊಟ್ಟವರು ಸ್ವಯಂಪ್ರೇರಣೆಯಿಂದ ಮಂಪರು ಪರೀಕ್ಷೆ (ನಾರ್ಕೊ ಅನಾಲಿಸಿಸ್ ಟೆಸ್ಟ್)ಗೆ ಒಳಪಡುವ ಅವಶ್ಯಕತೆಯಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಪಿ.ಕೃಷ್ಣಭಟ್ ಅಭಿಪ್ರಾಯಪಟ್ಟರು.

ಇಂದು (ಆಗಸ್ಟ್‌ 7) ನ್ಯಾ.ಪಿ.ಕೃಷ್ಣಭಟ್ ಅವರು ಸೇವೆಯಿಂದ ನಿವೃತ್ತಿ ಹೊಂದುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ವಕೀಲರ ಪರಿಷತ್‌ ನಿನ್ನೆ ಹೈಕೋರ್ಟ್​ನಲ್ಲಿ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಪಾಲ್ಗೊಂಡು ಮಂಪರು ಪರೀಕ್ಷೆಯ ಅಗತ್ಯತೆಯ ಬಗ್ಗೆ ಅವರು ಮಾತನಾಡಿದರು. ನ್ಯಾಯಾಂಗದ ಸಮಗ್ರತೆ ಕಾಪಾಡಲು ಹಾಗೂ ದುರುದ್ದೇಶದಿಂದ ಕೂಡಿದ ಸುಳ್ಳು ಆರೋಪಗಳನ್ನು ಪತ್ತೆ ಹಚ್ಚಲು ಮಂಪರು ಪರೀಕ್ಷೆಯಂತಹ ಕಠಿಣ ಕ್ರಮ ಅನುಸರಿಸುವುದರಿಂದ ಸತ್ಯಾಂಶ ತಿಳಿಯಲು ಸಹಾಯಕವಾಗುತ್ತದೆ ಎಂದರು.

ಕರ್ತವ್ಯ ನಿರ್ವಹಣೆ ಸಂದರ್ಭದಲ್ಲಿ ನ್ಯಾಯಾಂಗದ ಅಧಿಕಾರಿಗಳು ತಮ್ಮ ಸ್ವಾತಂತ್ರ್ಯ ಹಾಗೂ ಪ್ರಾಮಾಣಿಕತೆಯನ್ನು ರಕ್ಷಿಸಲು ಎಷ್ಟೇ ಪ್ರಯತ್ನಪಟ್ಟರೂ ನ್ಯಾಯಾಧೀಶರ ವೃತ್ತಿ ಬದುಕಿನ ಮಹತ್ವದ ಘಟ್ಟಗಳಲ್ಲಿ ದುರ್ನಡತೆ ದೂರುಗಳು ಕೇಳಿ ಬರುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆ. ಒಂದು ವೇಳೆ ನ್ಯಾಯಾಧೀಶರ ಮೇಲಿನ ಆರೋಪಗಳು ಸಾಬೀತಾದರೆ ಅಥವಾ ಅಂತಹ ಭಾವನೆ ಉಳಿದರೆ ನ್ಯಾಯಾಧೀಶರು ಸ್ವತಂತ್ರವಾಗಿ ಇರುವುದಿಲ್ಲ ಮತ್ತು ಅವರ ವಿಶ್ವಾಸಾರ್ಹತೆಗೆ ಧಕ್ಕೆಯಾಗುತ್ತದೆ. ಅಂತಹ ಸಂದರ್ಭಗಳಲ್ಲಿ ಇದಕ್ಕೆ ಪರಿಹಾರವೇನು? ಎಂಬ ಪ್ರಶ್ನೆಗೆ ಪರಿಹಾರವನ್ನು ಸೂಚಿಸುತ್ತಾ ನ್ಯಾಯಾಂಗದ ಅಧಿಕಾರಿಗಳು, ದೂರುದಾರರನ್ನು ಒಳಗೊಂಡಂತೆ ಮಂಪರು ಪರೀಕ್ಷೆಗೆ ಒಳಗಾಗಲು ಇಚ್ಛಿಸಬೇಕು. ಆರಂಭದಲ್ಲಿ ಇದು ಅಸಂಬದ್ಧ ಮತ್ತು ಅತಿರೇಕ ಎನಿಸಬಹುದು ಎಂದು ಹೇಳಿದರು.

ಪ್ರತಿಯೊಬ್ಬ ನ್ಯಾಯಮೂರ್ತಿಯೂ ಕರ್ತವ್ಯದಲ್ಲಿ ಪ್ರಾಮಾಣಿಕವಾಗಿ ನಡೆದುಕೊಂಡರೆ ನ್ಯಾಯಾಂಗದ ಸ್ವಾತಂತ್ರ್ಯ ಕಾಪಾಡಬಹುದು. ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ಬೆದರಿಕೆ ಎನ್ನುವುದು ಕಲ್ಪಿತ ಕತೆ. ವ್ಯಕ್ತಿಗತವಾಗಿ ನ್ಯಾಯಮೂರ್ತಿ ಸ್ವತಂತ್ರವಾಗಿ ಉಳಿದರೆ ನ್ಯಾಯಾಂಗದ ಸ್ವಾತಂತ್ರ್ಯ ಸಾಧನೆ ಸಾಧ್ಯ. ನ್ಯಾಯ ಮಾರ್ಗದಲ್ಲಿ ನಡೆಯುವ ನ್ಯಾಯಾಧೀಶರಿಗೆ ಕಾನೂನಿನಲ್ಲಿ ಹಲವು ರಕ್ಷಣೆಗಳಿವೆ ಎಂದು ಅವರು ತಿಳಿಸಿದರು. ನ್ಯಾಯಾಂಗದಲ್ಲಿನ ಶ್ರೇಣೀಕೃತ ವ್ಯವಸ್ಥೆಯು ಕೆಲವು ಸಂದರ್ಭದಲ್ಲಿ ನ್ಯಾಯಾಂಗ ಅಧಿಕಾರಿಯ ಆತ್ಮಗೌರವ ಮತ್ತು ಸ್ವಾತಂತ್ರ್ಯದ ಭಾವನೆಗೆ ಧಕ್ಕೆ ಉಂಟು ಮಾಡುತ್ತದೆ. ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳ ಮಕ್ಕಳು ನ್ಯಾಯಾಂಗದ ಅಧಿಕಾರಿಗಳ ಮೇಲೆ ತಮ್ಮ ಪ್ರಭಾವ ಬೀರುವ ಕ್ರಮಗಳ ಬಗ್ಗೆ ಇದೇ ವೇಳೆ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ನ್ಯಾ. ಕೃಷ್ಣಭಟ್ ಪರಿಚಯ: ದಕ್ಷಿಣ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಪಡ್ನೂರು ಗ್ರಾಮದಲ್ಲಿ 1960ರ ಆ. 8ರಂದು ಜನಿಸಿದ ಭಟ್‌ ಅವರು ಮಂಗಳೂರಿನ ಸೇಂಟ್‌ ಅಲೋಸಿಯಸ್‌ ಕಾಲೇಜಿನಲ್ಲಿ ಬಿಎಸ್‌ಸಿ ಪದವಿ ಪಡೆದರು. ವಾರಾಣಸಿಯ ಬನಾರಸ್‌ ಹಿಂದೂ ವಿಶ್ವವಿದ್ಯಾಲಯದ ಕಾನೂನು ಶಾಲೆಯಲ್ಲಿ ಕಾನೂನು ಪದವಿ ಪಡೆದರು. ಮಂಗಳೂರಿನಲ್ಲಿ ಮೊದಲು ವಕೀಲಿ ವೃತ್ತಿ ಆರಂಭಿಸಿದರು. ನಂತರ 1989ರ ಜುಲೈನಲ್ಲಿ ರಾಜ್ಯ ಹೈಕೋರ್ಟ್‌ನಲ್ಲಿ ಪ್ರಾಕ್ಟೀಸ್‌ ನಡೆಸತೊಡಗಿದರು.

1998ರಲ್ಲಿ ನೇರವಾಗಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ನೇಮಕಗೊಂಡ ಅವರು ಬೀದರ್‌, ತುಮಕೂರು, ರಾಯಚೂರು, ಬೆಳಗಾವಿ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಕೆಲಸ ಮಾಡಿದ್ದರು. ಕರ್ನಾಟಕ ಹೈಕೋರ್ಟ್‌ನ ರಿಜಿಸ್ಟ್ರಾರ್‌ ಜನರಲ್‌ ಮತ್ತು ಕರ್ನಾಟಕ ನ್ಯಾಯಾಂಗ ಅಕಾಡೆಮಿಯ ನಿರ್ದೇಶಕರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ. 2020ರ ಮೇ 21ರಂದು ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡ ಅವರು 2021ರ ಸೆಪ್ಟೆಂಬರ್‌ 25ರಂದು ಖಾಯಂಗೊಂಡಿದ್ದರು.

ನ್ಯಾಯಾಂಗದಲ್ಲಿ ಎರಡು ದಶಕಗಳ ಕಾಲ ಸೇವೆ ಸಲ್ಲಿಸಿದ್ದರೂ ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ನೇಮಕಗೊಳ್ಳುವಾಗ ಅವರು ವಿವಾದದ ಕೇಂದ್ರಬಿಂದುವಾಗಿದ್ದರು. 2016ರಲ್ಲಿ ಸುಪ್ರೀಂ ಕೋರ್ಟ್‌ ಕೊಲಿಜಿಯಂ ನ್ಯಾ. ಕೃಷ್ಣಭಟ್‌ ಅವರ ಹೆಸರನ್ನು ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಶಿಫಾರಸ್ಸು ಮಾಡಿದ್ದರೂ ಕೆಲವು ಆರೋಪಗಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಪ್ರಸ್ತಾಪವನ್ನು ಹಿಂದಿರುಗಿಸಿತ್ತು. ಈ ಸಂಬಂಧ ಅಂದಿನ ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ಅವರಿಗೆ ಪತ್ರ ಬರೆದಿದ್ದ ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಜಸ್ತಿ ಚಲಮೇಶ್ವರ್‌ ಅವರು ನ್ಯಾಯಾಂಗ ಮತ್ತು ಸರ್ಕಾರದ ನಡುವಿನ ಸ್ನೇಹಪರತೆಯ ಅಪಾಯದ ಸಾಧ್ಯತೆಗಳ ಬಗ್ಗೆ ಎಚ್ಚರಿಸಿದ್ದರು.

ಬೆಳಗಾವಿಯಲ್ಲಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿದ್ದಾಗ ಭಟ್‌ ಅವರು ನ್ಯಾಯಾಂಗ ಅಧಿಕಾರಿಯೊಬ್ಬರ ದುರ್ನಡತೆಯ ಬಗ್ಗೆ ಮಾಹಿತಿ ನೀಡಿದ್ದರು. ಮುಂದೆ ನ್ಯಾ. ಭಟ್‌ ಅವರ ಪದೋನ್ನತಿಯ ಸಂದರ್ಭದಲ್ಲಿ ಅದೇ ಮಹಿಳಾ ಅಧಿಕಾರಿ ಭಟ್‌ ಅವರ ವಿರುದ್ಧ ದೂರು ನೀಡಿದ್ದರು. ಇದು ನ್ಯಾ.ಭಟ್‌ ಅವರ ಹೆಸರಿಗೆ ಮಸಿ ಬಳಿಯುವ ಪ್ರಯತ್ನವೆನ್ನಲಾಯಿತು.

ಇದನ್ನೂ ಓದಿ: ಪ್ರಮಾಣ ವಚನ ಸ್ವೀಕರಿಸಿದ ಹೈಕೋರ್ಟ್ ನೂತನ ನ್ಯಾಯಮೂರ್ತಿ ಪಿ. ಕೃಷ್ಣಭಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.